2047 ರಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಹಾದಿ ಸ್ವಾವಲಂಬನೆಯ ಮೂಲಕ ಸಾಗುತ್ತದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ
July 27th, 11:30 am
‘ಮನದ ಮಾತಿನಲ್ಲಿ’ ಮತ್ತೊಮ್ಮೆ ನಾವು ದೇಶದ ಯಶಸ್ಸಿನ ಬಗ್ಗೆ, ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತನಾಡಲಿದ್ದೇವೆ. ಕ್ರೀಡೆಯಾಗಿರಲಿ, ವಿಜ್ಞಾನವಾಗಿರಲಿ ಅಥವಾ ಸಂಸ್ಕೃತಿಯಾಗಿರಲಿ ಎಲ್ಲ ಕ್ಷೇತ್ರಗಳಲ್ಲಿ ಕಳೆದ ಕೆಲವು ವಾರಗಳಲ್ಲಿ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತಹ ಘಟನೆಗಳು ನಡೆದಿವೆ. ಇತ್ತೀಚೆಗೆ, ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಹಿಂದಿರುಗಿದ ಕುರಿತು ದೇಶದಲ್ಲಿ ಬಹಳಷ್ಟು ಚರ್ಚೆಗಳು ನಡೆದಿವೆ. ಶುಭಾಂಶು ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ತಕ್ಷಣ, ಜನರು ಸಂತೋಷದಿಂದ ಕುಣಿದು ಕುಪ್ಪಳಿಸಿದರು, ಪ್ರತಿಯೊಬ್ಬರ ಹೃದಯದಲ್ಲೂ ಸಂತಸದ ಅಲೆ ಹರಿದಾಡಿತು. ಇಡೀ ದೇಶ ಹೆಮ್ಮೆಯಿಂದ ಬೀಗಿತು. ಆಗಸ್ಟ್ 2023 ರಲ್ಲಿ ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಆದಾಗ, ದೇಶದಲ್ಲಿ ಹೊಸ ವಾತಾವರಣವೇ ಸೃಷ್ಟಿಯಾಗಿದ್ದು ನನಗೆ ನೆನಪಿದೆ. ವಿಜ್ಞಾನ ಮತ್ತು ಬಾಹ್ಯಾಕಾಶದ ಬಗ್ಗೆ ಮಕ್ಕಳಲ್ಲಿ ಹೊಸ ಕುತೂಹಲವೂ ಅರಳಿತು. ಈಗ ಚಿಕ್ಕ ಚಿಕ್ಕ ಮಕ್ಕಳು ಕೂಡ ನಾವು ಬಾಹ್ಯಾಕಾಶಕ್ಕೆ ಹೋಗುತ್ತೇವೆ, ಚಂದ್ರನ ಮೇಲೆ ಇಳಿಯುತ್ತೇವೆ - ನಾವು ಬಾಹ್ಯಾಕಾಶ ವಿಜ್ಞಾನಿಗಳಾಗುತ್ತೇವೆ ಎಂದು ಹೇಳುತ್ತಾರೆ.