ಐ.ಎನ್.ಎಸ್ ವಿಕ್ರಾಂತ್ ನಲ್ಲಿ ಸಶಸ್ತ್ರ ಪಡೆಗಳೊಂದಿಗೆ ದೀಪಾವಳಿ ಆಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಭಾಷಣ
October 20th, 10:30 am
ಇಂದು ಅದ್ಭುತ ದಿನ, ಈ ಕ್ಷಣವನ್ನು ಮರೆಯಲಾಗದು, ಇವತ್ತಿನ ಈ ದೃಶ್ಯ ಅಸಾಧಾರಣವಾಗಿದೆ. ನನ್ನ ಒಂದು ಬದಿಯಲ್ಲಿ ವಿಶಾಲವಾದ ಅಮಿತ ಸಾಗರವಿದೆ, ಇನ್ನೊಂದು ಬದಿಯಲ್ಲಿ ಭಾರತ ಮಾತೆಯ ಧೈರ್ಯಶಾಲಿ ಸೈನಿಕರ ಅಪಾರ ಶಕ್ತಿಯೇ ಇದೆ. ನನ್ನ ಒಂದು ಬದಿಯಲ್ಲಿ ಅನಂತ ದಿಗಂತ ಮತ್ತು ಅಂತ್ಯ ಕಾಣದ ಆಗಸವಿದೆ, ಇನ್ನೊಂದು ಬದಿಯಲ್ಲಿ ತನ್ನೊಳಗೆ ಅನಂತ ಶಕ್ತಿಯನ್ನು ಸಾಕಾರಗೊಳಿಸುವ ಪ್ರಬಲ ಮತ್ತು ಭವ್ಯವಾದ ಐಎನ್ಎಸ್ ವಿಕ್ರಾಂತ್ ನೆಲೆ ನಿಂತಿದೆ. ಸಾಗರ ನೀರಿನ ಮೇಲೆ ಸೂರ್ಯನ ಬೆಳಕಿನ ಹೊಳಪು, ಒಂದು ರೀತಿಯಲ್ಲಿ, ನಮ್ಮ ಧೈರ್ಯಶಾಲಿ ಸೈನಿಕರು ಬೆಳಗಿದ ದೀಪಾವಳಿ ದೀಪಗಳಂತೆ ಕಾಣುತ್ತಿದ್ದಾರೆ. ಇವು ನಮ್ಮ ದೈವಿಕ ಬೆಳಕಿನ ಹಾರಗಳಾಗಿವೆ. ಈ ಬಾರಿ ನಾನು ನಮ್ಮ ನೌಕಾಪಡೆಯ ಅಪ್ರತಿಮ ಯೋಧರ ನಡುವೆ ದೀಪಾವಳಿಯ ಪವಿತ್ರ ಹಬ್ಬ ಆಚರಿಸುತ್ತಿರುವುದು ನನ್ನ ಪಾಲಿನ ದೊಡ್ಡ ಅದೃಷ್ಟವೇ ಆಗಿದೆ.PM Modi celebrates Diwali on board the INS Vikrant
October 20th, 10:00 am
In his address to the armed forces personnel on board INS Vikrant, PM Modi extended heartfelt Diwali greetings to the countrymen. He highlighted that, inspired by Chhatrapati Shivaji Maharaj, the Indian Navy has adopted a new flag. Recalling various operations, the PM emphasized that India stands ready to provide humanitarian assistance anywhere in the world. He also noted that over 100 districts have now fully emerged from Maoist terror.ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರದ ಉದ್ಘಾಟನೆ ಮತ್ತು ಬೋಯಿಂಗ್ ಸುಕನ್ಯಾ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
January 19th, 03:15 pm
ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಜೀ, ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಜೀ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಜೀ, ಭಾರತದಲ್ಲಿ ಬೋಯಿಂಗ್ ಕಂಪನಿಯ ಸಿಒಒ ಸ್ಟೆಫನಿ ಪೋಪ್, ಇತರ ಉದ್ಯಮ ಪಾಲುದಾರರು, ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಿ ಅವರಿಂದ ಕರ್ನಾಟಕದ ಬೆಂಗಳೂರಿನಲ್ಲಿ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರದ ಕ್ಯಾಂಪಸ್ ಉದ್ಘಾಟನೆ
January 19th, 02:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಬೆಂಗಳೂರಿನಲ್ಲಿಂದು ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಬಿಐಇಟಿಸಿ)ಯ ಹೊಸ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಇದನ್ನು 1,600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, 43 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಇದು ಅಮೆರಿಕಾದ ಹೊರಗೆ ಸ್ಥಾಪನೆಯಾಗಿರುವ ಬೃಹತ್ ಬೋಯಿಂಗ್ ಆಗಿದೆ. ಪ್ರಧಾನಮಂತ್ರಿ ಅವರು ದೇಶದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ವೈಮಾನಿಕ ವಲಯದಲ್ಲಿ ಹೆಚ್ಚಿನ ಹೆಣ್ಣು ಮಕ್ಕಳ ಪ್ರವೇಶವನ್ನು ಬೆಂಬಲಿಸುವ ಗುರಿ ಇರುವ ಬೋಯಿಂಗ್ ಸುಕನ್ಯಾ ಕಾರ್ಯಕ್ರಮಕ್ಕೂ ಚಾಲನೆ ನೀಡಿದರು.ಬೋಯಿಂಗ್ ಕಂಪೆನಿ ಅಧ್ಯಕ್ಷರು ಹಾಗೂ ಸಿಇಒ ಡೇವಿಡ್ ಎಲ್. ಕಾಲೌನ್ ಅವರೊಂದಿಗೆ ಪ್ರಧಾನ ಮಂತ್ರಿಗಳ ಸಭೆ
June 24th, 07:21 am
ಅಮೆರಿಕ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಳೆದ ಜೂನ್ 23 ರಂದು ವಾಷಿಂಗ್ಟನ್ ಡಿಸಿಯಲ್ಲಿ ಬೋಯಿಂಗ್ ಕಂಪೆನಿ ಅಧ್ಯಕ್ಷರು ಹಾಗೂ ಸಿಇಒ ಶ್ರೀ ಡೇವಿಡ್ ಎಲ್. ಕಾಲೌನ್ ಅವರನ್ನು ಭೇಟಿಯಾದರು.