ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

June 15th, 11:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರಾಟಿಸ್ಲಾವಾದ ಅಧ್ಯಕ್ಷರ ಭವನದಲ್ಲಿ ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷರಾದ ಮಾನ್ಯ ಶ್ರೀ ಪೀಟರ್ ಪೆಲ್ಲೆಗ್ರಿನಿ ಅವರನ್ನು ಭೇಟಿ ಮಾಡಿದರು.

ಅಜ್ಞಾತ ಸೈನಿಕನ ಸಮಾಧಿ ಸ್ಮಾರಕಕ್ಕೆ ಪ್ರಧಾನಮಂತ್ರಿ ಅವರಿಂದ ಪುಷ್ಪ ನಮನ

June 15th, 06:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಬ್ರಾಟಿಸ್ಲಾವಾದಲ್ಲಿರುವ ಅಜ್ಞಾತ ಸೈನಿಕನ ಸಮಾಧಿ ಸ್ಮಾರಕಕ್ಕೆ ಭೇಟಿ ನೀಡಿ ಸ್ಲೋವಾಕಿಯಾದ ಹುತಾತ್ಮ ಸೈನಿಕರಿಗೆ ಗೌರವ ನಮನ ಸಲ್ಲಿಸಿದರು.

ಸ್ಲೋವಾಕ್ ಗಣರಾಜ್ಯದ ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಪ್ರಧಾನಮಂತ್ರಿ

June 15th, 05:40 pm

ಐತಿಹಾಸಿಕ ಬ್ರಾಟಿಸ್ಲಾವಾ ಕೋಟೆ ಕಟ್ಟಡದಲ್ಲಿ ಇಂದು ಸ್ಲೋವಾಕ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ರಾಬರ್ಟ್ ಫಿಕೊ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಪಧಾನಮಂತ್ರಿಯವರು ಆಗಮಿಸಿದಾಗ, ಅವರಿಗೆ ಸಂಭ್ರಮದ ಔಪಚಾರಿಕ ಸ್ವಾಗತ ನೀಡಲಾಯಿತು.

ಫ್ರಾನ್ಸ್ ಮತ್ತು ಸ್ಲೋವಾಕಿಯಾಕ್ಕೆ ಭೇಟಿ ನೀಡುವ ಮುನ್ನ ಪ್ರಧಾನಮಂತ್ರಿ ಅವರ ಹೇಳಿಕೆ

June 13th, 10:03 am

ಫ್ರೆಂಚ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇಮ್ಯಾನುಯೆಲ್ ಮ್ಯಾಕ್ರನ್ ಮತ್ತು ಸ್ಲೋವಾಕ್ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ರಾಬರ್ಟ್ ಫಿಕೊ ಅವರ ಆಹ್ವಾನದ ಮೇರೆಗೆ, ನಾನು 2026ರ ಜೂನ್ 13 ರಿಂದ 18 ರವರೆಗೆ ಫ್ರಾನ್ಸ್ ಮತ್ತು ಸ್ಲೋವಾಕ್ ಗಣರಾಜ್ಯಕ್ಕೆ ಅಧಿಕೃತ ಭೇಟಿ ಕೈಗೊಳ್ಳುತ್ತಿದ್ದೇನೆ.