ಚಕ್ರವರ್ತಿ ಪೆರುಂಬಿಡುಗು ಮುತ್ತರೈಯರ್ II ಅವರ ಗೌರವಾರ್ಥ ಸ್ಮಾರಕ ಅಂಚೆಚೀಟಿ ಬಿಡುಗಡೆ ಮಾಡಿದ್ದನ್ನು ಸ್ವಾಗತಿಸಿದ ಪ್ರಧಾನಮಂತ್ರಿ
December 14th, 10:05 pm
ಭಾರತದ ಉಪರಾಷ್ಟ್ರಪತಿ ತಿರು ಸಿ.ಪಿ. ರಾಧಾಕೃಷ್ಣನ್ ಅವರು ಇಂದು ಚಕ್ರವರ್ತಿ ಪೆರುಂಬಿಡುಗು ಮುತ್ತರೈಯರ್ II (ಸುವರನ್ ಮಾರನ್) ಅವರ ಗೌರವಾರ್ಥ ಸ್ಮಾರಕ ಅಂಚೆಚೀಟಿ ಬಿಡುಗಡೆ ಮಾಡಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ.ರಾಜ್ಯಸಭಾ ಅಧ್ಯಕ್ಷರಾದ ಶ್ರೀ ಸಿ ಪಿ ರಾಧಾಕೃಷ್ಣನ್ ಅವರ ಸನ್ಮಾನ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅವತರಣಿಕೆ
December 01st, 11:15 am
(ಸಂಸತ್ತಿನ) ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿದೆ, ಮತ್ತು ಇಂದು ಈ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ಹೆಮ್ಮೆಯ ಕ್ಷಣವಾಗಿದೆ. ನಿಮ್ಮನ್ನು ಸ್ವಾಗತಿಸುತ್ತಾ, ನಿಮ್ಮ ಮಾರ್ಗದರ್ಶನದಲ್ಲಿ ಈ ಸದನದ ಮೂಲಕ ಪ್ರಮುಖ ವಿಷಯಗಳನ್ನು ಚರ್ಚಿಸಲು, ರಾಷ್ಟ್ರವನ್ನು ಪ್ರಗತಿಯ ಹಾದಿಯಲ್ಲಿ ಕೊಂಡೊಯ್ಯಲು, ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ನಿಮ್ಮ ಅಮೂಲ್ಯ ಮಾರ್ಗದರ್ಶನವನ್ನು ಪಡೆಯಲು ನಮಗೆಲ್ಲರಿಗೂ ಇದು ಒಂದು ಉತ್ತಮ ಅವಕಾಶವಾಗಿದೆ. ಸದನದ ಪರವಾಗಿ ಮತ್ತು ನನ್ನ ಪರವಾಗಿ, ನಾನು ನಿಮ್ಮನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ ಮತ್ತು ನನ್ನ ಶುಭ ಹಾರೈಕೆಗಳನ್ನು ಅರ್ಪಿಸುತ್ತೇನೆ. ಈ ಸದನದಲ್ಲಿರುವ ಎಲ್ಲಾ ಗೌರವಾನ್ವಿತ ಸದಸ್ಯರು ಈ ಮೇಲ್ಮನೆಯ ಘನತೆಯನ್ನು ಸದಾ ಎತ್ತಿಹಿಡಿಯುತ್ತಾರೆ, ನಿಮ್ಮ ಘನತೆಯನ್ನು ಸದಾ ಗೌರವಿಸುತ್ತಾರೆ ಮತ್ತು ಎತ್ತಿಹಿಡಿಯುತ್ತಾರೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಇದು ನಿಮಗೆ ನನ್ನ ಭರವಸೆ.ರಾಜ್ಯಸಭಾ ಸಭಾಧ್ಯಕ್ಷರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಸನ್ಮಾನಿಸುವ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮಾತುಗಳು
December 01st, 11:00 am
ಇಂದು ಮೊದಲ ಬಾರಿಗೆ ರಾಜ್ಯಸಭೆಯ ಅಧ್ಯಕ್ಷತೆ ವಹಿಸಿದ ಉಪರಾಷ್ಟ್ರಪತಿ ಶ್ರೀ ಸಿ.ಪಿ.ರಾಧಾಕೃಷ್ಣನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದರು. ಈ ದಿನವು ರಾಜ್ಯಸಭೆಯ ಎಲ್ಲಾ ಗೌರವಾನ್ವಿತ ಸದಸ್ಯರ ಪಾಲಿಗೆ ಹೆಮ್ಮೆಯ ಕ್ಷಣ ಎಂದು ಪ್ರಧಾನಮಂತ್ರಿ ಬಣ್ಣಿಸಿದರು. ಸಭಾಧ್ಯಕ್ಷರಿಗೆ ಆತ್ಮೀಯ ಸ್ವಾಗತ ಕೋರಿದ ಶ್ರೀ ಮೋದಿ, ಸದನದ ಪರವಾಗಿ ಮತ್ತು ನನ್ನ ಪರವಾಗಿ, ನಾನು ನಿಮಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ನನ್ನ ಶುಭಾಶಯಗಳನ್ನು ತಿಳಿಸಲು ಬಯಸುತ್ತೇನೆ. ಈ ಮೇಲ್ಮನೆಯ ಎಲ್ಲಾ ಗೌರವಾನ್ವಿತ ಸದಸ್ಯರು ಸದಾ ಈ ಗೌರವಾನ್ವಿತ ಸಂಸ್ಥೆಯ ಘನತೆಯನ್ನು ಉಲ್ಲೇಖಿಸುತ್ತಾರೆ ಮತ್ತು ನಿಮ್ಮ ಘನತೆಯನ್ನು ಕಾಪಾಡುವ ಬಗ್ಗೆಯೂ ಸದಾ ಎಚ್ಚರಿಕೆಯಿಂದ ಇರುತ್ತಾರೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಇದು ನಿಮಗೆ ನನ್ನ ದೃಢವಾದ ಭರವಸೆಯಾಗಿದೆ.ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರಧಾನಮಂತ್ರಿ ನೀಡಿದ ಹೇಳಿಕೆಯ ಕನ್ನಡ ಅವತರಣಿಕೆ
December 01st, 10:15 am
(ಸಂಸತ್ತಿನ) ಈ ಚಳಿಗಾಲದ ಅಧಿವೇಶನವು ಕೇವಲ ಒಂದು ಸಂಪ್ರದಾಯ ಆಚರಣೆಯಲ್ಲ. ಈ ಚಳಿಗಾಲದ ಅಧಿವೇಶನವು ರಾಷ್ಟ್ರವನ್ನು ಪ್ರಗತಿಯತ್ತ ವೇಗವಾಗಿ ಕೊಂಡೊಯ್ಯಲು ನಡೆಯುತ್ತಿರುವ ಪ್ರಯತ್ನಗಳಿಗೆ ಶಕ್ತಿ ತುಂಬುತ್ತದೆ ಎಂದು ನಾನು ದೃಢವಾಗಿ ನಂಬುತ್ತೇನೆ. ಭಾರತವು ನಿಜವಾಗಿಯೂ ಪ್ರಜಾಪ್ರಭುತ್ವವನ್ನು ಜೀವಂತಗೊಳಿಸಿದೆ. ಪ್ರಜಾಪ್ರಭುತ್ವದ ಮೇಲಿನ ಜನರ ನಂಬಿಕೆ ಬಲಗೊಳ್ಳುವ ರೀತಿಯಲ್ಲಿ ಪ್ರಜಾಪ್ರಭುತ್ವದ ಉತ್ಸಾಹ ಮತ್ತು ಚೈತನ್ಯ ಪದೇ ಪದೇ ವ್ಯಕ್ತಗೊಳ್ಳುತ್ತಿದೆ. ಇತ್ತೀಚೆಗೆ, ಬಿಹಾರದಲ್ಲಿ ನಡೆದ ಚುನಾವಣೆಗಳು ಮತ್ತು ಅಲ್ಲಿ ದಾಖಲೆಯ ಮತದಾನವು ಪ್ರಜಾಪ್ರಭುತ್ವದ ದೊಡ್ಡ ಶಕ್ತಿಯಾಗಿದೆ. ತಾಯಂದಿರು ಮತ್ತು ಸಹೋದರಿಯರ ಹೆಚ್ಚುತ್ತಿರುವ ಭಾಗವಹಿಸುವಿಕೆಯು ಸ್ವತಃ ಹೊಸ ಭರವಸೆ ಮತ್ತು ವಿಶ್ವಾಸವನ್ನು ಸೃಷ್ಟಿಸುತ್ತದೆ. ಒಂದೆಡೆ, ಪ್ರಜಾಪ್ರಭುತ್ವವು ಬಲಗೊಳ್ಳುತ್ತಿದೆ, ಮತ್ತು ಮತ್ತೊಂದೆಡೆ, ಈ ಪ್ರಜಾಪ್ರಭುತ್ವ ಚೌಕಟ್ಟಿನೊಳಗೆ, ನಮ್ಮ ಆರ್ಥಿಕತೆಯ ಬಲವರ್ಧನೆಯು ಜಗತ್ತು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿರುವ ವಿಷಯವಾಗಿದೆ. ಪ್ರಜಾಪ್ರಭುತ್ವವು ತಲುಪಿಸಬಲ್ಲದು ಎಂಬುದನ್ನು ಭಾರತ ಸಾಬೀತುಪಡಿಸಿದೆ. ಭಾರತದ ಆರ್ಥಿಕ ಸ್ಥಿತಿ ಇಂದು ಹೊಸ ಎತ್ತರವನ್ನು ತಲುಪುತ್ತಿರುವ ವೇಗವು ನಮ್ಮಲ್ಲಿ ಹೊಸ ವಿಶ್ವಾಸವನ್ನು ತುಂಬುತ್ತದೆ ಮತ್ತು 'ವಿಕ್ಷಿತ ಭಾರತ' (ಅಭಿವೃದ್ಧಿ ಹೊಂದಿದ ಭಾರತ) ಗುರಿಯತ್ತ ಸಾಗಲು ನಮಗೆ ಹೊಸ ಶಕ್ತಿಯನ್ನು ನೀಡುತ್ತದೆ.2025ರ ಸಂಸತ್ ಚಳಿಗಾಲದ ಅಧಿವೇಶನ ಆರಂಭದ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ
December 01st, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನ ಆವರಣದಲ್ಲಿ 2025ರ ಚಳಿಗಾಲದ ಸಂಸತ್ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಅಧಿವೇಶನವು ಕೇವಲ ಒಂದು ಆಚರಣೆಯಲ್ಲ, ಬದಲಿಗೆ, ತ್ವರಿತ ಪ್ರಗತಿಯತ್ತ ರಾಷ್ಟ್ರದ ಪಯಣಕ್ಕೆ ಹೊಸ ಶಕ್ತಿಯ ಮೂಲವಾಗಿದೆ ಎಂದು ಪ್ರಧಾನಮಂತ್ರಿ ತಿಳಿಸಿದರು. ರಾಷ್ಟ್ರದ ಪ್ರಗತಿಯನ್ನು ವೇಗಗೊಳಿಸಲು ಪ್ರಸ್ತುತ ನಡೆಯುತ್ತಿರುವ ಪ್ರಯತ್ನಗಳಿಗೆ ಈ ಅಧಿವೇಶನವು ಹೊಸ ಶಕ್ತಿಯನ್ನು ತುಂಬಲಿದೆ ಎಂಬುದು ನನ್ನ ದೃಢವಾದ ನಂಬಿಕೆ, ಎಂದು ಶ್ರೀ ಮೋದಿ ಹೇಳಿದರು.ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 19th, 07:01 pm
ತಮಿಳುನಾಡು ರಾಜ್ಯಪಾಲರಾದ ಆರ್.ಎನ್. ರವಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಎಲ್. ಮುರುಗನ್ ಜಿ, ತಮಿಳುನಾಡು ಕೃಷಿ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ. ಕೆ. ರಾಮಸಾಮಿ ಜಿ, ವಿವಿಧ ಕೃಷಿ ಸಂಸ್ಥೆಗಳ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ಇತರೆ ಜನಪ್ರತಿನಿಧಿಗಳೆ, ನನ್ನ ಪ್ರೀತಿಯ ರೈತ ಸಹೋದರ ಸಹೋದರಿಯರೆ ಮತ್ತು ಡಿಜಿಟಲ್ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರಿಕೊಂಡಿರುವ ದೇಶಾದ್ಯಂತದ ಲಕ್ಷಾಂತರ ರೈತರೆ! ನಾನು ನಿಮ್ಮೆಲ್ಲರಿಗೂ ವಣಕ್ಕಂ ಮತ್ತು ನಮಸ್ಕಾರದೊಂದಿಗೆ ಶುಭಾಶಯ ಕೋರುತ್ತೇನೆ. ಮೊದಲನೆಯದಾಗಿ, ಇಲ್ಲಿರುವ ನಿಮ್ಮೆಲ್ಲರಿಗೂ ಮತ್ತು ದೇಶಾದ್ಯಂತದ ನನ್ನ ಎಲ್ಲಾ ರೈತ ಸಹೋದರ ಸಹೋದರಿಯರಿಗೂ ಕ್ಷಮೆ ಯಾಚಿಸಲು ಬಯಸುತ್ತೇನೆ. ಇಂದು ಬೆಳಗ್ಗೆ ನಾನು ಸತ್ಯಸಾಯಿ ಬಾಬಾ ಅವರಿಗೆ ಮೀಸಲಾದ ಪುಟ್ಟಪರ್ತಿ ಕಾರ್ಯಕ್ರಮದಲ್ಲಿದ್ದೆ, ಅಲ್ಲಿ ನಡೆದ ಕಾರ್ಯಕ್ರಮ ನಿರೀಕ್ಷೆಗಿಂತ ಹೆಚ್ಚು ಸಮಯ ನಡೆದ ಕಾರಣ ನಾನು ಇಲ್ಲಿಗೆ ತಲುಪಲು ಸುಮಾರು 1 ತಾಸು ತಡವಾಯಿತು. ಅದರಿಂದ ನಾನಿಲ್ಲಿಗೆ ಬರುವುದು ತಡವಾಯಿತು. ಇದರಿಂದ ನಿಮಗೆ ಉಂಟಾಗಿರಬಹುದಾದ ಯಾವುದೇ ಅನನುಕೂಲತೆಗಾಗಿ ನಾನು ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತೇನೆ. ದೇಶಾದ್ಯಂತ ಅನೇಕ ಜನರು ಕಾಯುತ್ತಿರುವುದನ್ನು ನಾನು ನೋಡುತ್ತಿದ್ದೇನೆ, ಆದ್ದರಿಂದ ನಾನು ನಿಮ್ಮ ಕ್ಷಮೆ ಕೋರುತ್ತೇನೆ.ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು
November 19th, 02:30 pm
ತಮಿಳುನಾಡಿನ ಕೊಯಮತ್ತೂರಿನಲ್ಲಿ ಇಂದು ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ಕೊಯಮತ್ತೂರಿನ ಪವಿತ್ರ ನೆಲದಲ್ಲಿ ಮರುಧಮಲೈ ಮುರುಗನ್ ದೇವರಿಗೆ ನಮಸ್ಕಾರ ಸಲ್ಲಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಕೊಯಮತ್ತೂರು ಸಂಸ್ಕೃತಿ, ಸಹಾನುಭೂತಿ ಮತ್ತು ಸೃಜನಶೀಲತೆಯ ಭೂಮಿ ಎಂದು ಅವರು ಬಣ್ಣಿಸಿದರು ಮತ್ತು ಅದು ದಕ್ಷಿಣ ಭಾರತದ ಉದ್ಯಮಶೀಲ ಶಕ್ತಿಯ ಕೇಂದ್ರವಾಗಿದೆ ಎಂದು ಹೇಳಿದರು. ನಗರದ ಜವಳಿ ವಲಯವು ರಾಷ್ಟ್ರೀಯ ಆರ್ಥಿಕತೆಗೆ ಪ್ರಮುಖ ಕೊಡುಗೆ ನೀಡುತ್ತಿದೆ ಎಂದು ಅವರು ಒತ್ತಿ ಹೇಳಿದರು. ಕೊಯಮತ್ತೂರಿನ ಮಾಜಿ ಸಂಸದರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಈಗ ಉಪರಾಷ್ಟ್ರಪತಿಯಾಗಿ ದೇಶಕ್ಕೆ ಮಾರ್ಗದರ್ಶನ ನೀಡುತ್ತಿರುವುದರಿಂದ ಕೊಯಮತ್ತೂರು ಈಗ ಮತ್ತಷ್ಟು ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.ಉಪ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ದೀಪಾವಳಿ ಶುಭಾಶಯ ತಿಳಿಸಿದ ಪ್ರಧಾನಮಂತ್ರಿ
October 20th, 07:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉಪ ರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ದೀಪಾವಳಿ ಹಬ್ಬದ ಶುಭಾಶಯ ಕೋರಿದರು.ಪ್ರಧಾನಮಂತ್ರಿ ಅವರಿಂದ 24 ವರ್ಷಗಳ ಸಾರ್ವಜನಿಕ ಸೇವೆಗೆ ಶುಭ ಹಾರೈಸಿರುವ ಉಪರಾಷ್ಟ್ರಪತಿಗಳಿಗೆ ಧನ್ಯವಾದ ಸಮರ್ಪಣೆ
October 09th, 01:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ಕಾರದ ಮುಖ್ಯಸ್ಥರಾಗಿ 24 ವರ್ಷಗಳ ನಿರಂತರ ಸೇವೆಯನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಮಾನ್ಯ ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಶುಭ ಹಾರೈಸಿದ್ದು, ಅವರ ಆತ್ಮೀಯ ನುಡಿಗಳು ಮತ್ತು ಶುಭಾಶಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.ಭಾರತದ ಉಪರಾಷ್ಟ್ರಪತಿಯನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
September 28th, 09:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಇಂದು ಭಾರತದ ಉಪರಾಷ್ಟ್ರಪತಿ ಶ್ರೀ ಸಿ.ಪಿ.ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿದರು.ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ ಭಾರತದ ಉಪ ರಾಷ್ಟ್ರಪತಿಗಳಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ
September 17th, 09:22 am
ತಮ್ಮ 75ನೇ ವರ್ಷದ ಜನ್ಮದಿನಕ್ಕೆ ಶುಭಾಶಯ ತಿಳಿಸಿದ ಭಾರತದ ಉಪ ರಾಷ್ಟ್ರ ಪತಿಗಳಾದ ಸಿ ಪಿ ರಾಧಾಕೃಷ್ಣನ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ನಿಮ್ಮ ಶುಭಾಶಯಗಳು ಸಮರ್ಪಣಾಭಾವದಿಂದ ರಾಷ್ಟ್ರಕ್ಕೆ ಸೇವೆ ಸಲ್ಲಿಸುವ ನಮ್ಮ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಪ್ರಧಾನಿಗಳು ಹೇಳಿದ್ದಾರೆ.ಉಪರಾಷ್ಟ್ರಪತಿಯಾಗಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
September 12th, 12:16 pm
ಭಾರತದ 15ನೇ ಉಪರಾಷ್ಟ್ರಪತಿಯಾಗಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಜನಸೇವೆಗೆ ಸಮರ್ಪಿತರಾದ ಶ್ರೀ ರಾಧಾಕೃಷ್ಣನ್ ಅವರ ಉಪರಾಷ್ಟ್ರಪತಿ ಅವಧಿ ಯಶಸ್ವಿಯಾಗಲಿ ಎಂದು ಶ್ರೀ ಮೋದಿ ಅವರು ಶುಭ ಹಾರೈಸಿದರು.ಪ್ರಧಾನಮಂತ್ರಿ ಅವರು ಉಪ ರಾಷ್ಟ್ರಪತಿಯಾಗಿ ಚುನಾಯಿತರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದರು
September 09th, 11:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಪ ರಾಷ್ಟ್ರಪತಿಯಾಗಿ ಚುನಾಯಿತರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದರು ಮತ್ತು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ವಿಜೇತರಾಗಿದ್ದಕ್ಕೆ ಅಭಿನಂದಿಸಿದರು.2025ರ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಜಯಗಳಿಸಿದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ
September 09th, 08:24 pm
ಪ್ರಧಾನಮಂತ್ರಿ ಅವರು ಇಂದು 2025ರ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಜಯಗಳಿಸಿದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಎನ್.ಡಿ.ಎ ಉಪರಾಷ್ಟ್ರಪತಿ ಅಭ್ಯರ್ಥಿ ಶ್ರೀ. ಸಿ. ಪಿ. ರಾಧಾಕೃಷ್ಣನ್ ಅವರಿಂದ ಪ್ರಧಾನಮಂತ್ರಿ ಭೇಟಿ
August 18th, 03:14 pm
ಎನ್.ಡಿ.ಎ ಉಪರಾಷ್ಟ್ರಪತಿ ಅಭ್ಯರ್ಥಿಯಾದ ಶ್ರೀ.ಸಿ. ಪಿ. ರಾಧಾಕೃಷ್ಣನ್ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಅಭ್ಯರ್ಥಿಯಾಗಿ ಶ್ರೀ ಸಿ. ಪಿ. ರಾಧಾಕೃಷ್ಣನ್ ಅವರ ನಾಮನಿರ್ದೇಶನ - ಪ್ರಧಾನಮಂತ್ರಿ ಸ್ವಾಗತ
August 17th, 08:54 pm
ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಶ್ರೀ. ಸಿ.ಪಿ. ರಾಧಾಕೃಷ್ಣನ್ ಅವರನ್ನು ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್.ಡಿ.ಎ)ದ ನಿರ್ಧಾರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಾಗತಿಸಿದ್ದಾರೆ.ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಮಹಾರಾಷ್ಟ್ರ ರಾಜ್ಯಪಾಲರು
April 15th, 01:55 pm
ಮಹಾರಾಷ್ಟ್ರ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.Governor of Maharashtra meets PM Modi
December 27th, 09:31 pm
The Governor of Maharashtra, Shri C. P. Radhakrishnan, met Prime Minister Shri Narendra Modi today.ಮಹಾರಾಷ್ಟ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
October 09th, 01:09 pm
ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರೇ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೇ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳೇ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವಿಸ್ ಅವರೇ, ಶ್ರೀ ಅಜಿತ್ ಪವಾರ್ ಅವರೇ, ಇತರ ಎಲ್ಲ ಗಣ್ಯರೇ ಮತ್ತು ಮಹಾರಾಷ್ಟ್ರದ ನನ್ನ ಪ್ರಿಯ ಸಹೋದರ ಸಹೋದರಿಯರೇ...ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 09th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಹಾರಾಷ್ಟ್ರದಲ್ಲಿ 7600 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ ನಾಗ್ಪುರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಯೋಜನೆ ಮತ್ತು ಶಿರಡಿ ವಿಮಾನ ನಿಲ್ದಾಣದಲ್ಲಿ ಹೊಸ ಸಮಗ್ರ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ಸೇರಿವೆ. ಶ್ರೀ ಮೋದಿ ಅವರು ಮಹಾರಾಷ್ಟ್ರದ 10 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಕಾರ್ಯಾಚರಣೆಗೆ ಚಾಲನೆ ನೀಡಿದರು ಮತ್ತು ಮುಂಬೈನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್) ಮತ್ತು ಮಹಾರಾಷ್ಟ್ರದ ವಿದ್ಯಾ ಸಮೀಕ್ಷಾ ಕೇಂದ್ರ (ವಿಎಸ್ಕೆ) ಗಳನ್ನು ಉದ್ಘಾಟಿಸಿದರು.