ಮನ್ ಕಿ ಬಾತ್ ನಲ್ಲಿ 2027 ರ ಡಿಜಿಟಲ್ ಜನಗಣತಿಯನ್ನು ಯಶಸ್ವಿಗೊಳಿಸುವಂತೆ ಪ್ರಧಾನಿ ಮೋದಿ ದೇಶವಾಸಿಗಳನ್ನು ಕೋರಿದ್ದಾರೆ
April 26th, 11:30 am
ಈ ತಿಂಗಳ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಪರಮಾಣು ಮತ್ತು ಪವನ ಇಂಧನ ಕ್ಷೇತ್ರಗಳಲ್ಲಿ ಭಾರತದ ಪ್ರಗತಿಯನ್ನು ಎತ್ತಿ ತೋರಿಸಿದರು. ಭಗವಾನ್ ಬುದ್ಧನ ಬೋಧನೆಗಳು, ಬೀಟಿಂಗ್ ರಿಟ್ರೀಟ್ ಸಮಾರಂಭ, ಪ್ರಕೃತಿ ಸಂರಕ್ಷಣೆ, ಬಿದಿರು ವಲಯ, ಪ್ರಾಚೀನ ಗ್ರಂಥಗಳು ಮತ್ತು ಗಣಿತ ಒಲಿಂಪಿಯಾಡ್ ಕಾರ್ಯಕ್ರಮ ಸೇರಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಅವರು ಸ್ಪರ್ಶಿಸಿದರು. ನಡೆಯುತ್ತಿರುವ ಡಿಜಿಟಲ್ ಜನಗಣತಿ ಅಭಿಯಾನದ ಬಗ್ಗೆಯೂ ಪ್ರಧಾನಿ ಮಾತನಾಡಿದರು ಮತ್ತು ಪ್ರತಿಯೊಬ್ಬರೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬ್ರೆಜಿಲ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ
February 21st, 12:30 pm
ಭಾರತ-ಬ್ರೆಜಿಲ್ ಸಂಬಂಧಗಳು ಅಧ್ಯಕ್ಷ ಲೂಲಾ ಅವರ ದೃಷ್ಟಿಕೋನ ಮತ್ತು ಸ್ಪೂರ್ತಿದಾಯಕ ನಾಯಕತ್ವದಿಂದ ದೀರ್ಘಕಾಲದಿಂದ ಪ್ರಯೋಜನ ಪಡೆದಿವೆ. ಕಳೆದ ಕೆಲವು ವರ್ಷಗಳಿಂದ, ನಾನು ಅವರನ್ನು ಹಲವಾರು ಸಂದರ್ಭಗಳಲ್ಲಿ ಭೇಟಿಯಾಗುವ ಸೌಭಾಗ್ಯವನ್ನು ಪಡೆದಿದ್ದೇನೆ. ಅಂತಹ ಪ್ರತಿಯೊಂದು ಸಂವಾದದಲ್ಲೂ, ಭಾರತದ ಬಗ್ಗೆ ಅವರ ಆತ್ಮೀಯ ಸ್ನೇಹ ಮತ್ತು ಶಾಶ್ವತ ನಂಬಿಕೆಯನ್ನು ನಾನು ವೈಯಕ್ತಿಕವಾಗಿ ಅನುಭವಿಸಿದ್ದೇನೆ.ಬ್ರೆಜಿಲ್ ಅಧ್ಯಕ್ಷರಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ
January 22nd, 09:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್ ಒಕ್ಕೂಟ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಂದ ದೂರವಾಣಿ ಕರೆಯನ್ನು ಸ್ವೀಕರಿಸಿದರು.ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ನಡೆದ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ
November 19th, 11:00 am
ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳು, ರಾಮಮೋಹನ್ ನಾಯ್ಡು ಜಿ, ಜಿ. ಕಿಶನ್ ರೆಡ್ಡಿ ಜಿ, ಭೂಪತಿ ರಾಜು ಶ್ರೀನಿವಾಸ ವರ್ಮಾ ಜಿ, ಸಚಿನ್ ತೆಂಡೂಲ್ಕರ್ ಜಿ, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಜಿ, ರಾಜ್ಯ ಸರ್ಕಾರದ ಸಚಿವ ನಾರಾ ಲೋಕೇಶ್ ಜಿ, ಶ್ರೀ ಸತ್ಯಸಾಯಿ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಆರ್. ಜೆ. ರತ್ನಾಕರ್ ಜಿ, ಉಪಕುಲಪತಿ ಕೆ. ಚಕ್ರವರ್ತಿ ಜಿ, ಐಶ್ವರ್ಯ ಜಿ, ಇತರ ಎಲ್ಲಾ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ, ಎಲ್ಲರಿಗೂ ಸಾಯಿ ರಾಮ್!ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 19th, 10:30 am
ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಇಂದು ನಡೆದ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಅವರು ತಮ್ಮ ಮಾತುಗಳನ್ನು ಸಾಯಿ ರಾಮ್ ನೊಂದಿಗೆ ಪ್ರಾರಂಭಿಸಿದರು ಮತ್ತು ಪುಟ್ಟಪರ್ತಿಯ ಪವಿತ್ರ ಭೂಮಿಯಲ್ಲಿ ಎಲ್ಲರೊಂದಿಗೆ ಇರುವುದು ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಅನುಭವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಲ್ಪ ಸಮಯದ ಹಿಂದೆ, ಬಾಬಾ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸುವ ಅವಕಾಶ ತಮಗೆ ಸಿಕ್ಕಿತು ಎಂಬುದನ್ನೂ ಅವರು ಹಂಚಿಕೊಂಡರು. ಬಾಬಾ ಅವರ ಪಾದಗಳಿಗೆ ನಮಸ್ಕರಿಸಿ ಅವರ ಆಶೀರ್ವಾದ ಪಡೆಯುವುದು ಸದಾ ಹೃದಯವನ್ನು ತುಂಬುವ ಆಳವಾದ ಭಾವನಾತ್ಮಕ ಕ್ಷಣ ಎಂದವರು ಬಣ್ಣಿಸಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬ್ರೆಜಿಲ್ ಅಧ್ಯಕ್ಷರಿಂದ ದೂರವಾಣಿ ಕರೆ
August 07th, 09:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ಬ್ರೆಜಿಲ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
July 09th, 06:02 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದ್ದಾರೆ. ಅವರು ಇಂದು ಬ್ರೆಜಿಲ್ ನ ಅಧ್ಯಕ್ಷ ಘನತೆವೆತ್ತ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರನ್ನು ಬ್ರೆಜಿಲ್ ನ ಅಲ್ವೊರಾಡಾ ಅರಮನೆಯಲ್ಲಿ ಭೇಟಿಯಾದರು. ಪ್ರಧಾನಿಯವರನ್ನು ಅಧ್ಯಕ್ಷ ಲುಲಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ಭವ್ಯ ಮತ್ತು ವರ್ಣರಂಜಿತ ವಿಧ್ಯುಕ್ತ ಸ್ವಾಗತವನ್ನು ನೀಡಿದರು.ಜಂಟಿ ಹೇಳಿಕೆ: ಭಾರತ ಮತ್ತು ಬ್ರೆಜಿಲ್ - ಉನ್ನತ ಉದ್ದೇಶಗಳನ್ನು ಹೊಂದಿರುವ ಎರಡು ಶ್ರೇಷ್ಠ ರಾಷ್ಟ್ರಗಳು
July 09th, 05:55 am
ಭಾರತ ಗಣರಾಜ್ಯದ ಪ್ರಧಾನ ಮಂತ್ರಿಯವರಾದ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು ಜುಲೈ 8, 2025 ರಂದು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದರು. ಫೆಡರೇಟಿವ್ ರಿಪಬ್ಲಿಕ್ ಆಫ್ ಬ್ರೆಜಿಲ್ ನ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಆಹ್ವಾನದ ಮೇರೆಗೆ ಈ ಭೇಟಿಯನ್ನು ಕೈಗೊಳ್ಳಲಾಯಿತು. ಸುಮಾರು ಎಂಟು ದಶಕಗಳಿಂದ ಬ್ರೆಜಿಲ್-ಭಾರತ ಸಂಬಂಧಗಳ ಮೂಲಾಧಾರವಾಗಿರುವ ಸ್ನೇಹ ಮತ್ತು ವಿಶ್ವಾಸದ ಉತ್ಸಾಹದಲ್ಲಿ ಈ ಭೇಟಿ ನಡೆಯಿತು. 2006ರಲ್ಲಿ, ಈ ಸಂಬಂಧವನ್ನು ಕಾರ್ಯತಂತ್ರದ ಪಾಲುದಾರಿಕೆಗೆ ಏರಿಸಲಾಯಿತು.ಪ್ರಧಾನಮಂತ್ರಿ ಅವರ ಬ್ರೆಜಿಲ್ ಭೇಟಿ: ಆಗಿರುವ ಫಲಿತಾಂಶಗಳ ಪಟ್ಟಿ
July 09th, 03:14 am
ಅಂತಾರಾಷ್ಟ್ರೀಯ ಭಯೋತ್ಪಾದನೆ ಮತ್ತು ದೇಶೀಯ ಸಂಘಟಿತ ಅಪರಾಧವನ್ನು ಎದುರಿಸುವಲ್ಲಿ ಸಹಕಾರದ ಒಪ್ಪಂದ.ಪ್ರಧಾನಮಂತ್ರಿ ಅವರಿಗೆ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಗೌರವ - "ದಿ ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್" ಪ್ರದಾನ
July 09th, 12:58 am
ಬ್ರೆಜಿಲ್ ಅಧ್ಯಕ್ಷರಾದ ಗೌರವಾನ್ವಿತ ಲೂಯಿಜ್ ಇನಾಸಿಯೊ ಲೂಲಾ ಡ ಸಿಲ್ವಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಗೌರವವಾದ ದಿ ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್ ಅನ್ನು ಪ್ರದಾನ ಮಾಡಿದರು.ಬ್ರೆಜಿಲ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
July 08th, 08:30 pm
ಇಂದು ಬ್ರೆಜಿಲ್ ಅಧ್ಯಕ್ಷರಿಂದ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವುದು ನನಗೆ ಮಾತ್ರವಲ್ಲದೆ 140 ಕೋಟಿ ಭಾರತೀಯರಿಗೆ ಅತೀವ ಹೆಮ್ಮೆ ಮತ್ತು ಭಾವನಾತ್ಮಕ ಕ್ಷಣವಾಗಿದೆ. ಈ ಗೌರವಕ್ಕಾಗಿ ಅಧ್ಯಕ್ಷರಿಗೆ, ಬ್ರೆಜಿಲ್ ಸರ್ಕಾರಕ್ಕೆ ಮತ್ತು ಬ್ರೆಜಿಲ್ ಜನರಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ.ಪ್ರಧಾನಿ ಮೋದಿ ಬ್ರೆಜಿಲ್‌ನ ಬ್ರೆಜಿಲಿಯಾಕ್ಕೆ ಆಗಮಿಸಿದರು
July 08th, 02:55 am
ಪ್ರಧಾನಿ ನರೇಂದ್ರ ಮೋದಿ ಅವರು ಸ್ವಲ್ಪ ಸಮಯದ ಹಿಂದೆ ಅಧಿಕೃತ ಭೇಟಿಗಾಗಿ ಬ್ರೆಜಿಲಿಯಾಕ್ಕೆ ಆಗಮಿಸಿದರು. ಅವರು ಭಾರತ-ಬ್ರೆಜಿಲ್ ಸಂಬಂಧಗಳ ವಿವಿಧ ಅಂಶಗಳ ಕುರಿತು ಅಧ್ಯಕ್ಷ ಲುಲಾ ಅವರೊಂದಿಗೆ ವಿವರವಾದ ಮಾತುಕತೆ ನಡೆಸಲಿದ್ದಾರೆ.ಬ್ರೆಜಿಲ್ ನಲ್ಲಿರುವ ಭಾರತೀಯ ಸಮುದಾಯದ ರೋಮಾಂಚಕ ಸ್ವಾಗತಕ್ಕೆ ಪ್ರಧಾನಮಂತ್ರಿ ಮೆಚ್ಚುಗೆ
July 06th, 08:28 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಯೊ ಡಿ ಜನೈರೊದಲ್ಲಿ ತಮಗೆ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ಬ್ರೆಜಿಲ್ ನಲ್ಲಿರುವ ಭಾರತೀಯ ಸಮುದಾಯದವರನ್ನು ಶ್ಲಾಘಿಸಿದ್ದಾರೆ. ಭಾರತದ ಅಭಿವೃದ್ಧಿಯ ಬಗ್ಗೆ ಅನಿವಾಸಿ ಭಾರತೀಯರು ಅತ್ಯಂತ ಉತ್ಸುಕರಾಗಿರುವುದು ಮತ್ತು ಭಾರತೀಯ ಸಂಸ್ಕೃತಿಯೊಂದಿಗೆ ತಮ್ಮ ಸಂಪರ್ಕ ಮುಂದುವರಿಸಿರುವುದು ಅಮೋಘವಾಗಿದೆ ಎಂದು ಶ್ರೀ ಮೋದಿ ಅವರು ಬಣ್ಣಿಸಿದ್ದಾರೆ. ಅಲ್ಲಿನ ಸ್ವಾಗತದ ಕೆಲವು ಚಿತ್ರಗಳನ್ನು ಕೂಡ ಶ್ರೀ ಮೋದಿ ಅವರು ಹಂಚಿಕೊಂಡಿದ್ದಾರೆ.ಪ್ರಧಾನಿ ಮೋದಿ ಬ್ರೆಜಿಲ್‌ನ ರಿಯೊ ಡಿ ಜನೈರೊಗೆ ಆಗಮಿಸಿದರು
July 06th, 04:47 am
ಪ್ರಧಾನಿ ನರೇಂದ್ರ ಮೋದಿ ಅವರು ಸ್ವಲ್ಪ ಸಮಯದ ಹಿಂದೆ ಬ್ರೆಜಿಲ್‌ಗೆ ಆಗಮಿಸಿದ್ದಾರೆ. ಅವರು ರಿಯೊ ಡಿ ಜನೈರೊದಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಮತ್ತು ಹಲವಾರು ವಿಶ್ವ ನಾಯಕರನ್ನು ಭೇಟಿಯಾಗಲಿದ್ದಾರೆ.ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾ ಭೇಟಿಯ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ
July 02nd, 07:34 am
ಇಂದು, ನಾನು ಜುಲೈ 2 ರಿಂದ 9, 2025 ರವರೆಗೆ ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಕ್ಕೆ ಐದು ರಾಷ್ಟ್ರಗಳ ಭೇಟಿಯನ್ನು ಕೈಗೊಳ್ಳುತ್ತೇನೆಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಕ್ಕೆ ಪ್ರಧಾನಮಂತ್ರಿ ಅವರ ಭೇಟಿ (ಜುಲೈ 02-09)
June 27th, 10:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜುಲೈ 02ರಿಂದ 3ರವರೆಗೆ ಘಾನಾಕ್ಕೆ ಭೇಟಿ ನೀಡಲಿದ್ದಾರೆ. ಇದು ಘಾನಾಕ್ಕೆ ಪ್ರಧಾನಮಂತ್ರಿ ಅವರ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಭಾರತದಿಂದ ಘಾನಾಕ್ಕೆ ಪ್ರಧಾನಮಂತ್ರಿ ಅವರ ಈ ಭೇಟಿ ಮೂರು ದಶಕಗಳ ನಂತರ ನಡೆಯುತ್ತಿದೆ. ಈ ಭೇಟಿಯ ಸಮಯದಲ್ಲಿ, ಪ್ರಧಾನಮಂತ್ರಿ ಅವರು ಘಾನಾ ಅಧ್ಯಕ್ಷರೊಂದಿಗೆ ಬಲವಾದ ದ್ವಿಪಕ್ಷೀಯ ಪಾಲುದಾರಿಕೆಯನ್ನು ಪರಿಶೀಲಿಸಲು ಮತ್ತು ಆರ್ಥಿಕ, ಇಂಧನ ಮತ್ತು ರಕ್ಷಣಾ ಸಹಯೋಗ ಮತ್ತು ಅಭಿವೃದ್ಧಿ ಸಹಕಾರ ಪಾಲುದಾರಿಕೆಯ ಮೂಲಕ ಅದನ್ನು ಹೆಚ್ಚಿಸಲು ಹೆಚ್ಚಿನ ಮಾರ್ಗಗಳ ಬಗ್ಗೆ ಚರ್ಚಿಸಲು ಮಾತುಕತೆ ನಡೆಸಲಿದ್ದಾರೆ. ಈ ಭೇಟಿಯು ದ್ವಿಪಕ್ಷೀಯ ಸಂಬಂಧಗಳನ್ನು ಆಳಗೊಳಿಸಲು ಮತ್ತು ಇಕೋವಾಸ್ (ಪಶ್ಚಿಮ ಆಫ್ರಿಕಾ ರಾಜ್ಯಗಳ ಆರ್ಥಿಕ ಸಮುದಾಯ) ಮತ್ತು ಆಫ್ರಿಕನ್ ಒಕ್ಕೂಟದೊಂದಿಗೆ ಭಾರತದ ಸಂಬಂಧವನ್ನು ಬಲಪಡಿಸಲು ಉಭಯ ದೇಶಗಳ ಹಂಚಿಕೆಯ ಬದ್ಧತೆಯನ್ನು ಪುನರುಚ್ಚರಿಸುತ್ತದೆ.ಜಿ7 ಶೃಂಗಸಭೆಯಲ್ಲಿ ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಸಂವಾದ
June 18th, 03:05 pm
2025ರ ಜೂನ್ 17 ರಂದು ಕೆನಡಾದ ಕನನಾಸ್ಕಿಸ್‌ನಲ್ಲಿ ನಡೆದ ಜಿ 7 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಸಿರಿಲ್ ರಾಮಫೋಸಾ ಮತ್ತು ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ವಿಸ್ತಾರವಾದ ಮತ್ತು ಹೃತ್ಪೂರ್ವಕ ಸಂಭಾಷಣೆಗಳನ್ನು ನಡೆಸಿದರು. ಜಾಗತಿಕ ದಕ್ಷಿಣದ ಉದ್ದೇಶವನ್ನು ಸಮರ್ಥಿಸುವ ಭಾರತದ ಅಚಲ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 30.03.2025 ರಂದು ಮಾಡಿದ ‘ಮನ್ ಕಿ ಬಾತ್’ – 120ನೇ ಸಂಚಿಕೆಯ ಕನ್ನಡ ಅವತರಣಿಕೆ
March 30th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಈ ಶುಭ ದಿನದಂದು, ನಿಮ್ಮೊಂದಿಗೆ 'ಮನದ ಮಾತು' ಹಂಚಿಕೊಳ್ಳುವ ಅವಕಾಶ ನನಗೆ ಲಭಿಸಿದೆ. ಇಂದು ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯಮಿ. ಇಂದಿನಿಂದ ಚೈತ್ರ ನವರಾತ್ರಿ ಪ್ರಾರಂಭವಾಗಲಿದೆ. ಇಂದಿನಿಂದ ಭಾರತೀಯ ನವ ವರ್ಷವೂ ಆರಂಭವಾಗುತ್ತದೆ. ಈ ಬಾರಿ ವಿಕ್ರಮ ಸಂವತ್ಸರ ಅಂದರೆ ೨೦೮೨ (ಎರಡು ಸಾವಿರದ ಎಂಬತ್ತೆರಡು) ಶುರುವಾಗಲಿದೆ. ನನ್ನ ಮುಂದೆ ನೀವು ಬರೆದ ಬಹಳಷ್ಟು ಪತ್ರಗಳಿವೆ. ಬಿಹಾರದವರು, ಬಂಗಾಳದವರು, ಕೆಲವರು ತಮಿಳುನಾಡಿನವರು, ಕೆಲವರು ಗುಜರಾತ್‌ನವರು ಪತ್ರ ಬರೆದಿದ್ದಾರೆ. ಬಹಳ ಆಸಕ್ತಿಕರವಾಗಿ ಜನರು ತಮ್ಮ ಮನದ ಮಾತುಗಳನ್ನು ವ್ಯಕ್ತಪಡಿಸಿದ್ದಾರೆ. ಅನೇಕ ಪತ್ರಗಳು ಶುಭ ಹಾರೈಕೆಗಳು ಮತ್ತು ಅಭಿನಂದನಾ ಸಂದೇಶಗಳನ್ನು ಹೊತ್ತು ತಂದಿವೆ. ಆದರೆ ಇಂದು ನಿಮ್ಮೊಂದಿಗೆ ಕೆಲವು ಸಂದೇಶಗಳನ್ನು ಹಂಚಿಕೊಳ್ಳಬಯಸುತ್ತೇನೆ -ಶಸ್ತ್ರಚಿಕಿತ್ಸೆಯ ನಂತರ ಬ್ರೆಜಿಲ್ ಅಧ್ಯಕ್ಷರು ಉತ್ತಮ ಆರೋಗ್ಯವನ್ನು ಹೊಂದಿ ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಮಂತ್ರಿಯವರಿಂದ ಹಾರೈಕೆ
December 12th, 09:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಬ್ರೆಜಿಲ್ ಅಧ್ಯಕ್ಷರಾದ ಲುಲಾ ಡಾ ಸಿಲ್ವಾ ಅವರು ಶಸ್ತ್ರಚಿಕಿತ್ಸೆಯ ನಂತರ ಉತ್ತಮ ಆರೋಗ್ಯವನ್ನು ಹೊಂದಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.2ನೇ ಭಾರತ-ಕ್ಯಾರಿಕಾಮ್ (ಸಿ ಎ ಆರ್ ಐ ಸಿ ಒ ಎಂ) ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಸಮಾರೋಪ ಭಾಷಣಗಳು
November 21st, 02:21 am
ನೀವೆಲ್ಲರೂ ನೀಡಿದ ಅಮೂಲ್ಯ ಸಲಹೆಗಳು ಮತ್ತು ಸಕಾರಾತ್ಮಕ ಆಲೋಚನೆಗಳನ್ನು ನಾನು ಸ್ವಾಗತಿಸುತ್ತೇನೆ. ಭಾರತದ ಪ್ರಸ್ತಾಪಗಳಿಗೆ ಸಂಬಂಧಿಸಿದಂತೆ, ನನ್ನ ತಂಡವು ನಿಮ್ಮೊಂದಿಗೆ ಎಲ್ಲಾ ವಿವರಗಳನ್ನು ಹಂಚಿಕೊಳ್ಳುತ್ತದೆ ಮತ್ತು ನಾವು ಎಲ್ಲಾ ವಿಷಯಗಳ ಬಗ್ಗೆ ಕಾಲಮಿತಿಯೊಳಗೆ ಮುಂದುವರಿಯುತ್ತೇವೆ.