ಜಿನೋಮ್ಇಂಡಿಯಾ ಯೋಜನೆ ಆರಂಭದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
January 09th, 06:38 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್, ದೇಶದ ವಿವಿಧೆಡೆಯಿಂದ ಇಲ್ಲಿಗೆ ಬಂದಿರುವ ಎಲ್ಲಾ ವಿಜ್ಞಾನಿಗಳೆ, ಇಲ್ಲಿರುವ ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ಜೀನೋಮ್ಇಂಡಿಯಾ ಯೋಜನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ
January 09th, 05:53 pm
ಜೀನೋಮ್ಇಂಡಿಯಾ ಯೋಜನೆ ಆರಂಭದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು, ಭಾರತ ಇಂದು ಸಂಶೋಧನಾ ಕ್ಷೇತ್ರದಲ್ಲಿ ಐತಿಹಾಸಿಕ ಹೆಜ್ಜೆ ಇಟ್ಟಿದೆ. ಜೀನೋಮ್ ಇಂಡಿಯಾ ಯೋಜನೆಗೆ 5 ವರ್ಷಗಳ ಹಿಂದೆ ಅನುಮೋದನೆ ನೀಡಲಾಗಿತ್ತು, ಕೋವಿಡ್ ಸಾಂಕ್ರಾಮಿಕ ರೋಗವು ಒಡ್ಡಿದ ಸವಾಲುಗಳ ಹೊರತಾಗಿಯೂ ನಮ್ಮ ವಿಜ್ಞಾನಿಗಳು ಶ್ರದ್ಧೆಯಿಂದ ಕೆಲಸ ಮಾಡಿ ಯೋಜನೆಯನ್ನು ಪೂರ್ಣಗೊಳಿಸಿದ್ದಾರೆ. ಐಐಎಸ್ಸಿ, ಐಐಟಿಗಳು, ಸಿಎಸ್ಐಆರ್ ಮತ್ತು ಡಿಬಿಟಿ-ಬ್ರಿಕ್ ನಂತಹ 20ಕ್ಕೂ ಹೆಚ್ಚು ಹೆಸರಾಂತ ಸಂಶೋಧನಾ ಸಂಸ್ಥೆಗಳು ಈ ಸಂಶೋಧನೆಯಲ್ಲಿ ಪ್ರಮುಖ ಪಾತ್ರ ವಹಿಸಿವೆ. 10,000 ಭಾರತೀಯರ ಜೀನೋಮ್ ಅನುಕ್ರಮಗಳನ್ನು ಒಳಗೊಂಡಿರುವ ದತ್ತಾಂಶವು ಈಗ ಭಾರತೀಯ ಜೈವಿಕ ದತ್ತಾಂಶ ಕೇಂದ್ರದಲ್ಲಿ ಲಭ್ಯವಿದೆ. ಈ ಯೋಜನೆಯು ಜೈವಿಕ ತಂತ್ರಜ್ಞಾನ ಸಂಶೋಧನಾ ಕ್ಷೇತ್ರದಲ್ಲಿ ಒಂದು ಮೈಲಿಗಲ್ಲಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಈ ಯೋಜನೆಯಲ್ಲಿ ಭಾಗಿಯಾಗಿರುವ ಎಲ್ಲಾ ಪಾಲುದಾರರನ್ನು ಅಭಿನಂದಿಸಿದರು.ಕೋವಿಡ್-19 ಲಸಿಕೆ ಅಭಿವೃದ್ಧಿ ಮತ್ತು ತಯಾರಿಕೆಯಲ್ಲಿ ನಿರತವಾಗಿರುವ ಮೂರು ತಂಡಗಳೊಂದಿಗೆ ಪ್ರಧಾನಿ ಸಂವಾದ
November 30th, 01:13 pm
ಕೋವಿಡ್-19 ಲಸಿಕೆ ಅಭಿವೃದ್ಧಿ ಮತ್ತು ತಯಾರಿಕೆಯಲ್ಲಿ ತೊಡಗಿಸಿಕೊಂಡಿರುವ ಮೂರು ತಂಡಗಳೊಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ವರ್ಚುವಲ್ ಸಭೆ ನಡೆಸಿದರು. ಈ ತಂಡಗಳು ಪುಣೆಯ ಜೆನ್ನೋವಾ ಬಯೋಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್, ಹೈದರಾಬಾದ್ ನ ಬಯೋಲಾಜಿಕಲ್ ಇ ಲಿಮಿಟೆಡ್ ಮತ್ತು ಡಾ. ರೆಡ್ಡೀಸ್ ಲ್ಯಾಬೊರೇಟರೀಸ್ ಲಿಮಿಟೆಡ್ ನ ತಂಡಗಳೊಂದಿಗೆ ಪ್ರಧಾನಿ ಸಂವಾದ ನಡೆಸಿದರು.