Prime Minister pays tributes to former Prime Minister Bharat Ratna Atal Bihari Vajpayee ji
December 25th, 08:43 am
The Prime Minister, Shri Narendra Modi has paid tributes to former Prime Minister Bharat Ratna Atal Bihari Vajpayee ji on his birth anniversary, today. Shri Modi stated that he dedicated his entire life to good governance and nation-building. He will always be remembered not only as an eloquent orator but also as a spirited poet. His personality, works, and leadership will continue to serve as a guiding path for the all-round development of the country, Shri Modi said.Prime Minister pays homage to Bharat Ratna Mahamana Pandit Madan Mohan Malaviya Ji
December 25th, 08:41 am
The Prime Minister, Shri Narendra Modi has paid homage to Bharat Ratna Mahamana Pandit Madan Mohan Malaviya Ji on his birth anniversary, today. Shri Modi stated that he remained dedicated throughout his life to the service of the motherland.He played an important role in awakening national consciousness along with social reform to break the chains of slavery. His unparalleled contribution to the field of education in the country can never be forgotten, Shri Modi said.Prime Minister pays tributes to former PM Chaudhary Charan Singh ji on his birth anniversary
December 23rd, 09:39 am
On the birth anniversary of Former PM Bharat Ratna Chaudhary Charan Singh, PM Modi lauded his dedication to the welfare of the deprived sections of society and farmers. The PM also remarked that the country can never forget his contributions to nation-building.ಪ್ರಣಬ್ ಮುಖರ್ಜಿ ಜನ್ಮ ದಿನಾಚರಣೆ ಪ್ರಯುಕ್ತ ಪ್ರಧಾನಮಂತ್ರಿ ಗೌರವ ಸಲ್ಲಿಸಿದ್ದಾರೆ
December 11th, 10:34 am
ಇಂದು ಮಾಜಿ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಅವರ ಜನ್ಮ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಗೌರವ ಸಲ್ಲಿಸಿದರು. ದಶಕಗಳ ಕಾಲ ತಮ್ಮ ಸಾರ್ವಜನಿಕ ಜೀವನದಲ್ಲಿ ಪ್ರಣಬ್ ಮುಖರ್ಜಿ ಅವರು ಅಚಲ ಸಮರ್ಪಣಾಭಾವದಿಂದ ಭಾರತಕ್ಕೆ ಸೇವೆ ಸಲ್ಲಿಸಿದ ಒಬ್ಬ ಶ್ರೇಷ್ಠ ರಾಜನೀತಿಜ್ಞ ಮತ್ತು ಅಸಾಧಾರಣ ಜ್ಞಾನ ಹೊಂದಿದ್ದ ತಜ್ಞ ಎಂದು ಬಣ್ಣಿಸಿದ್ದಾರೆ.ಮಹಾಕವಿ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಗೌರವ ಸಲ್ಲಿಸಿದ್ದಾರೆ
December 11th, 10:29 am
ಇಂದು ಮಹಾಕವಿ ಶ್ರೀ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅವರಿಗೆ ಗೌರವ ಸಲ್ಲಿಸಿದ್ದಾರೆ. ಸುಬ್ರಮಣ್ಯ ಭಾರತಿ ಅವರ ವಚನಗಳು ಧೈರ್ಯವನ್ನು ಹುಟ್ಟುಹಾಕಿವೆ, ಅವರ ಆಲೋಚನೆಗಳು ಅಸಂಖ್ಯಾತ ಜನರ ಮನಸ್ಸಿನಲ್ಲಿ ಶಾಶ್ವತವಾದ ಪ್ರಭಾವ ಬೀರುವ ಶಕ್ತಿಯನ್ನು ಹೊಂದಿವೆ. ಭಾರತದ ಸಾಂಸ್ಕೃತಿಕ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ಬೆಳಗಿಸಿವೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಹೇಳಿದ್ದಾರೆ. ಸುಬ್ರಹ್ಮಣ್ಯ ಭಾರತಿ ಅವರು, ನ್ಯಾಯಯುತ ಮತ್ತು ಎಲ್ಲರನ್ನೂ ಒಳಗೊಂಡ ಸಮಾಜವನ್ನು ನಿರ್ಮಿಸಲು ಶ್ರಮಿಸಿದರು. ತಮಿಳು ಸಾಹಿತ್ಯವನ್ನು ಶ್ರೀಮಂತಗೊಳಿಸಲು ಅವರ ಕೊಡುಗೆಗಳು ಅಪ್ರತಿಮವಾಗಿವೆ ಎಂದು ಹೇಳಿದ್ದಾರೆ,ಶ್ರೀ ಸಿ. ರಾಜಗೋಪಾಲಾಚಾರಿ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
December 10th, 09:37 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಸಿ. ರಾಜಗೋಪಾಲಾಚಾರಿ ಅವರ ಜನ್ಮ ವಾರ್ಷಿಕೋತ್ಸವದ ದಿನವಾದ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರು, ಚಿಂತಕರು, ಬುದ್ಧಿಜೀವಿ ಮತ್ತು ರಾಜಕಾರಣಿಯಾಗಿ ಅವರನ್ನು ಸ್ಮರಿಸಿರುವ ಪ್ರಧಾನಮಂತ್ರಿ, ಮೌಲ್ಯಗಳನ್ನು ಸೃಷ್ಟಿಸುವಲ್ಲಿ ಮತ್ತು ಮನುಕುಲದ ಘನತೆಯನ್ನು ಉಲೇಖಿಸುವಲ್ಲಿ ನಂಬಿಕೆ ಇಟ್ಟಿದ್ದ ರಾಜಾಜಿ ಅವರು 20ನೇ ಶತಮಾನದ ಅತ್ಯಂತ ತೀಕ್ಷ್ಣ ಮನಸ್ಸಿನವರಲ್ಲಿ ಒಬ್ಬರಾಗಿದ್ದಾರೆ ಎಂದು ತಿಳಿಸಿದ್ದಾರೆ.ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
December 03rd, 09:11 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಾ. ರಾಜೇಂದ್ರ ಪ್ರಸಾದ್ ಅವರ ಜನ್ಮದಿನವಾದ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ, ಸಂವಿಧಾನ ರಚನಾ ಸಭೆಯ ಅಧ್ಯಕ್ಷತೆ ವಹಿಸಿದ್ದರಿಂದ ಹಿಡಿದು ನಮ್ಮ ಮೊದಲ ರಾಷ್ಟ್ರಪತಿಯಾಗುವವರೆಗೆ, ಅವರು ಸಾಟಿಯಿಲ್ಲದ ಘನತೆ, ಸಮರ್ಪಣೆ ಮತ್ತು ಸ್ಪಷ್ಟ ಉದ್ದೇಶದಿಂದ ನಮ್ಮ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ್ದಾರೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು. ಸಾರ್ವಜನಿಕ ಜೀವನದಲ್ಲಿ ಅವರ ಸುದೀರ್ಘ ವರ್ಷಗಳು ಸರಳತೆ, ಧೈರ್ಯ ಮತ್ತು ರಾಷ್ಟ್ರೀಯ ಏಕತೆಯ ಬಗೆಗಿನ ಶ್ರದ್ಧೆಯಿಂದ ಗುರುತಿಸಲ್ಪಟ್ಟಿವೆ. ಅವರ ಅನುಕರಣೀಯ ಸೇವೆ ಮತ್ತು ದೂರದೃಷ್ಟಿ ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ, ಎಂದು ಶ್ರೀ ಮೋದಿ ಹೇಳಿದ್ದಾರೆ.ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ನಡೆದ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ
November 19th, 11:00 am
ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳು, ರಾಮಮೋಹನ್ ನಾಯ್ಡು ಜಿ, ಜಿ. ಕಿಶನ್ ರೆಡ್ಡಿ ಜಿ, ಭೂಪತಿ ರಾಜು ಶ್ರೀನಿವಾಸ ವರ್ಮಾ ಜಿ, ಸಚಿನ್ ತೆಂಡೂಲ್ಕರ್ ಜಿ, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಜಿ, ರಾಜ್ಯ ಸರ್ಕಾರದ ಸಚಿವ ನಾರಾ ಲೋಕೇಶ್ ಜಿ, ಶ್ರೀ ಸತ್ಯಸಾಯಿ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಆರ್. ಜೆ. ರತ್ನಾಕರ್ ಜಿ, ಉಪಕುಲಪತಿ ಕೆ. ಚಕ್ರವರ್ತಿ ಜಿ, ಐಶ್ವರ್ಯ ಜಿ, ಇತರ ಎಲ್ಲಾ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ, ಎಲ್ಲರಿಗೂ ಸಾಯಿ ರಾಮ್!ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 19th, 10:30 am
ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಇಂದು ನಡೆದ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಅವರು ತಮ್ಮ ಮಾತುಗಳನ್ನು ಸಾಯಿ ರಾಮ್ ನೊಂದಿಗೆ ಪ್ರಾರಂಭಿಸಿದರು ಮತ್ತು ಪುಟ್ಟಪರ್ತಿಯ ಪವಿತ್ರ ಭೂಮಿಯಲ್ಲಿ ಎಲ್ಲರೊಂದಿಗೆ ಇರುವುದು ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಅನುಭವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಲ್ಪ ಸಮಯದ ಹಿಂದೆ, ಬಾಬಾ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸುವ ಅವಕಾಶ ತಮಗೆ ಸಿಕ್ಕಿತು ಎಂಬುದನ್ನೂ ಅವರು ಹಂಚಿಕೊಂಡರು. ಬಾಬಾ ಅವರ ಪಾದಗಳಿಗೆ ನಮಸ್ಕರಿಸಿ ಅವರ ಆಶೀರ್ವಾದ ಪಡೆಯುವುದು ಸದಾ ಹೃದಯವನ್ನು ತುಂಬುವ ಆಳವಾದ ಭಾವನಾತ್ಮಕ ಕ್ಷಣ ಎಂದವರು ಬಣ್ಣಿಸಿದರು.ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
November 19th, 07:53 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ರಾಣಿ ಲಕ್ಷ್ಮಿಬಾಯಿ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
November 19th, 07:51 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಣಿ ಲಕ್ಷ್ಮಿಬಾಯಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಜಂಜಾತಿಯ ಗೌರವ್ ದಿವಸದಂದು ದೇವಮೊಗ್ರ ಮಾತಾ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ ಮೋದಿ; ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ದಿನಾಚರಣೆಯಂದು ದೇಶದ ಯೋಗಕ್ಷೇಮಕ್ಕಾಗಿ ಪ್ರಾರ್ಥನೆ
November 15th, 02:58 pm
ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ಆಚರಿಸುವ ಜಂಜಾತಿಯ ಗೌರವ್ ದಿವಸ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇವಮೊಗ್ರ ಮಾತಾ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನದಂದು ಅವರಿಗೆ ಪ್ರಧಾನಮಂತ್ರಿ ಗೌರವ ನಮನ
November 14th, 07:51 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು.ಪ್ರಧಾನಿ ನರೇಂದ್ರ ಮೋದಿ 2025 ರ ನವೆಂಬರ್ 11-12 ರವರೆಗೆ ಭೂತಾನ್‌ಗೆ ರಾಜ್ಯ ಭೇಟಿ ನೀಡಲಿದ್ದಾರೆ
November 09th, 09:59 am
ಉಭಯ ದೇಶಗಳ ನಡುವಿನ ಸಂಬಂಧಗಳನ್ನು ಬಲಪಡಿಸಲು ಪ್ರಧಾನಿ ಮೋದಿ 2025 ರ ನವೆಂಬರ್ 11-12 ರವರೆಗೆ ಭೂತಾನ್‌ಗೆ ರಾಜ್ಯ ಭೇಟಿ ನೀಡಲಿದ್ದಾರೆ. ಭೇಟಿಯ ಸಮಯದಲ್ಲಿ, ಪ್ರಧಾನಿಯವರು ಭೂತಾನ್ ರಾಜ ಹಿಸ್ ಮೆಜೆಸ್ಟಿ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್‌ಚುಕ್ ಮತ್ತು ಭೂತಾನ್ ಪ್ರಧಾನಿ ತ್ಶೆರಿಂಗ್ ಟೋಬ್‌ಗೇ ಅವರನ್ನು ಭೇಟಿ ಮಾಡಲಿದ್ದಾರೆ. ಭೂತಾನ್‌ನ ನಾಲ್ಕನೇ ದೊರೆ ಹಿಸ್ ಮೆಜೆಸ್ಟಿ ಜಿಗ್ಮೆ ಸಿಂಗ್ಯೆ ವಾಂಗ್‌ಚುಕ್ ಅವರ 70 ನೇ ಜನ್ಮ ದಿನಾಚರಣೆ ಮತ್ತು ಜಾಗತಿಕ ಶಾಂತಿ ಪ್ರಾರ್ಥನಾ ಉತ್ಸವದಲ್ಲಿಯೂ ಪ್ರಧಾನಿ ಭಾಗವಹಿಸಲಿದ್ದಾರೆ.ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 31st, 07:00 pm
ಮೊದಲಿಗೆ, ತಡವಾಗಿ ಬಂದಿದ್ದಕ್ಕಾಗಿ ನಾನುನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಇಂದು ಸರ್ದಾರ್ ಸಾಹೇಬ್ ಅವರ 150ನೇ ಜನ್ಮ ದಿನಾಚರಣೆ. ಏಕ್ತಾ ನಗರದಲ್ಲಿರುವ ಏಕತಾ ಪ್ರತಿಮೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಆ ಕಾರ್ಯಕ್ರಮದಿಂದಾಗಿ, ನಾನು ಇಲ್ಲಿಗೆ ತಲುಪಲು ವಿಳಂಬವಾಯಿತು. ಸಮಯಕ್ಕೆ ಸರಿಯಾಗಿ ಆಗಮಿಸಲು ಮತ್ತು ಅದಕ್ಕಾಗಿ ನಿಮ್ಮ ಕ್ಷಮೆ ಕೇಳಲು ಸಾಧ್ಯವಾಗದಿದ್ದಕ್ಕೆ ನಾನು ನಿಜವಾಗಿಯೂ ವಿಷಾದಿಸುತ್ತೇನೆ. ಆರಂಭದಲ್ಲಿ ನಾವು ಕೇಳಿದ ಮಂತ್ರಗಳ ಶಕ್ತಿ ಮತ್ತು ಚೈತನ್ಯವನ್ನು ಇನ್ನೂ ನಾವೆಲ್ಲರೂ ಅನುಭವಿಸುತ್ತಿದ್ದೇವೆ. ನಿಮ್ಮೊಂದಿಗೆ ಬರಲು ಅವಕಾಶ ಸಿಕ್ಕಾಗಲೆಲ್ಲಾ ಇದು ನನಗೆ ದೈವಿಕ ಮತ್ತು ಅಸಾಧಾರಣ ಅನುಭವವಾಗಿದೆ. ಇದು ಸ್ವಾಮಿ ದಯಾನಂದ ಜಿ ಅವರ ಆಶೀರ್ವಾದ, ಇದು ಅವರ ಆದರ್ಶಗಳಿಗೆ ನಮ್ಮ ಸಾಮೂಹಿಕ ಗೌರವ, ಮತ್ತು ನಿಮ್ಮೆಲ್ಲ ಚಿಂತಕರೊಂದಿಗಿನ ನನ್ನ ದಶಕಗಳ ವೈಯಕ್ತಿಕ ಬಾಂಧವ್ಯದ ಪರಿಣಾಮವಾಗಿ ನಾನು ನಿಮ್ಮೊಂದಿಗೆ ಇರಲು ಅವಕಾಶ ಪಡೆದಿದ್ದೇನೆ. ನಾನು ನಿಮ್ಮನ್ನು ಭೇಟಿಯಾದಾಗ ಮತ್ತು ಅವರೊಂದಿಗೆ ಮಾತನಾಡುವಾಗಲೆಲ್ಲಾ ನಾನು ಒಂದು ಅನನ್ಯ ಶಕ್ತಿ ಮತ್ತು ಸ್ಫೂರ್ತಿಯಿಂದ ತುಂಬಿದ್ದೇನೆ. ಇದೇ ರೀತಿಯ 9 ಸಭಾಂಗಣಗಳನ್ನು ಸ್ಥಾಪಿಸಲಾಗಿದೆ ಎಂಬುದು ನನಗೆ ತಿಳಿದುಬಂದಿದೆ. ಅಲ್ಲಿ ನಮ್ಮ ಎಲ್ಲಾ ಆರ್ಯ ಸಮಾಜದ ಸದಸ್ಯರು ವೀಡಿಯೊ ಲಿಂಕ್ ಮೂಲಕ ಈ ಕಾರ್ಯಕ್ರಮ ವೀಕ್ಷಿಸುತ್ತಿದ್ದಾರೆ. ನಾನು ಅವರನ್ನು ನೋಡಲು ಸಾಧ್ಯವಾಗದಿದ್ದರೂ, ನಾನು ಇಲ್ಲಿಂದ ಅವರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಕೇಂದ್ರ ಸಚಿವರಾದ ಡಾ. ಜಿತೇಂದ್ರ ಸಿಂಗ್ ಅವರಿಂದ ಏಕತಾ ಪ್ರತಿಜ್ಞೆಯ ಬೋಧನೆ; ಈ ಆಚರಣೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿಯವರ ಕಛೇರಿಯ ಅಧಿಕಾರಿಗಳು
October 31st, 02:06 pm
ರಾಷ್ಟ್ರೀಯ ಏಕತಾ ದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿಯವರ ಕಚೇರಿಯ ಅಧಿಕಾರಿಗಳು ಇಂದು ರಾಷ್ಟ್ರದ ಏಕತೆ ಮತ್ತು ಸಮಗ್ರತೆಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತಾ ಏಕತಾ ಪ್ರತಿಜ್ಞೆಯನ್ನು ಸ್ವೀಕರಿಸಿದರು.ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 31st, 09:00 am
ಸರ್ದಾರ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಐತಿಹಾಸಿಕ ಸಂದರ್ಭ, ಏಕತಾನಗರದಲ್ಲಿ ಈ ಶುಭ ಬೆಳಗ್ಗೆ, ಈ ವಿಹಂಗಮ ನೋಟ, ಸರ್ದಾರ್ ಸಾಹೇಬರ ಪಾದಗಳ ಬಳಿ ನಮ್ಮ ಉಪಸ್ಥಿತಿಯ ಮೂಲಕ ಇಂದು ನಾವೆಲ್ಲರೂ ಒಂದು ಮಹಾನ್ ಕ್ಷಣಕ್ಕೆ ಸಾಕ್ಷಿಯಾಗುತ್ತಿದ್ದೇವೆ. ದೇಶಾದ್ಯಂತ ನಡೆಯುತ್ತಿರುವ ಏಕತಾ ಓಟ, ಕೋಟ್ಯಂತರ ಭಾರತೀಯರ ಉತ್ಸಾಹ, ನಾವು ಹೊಸ ಭಾರತದ ಸಂಕಲ್ಪವನ್ನು ನೇರವಾಗಿ ಅನುಭವಿಸುತ್ತಿದ್ದೇವೆ. ನಿನ್ನೆ ಸಂಜೆ ನಡೆದ ಅದ್ಭುತ ಪ್ರಸ್ತುತಿ ಸೇರಿದಂತೆ ಇತ್ತೀಚೆಗೆ ಇಲ್ಲಿ ನಡೆದ ಕಾರ್ಯಕ್ರಮಗಳು ಭೂತಕಾಲದ ಸಂಪ್ರದಾಯ, ವರ್ತಮಾನದ ಕಠಿಣ ಪರಿಶ್ರಮ, ಶೌರ್ಯ ಮತ್ತು ಭವಿಷ್ಯದ ಸಾಧನೆಗಳ ಒಂದು ನೋಟವನ್ನು ಹೊಂದಿದ್ದವು. ಸರ್ದಾರ್ ಸಾಹೇಬರ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥವಾಗಿ, ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಸರ್ದಾರ್ ಸಾಹೇಬರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿವಸ್(ರಾಷ್ಟ್ರೀಯ ಏಕತಾ ದಿನ)ದಂದು ಎಲ್ಲಾ 140 ಕೋಟಿ ದೇಶವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು ಮತ್ತು ಧನ್ಯವಾದಗಳನ್ನು ಸಲ್ಲಿಸುತ್ತೇನೆ.ಗುಜರಾತ್ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು
October 31st, 08:44 am
ಗುಜರಾತ್ ನ ಕೆವಾಡಿಯಾದಲ್ಲಿ ಇಂದು ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಸರ್ದಾರ್ ಪಟೇಲ್ ಅವರ 150ನೇ ಜಯಂತಿಯು ಒಂದು ಐತಿಹಾಸಿಕ ಸಂದರ್ಭವಾಗಿದೆ ಎಂದು ಅವರು ಹೇಳಿದರು. ಏಕತಾ ನಗರದ ಮುಂಜಾವು ದೈವಿಕ ಮತ್ತು ಸುಂದರ ಎಂದು ಬಣ್ಣಿಸಿದ ಶ್ರೀ ಮೋದಿ, ಸರ್ದಾರ್ ಪಟೇಲ್ ಅವರ ಪಾದಗಳ ಬಳಿ ನೆರೆದ ಜನಸಮೂಹವನ್ನು ಉಲ್ಲೇಖಿಸಿದರು ಮತ್ತು ದೇಶವು ಬಹಳ ಮಹತ್ವದ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ದೇಶಾದ್ಯಂತ ನಡೆದ ಏಕತಾ ಓಟ ಮತ್ತು ಲಕ್ಷಾಂತರ ಭಾರತೀಯರ ಉತ್ಸಾಹಭರಿತ ಭಾಗವಹಿಸುವಿಕೆಯನ್ನು ಅವರು ಎತ್ತಿ ತೋರಿಸಿದರು, ನವ ಭಾರತಕ್ಕಾಗಿ ಸಂಕಲ್ಪವು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಒತ್ತಿ ಹೇಳಿದರು. ಹಿಂದೆ ನಡೆದ ಕಾರ್ಯಕ್ರಮಗಳು ಮತ್ತು ನಿನ್ನೆ ಸಂಜೆ ನಡೆದ ಗಮನಾರ್ಹ ಪ್ರಸ್ತುತಿಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ, ಹಿಂದಿನ ಸಂಪ್ರದಾಯಗಳು, ಇಂದಿನ ಕಠಿಣ ಪರಿಶ್ರಮ ಮತ್ತು ಶೌರ್ಯ ಮತ್ತು ಭವಿಷ್ಯದ ಸಾಧನೆಗಳನ್ನು ಇವುಗಳು ಪ್ರತಿಬಿಂಬಿಸುತ್ತವೆ ಎಂದು ಹೇಳಿದರು. ಸರ್ದಾರ್ ಪಟೇಲ್ ಅವರ 150 ನೇ ಜಯಂತಿಯ ಸ್ಮರಣಾರ್ಥ ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು. ಸರ್ದಾರ್ ಪಟೇಲ್ ಅವರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿನದ ಸಂದರ್ಭದಲ್ಲಿ ದೇಶದ 140 ಕೋಟಿ ನಾಗರಿಕರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದರು.ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿಯಂದು ಭಾರತ ಅವರಿಗೆ ಗೌರವ ನಮನ ಸಲ್ಲಿಸುತ್ತದೆ: ಪ್ರಧಾನಮಂತ್ರಿ
October 31st, 08:05 am
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿಯಂದು ಭಾರತ ಅವರಿಗೆ ಗೌರವ ನಮನ ಸಲ್ಲಿಸುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ಅಕ್ಟೋಬರ್ 30-31 ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 29th, 10:58 am
ಅಕ್ಟೋಬರ್ 30-31 ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಅಕ್ಟೋಬರ್ 30 ರಂದು ಪ್ರಧಾನಮಂತ್ರಿ ಅವರು ಕೆವಾಡಿಯಾದ ಏಕ್ತಾ ನಗರಕ್ಕೆ ಪ್ರಯಾಣಿಸಲಿದ್ದು, ಅದೇ ದಿನ ಸಂಜೆ 5:15ರ ಸುಮಾರಿಗೆ ಅಲ್ಲಿ ಇ-ಬಸ್ ಗಳಿಗೆ ಚಾಲನೆ ನೀಡಲಿದ್ದಾರೆ. ಸಂಜೆ 6:30ರ ಸುಮಾರಿಗೆ, ಅವರು ಏಕ್ತಾ ನಗರದಲ್ಲಿ 1,140 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ಮಾಡಲಿದ್ದಾರೆ.