ಪ್ರಧಾನಮಂತ್ರಿ ಅವರಿಂದ ಬಿಮ್‌ಸ್ಟೆಕ್ ಶೃಂಗಸಭೆಯ ಸಂದರ್ಭದಲ್ಲಿ ನೇಪಾಳ ಪ್ರಧಾನಮಂತ್ರಿಯವರ ಭೇಟಿ
April 04th, 04:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ಕೆ.ಪಿ.ಶರ್ಮಾ ಓಲಿ ಅವರನ್ನು ಬ್ಯಾಂಕಾಕ್ ನಲ್ಲಿ ಇಂದು 6ನೇ ಬಿಮ್‌ಸ್ಟೆಕ್ ಶೃಂಗಸಭೆಯ ನೇಪಥ್ಯದಲ್ಲಿ ಭೇಟಿ ಮಾಡಿದರು.ಬಿಮ್ ಸ್ಟೆಕ್ ಶೃಂಗಸಭೆಯ ಸಂದರ್ಭದಲ್ಲಿ ಬಾಂಗ್ಲಾದೇಶದ ಮುಖ್ಯ ಸಲಹೆಗಾರರನ್ನು ಭೇಟಿಯಾದ ಪ್ರಧಾನಮಂತ್ರಿ
April 04th, 03:49 pm
ಬ್ಯಾಂಕಾಕ್ ನಲ್ಲಿ ನಡೆದ ಬಿ.ಐ.ಎಂ.ಎಸ್.ಟಿ.ಇ.ಸಿ. ( ಬಿಮ್ ಸ್ಟೆಕ್) ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರನ್ನು ಭೇಟಿ ಮಾಡಿದರು.ಉಪಕ್ರಮಗಳ ಪಟ್ಟಿ: ಪ್ರಧಾನಮಂತ್ರಿ ಅವರು 6ನೇ ಬಿಮ್ ಸ್ಟೆಕ್ ಶೃಂಗಸಭೆಯಲ್ಲಿ ಭಾಗಿ
April 04th, 02:32 pm
ಬಿಮ್ ಸ್ಟೆಕ್ ಚೇಂಬರ್ ಆಫ್ ಕಾಮರ್ಸ್ ಸ್ಥಾಪನೆ.ಪ್ರಧಾನಮಂತ್ರಿ ಅವರು 6ನೇ ಬಿಮ್ ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಿದ ವೇಳೆ ನೀಡಿದ ಹೇಳಿಕೆಯ ಕನ್ನಡ ಅನುವಾದ
April 04th, 12:59 pm
ಮೊದಲಿಗೆ ನಾನು ಈ ಶೃಂಗಸಭೆಯನ್ನು ಅತ್ಯುತ್ತಮವಾಗಿ ಆಯೋಜಿಸಿರುವುದಕ್ಕಾಗಿ ಪ್ರಧಾನ ಮಂತ್ರಿ ಘನತೆವೆತ್ತ ಶಿನವತ್ರಾ ಮತ್ತು ಥೈಲ್ಯಾಂಡ್ ಸರ್ಕಾರಕ್ಕೆ ನಾನು ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ಸಲ್ಲಿಸಲು ಬಯಸುತ್ತೇನೆ.ಥಾಯ್ಲೆಂಡ್ ನಲ್ಲಿ ನಡೆದ 6ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರು ಪಾಲ್ಗೊಂಡರು
April 04th, 12:54 pm
ಥಾಯ್ಲೆಂಡ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ 6ನೇ ಬಿಮ್‌ಸ್ಟೆಕ್ (ಬಹು-ವಲಯ ತಾಂತ್ರಿಕ ಮತ್ತು ಆರ್ಥಿಕ ಸಹಕಾರಕ್ಕಾಗಿ ಬಂಗಾಳ ಕೊಲ್ಲಿ ಉಪಕ್ರಮ) ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಶೃಂಗಸಭೆಯ ವಿಷಯ - ಬಿಮ್‌ಸ್ಟೆಕ್: ಸಮೃದ್ಧ, ಸ್ಥಿತಿಸ್ಥಾಪಕ ಮತ್ತು ಮುಕ್ತ. ಇದು ಬಿಮ್‌ಸ್ಟೆಕ್ ಪ್ರದೇಶದ ನಾಯಕರ ಆದ್ಯತೆಗಳು ಮತ್ತು ಜನರ ಆಕಾಂಕ್ಷೆಗಳನ್ನು ಹಾಗೂ ಜಾಗತಿಕ ಅನಿಶ್ಚಿತತೆಯ ಸಮಯದಲ್ಲಿ ಹಂಚಿಕೆಯ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ಬಿಮ್‌ಸ್ಟೆಕ್ ನ ಪ್ರಯತ್ನಗಳನ್ನು ಪ್ರತಿಬಿಂಬಿಸುತ್ತದೆ.ʻಬಿಮ್‌ಸ್ಟೆಕ್ʼ ರಾಷ್ಟ್ರಗಳ ನಡುವಿನ ಸಹಕಾರದ ವಿವಿಧ ವಿಚಾರಗಳನ್ನು ಒಳಗೊಂಡ 21 ಅಂಶಗಳ ʻಕ್ರಿಯಾ ಯೋಜನೆʼಯನ್ನು ಪ್ರಸ್ತಾಪಿಸಿದ ಪ್ರಧಾನಮಂತ್ರಿ
April 04th, 12:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಥಾಯ್ಲೆಂಡ್ ನ ಬ್ಯಾಂಕಾಕ್ ನಲ್ಲಿ ನಡೆದ 6ನೇ ʻಬಿಮ್‌ಸ್ಟೆಕ್ʼ ಶೃಂಗಸಭೆಯಲ್ಲಿ ʻಬಿಮ್‌ಸ್ಟೆಕ್ʼ ರಾಷ್ಟ್ರಗಳ ನಡುವಿನ ಸಹಕಾರದ ವಿವಿಧ ವಿಚಾರಗಳನ್ನು ಒಳಗೊಂಡ 21 ಅಂಶಗಳ ʻಕ್ರಿಯಾ ಯೋಜನೆʼಯನ್ನು ಪ್ರಸ್ತಾಪಿಸಿದರು. ʻಬಿಮ್‌ಸ್ಟೆಕ್ʼ ರಾಷ್ಟ್ರಗಳಾದ್ಯಂತ ವ್ಯಾಪಾರವನ್ನು ಉತ್ತೇಜಿಸಲು ಮತ್ತು ಐಟಿ ಕ್ಷೇತ್ರದ ಶ್ರೀಮಂತ ಸಾಮರ್ಥ್ಯವನ್ನು ಬಳಸಿಕೊಳ್ಳಲು ಅವರು ಒತ್ತಾಯಿಸಿದರು. ಮ್ಯಾನ್ಮಾರ್ ಮತ್ತು ಥಾಯ್ಲೆಂಡ್ನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕಂಪದ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕ್ಷೇತ್ರದಲ್ಲಿ ಒಟ್ಟಾಗಿ ಕೆಲಸ ಮಾಡುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಬಾಹ್ಯಾಕಾಶ ಕ್ಷೇತ್ರದಲ್ಲಿ ಕೆಲಸ ಮಾಡಲು ಮತ್ತು ಭದ್ರತಾ ವ್ಯವಸ್ಥೆಯನ್ನು ಬಲಪಡಿಸಲು ಶ್ರೀ ಮೋದಿ ಅವರು ಕರೆ ನೀಡಿದರು. ʻಬಿಮ್‌ಸ್ಟೆಕ್ʼಗೆ ಸಾಮೂಹಿಕವಾಗಿ ಶಕ್ತಿ ತುಂಬುವಂತೆ ಒತ್ತಾಯಿಸಿದ ಅವರು, ನಾಯಕತ್ವ ವಹಿಸುವ ಯುವಕರ ಪಾತ್ರವನ್ನು ಒತ್ತಿಹೇಳಿದರು. ಸಾಂಸ್ಕೃತಿಕ ಸಂಪರ್ಕಗಳು ʻಬಿಮ್‌ಸ್ಟೆಕ್ʼ ರಾಷ್ಟ್ರಗಳನ್ನು ಮತ್ತಷ್ಟು ಹತ್ತಿರ ತರುತ್ತವೆ ಎಂಬ ಭರವಸೆಯನ್ನು ಅವರು ವ್ಯಕ್ತಪಡಿಸಿದರು.ಬಿಮ್‌ಸ್ಟೆಕ್ ಶೃಂಗಸಭೆಯ ನೇಪಥ್ಯದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಸೀನಿಯರ್ ಜನರಲ್ ಮಿನ್ ಆಂಗ್ ಹ್ಲೈಂಗ್ ಅವರೊಂದಿಗೆ ಪ್ರಧಾನಮಂತ್ರಿ ಸಭೆ
April 04th, 09:43 am
ಬ್ಯಾಂಕಾಕ್‌ನಲ್ಲಿ ನಡೆದ ಬಿಮ್‌ಸ್ಟೆಕ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಮ್ಯಾನ್ಮಾರ್ ಪ್ರಧಾನಿ ಸೀನಿಯರ್ ಜನರಲ್ ಮಿನ್ ಆಂಗ್ ಹ್ಲೈಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಥಾಯ್ಲೆಂಡ್ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
April 03rd, 08:42 pm
ಸರ್ಕಾರಿ ಭವನಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಶಿನವಾತ್ರ ಅವರು ಬರಮಾಡಿಕೊಂಡರು ಮತ್ತು ಔಪಚಾರಿಕವಾಗಿ ಸ್ವಾಗತಿಸಿದರು. ಇದು ಅವರ ಎರಡನೇ ಸಭೆಯಾಗಿತ್ತು. ಇದಕ್ಕೂ ಮೊದಲು, 2024ರ ಅಕ್ಟೋಬರ್‌ನಲ್ಲಿ ವಿಯೆಂಟಿಯಾನ್‌ನಲ್ಲಿ ನಡೆದ ಆಸಿಯಾನ್ ಶೃಂಗಸಭೆಯ ಸಂದರ್ಭದಲ್ಲಿ ಇಬ್ಬರು ನಾಯಕರು ಭೇಟಿಯಾಗಿ ಸಮಾಲೋಚನೆ ನಡೆಸಿದ್ದರು.ಪಾಲಿಯಲ್ಲಿ ಟಿಪಿಟಕ ಪ್ರತಿ ನೀಡಿದ ಥಾಯ್ಲೆಂಡ್ ಪ್ರಧಾನಮಂತ್ರಿ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಧನ್ಯವಾದ
April 03rd, 05:43 pm
ಪಾಲಿಯಲ್ಲಿರುವ ಟಿಪಿಟಕದ ಪ್ರತಿಯನ್ನು ನೀಡಿದ ಥಾಯ್ಲೆಂಡ್ ಪ್ರಧಾನಮಂತ್ರಿ ಶ್ರೀಮತಿ ಪೇಟೊಂಗ್ಟಾರ್ನ್ ಶಿನವತ್ರಾ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ ಮತ್ತು ಭಗವಾನ್ ಬುದ್ಧನ ಬೋಧನೆಗಳ ಸಾರವನ್ನು ಹೊಂದಿರುವ ಪಾಲಿ ಸುಂದರವಾದ ಭಾಷೆ ಎಂದು ಬಣ್ಣಿಸಿದ್ದಾರೆ.ಥಾಯ್ಲೆಂಡ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
April 03rd, 03:01 pm
ನನಗೆ ನೀಡಿದ ಆತ್ಮೀಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ನಾನು ಪ್ರಧಾನಿ ಶಿನವಾತ್ರಾ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ.ಪ್ರಧಾನಮಂತ್ರಿಗಳಿಂದ ಥಾಯ್ ರಾಮಾಯಣ, ರಾಮಕಿಯೆನ್‌ನ ಆಕರ್ಷಕ ಪ್ರದರ್ಶನ ವೀಕ್ಷಣೆ
April 03rd, 01:02 pm
ಭಾರತ ಮತ್ತು ಥಾಯ್ಲೆಂಡ್ ನಡುವಿನ ಗಾಢ ಸಾಂಸ್ಕೃತಿಕ ಮತ್ತು ನಾಗರಿಕ ಸಂಬಂಧಗಳ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಥಾಯ್ಲೆಂಡ್‌ನ ಬ್ಯಾಂಕಾಕ್‌ನಲ್ಲಿ ಥಾಯ್ ರಾಮಾಯಣ, ರಾಮಕಿಯೆನ್‌ನ ಅತ್ಯದ್ಭುತ ಪ್ರದರ್ಶನವನ್ನು ವೀಕ್ಷಿಸಿದರು.ಪ್ರಧಾನಿ ಮೋದಿ ಥೈಲ್ಯಾಂಡ್‌ನ ಬ್ಯಾಂಕಾಕ್‌ಗೆ ಆಗಮಿಸಿದರು
April 03rd, 11:01 am
ಪ್ರಧಾನಿ ನರೇಂದ್ರ ಮೋದಿ ಅವರು ಥೈಲ್ಯಾಂಡ್‌ನ ಬ್ಯಾಂಕಾಕ್‌ಗೆ ಆಗಮಿಸಿದರು. ಅವರು ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಭೇಟಿಯ ಸಮಯದಲ್ಲಿ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.ಥಾಯ್ಲೆಂಡ್ ಮತ್ತು ಶ್ರೀಲಂಕಾ ಭೇಟಿಗೂ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ
April 03rd, 06:00 am
ಪ್ರಧಾನಮಂತ್ರಿ ಪೆಟೊಂಗ್ಟಾರ್ನ್ ಶಿನವಾತ್ರಾ ಅವರ ಆಹ್ವಾನದ ಮೇರೆಗೆ ನಾನು ಇಂದು ಅಧಿಕೃತ ಭೇಟಿಗಾಗಿ ಮತ್ತು 6ನೇ ಬಿಮ್ ಸ್ಟೆಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಥಾಯ್ಲೆಂಡ್ ಗೆ ತೆರಳುತ್ತಿದ್ದೇನೆ.ಏಪ್ರಿಲ್ 03-06, 2025 ರಿಂದ ಪ್ರಧಾನ ಮಂತ್ರಿಯವರ ಥೈಲ್ಯಾಂಡ್ ಮತ್ತು ಶ್ರೀಲಂಕಾ ಭೇಟಿ
April 02nd, 02:00 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬ್ಯಾಂಕಾಕ್‌ನಲ್ಲಿ ನಡೆಯಲಿರುವ 6 ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲು ಥೈಲ್ಯಾಂಡ್‌ಗೆ (ಏಪ್ರಿಲ್ 3-4, 2025) ಭೇಟಿ ನೀಡಲಿದ್ದಾರೆ. ನಂತರ, ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಅವರ ಆಹ್ವಾನದ ಮೇರೆಗೆ ಅವರು ಶ್ರೀಲಂಕಾಕ್ಕೆ (ಏಪ್ರಿಲ್ 4-6, 2025) ರಾಜ್ಯ ಭೇಟಿ ನೀಡಲಿದ್ದಾರೆ.