ಅಸ್ಸಾಂನ ಗುವಾಹಟಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 13th, 05:30 pm
ಅಸ್ಸಾಂ ರಾಜ್ಯಪಾಲರಾದ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ರಾಜ್ಯ ಸರ್ಕಾರದ ಎಲ್ಲಾ ಸಚಿವರೆ, ಜನಪ್ರತಿನಿಧಿಗಳೆ, ದೇಶಾದ್ಯಂತ ತಂತ್ರಜ್ಞಾನದ ಮೂಲಕ ಈ ಕಾರ್ಯಕ್ರಮಕ್ಕೆ ಸಂಪರ್ಕ ಹೊಂದಿರುವ ನಮ್ಮ ಎಲ್ಲಾ ರೈತ ಮಿತ್ರರೆ, ಚಹಾ ತೋಟಗಳಲ್ಲಿ ಕೆಲಸ ಮಾಡುವ ನನ್ನ ಸಹೋದರ ಸಹೋದರಿಯರೆ ಮತ್ತು ನಮ್ಮ ಅನೇಕ ಹಿರಿಯ ಮುಖ್ಯಮಂತ್ರಿಗಳು ಇಂದು ಈ ಕಾರ್ಯಕ್ರಮದಲ್ಲಿ ದೇಶದ ಮೂಲೆ ಮೂಲೆಯಿಂದ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಎಲ್ಲರಿಗೂ ನನ್ನ ಶುಭಾಶಯಗಳು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಲ್ಲಿ ₹19,4800 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು; ದೇಶಾದ್ಯಂತದ ಕೋಟ್ಯಂತರ ರೈತರಿಗೆ ₹18,000 ಕೋಟಿಗೂ ಹೆಚ್ಚಿನ ಮೊತ್ತದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ಬಿಡುಗಡೆ ಮಾಡಿದರು
March 13th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ಸುಮಾರು ₹19,4800 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ಗುವಾಹಟಿಯಲ್ಲಿ ನಡೆದ ಭವ್ಯ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ನಗರದ ಜನರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ದೇಶಾದ್ಯಂತದಿಂದ ಕಾರ್ಯಕ್ರಮದಲ್ಲಿ ಸೇರಿದ್ದ ರೈತರು ಹಾಗೂ ಚಹಾ ತೋಟಗಳಲ್ಲಿ ಕೆಲಸ ಮಾಡುತ್ತಿರುವ ಸಹೋದರ, ಸಹೋದರಿಯರನ್ನು ಅವರು ಸ್ವಾಗತಿಸಿದರು. ನವರಾತ್ರಿಯ ಮುನ್ನಾದಿನದಂದು ಮಾ ಕಾಮಾಖ್ಯ ಅವರ ಪವಿತ್ರ ಭೂಮಿಯಲ್ಲಿ ಇರುವ ಸೌಭಾಗ್ಯಕ್ಕಾಗಿ ಪ್ರಧಾನಮಂತ್ರಿಯವರು ಕೃತಜ್ಞತೆ ಸಲ್ಲಿಸಿದರು. ನವರಾತ್ರಿ ಪ್ರಾರಂಭವಾಗುವ ಸ್ವಲ್ಪ ಮೊದಲು ಮಾ ಕಾಮಾಖ್ಯ ಅವರ ಈ ಪವಿತ್ರ ಭೂಮಿಯಲ್ಲಿ ನಿಮ್ಮ ದರ್ಶನ ಪಡೆಯುವ ಭಾಗ್ಯ ನನಗೆ ದೊರೆತಿದೆ ಎಂದು ಶ್ರೀ ಮೋದಿ ಅವರು ಹೇಳಿದರು.ಅಸ್ಸಾಂನ ಗುವಾಹಟಿಯಲ್ಲಿ ಕುಮಾರ ಭಾಸ್ಕರ್ ವರ್ಮಾ ಸೇತುವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
February 14th, 07:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಕುಮಾರ ಭಾಸ್ಕರ್ ವರ್ಮಾ ಸೇತು(ಸೇತುವೆ)ವನ್ನು ಉದ್ಘಾಟಿಸಿದರು. ಈ ಸೇತುವೆಯು ಗುವಾಹಟಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರಮುಖ ಮೂಲಸೌಕರ್ಯ ಯೋಜನೆಯಾಗಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು. ಸಂಪರ್ಕ, ಸೌಕರ್ಯ ಮತ್ತು ವಾಣಿಜ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲಾಗುತ್ತದೆ. ಜತೆಗೆ ಇದು ಭಕ್ತರಿಗೆ ಕಾಮಾಕ್ಯ ದೇವಾಲಯಕ್ಕೆ ಹೆಚ್ಚು ಸುಲಭವಾಗಿ ಹೋಗಲು ಅನುವು ಮಾಡಿಕೊಡುತ್ತದೆ, ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.Cabinet approves construction of Twin Tube TBM road Underwater tunnel and a Railway project in Assam
February 14th, 12:56 pm
The Cabinet Committee on Economic Affairs, chaired by PM Modi, has approved the construction of a 4-lane access-controlled greenfield connectivity corridor from Gohpur on NH-15 to Numaligarh on NH-715, including a 15.79 km road-cum-rail tunnel under the River Brahmaputra, worth Rs. 18,662 crore in Assam. The project will enhance the efficiency of freight movement, reduce logistics costs and drive socio-economic growth in the North Eastern region.