ರೋಜ್‌ಗಾರ್ ಮೇಳದಡಿ 51,000ಕ್ಕಿಂತ ಹೆಚ್ಚಿನ ನೇಮಕಾತಿ ಪತ್ರಗಳ ವಿತರಣೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 26th, 11:23 am

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 51,000ಕ್ಕಿಂತ ಹೆಚ್ಚಿನ ಯುವಕರಿಗೆ ಸರ್ಕಾರಿ ಕಾಯಂ ಹುದ್ದೆಗಳಿಗೆ ಇಂದು ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಯುವಕರೇ, ಕೇಂದ್ರ ಸರ್ಕಾರದ ಹಲವಾರು ಇಲಾಖೆಗಳಲ್ಲಿ ನಿಮಗೆ ಜವಾಬ್ದಾರಿಗಳ ಹೊಸ ಅಧ್ಯಾಯ ಪ್ರಾರಂಭವಾಗಿದೆ. ದೇಶದ ಆರ್ಥಿಕತೆ ಬಲಪಡಿಸುವುದು ಈಗ ನಿಮ್ಮ ಕರ್ತವ್ಯವಾಗಿದೆ, ದೇಶದ ಆಂತರಿಕ ಭದ್ರತೆ ಬಲಪಡಿಸುವುದು ನಿಮ್ಮ ಕರ್ತವ್ಯವಾಗಿದೆ, ರಾಷ್ಟ್ರದೊಳಗೆ ಆಧುನಿಕ ಮೂಲಸೌಕರ್ಯ ಅಭಿವೃದ್ಧಿಪಡಿಸುವುದು ನಿಮ್ಮ ಕರ್ತವ್ಯವಾಗಿದೆ. ಕಾರ್ಮಿಕರ ಜೀವನದಲ್ಲಿ ಮೂಲಭೂತ ಸುಧಾರಣೆಗಳನ್ನು ತರುವುದು ಸಹ ನಿಮ್ಮ ಕರ್ತವ್ಯವಾಗಿದೆ. ನೀವು ನಿಮ್ಮ ಕಾರ್ಯಗಳನ್ನು ಹೆಚ್ಚು ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ನಿರ್ವಹಿಸಿದಷ್ಟೂ, ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಭಾರತವು ಸಾಗುವ ಸುದೀರ್ಘ ಪ್ರಯಾಣದ ಮೇಲೆ ಹೆಚ್ಚು ಮಹತ್ವಪೂರ್ಣ ಮತ್ತು ಸಕಾರಾತ್ಮಕ ಪರಿಣಾಮ ಬೀರುತ್ತದೆ. ನೀವು ನಿಮ್ಮ ಜವಾಬ್ದಾರಿಗಳನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸುತ್ತೀರಿ ಎಂಬ ವಿಶ್ವಾಸ ನನಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು

April 26th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭವಾಗಿದೆ ಎಂದು ಒತ್ತಿ ಹೇಳಿದರು. ದೇಶದ ಆರ್ಥಿಕ ರಚನೆಯನ್ನು ಬಲಪಡಿಸುವುದು, ಆಂತರಿಕ ಭದ್ರತೆಯನ್ನು ಬಲಪಡಿಸುವುದು, ಆಧುನಿಕ ಮೂಲಸೌಕರ್ಯಗಳ ನಿರ್ಮಾಣಕ್ಕೆ ಕೊಡುಗೆ ನೀಡುವುದು ಮತ್ತು ಕಾರ್ಮಿಕರ ಜೀವನದಲ್ಲಿ ಪರಿವರ್ತನೆಯ ಬದಲಾವಣೆಗಳನ್ನು ತರುವುದು ಅವರ ಕರ್ತವ್ಯಗಳಲ್ಲಿ ಸೇರಿವೆ ಎಂದು ಅವರು ಹೇಳಿದರು. ಅವರು ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುವುದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಪ್ರಯಾಣದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಈ ಯುವಜನರು ತಮ್ಮ ಕರ್ತವ್ಯಗಳನ್ನು ಸಂಪೂರ್ಣ ಸಮರ್ಪಣಾಭಾದಿಂದ ನಿರ್ವಹಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಇಂಡಿಯಾ ಸ್ಟೀಲ್-2025 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 24th, 02:00 pm

ಇಂದು ಮತ್ತು ಮುಂದಿನ 2 ದಿನಗಳಲ್ಲಿ ಭಾರತದ ಉದಯೋನ್ಮುಖ ವಲಯ ಉಕ್ಕಿನ ಕ್ಷೇತ್ರದ ಸಾಮರ್ಥ್ಯಗಳು ಮತ್ತು ಸಂಭಾವ್ಯ ಸಾಮರ್ಥ್ಯದ ಬಗ್ಗೆ ನಾವು ವ್ಯಾಪಕ ಚರ್ಚೆಗಳಲ್ಲಿ ತೊಡಗಿಸಿಕೊಳ್ಳಲಿದ್ದೇವೆ. ಇದು ಭಾರತದ ಪ್ರಗತಿಯ ಬೆನ್ನೆಲುಬಾಗಿ ರೂಪುಗೊಳ್ಳುವ ವಲಯವಾಗಿದೆ, 'ವಿಕಸಿತ ಭಾರತ'(ಅಭಿವೃದ್ಧಿ ಹೊಂದಿದ ಭಾರತ)ಕ್ಕೆ ಬಲವಾದ ಅಡಿಪಾಯವಾಗಿದ್ದು, ದೇಶದಲ್ಲಿ ಪರಿವರ್ತನೆಯ ಹೊಸ ಅಧ್ಯಾಯ ಬರೆಯುತ್ತಿದೆ. ಇಂಡಿಯಾ ಸ್ಟೀಲ್-2025 ಕಾರ್ಯಕ್ರಮಕ್ಕೆ ನಿಮ್ಮೆಲ್ಲರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಈ ಕಾರ್ಯಕ್ರಮವು ಹೊಸ ವಿಚಾರ, ಆಲೋಚನೆಗಳನ್ನು ಹಂಚಿಕೊಳ್ಳಲು, ಹೊಸ ಪಾಲುದಾರಿಕೆಗಳನ್ನು ರೂಪಿಸಲು ಮತ್ತು ನಾವೀನ್ಯತೆಯನ್ನು ಉತ್ತೇಜಿಸಲು ಹೊಸ ಅನಾವರಣ ವೇದಿಕೆಯಾಗಿ ಕಾರ್ಯ ನಿರ್ವಹಿಸುತ್ತದೆ ಎಂಬ ವಿಶ್ವಾಸ ನನಗಿದೆ. ಇದು ಉಕ್ಕಿನ ವಲಯದಲ್ಲಿ ಹೊಸ ಅಧ್ಯಾಯಕ್ಕೆ ಭದ್ರ ಬುನಾದಿ ಹಾಕುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂಡಿಯಾ ಸ್ಟೀಲ್ 2025 ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

April 24th, 01:30 pm

ಮುಂಬೈನಲ್ಲಿ ಇಂದು ನಡೆದ ಇಂಡಿಯಾ ಸ್ಟೀಲ್ 2025 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಸಂದೇಶದ ಮೂಲಕ ತಮ್ಮ ಭಾಷಣ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಉದಯೋನ್ಮುಖ ವಲಯವಾದ ಉಕ್ಕು ಉದ್ಯಮದ ಸಾಮರ್ಥ್ಯ ಮತ್ತು ಅವಕಾಶಗಳ ಕುರಿತು ಮುಂದಿನ ಎರಡು ದಿನಗಳು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ಈ ವಲಯವು ಭಾರತದ ಪ್ರಗತಿಯ ಅಡಿಪಾಯವಾಗಿದೆ, ಅಭಿವೃದ್ಧಿ ಹೊಂದಿದ ಭಾರತದ ಅಡಿಪಾಯವನ್ನು ಬಲಪಡಿಸುತ್ತದೆ ಮತ್ತು ದೇಶದಲ್ಲಿ ಪರಿವರ್ತನೆಯ ಹೊಸ ಅಧ್ಯಾಯವನ್ನು ಬರೆಯುತ್ತಿದೆ ಎಂದು ಅವರು ಹೇಳಿದರು. ಇಂಡಿಯಾ ಸ್ಟೀಲ್ 2025ಕ್ಕೆ ಎಲ್ಲರನ್ನು ಸ್ವಾಗತಿಸಿದ ಪ್ರಧಾನಿ, ಹೊಸ ವಿಚಾರಗಳನ್ನು ಹಂಚಿಕೊಳ್ಳಲು, ಹೊಸ ಪಾಲುದಾರಿಕೆಗಳನ್ನು ರೂಪಿಸಲು ಮತ್ತು ನಾವೀನ್ಯತೆಯನ್ನು ಉತ್ತೇಜಿಸಲು ಈ ಕಾರ್ಯಕ್ರಮವು ಒಂದು ಚಿಮ್ಮುಹಲಗೆಯಾಗಿ ಕಾರ್ಯನಿರ್ವಹಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮವು ಉಕ್ಕು ವಲಯದಲ್ಲಿ ಹೊಸ ಅಧ್ಯಾಯಕ್ಕೆ ಅಡಿಪಾಯ ಹಾಕಲಿದೆ ಎಂದು ಅವರು ಒತ್ತಿ ಹೇಳಿದರು.

ಗುಜರಾತ್ ನ ನವಸಾರಿಯಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಭಾಷಣ

March 08th, 11:50 am

ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್ ಜೀ; ನವಸಾರಿಯ ಸಂಸತ್ ಸದಸ್ಯ ಮತ್ತು ನನ್ನ ಸಂಪುಟ ಸಹೋದ್ಯೋಗಿ ಕೇಂದ್ರ ಸಚಿವ ಸಿ.ಆರ್. ಪಾಟೀಲ್; ಗೌರವಾನ್ವಿತ ಪಂಚಾಯತ್ ಸದಸ್ಯರು; ವೇದಿಕೆಯಲ್ಲಿ ಉಪಸ್ಥಿತರಿರುವ ಲಕ್ಷಾಧಿಪತಿ ದೀದಿ (ಲಖ್ಪತಿ ದೀದಿ)ಗಳು; ಇತರ ಸಾರ್ವಜನಿಕ ಪ್ರತಿನಿಧಿಗಳು; ಮತ್ತು ಇಲ್ಲಿ ದೊಡ್ಡ ಸಂಖ್ಯೆಯಲ್ಲಿ ನೆರೆದಿರುವ ಎಲ್ಲರಿಗೂ, ವಿಶೇಷವಾಗಿ ನನ್ನ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳೇ - ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳು!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ನವಸಾರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು

March 08th, 11:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ನವಸಾರಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳ ಪ್ರೀತಿ, ವಾತ್ಸಲ್ಯ ಮತ್ತು ಆಶೀರ್ವಾದಕ್ಕೆ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು ಮತ್ತು ಈ ವಿಶೇಷ ದಿನದಂದು ನಾಡಿನ ಎಲ್ಲಾ ಮಹಿಳೆಯರಿಗೆ ಶುಭ ಹಾರೈಸಿದರು. ಮಹಾಕುಂಭದಲ್ಲಿ ಗಂಗಾಮಾತೆಯ ಆಶೀರ್ವಾದ ಪಡೆದಿದ್ದೆ, ಇಂದು ಮಾತೃಶಕ್ತಿಯ ಮಹಾಕುಂಭದಲ್ಲಿ ಆಶೀರ್ವಾದ ದೊರೆತಿದೆ ಎಂದು ಹೇಳಿದರು. ಪ್ರಧಾನಮಂತ್ರಿಯವರು ಇಂದು ಗುಜರಾತಿನಲ್ಲಿ ಜಿ-ಸಫಲ್ (ಜೀವನೋಪಾಯ ವೃದ್ಧಿಗಾಗಿ ಅಂತ್ಯೋದಯ ಕುಟುಂಬಗಳಿಗೆ ಗುಜರಾತ್ ಯೋಜನೆ) ಮತ್ತು ಜಿ-ಮೈತ್ರಿ (ಗ್ರಾಮೀಣ ಆದಾಯ ಪರಿವರ್ತನೆಗಾಗಿ ವ್ಯಕ್ತಿಗಳಿಗೆ ಗುಜರಾತ್ ಮಾರ್ಗದರ್ಶನ ಮತ್ತು ವೇಗವರ್ಧನೆ) ಎಂಬ ಎರಡು ಯೋಜನೆಗಳಿಗೆ ಚಾಲನೆ ನೀಡಿದರು. ವಿವಿಧ ಯೋಜನೆಗಳ ಹಣವನ್ನು ನೇರವಾಗಿ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ ಎಂದು ಉಲ್ಲೇಖಿಸಿದ ಅವರು ಈ ಸಾಧನೆಗಾಗಿ ಪ್ರತಿಯೊಬ್ಬರನ್ನು ಅಭಿನಂದಿಸಿದರು.

"ಕೃಷಿ ಮತ್ತು ಗ್ರಾಮೀಣ ಸಮೃದ್ಧಿ" ಕುರಿತ ಬಜೆಟ್ ನಂತರದ ವೆಬಿನಾರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ

February 28th, 07:32 pm

ಮಾರ್ಚ್ 1 ರಂದು ಮಧ್ಯಾಹ್ನ 12:30 ರ ಸುಮಾರಿಗೆ ಕೃಷಿ ಮತ್ತು ಗ್ರಾಮೀಣ ಸಮೃದ್ಧಿ ಕುರಿತ ಬಜೆಟ್ ನಂತರದ ವೆಬಿನಾರ್‌ನಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ

February 24th, 10:35 am

ಮೊದಲನೆಯದಾಗಿ, ನಾನು ಇಲ್ಲಿಗೆ ಬರುವುದರಲ್ಲಿ ವಿಳಂಬವಾದದ್ದಕ್ಕೆ ಕ್ಷಮೆಯಿರಲಿ. ನಿನ್ನೆ ನಾನು ಇಲ್ಲಿಗೆ ಬಂದಾಗ, ಇಂದು 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿವೆ ಎಂದು ತಿಳಿಯಿತು. ರಾಜಭವನದಿಂದ ನಾನು ಹೊರಡುವ ಸಮಯ ಮತ್ತು ಅವರ ಪರೀಕ್ಷೆಯ ಸಮಯ ಒಂದೇ ಆಗುತ್ತಿತ್ತು. ಭದ್ರತಾ ಕಾರಣಗಳಿಂದ ರಸ್ತೆಗಳನ್ನು ಮುಚ್ಚಿದರೆ, ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳಿಗೆ ತಲುಪಲು ತೊಂದರೆಯಾಗುವ ಸಾಧ್ಯತೆ ಇತ್ತು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗಬಾರದೆಂದು, ಎಲ್ಲಾ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳನ್ನು ತಲುಪಿದ ನಂತರವೇ ರಾಜಭವನದಿಂದ ಹೊರಡಲು ನಿರ್ಧರಿಸಿದೆ. ಆದ್ದರಿಂದ, ನಾನು ಉದ್ದೇಶಪೂರ್ವಕವಾಗಿ 15-20 ನಿಮಿಷಗಳ ಕಾಲ ನನ್ನ ಹೊರಡುವಿಕೆಯನ್ನು ವಿಳಂಬ ಮಾಡಿದೆ. ಇದರಿಂದ ನಿಮಗೆಲ್ಲರಿಗೂ ಸ್ವಲ್ಪ ಅನಾನುಕೂಲವಾಯಿತು. ಮತ್ತೊಮ್ಮೆ ನಿಮ್ಮೆಲ್ಲರಿಗೂ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು

February 24th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ (ಜಿಐಎಸ್) 2025 ಅನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳು ಇದ್ದುದರಿಂದ ಮತ್ತು ಕಾರ್ಯಕ್ರಮಕ್ಕೆ ಬರುವ ದಾರಿಯಲ್ಲಿ ತಮ್ಮ ಭದ್ರತಾ ಕ್ರಮಗಳು ವಿದ್ಯಾರ್ಥಿಗಳಿಗೆ ಅನಾನುಕೂಲತೆಯನ್ನುಂಟುಮಾಡಬಹುದಾಗಿದ್ದರಿಂದ ಕಾರ್ಯಕ್ರಮಕ್ಕೆ ಬರುವುದು ವಿಳಂಬವಾಗಿದ್ದಕ್ಕಾಗಿ ಕ್ಷಮೆಯಾಚಿಸಿದರು. ರಾಜ ಭೋಜ ಭೂಮಿಗೆ ಹೂಡಿಕೆದಾರರು ಮತ್ತು ವ್ಯಾಪಾರ ನಾಯಕರನ್ನು ಸ್ವಾಗತಿಸುವುದು ನನಗೆ ಅತ್ಯಂತ ಹೆಮ್ಮೆಯ ವಿಷಯ ಎಂದು ಶ್ರೀ ಮೋದಿ ದು ಹೇಳಿದರು. ವಿಕಸಿತ ಮಧ್ಯಪ್ರದೇಶ ಅಥವಾ ಅಭಿವೃದ್ಧಿ ಹೊಂದಿದ ಮಧ್ಯಪ್ರದೇಶವು ವಿಕಸಿತ ಭಾರತದತ್ತ ಪ್ರಯಾಣದಲ್ಲಿ ಅಗತ್ಯವಾಗಿರುವುದರಿಂದ ಇಂದಿನ ಕಾರ್ಯಕ್ರಮವು ಮುಖ್ಯವಾಗಿದೆ ಎಂದು ಅವರು ಹೇಳಿದರು. ಶೃಂಗಸಭೆಯ ಅದ್ಭುತ ಸಂಘಟನೆಗಾಗಿ ಅವರು ಮಧ್ಯಪ್ರದೇಶ ಸರ್ಕಾರವನ್ನು ಅಭಿನಂದಿಸಿದರು.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಉತ್ತರ

February 06th, 04:21 pm

ಸನ್ಮಾನ್ಯ ರಾಷ್ಟ್ರಪತಿ ಅವರು ಭಾರತದ ಸಾಧನೆಗಳು, ಭಾರತದಿಂದ ಇಡೀ ವಿಶ್ವದ ನಿರೀಕ್ಷೆಗಳು ಮತ್ತು 'ವಿಕಸಿತ ಭಾರತ'(ಅಭಿವೃದ್ಧಿ ಹೊಂದಿದ ಭಾರತ) ನಿರ್ಮಿಸಲು ಭಾರತದಲ್ಲಿ ಶ್ರೀಸಾಮಾನ್ಯನ ಆತ್ಮವಿಶ್ವಾಸ ಬೆಳೆಸುವ ಸಂಕಲ್ಪವನ್ನು ವಿವರಿಸಿದ್ದಾರೆ. ಅವರು ದೇಶದ ಭವಿಷ್ಯಕ್ಕೆ ಸ್ಪಷ್ಟ ನಿರ್ದೇಶನವನ್ನು ಸಹ ಒದಗಿಸಿದ್ದಾರೆ. ಸನ್ಮಾನ್ಯ ರಾಷ್ಟ್ರಪತಿ ಅವರ ಭಾಷಣವು ಸ್ಫೂರ್ತಿದಾಯಕ ಮತ್ತು ಪ್ರಭಾವಶಾಲಿಯಾಗಿತ್ತು, ಭವಿಷ್ಯದ ಕೆಲಸಗಳಿಗಾಗಿ ನಮಗೆಲ್ಲರಿಗೂ ಮಾರ್ಗದರ್ಶನವಾಗಿ ಕಾರ್ಯ ನಿರ್ವಹಿಸಿತು. ಸನ್ಮಾನ್ಯ ರಾಷ್ಟ್ರಪತಿಗಳ ಭಾಷಣಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಲು ನಾನು ಇಲ್ಲಿದ್ದೇನೆ!

ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ

February 06th, 04:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ರಾಷ್ಟ್ರಪತಿಯವರ ಭಾಷಣವು ಭಾರತದ ಸಾಧನೆಗಳು, ಭಾರತದಿಂದ ಜಾಗತಿಕ ನಿರೀಕ್ಷೆಗಳು ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಶ್ರೀಸಾಮಾನ್ಯನ ನಂಬಿಕೆ ಒಳಗೊಂಡಿದೆ ಎಂದು ಹೇಳಿದರು. ರಾಷ್ಟ್ರಪತಿಯವರ ಭಾಷಣ ಸ್ಪೂರ್ತಿದಾಯಕವಾಗಿದೆ, ಪ್ರಭಾವಶಾಲಿಯಾಗಿದೆ ಮತ್ತು ಭವಿಷ್ಯದ ಕೆಲಸಗಳಿಗೆ ಮಾರ್ಗದರ್ಶನ ನೀಡಿದೆ ಎಂದು ಅವರು ಹೇಳಿದರು. ಅವರು ರಾಷ್ಟ್ರಪತಿಯವರ ಭಾಷಣಕ್ಕೆ ಕೃತಜ್ಞತೆ ಸಲ್ಲಿಸಿದರು.

ಸಂಸತ್ತಿನ ಬಜೆಟ್ ಅಧಿವೇಶನ ಆರಂಭದಲ್ಲಿ ಪ್ರಧಾನ ಮಂತ್ರಿ ಭಾಷಣ

July 22nd, 10:30 am

ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದೆ. ಇಡೀ ರಾಷ್ಟ್ರವೇ ಸೂಕ್ಷ್ಮವಾಗಿ ಗಮನಿಸುತ್ತಿದೆ. ಈ ಅಧಿವೇಶನವು ಸಕಾರಾತ್ಮಕ, ರಚನಾತ್ಮಕ ಮತ್ತು ಜನರ ಕನಸುಗಳನ್ನು ನನಸಾಗಿಸಲು ಭದ್ರ ನಾದಿ ಹಾಕುತ್ತದೆ ಎಂದು ಆಶಿಸುತ್ತಿದೆ.

ಸಂಸತ್ ಅಧಿವೇಶನಕ್ಕೂ ಮುನ್ನ ಪ್ರಧಾನಮಂತ್ರಿಯವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು

July 22nd, 10:15 am

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, 60 ವರ್ಷಗಳ ನಂತರ ಸತತ ಮೂರನೇ ಅವಧಿಗೆ ಸರ್ಕಾರ ಬಂದಿರುವುದಕ್ಕೆ ಹೆಮ್ಮೆಯನ್ನು ವ್ಯಕ್ತಪಡಿಸಿದರು. ಮೂರನೇ ಅವಧಿಯ ಸರ್ಕಾರವು ಬಜೆಟ್ ಮಂಡಿಸುವುದನ್ನು ರಾಷ್ಟ್ರವು ಒಂದು ಅದ್ಭುತ ಘಟನೆಯಾಗಿ ನೋಡುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಬಜೆಟ್ ಅಮೃತ ಕಾಲದ ಮೈಲಿಗಲ್ಲು ಬಜೆಟ್ ಆಗಿದೆ ಮತ್ತು ತಾನು ನೀಡಿರುವ ಭರವಸೆಗಳನ್ನು ಕಾರ್ಯಗತಗೊಳಿಸಲು ಸರ್ಕಾರವು ಶ್ರಮಿಸುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಬಜೆಟ್ ಪ್ರಸ್ತುತ ಸರ್ಕಾರದ ಮುಂದಿನ ಐದು ವರ್ಷಗಳ ಹಾದಿಯನ್ನು ನಿಗದಿಪಡಿಸುತ್ತದೆ ಮತ್ತು 2047 ರ ವೇಳೆಗೆ ವಿಕಸಿತ ಭಾರತ ನಿರ್ಮಿಸುವ ಕನಸಿಗೆ ಭದ್ರ ಬುನಾದಿಯನ್ನು ಹಾಕುತ್ತದೆ ಎಂದು ಅವರು ಹೇಳಿದರು.

ಮುಂಬರುವ ವರ್ಷಗಳಲ್ಲಿ ಭಾರತವನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವ ದೃಷ್ಟಿಕೋನವನ್ನು ರಾಷ್ಟ್ರಪತಿಯವರ ಭಾಷಣವು ಎತ್ತಿ ತೋರಿಸುತ್ತದೆ: ಪ್ರಧಾನಮಂತ್ರಿ

January 31st, 05:28 pm

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರ ಇಂದಿನ ಭಾಷಣವು 140 ಕೋಟಿ ಭಾರತೀಯರ ಸಾಮೂಹಿಕ ಶಕ್ತಿಯನ್ನು ಎತ್ತಿ ತೋರಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.

ಸಂಸತ್ತಿನ ಬಜೆಟ್ ಅಧಿವೇಶನದ ಪ್ರಾರಂಭಕ್ಕೂ ಮುನ್ನ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

January 31st, 10:45 am

ಈ ಹೊಸ ಸಂಸತ್ತಿನ ಕಟ್ಟಡದಲ್ಲಿ ಉದ್ಘಾಟನಾ ಅಧಿವೇಶನದ ಮುಕ್ತಾಯದ ಅವಧಿಯಲ್ಲಿ – ‘ನಾರಿ ಶಕ್ತಿ ವಂದನ್ ಅಧಿನಿಯಮ್’ ಎಂಬ ಅತ್ಯಂತ ಗೌರವಾನ್ವಿತ ಹಾಗೂ ಮಹತ್ವಪೂರ್ಣ ನಿರ್ಧಾರಗಳನ್ನು ಮಾಡಲಾಯಿತು. ತರುವಾಯ, ಜನವರಿ 26 ರಂದು, 'ಕರ್ತವ್ಯ ಪಥ'ದಲ್ಲಿ ಮಹಿಳೆಯರ ಶಕ್ತಿ, ಧೈರ್ಯ ಮತ್ತು ದೃಢತೆಯನ್ನು ಸಂಪೂರ್ಣ ರಾಷ್ಟ್ರವೇ ಕಂಡಿತು. ಇಂದು, ಈ ಬಜೆಟ್ ಅಧಿವೇಶನದ ಆರಂಭದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಜಿ ಅವರು ನೀಡಲಿರುವ ಮಾರ್ಗದರ್ಶನ ಮತ್ತು ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ನಾಳೆ ಮಂಡಿಸಲಿರುವ ಮಧ್ಯಂತರ ಬಜೆಟ್ ಮಹಿಳಾ ಶಕ್ತಿಯನ್ನು ಉದಾಹರಿಸುತ್ತದೆ. ಮೂಲಭೂತವಾಗಿ ಹೇಳುವುದಾದರೆ, ಇದು ಮಹಿಳೆಯರ ಶಕ್ತಿಯನ್ನು ಪ್ರದರ್ಶಿಸುವ ಆಚರಣೆಯಾಗಿದೆ.

ಸಂಸತ್ ಅಧಿವೇಶನಕ್ಕೂ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಪ್ರಧಾನಿ ಭಾಷಣ

January 31st, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮಗಳಿಗೆ ಹೇಳಿಕೆ ನೀಡಿದರು.