ಭಾರತದಲ್ಲಿ ಬುಲೆಟ್ ರೈಲು ನಿರ್ಮಿಸುತ್ತಿರುವ ತಂಡದೊಂದಿಗೆ ಗುಜರಾತ್‌ನ ಸೂರತ್‌ನಲ್ಲಿ ಪ್ರಧಾನಮಂತ್ರಿ ಸಂವಾದ

November 16th, 03:50 pm

ನಿಮಗೆ ಏನು ಅನಿಸುತ್ತಿದೆ? ವೇಗ ಸರಿಯಾಗಿದೆಯೇ? ನೀವು ನಿಗದಿಪಡಿಸಿದ ವೇಳಾಪಟ್ಟಿಯ ಪ್ರಕಾರ ಕೆಲಸ ಮಾಡುತ್ತಿದ್ದೀರಾ ಅಥವಾ ನಿಮಗೆ ಏನಾದರೂ ತೊಂದರೆಗಳು ಎದುರಾಗಿವೆಯೇ?

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಯವರು ಗುಜರಾತಿನ ಸೂರತ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿದರು; ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲು ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು

November 16th, 03:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ಗುಜರಾತಿನ ಸೂರತ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಮುಂಬೈ-ಅಹಮದಾಬಾದ್ ಹೈ-ಸ್ಪೀಡ್ ರೈಲು ಕಾರಿಡಾರ್ ನ ಪ್ರಗತಿಯನ್ನು ಪರಿಶೀಲಿಸಿದರು. ಅವರು ಭಾರತದ ಮೊದಲ ಬುಲೆಟ್ ರೈಲು ಯೋಜನೆಯ ತಂಡದೊಂದಿಗೆ ಮಾತುಕತೆ ನಡೆಸಿದರು ಹಾಗು ವೇಗ ಮತ್ತು ವೇಳಾಪಟ್ಟಿ ಗುರಿಗಳನ್ನು ಪಾಲಿಸುವುದು ಸೇರಿದಂತೆ ಯೋಜನೆಯ ಪ್ರಗತಿಯ ಬಗ್ಗೆ ವಿಚಾರಿಸಿದರು. ಯೋಜನೆಯು ಯಾವುದೇ ತೊಂದರೆಗಳಿಲ್ಲದೆ ಸರಾಗವಾಗಿ ಮುಂದುವರಿಯುತ್ತಿದೆ ಎಂದು ಸಿಬ್ಬಂದಿಯು ಅವರಿಗೆ ಭರವಸೆ ನೀಡಿದರು.

ಸೂರತ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು ನಿಲ್ದಾಣಕ್ಕೆ ನವೆಂಬರ್ 15ರಂದು ಪ್ರಧಾನಮಂತ್ರಿ ಭೇಟಿ

November 14th, 11:43 am

ಎಂಎಎಚ್ಎಸ್ಆರ್ ಸುಮಾರು 508 ಕಿಲೋಮೀಟರ್ ವ್ಯಾಪಿಸಿದ್ದು, ಗುಜರಾತ್ ಮತ್ತು ದಾದ್ರಾ ಮತ್ತು ನಗರ್ ಹವೇಲಿಯಲ್ಲಿ 352 ಕಿಮೀ ಮತ್ತು ಮಹಾರಾಷ್ಟ್ರದಲ್ಲಿ 156 ಕಿಮೀ ವ್ಯಾಪ್ತಿಯನ್ನು ಹೊಂದಿದೆ. ಈ ಕಾರಿಡಾರ್ ಸಬರಮತಿ, ಅಹಮದಾಬಾದ್, ಆನಂದ್, ವಡೋದರಾ, ಭರೂಚ್, ಸೂರತ್, ಬಿಲಿಮೊರಾ, ವಾಪಿ, ಬೋಯಿಸರ್, ವಿರಾರ್, ಥಾಣೆ ಮತ್ತು ಮುಂಬೈ ಸೇರಿದಂತೆ ಪ್ರಮುಖ ನಗರಗಳನ್ನು ಸಂಪರ್ಕಿಸುತ್ತದೆ, ಇದು ಭಾರತದ ಸಾರಿಗೆ ಮೂಲಸೌಕರ್ಯದಲ್ಲಿ ಪರಿವರ್ತನಾತ್ಮಕ ಹೆಜ್ಜೆಯಾಗಿದೆ.

ಮಹಾರಾಷ್ಟ್ರದ ಮುಂಬೈನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 08th, 03:44 pm

ಮಹಾರಾಷ್ಟ್ರ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ ಜಿ, ಜನಪ್ರಿಯ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ರಾಮದಾಸ್ ಅಠಾವಳೆ ಜಿ, ಕೆ.ಆರ್. ನಾಯ್ಡು ಜಿ ಮತ್ತು ಮುರಳೀಧರ್ ಮೊಹೋಲ್ ಜಿ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಜಿ ಮತ್ತು ಅಜಿತ್ ಪವಾರ್ ಜಿ, ಇಲ್ಲಿರುವ ಸಚಿವರೆ, ಭಾರತದ ಜಪಾನ್‌ ರಾಯಭಾರಿ ಕೆಯಿಚಿ ಓನೋ ಜಿ, ಇತರೆ ಗಣ್ಯ ಅತಿಥಿಗಳೆ ಮತ್ತು ಸಹೋದರ ಸಹೋದರಿಯರೆ!

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ; ಮುಂಬೈನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಮತ್ತು ಲೋಕಾರ್ಪಣೆ

October 08th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿಂದು ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದರು. ಜತೆಗೆ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಮತ್ತು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಎಲ್ಲಾ ಗಣ್ಯರನ್ನು ಸ್ವಾಗತಿಸಿದ ಮೋದಿ ಅವರು, ಉಪಸ್ಥಿತರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು. ಇತ್ತೀಚೆಗೆ ನಡೆದ ವಿಜಯದಶಮಿ ಮತ್ತು ಕೊಜಗರಿ ಪೂರ್ಣಿಮೆಯ ಆಚರಣೆ, ಮುಂಬರುವ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು.

ರಾಜಸ್ಥಾನದ ಬಿಕಾನೇರ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 22nd, 12:00 pm

ರಾಜಸ್ಥಾನ ರಾಜ್ಯಪಾಲರಾದ ಹರಿಭಾವು ಬಾಗ್ಡೆ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀಮನ್ ಭಜನ್ ಲಾಲ್ ಜಿ, ಮಾಜಿ ಮುಖ್ಯಮಂತ್ರಿ ಸಹೋದರಿ ವಸುಂಧರಾ ರಾಜೇ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಜಿ, ಅರ್ಜುನ್ ರಾಮ್ ಮೇಘವಾಲ್ ಜಿ, ರಾಜಸ್ಥಾನದ ಉಪಮುಖ್ಯಮಂತ್ರಿ ದಿಯಾ ಕುಮಾರಿ ಜಿ, ಪ್ರೇಮ್ ಚಂದ್ ಜಿ, ರಾಜಸ್ಥಾನ ಸರ್ಕಾರದ ಸಚಿವರುಗಳೆ, ಸಂಸತ್ತಿನ ನನ್ನ ಸಹೋದ್ಯೋಗಿ ಮದನ್ ರಾಥೋಡ್ ಜಿ, ಇತರೆ ಸಂಸದರು ಮತ್ತು ಶಾಸಕರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ.

ರಾಜಸ್ಥಾನದ ಬಿಕಾನೇರ್‌ನಲ್ಲಿ 26,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ, ಶಿಲಾನ್ಯಾಸ ಮತ್ತು ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

May 22nd, 11:30 am

ರಾಜಸ್ಥಾನದ ಬಿಕಾನೇರ್‌ನಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 26,000 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ, ಕಾರ್ಯಕ್ರಮದಲ್ಲಿ ನೆರೆದಿದ್ದ ಬೃಹತ್ ಜನಸಮೂಹವನ್ನು ಸ್ವಾಗತಿಸಿ ಮಾತನಾಡಿದ ಅವರು, ಆನ್‌ಲೈನ್‌ನಲ್ಲಿ ಭಾಗವಹಿಸಿರುವ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜನರನ್ನು ಶ್ಲಾಘಿಸಿದರು. ಹಲವಾರು ರಾಜ್ಯಪಾಲರು, ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್‌ಗಳು ಮತ್ತು ಇತರೆ ಸಾರ್ವಜನಿಕ ಪ್ರತಿನಿಧಿಗಳು ಇಲ್ಲಿ ಉಪಸ್ಥಿತರಿದ್ದು, ಜತೆಗೆ ದೇಶಾದ್ಯಂತ ಸಂಪರ್ಕ ಹೊಂದಿರುವ ಎಲ್ಲಾ ಗೌರವಾನ್ವಿತ ಗಣ್ಯರು ಮತ್ತು ನಾಗರಿಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

ತಮಿಳುನಾಡಿನ ರಾಮೇಶ್ವರಂನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 06th, 02:00 pm

ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಅಶ್ವಿನಿ ವೈಷ್ಣವ್ ಜಿ ಮತ್ತು ಡಾ. ಎಲ್. ಮುರುಗನ್ ಜಿ, ಇಲ್ಲಿರುವ ತಮಿಳುನಾಡು ಸರ್ಕಾರದ ಸಚಿವರು, ಸಂಸತ್ ಸದಸ್ಯರು, ಇತರೆ ಗಣ್ಯ ಅತಿಥಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ರಾಮೇಶ್ವರಂನಲ್ಲಿ ₹8,300 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು

April 06th, 01:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ರಾಮೇಶ್ವರಂನಲ್ಲಿ 8,300 ಕೋಟಿ ರೂಪಾಯಿ ಮೌಲ್ಯದ ವಿವಿಧ ರೈಲು ಮತ್ತು ರಸ್ತೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಿದರು. ಇದಕ್ಕೂ ಮುನ್ನ, ಅವರು ಭಾರತದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯಾದ ಹೊಸ ಪಂಬನ್ ರೈಲು ಸೇತುವೆಯನ್ನು ಉದ್ಘಾಟಿಸಿದರು ಮತ್ತು ರಸ್ತೆ ಸೇತುವೆಯಿಂದ ರೈಲು ಮತ್ತು ಹಡಗಿಗೆ ಹಸಿರು ನಿಶಾನೆ ತೋರಿದರು ಮತ್ತು ಸೇತುವೆಯ ಕಾರ್ಯಾಚರಣೆಯನ್ನು ವೀಕ್ಷಿಸಿದರು. ಅವರು ರಾಮೇಶ್ವರಂನ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆಯನ್ನು ಸಹ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದು ಶ್ರೀ ರಾಮ ನವಮಿಯ ಶುಭ ಸಂದರ್ಭವಾಗಿದೆ ಎಂದರು. ಇಂದು ಮುಂಜಾನೆ, ಸೂರ್ಯನ ದಿವ್ಯ ಕಿರಣಗಳು ಅಯೋಧ್ಯೆಯ ಭವ್ಯವಾದ ರಾಮ ಮಂದಿರದಲ್ಲಿ ರಾಮ ಲಲ್ಲಾ ಅವರನ್ನು ಭವ್ಯವಾದ ತಿಲಕದಿಂದ ಅಲಂಕರಿಸಿವೆ ಎಂದು ಅವರು ಹೇಳಿದರು. “ಶ್ರೀ ರಾಮರ ಜೀವನ ಮತ್ತು ಅವರ ಆಳ್ವಿಕೆಯಿಂದ ದೊರೆತ ಉತ್ತಮ ಆಡಳಿತದ ಸ್ಫೂರ್ತಿ ರಾಷ್ಟ್ರ ನಿರ್ಮಾಣಕ್ಕೆ ಒಂದು ಮಹತ್ವದ ಅಡಿಪಾಯವಾಗಿದೆ” ಎಂದು ಅವರು ಹೇಳಿದರು. ತಮಿಳುನಾಡಿನ ಸಂಗಮ್ ಯುಗದ ಸಾಹಿತ್ಯದಲ್ಲಿ ಭಗವಾನ್ ಶ್ರೀರಾಮನ ಉಲ್ಲೇಖವಿದೆ ಎಂದು ಹೇಳಿದ ಅವರು, ಪವಿತ್ರ ಭೂಮಿಯಾದ ರಾಮೇಶ್ವರಂನಿಂದ ಶ್ರೀ ರಾಮ ನವಮಿಯ ಸಂದರ್ಭದಲ್ಲಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು.

ಗುಜರಾತ್ ನ ಸೂರತ್ ನಲ್ಲಿ ಸೂರತ್ ಆಹಾರ ಭದ್ರತಾ ಸ್ಯಾಚುರೇಶನ್ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ

March 07th, 05:34 pm

ನೀವೆಲ್ಲರೂ ಹೇಗಿದ್ದೀರಿ? ಕ್ಷೇಮವಾಗಿದ್ದೀರಾ? ದೇಶದ ಮತ್ತು ಗುಜರಾತಿನ ಜನರು ನನಗೆ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸುವ ಅವಕಾಶವನ್ನು ನೀಡಿರುವುದು ನನ್ನ ಸೌಭಾಗ್ಯ. ಅದಾದ ನಂತರ ಇದು ಸೂರತ್ ಗೆ ನನ್ನ ಮೊದಲ ಭೇಟಿ. ಗುಜರಾತ್ ಪೋಷಿಸಿದ ವ್ಯಕ್ತಿಯನ್ನು ರಾಷ್ಟ್ರವು ಪ್ರೀತಿಯಿಂದ ಸ್ವೀಕರಿಸಿದೆ. ನಾನು ನಿಮಗೆ ಸದಾ ಋಣಿಯಾಗಿರುತ್ತೇನೆ; ನನ್ನ ಜೀವನವನ್ನು ರೂಪಿಸುವಲ್ಲಿ ನೀವು ಮಹತ್ವದ ಪಾತ್ರವನ್ನು ವಹಿಸಿದ್ದೀರಿ. ಇಂದು ನಾನು ಸೂರತ್ ಗೆ ಬಂದಿರುವಾಗ, ಸೂರತ್ ನ ಉತ್ಸಾಹವನ್ನು ನೆನಪಿಸದೆ ಮತ್ತು ನೋಡದೆ ಇರಲು ಹೇಗೆ ಸಾಧ್ಯ? ಕೆಲಸ ಮತ್ತು ದಾನ - ಈ ಎರಡು ವಿಷಯಗಳು ಸೂರತ್ ಅನ್ನು ನಿಜವಾಗಿಯೂ ವಿಶೇಷವಾಗಿಸುತ್ತವೆ. ಪರಸ್ಪರ ಬೆಂಬಲಿಸುವುದು ಮತ್ತು ಎಲ್ಲರ ಪ್ರಗತಿಯನ್ನು ಆಚರಿಸುವುದು ಸೂರತ್ ನ ಪ್ರತಿಯೊಂದು ಮೂಲೆಯಲ್ಲೂ ಗೋಚರಿಸುತ್ತದೆ. ಇಂದಿನ ಕಾರ್ಯಕ್ರಮವು ಸೂರತ್ ನ ಈ ಉತ್ಸಾಹ ಮತ್ತು ಭಾವನೆಯನ್ನು ಉತ್ತೇಜಿಸುವಲ್ಲಿ ಒಂದು ಹೆಜ್ಜೆಯಾಗಿದೆ.

ಸೂರತ್ ಆಹಾರ ಭದ್ರತೆ ಸಂತೃಪ್ತ (ಸ್ಯಾಚುರೇಶನ್) ಅಭಿಯಾನ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ

March 07th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೂರತ್ ನ ಲಿಂಬಾಯತ್ ನಲ್ಲಿ ಸೂರತ್ ಆಹಾರ ಭದ್ರತೆ ಸ್ಯಾಚುರೇಶನ್ (ಸಂತೃಪ್ತ) ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 2.3 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಪ್ರಯೋಜನಗಳನ್ನು ವಿತರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಸೂರತ್ ನಗರದ ವಿಶಿಷ್ಟ ಮನೋಭಾವವನ್ನು ಒತ್ತಿ ಹೇಳಿದರು, ಕೆಲಸ ಮತ್ತು ದಾನದ ಬಲವಾದ ಅಡಿಪಾಯವನ್ನು ಪ್ರಮುಖವಾಗಿ ಪ್ರಸ್ತಾಪಿಸಿದರು. ಸಾಮೂಹಿಕ ಬೆಂಬಲ ಮತ್ತು ಎಲ್ಲರ ಬೆಳವಣಿಗೆಯನ್ನು ಸಂಭ್ರಮಿಸುವ ಮೂಲಕ ನಗರದ ಸಾರವನ್ನು ಹೇಗೆ ಮರೆಯಲು ಸಾಧ್ಯವಾಗುವುದಿಲ್ಲ ಎಂಬುದನ್ನು ಅವರು ವ್ಯಕ್ತಪಡಿಸಿದರು.

ಸಿಲ್ವಾಸ್ಸಾದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಭಾಷಣ

March 07th, 03:00 pm

ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು ಆಡಳಿತಾಧಿಕಾರಿ ಶ್ರೀ ಪ್ರಫುಲ್ಭಾಯಿ ಪಟೇಲ್, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಶ್ರೀಮತಿ ಕಲ್ಬೆನ್ ಡೆಲ್ಕರ್, ಎಲ್ಲಾ ಗಣ್ಯರೇ, ಸಹೋದರ ಸಹೋದರಿಯರೇ, ನಮಸ್ಕಾರ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಲ್ವಾಸ್ಸಾ, ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ ಮತ್ತು ದಮನ್ ಮತ್ತು ದಿಯುಗಳಲ್ಲಿ 2580 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು ಮತ್ತು ಚಾಲನೆ ನೀಡಿದರು

March 07th, 02:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಲ್ವಾಸ್ಸಾ, ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ ಮತ್ತು ದಮನ್ ಮತ್ತು ದಿಯುಗಳಲ್ಲಿ 2580 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮಕ್ಕೂ ಮುನ್ನ ಅವರು ಸಿಲ್ವಾಸ್ಸಾದಲ್ಲಿ ನಮೋ ಆಸ್ಪತ್ರೆಯನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಈ ಪ್ರದೇಶದೊಂದಿಗೆ ಸಂಪರ್ಕ ಸಾಧಿಸಲು ಮತ್ತು ತೊಡಗಿಸಿಕೊಳ್ಳಲು ಅವಕಾಶ ನೀಡಿದ ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯುಗಳ ಸಮರ್ಪಿತ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಜನರೊಂದಿಗೆ ತಾವು ಹೊಂದಿರುವ ಆತ್ಮೀಯತೆ ಮತ್ತು ದೀರ್ಘಕಾಲದ ಸಂಪರ್ಕವನ್ನು ಅವರು ನೆನಪಿಸಿಕೊಂಡರು, ಈ ಪ್ರದೇಶದೊಂದಿಗಿನ ತಮ್ಮ ಬಂಧವು ದಶಕಗಳಷ್ಟು ಹಳೆಯದು ಎಂಬುದನ್ನವರು ಹಂಚಿಕೊಂಡರು. 2014 ರಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈ ಪ್ರದೇಶವು ಸಾಧಿಸಿದ ಪ್ರಗತಿಯನ್ನು ಅವರು ಎತ್ತಿ ತೋರಿಸಿದರು, ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯುಗಳ ಸಾಮರ್ಥ್ಯವನ್ನು ಆಧುನಿಕತೆ ಮತ್ತು ಪ್ರಗತಿಯ ಗುರುತಾಗಿ ಪರಿವರ್ತಿಸಿರುವುದನ್ನು ಅವರು ಪ್ರಸ್ತಾಪಿಸಿದರು.

ನವದೆಹಲಿಯ ಭಾರತ್‌ ಮಂಟಪದಲ್ಲಿ ನಡೆದ ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಪ್ರಧಾನಮಂತ್ರಿ ಅವರ ಭಾಷಣ

January 12th, 02:15 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಮನ್ಸುಖ್‌ ಮಾಂಡವಿಯಾ ಜೀ, ಧರ್ಮೇಂದ್ರ ಪ್ರಧಾನ್‌ ಜೀ, ಜಯಂತ್‌ ಚೌಧರಿ ಜೀ, ರಕ್ಷಾ ಖಾಡ್ಸೆ ಜೀ, ಸಂಸತ್‌ ಸದಸ್ಯರು, ಇತರ ಗಣ್ಯರು ಮತ್ತು ದೇಶದ ಮೂಲೆ ಮೂಲೆಗಳಿಂದ ಬಂದಿರುವ ನನ್ನ ಯುವ ಸ್ನೇಹಿತರೇ! ಈ ಭಾರತ ಮಂಟಪವು ಭಾರತದ ಯುವಜನರಿಂದ ಶಕ್ತಿ ಮತ್ತು ಶಕ್ತಿಯಿಂದ ತುಂಬಿದೆ. ಇಂದು, ಇಡೀ ದೇಶವು ಸ್ವಾಮಿ ವಿವೇಕಾನಂದರನ್ನು ಸ್ಮರಿಸುತ್ತಿದೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ. ಸ್ವಾಮಿ ವಿವೇಕಾನಂದರು ದೇಶದ ಯುವಕರ ಮೇಲೆ ಅಪಾರ ನಂಬಿಕೆ ಹೊಂದಿದ್ದರು. ಸ್ವಾಮೀಜಿ ಹೇಳುತ್ತಿದ್ದರು - ನನಗೆ ಯುವ ಪೀಳಿಗೆಯ ಮೇಲೆ, ಹೊಸ ಪೀಳಿಗೆಯ ಮೇಲೆ ನಂಬಿಕೆ ಇದೆ. ನನ್ನ ಕಾರ್ಯಕರ್ತರು ಯುವ ಪೀಳಿಗೆಯಿಂದ ಬರುತ್ತಾರೆ, ಸಿಂಹಗಳಂತೆ, ಅವರು ಪ್ರತಿಯೊಂದು ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುತ್ತಾರೆ ಎಂದು ಸ್ವಾಮೀಜಿ ಹೇಳುತ್ತಿದ್ದರು. ವಿವೇಕಾನಂದರಿಗೆ ನಿಮ್ಮ ಮೇಲೆ ನಂಬಿಕೆ ಇದ್ದಂತೆ, ನನಗೆ ವಿವೇಕಾನಂದರ ಮೇಲೆ ನಂಬಿಕೆ ಇದೆ, ಅವರು ಹೇಳಿದ ಎಲ್ಲದರಲ್ಲೂ ನನಗೆ ನಂಬಿಕೆ ಇದೆ. ಭಾರತದ ಯುವಕರಿಗಾಗಿ ಅವರು ಏನು ಯೋಚಿಸಿದ್ದಾರೆ ಮತ್ತು ಏನು ಹೇಳಿದ್ದಾರೆ, ಅದರಲ್ಲಿ ನನಗೆ ಕುರುಡು ನಂಬಿಕೆ ಇದೆ. ವಾಸ್ತವವಾಗಿ, ಸ್ವಾಮಿ ವಿವೇಕಾನಂದರು ಇಂದು ವೈಯಕ್ತಿಕವಾಗಿ ನಮ್ಮ ನಡುವೆ ಇದ್ದಿದ್ದರೆ, 21ನೇ ಶತಮಾನದ ಯುವಕರ ಈ ಜಾಗೃತ ಶಕ್ತಿಯನ್ನು ನೋಡಿ, ನಿಮ್ಮ ಸಕ್ರಿಯ ಪ್ರಯತ್ನಗಳನ್ನು ನೋಡಿ, ಅವರು ಭಾರತವನ್ನು ಹೊಸ ನಂಬಿಕೆ, ಹೊಸ ಶಕ್ತಿಯಿಂದ ತುಂಬುತ್ತಿದ್ದರು ಮತ್ತು ಹೊಸ ಕನಸುಗಳ ಬೀಜಗಳನ್ನು ಬಿತ್ತುತ್ತಿದ್ದರು.

ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 12th, 02:00 pm

ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಸ್ಮರಣಾರ್ಥ, ರಾಷ್ಟ್ರೀಯ ಯುವ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ನಡೆದ ವಿಕಸಿತ ಭಾರತ ಯುವ ನಾಯಕರ ಸಂವಾದ 2025ರಲ್ಲಿ ಭಾಗವಹಿಸಿದರು. ಅವರು ಭಾರತದಾದ್ಯಂತ 3,000 ಕ್ರಿಯಾತ್ಮಕ ಯುವ ನಾಯಕರೊಂದಿಗೆ ತೊಡಗಿಸಿಕೊಂಡರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಮಂಟಪಕ್ಕೆ ಜೀವ ಮತ್ತು ಶಕ್ತಿಯನ್ನು ತಂದ ಭಾರತದ ಯುವಜನರ ರೋಮಾಂಚಕ ಶಕ್ತಿಯನ್ನು ಎತ್ತಿ ತೋರಿಸಿದರು. ದೇಶದ ಯುವಜನರ ಮೇಲೆ ಅಪಾರ ನಂಬಿಕೆ ಹೊಂದಿದ್ದ ಸ್ವಾಮಿ ವಿವೇಕಾನಂದರನ್ನು ಇಡೀ ದೇಶ ಸ್ಮರಿಸುತ್ತಿದೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದೆ ಎಂದು ಅವರು ಹೇಳಿದರು. ಸ್ವಾಮಿ ವಿವೇಕಾನಂದರು ತಮ್ಮ ಶಿಷ್ಯರು ಯುವ ಪೀಳಿಗೆಯಿಂದ ಬರುತ್ತಾರೆ ಎಂದು ನಂಬಿದ್ದರು, ಅವರು ಸಿಂಹಗಳಂತೆ ಪ್ರತಿಯೊಂದು ಸಮಸ್ಯೆಯನ್ನು ಪರಿಹರಿಸುತ್ತಾರೆ ಎಂದು ಅವರು ಭಾವಿಸಿದ್ದರು. ಸ್ವಾಮೀಜಿ ಯುವಜನರನ್ನು ನಂಬಿದ್ದಂತೆ ಸ್ವಾಮೀಜಿ ಮತ್ತು ಅವರ ನಂಬಿಕೆಗಳಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ ಎಂದು ಪ್ರಧಾನ ಮಂತ್ರಿ ಹೇಳಿದರು. ವಿಶೇಷವಾಗಿ ಯುವಜನರ ಬಗ್ಗೆ ಅವರ ದೃಷ್ಟಿಕೋನದ ಬಗ್ಗೆ ತಾವು ಅವರನ್ನು ಸಂಪೂರ್ಣವಾಗಿ ನಂಬುವುದಾಗಿ ಹೇಳಿದರು. ಸ್ವಾಮಿ ವಿವೇಕಾನಂದರು ಇಂದು ನಮ್ಮ ನಡುವೆ ಇದ್ದಿದ್ದರೆ, 21ನೇ ಶತಮಾನದ ಯುವಜನರ ಜಾಗೃತ ಶಕ್ತಿ ಮತ್ತು ಸಕ್ರಿಯ ಪ್ರಯತ್ನಗಳನ್ನು ನೋಡಿ ಅವರಲ್ಲಿ ಹೊಸ ಆತ್ಮವಿಶ್ವಾಸ ತುಂಬುತ್ತಿತ್ತು ಎಂದು ಪ್ರಧಾನಿ ಒತ್ತಿ ಹೇಳಿದರು.

ಒಡಿಶಾದ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 09th, 10:15 am

ಒಡಿಶಾದ ಗವರ್ನರ್ ಹರಿ ಬಾಬು ಜೀ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹ ಸದಸ್ಯ ಎಸ್. ಜೈಶಂಕರ್ ಜೀ, ಜುವಾಲ್ ಒರಾಮ್ ಜೀ, ಧರ್ಮೇಂದ್ರ ಪ್ರಧಾನ ಜೀ, ಅಶ್ವಿನಿ ವೈಷ್ಣವ್ ಜೀ, ಶೋಭಾ ಕರಂದ್ಲಾಜೆ ಜೀ, ಕೀರ್ತಿ ವರ್ಧನ್ ಸಿಂಗ್ ಜೀ, ಪಬಿತ್ರ ಮಾರ್ಗರೇಟಾ ಜೀ, ಒಡಿಶಾದ ಉಪ ಮುಖ್ಯಮಂತ್ರಿ ಕನಕ್ ವರ್ಧನ್ ಸಿಂಗ್ ದೇವ್ ಜೀ, ಪ್ರವತಿ ಪರಿದಾ ಜೀ, ಇತರ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಜಗತ್ತಿನ ಮೂಲೆ ಮೂಲೆಯಿಂದ ಇಲ್ಲಿಗೆ ಬಂದಿರುವ ಭಾರತ ಮಾತೆಯ ಎಲ್ಲಾ ಪುತ್ರರೇ ಮತ್ತು ಪುತ್ರಿಯರೇ!

ಒಡಿಶಾದಲ್ಲಿ 18ನೇ ಪ್ರವಾಸಿ ಭಾರತೀಯ ದಿನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 09th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ರಿಕಿ ಕೇಜ್ ಮತ್ತು ಅವರ ತಂಡವನ್ನು ಶ್ಲಾಘಿಸಿದರು.

ವಿವಿಧ ರೈಲ್ವೆ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ

January 06th, 01:00 pm

ತೆಲಂಗಾಣ ರಾಜ್ಯಪಾಲರಾದ ಶ್ರೀ ಜಿಷ್ಣು ದೇವ್ ವರ್ಮಾ ಜೀ, ಒಡಿಶಾದ ರಾಜ್ಯಪಾಲರಾದ ಶ್ರೀ ಹರಿ ಬಾಬು ಜೀ, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಜೀ, ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಶ್ರೀ ಒಮರ್ ಅಬ್ದುಲ್ಲಾ ಜೀ, ತೆಲಂಗಾಣದ ಮುಖ್ಯಮಂತ್ರಿ ಶ್ರೀ ರೇವಂತ್ ರೆಡ್ಡಿ ಜೀ, ಒಡಿಶಾ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಜಿ ಜೀ, ನನ್ನ ಸಂಪುಟ ಸಹೋದ್ಯೋಗಿಗಳು-ಶ್ರೀ ಅಶ್ವಿನಿ ವೈಷ್ಣವ್ ಜೀ, ಶ್ರೀ ಜಿ ಕಿಶನ್ ರೆಡ್ಡಿ ಜೀ, ಡಾ ಜಿತೇಂದ್ರ ಸಿಂಗ್ ಜೀ, ಶ್ರೀ ವಿ ಸೋಮಯ್ಯ ಜೀ, ಶ್ರೀ ರವನೀತ್ ಸಿಂಗ್ ಬಿಟ್ಟು ಜೀ, ಶ್ರೀ ಬಂಡಿ ಸಂಜಯ್ ಕುಮಾರ್ ಜೀ, ಇತರ ಸಚಿವರು, ಸಂಸತ್ ಸದಸ್ಯರು, ವಿಧಾನಸಭೆ ಸದಸ್ಯರು, ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ರೈಲು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು

January 06th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರೈಲು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಹೊಸ ಜಮ್ಮು ರೈಲ್ವೆ ವಿಭಾಗವನ್ನು ಪ್ರಧಾನಿ ಉದ್ಘಾಟಿಸಿದರು. ಅವರು ಪೂರ್ವ ಕರಾವಳಿ ರೈಲ್ವೆಯ ರಾಯಗಡ ರೈಲ್ವೆ ವಿಭಾಗ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ತೆಲಂಗಾಣದ ಚಾರ್ಲಪಲ್ಲಿ ಹೊಸ ಟರ್ಮಿನಲ್ ನಿಲ್ದಾಣವನ್ನು ಉದ್ಘಾಟಿಸಿದರು.

ಮುಂಬೈ ಭಾರತದ ಆರ್ಥಿಕ ಶಕ್ತಿ ಕೇಂದ್ರವಾಗಿದೆ: ಮಹಾರಾಷ್ಟ್ರದ ಮುಂಬೈನಲ್ಲಿ ಪ್ರಧಾನಿ ಮೋದಿ

May 17th, 07:30 pm

ಪ್ರಧಾನಿ ನರೇಂದ್ರ ಮೋದಿ ಅವರು ಮುಂಬೈನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಭವಿಷ್ಯದ ಬಗ್ಗೆ ಬಲವಾದ ದೃಷ್ಟಿಕೋನವನ್ನು ಪ್ರಸ್ತುತಪಡಿಸಿದರು ಮತ್ತು ಭಾರತದ ಅಭಿವೃದ್ಧಿಯಲ್ಲಿ ಮುಂಬೈ ವಹಿಸುವ ಮಹತ್ವದ ಪಾತ್ರವನ್ನು ಎತ್ತಿ ತೋರಿಸಿದರು. ಪ್ರಗತಿಪರ ನೀತಿಗಳ ಮುಂದುವರಿಕೆ ಮತ್ತು ದೃಢವಾದ ಆಡಳಿತವನ್ನು ಖಚಿತಪಡಿಸಿಕೊಳ್ಳಲು ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ನಾಗರಿಕರಿಗೆ ಕರೆ ನೀಡಿದರು.