ಅಸ್ಸಾಂನ ಕೊಕ್ರಝಾರ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವೀಡಿಯೊ ಕಾನ್ಫರೆನ್ಸ್ ಭಾಷಣ
March 13th, 03:00 pm
ಪ್ರತೀಕೂಲ ಹವಾಮಾನದಿಂದಾಗಿ ನಾನು ಕೊಕ್ರಝಾರ್‌ಗೆ ಬರಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಗುವಾಹತಿಯಿಂದ ಇಲ್ಲಿ ನಿಮ್ಮೊಂದಿಗೆ ಸಂವಹನ ನಡೆಸಲು ಸಾಧ್ಯವಾಯಿತು. ನಾನು ದೆಹಲಿಯಿಂದ ನಿಮ್ಮ ಬಳಿಗೆ ಬರಲು ಹೊರಟಿದ್ದೆ, ಆದರೆ ನಾನು ಗುವಾಹತಿಯಲ್ಲೇ ಇಳಿಯಬೇಕಾಯಿತು. ಈಗ ಗುವಾಹತಿಯಿಂದಲೇ ನಾನು ನಿಮ್ಮ ದರ್ಶನ ಪಡೆಯುತ್ತಿದ್ದೇನೆ, ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಅಸ್ಸಾಂ ಮುಖ್ಯಮಂತ್ರಿ, ಸಹೋದರ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಸದಸ್ಯ ಹಗ್ರಾಮ ಮೊಹಿಲರಿ ಜಿ, ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಅಸ್ಸಾಂ ಸರ್ಕಾರದ ಸಚಿವರೆ, ಸಂಸದರೆ ಮತ್ತು ಶಾಸಕರೆ, ಬಿ.ಟಿ.ಸಿ.ಯ ಎಲ್ಲಾ ಪ್ರತಿನಿಧಿಗಳೆ, ಸಮಾಜದ ಎಲ್ಲಾ ಹಿರಿಯ ಸದಸ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!ಅಸ್ಸಾಂನ ಕೊಕ್ರಝಾರ್‌ನಲ್ಲಿ ₹4,570 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 13th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಅಸ್ಸಾಂನ ಕೊಕ್ರಝಾರ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಪ್ರತಿಕೂಲ ಹವಾಮಾನದಿಂದಾಗಿ ಕೊಕ್ರಝಾರ್‌ಗೆ ಭೇಟಿ ನೀಡಲು ಸಾಧ್ಯವಾಗಿಲ್ಲ ಎಂದು ಪ್ರಧಾನಮಂತ್ರಿ ಹೇಳಿದರು ಮತ್ತು ನೆರೆದಿದ್ದ ನಾಗರಿಕರಿಗೆ ಕ್ಷಮೆಯಾಚಿಸಿದರು. ಗುವಾಹಟಿಯಿಂದ ಮಾತನಾಡುತ್ತಿರುವುದಾಗಿ ಪ್ರಧಾನಿ ಮೋದಿ ಹೇಳಿದರು. ಬೋಡೋಫಾ ಉಪೇಂದ್ರನಾಥ ಬ್ರಹ್ಮ ಮತ್ತು ರೂಪನಾಥ್ ಬ್ರಹ್ಮ ಅವರಂತಹ ಮಹಾನ್ ವ್ಯಕ್ತಿಗಳಿಗೆ ನಾನು ನಮಿಸುತ್ತೇನೆ ಎಂದು ಶ್ರೀ ಮೋದಿ ತಿಳಿಸಿಸಿದರು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿರುವುದು ನನ್ನ ಮೇಲಿನ ಋಣವಾಗಿದೆ, ಅದನ್ನು ಸಮರ್ಪಿತ ಸೇವೆ ಮತ್ತು ಪ್ರಾದೇಶಿಕ ಅಭಿವೃದ್ಧಿಯ ಮೂಲಕ ಮರುಪಾವತಿಸುತ್ತೇನೆ ಎಂದು ಹೇಳಿದರು. ನಿಮಗೆ ಸೇವೆ ಸಲ್ಲಿಸುವ ಮೂಲಕ ಮತ್ತು ಈ ಪ್ರದೇಶವನ್ನು ಅಭಿವೃದ್ಧಿಪಡಿಸುವ ಮೂಲಕ ಈ ಋಣವನ್ನು ತೀರಿಸುವುದು ನನ್ನ ಪ್ರಯತ್ನವಾಗಿದೆ ಎಂದು ಪ್ರಧಾನಮಂತ್ರಿ ಮೋದಿ ದೃಢಪಡಿಸಿದರು.ಬೋಡೋಫಾ ಉಪೇಂದ್ರನಾಥ ಬ್ರಹ್ಮಾವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
November 15th, 11:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೋಡೋಫಾ ಉಪೇಂದ್ರನಾಥ ಬ್ರಹ್ಮಾವರ ಅವರಿಗೆ ಗೌರವ ಸಲ್ಲಿಸಿ ಅವರ ಜೀವನ ಪಯಣವು ಹಲವರಿಗೆ ಶಕ್ತಿ ನೀಡುತ್ತದೆ ಎಂದಿದ್ದಾರೆ.ಬೋಡೋಫಾ ಉಪೇಂದ್ರನಾಥ್ ಬ್ರಹ್ಮ ಜಯಂತಿಯಂದು ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ
March 31st, 10:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬೋಡೋಫಾ ಉಪೇಂದ್ರನಾಥ್ ಬ್ರಹ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಬೋಡೋಫಾ ಉಪೇಂದ್ರನಾಥ್ ಬ್ರಹ್ಮ ಅವರ ಜೀವನವು ಜನರ ಕಲ್ಯಾಣಕ್ಕಾಗಿ ಮುಡಿಪಾಗಿತ್ತು ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಭಾರತ ಸರ್ಕಾರ ಮತ್ತು ಅಸ್ಸಾಂ ಸರ್ಕಾರವು ಅವರ ಕನಸುಗಳನ್ನು ಸಾಕಾರಗೊಳಿಸಲು ಮತ್ತು ಅದ್ಭುತ ಬೋಡೋ ಜನರ ಸಬಲೀಕರಣಕ್ಕಾಗಿ ಕೆಲಸ ಮಾಡಲು ಹಲವಾರು ಪ್ರಯತ್ನಗಳನ್ನು ಮಾಡುತ್ತಿವೆ ಎಂದು ಪ್ರಧಾನ ಮಂತ್ರಿ ಹೇಳಿದರು.