ಭಾರತದ ರಾಷ್ಟ್ರಪತಿಯವರು ಆಯೋಜಿಸಿದ್ದ ರಾಜಾಜಿ ಉತ್ಸವದಲ್ಲಿ ಶ್ರೀ ಚಕ್ರವರ್ತಿ ರಾಜಗೋಪಾಲಾಚಾರಿ ಅವರನ್ನು ಗೌರವಿಸಿ ಸನ್ಮಾನಿಸಿದ್ದು ಮಹತ್ಕಾರ್ಯವಾಗಿದೆ, ಇದು ನಮ್ಮ ದೇಶದ ಹಣೆಬರಹವನ್ನು ರೂಪಿಸಿದವರನ್ನು ಗೌರವಿಸುವ ಮತ್ತು ವಸಾಹತುಶಾಹಿ ಮನಸ್ಥಿತಿಯ ಅವಶೇಷಗಳನ್ನು ಅಳಿಸುವ ಭಾರತದ ಸಂಕಲ್ಪವನ್ನು ಪ್ರತಿಬಿಂಬಿಸುತ್ತದೆ" ಎಂದು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ
February 23rd, 05:12 pm
ರಾಷ್ಟ್ರಪತಿ ಭವನದ ಅಶೋಕ ಮಂಟಪದ ಬಳಿಯಿರುವ ವೈಭವೋಪೇತ ತೆರೆದ ಮೆಟ್ಟಿಲು(ಗ್ರ್ಯಾಂಡ್ ಓಪನ್ ಸ್ಟೇರ್ಕೇಸ್)ಗಳಲ್ಲಿ ಸ್ಥಾಪಿಸಲಾದ ಚಕ್ರವರ್ತಿ ರಾಜಗೋಪಾಲಾಚಾರಿ ಅವರ ಪ್ರತಿಮೆಯನ್ನು ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಅನಾವರಣಗೊಳಿಸಿದರು.ಎಐ ಪ್ರಗತಿಯಿಂದ ಟಿ20 ವಿಶ್ವಕಪ್ ವರೆಗೆ, ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ ಭಾರತದ ಏರಿಕೆಯನ್ನು ಪ್ರದರ್ಶಿಸುತ್ತಾರೆ
February 22nd, 11:30 am
ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ದೆಹಲಿಯಲ್ಲಿ ನಡೆದ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ತಮ್ಮ ಅನುಭವಗಳ ಬಗ್ಗೆ ಮಾತನಾಡಿದರು. ಭಾರತೀಯ ಮೂಲದ ಕ್ರಿಕೆಟಿಗರು, ಅಂಗಾಂಗ ದಾನ, ನದಿ ಉತ್ಸವಗಳು, ಡಿಜಿಟಲ್ ಸುರಕ್ಷತೆ, ಪರೀಕ್ಷಾ ಪೆ ಚರ್ಚಾ ಮತ್ತು ಇನ್ನೂ ಅನೇಕ ಪ್ರಮುಖ ವಿಷಯಗಳನ್ನು ಅವರು ಸ್ಪರ್ಶಿಸಿದರು. ಫೆಬ್ರವರಿ 23 ರಂದು ರಾಷ್ಟ್ರಪತಿ ಭವನದಲ್ಲಿ 'ರಾಜಾಜಿ ಉತ್ಸವ' ಆಚರಿಸಲಾಗುವುದು ಎಂದು ಅವರು ಹೈಲೈಟ್ ಮಾಡಿದರು. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಿ ಅವರಿಗೆ ಪ್ರಧಾನಿ ಗೌರವ ಸಲ್ಲಿಸಿದರು, ನಾರಿ ಶಕ್ತಿಯೊಂದಿಗಿನ ಅವರ ಆಳವಾದ ಸಂಪರ್ಕವನ್ನು ಗಮನಿಸಿದರು.ಶ್ರೀ ಸಿ. ರಾಜಗೋಪಾಲಾಚಾರಿ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
December 10th, 09:37 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಸಿ. ರಾಜಗೋಪಾಲಾಚಾರಿ ಅವರ ಜನ್ಮ ವಾರ್ಷಿಕೋತ್ಸವದ ದಿನವಾದ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರು, ಚಿಂತಕರು, ಬುದ್ಧಿಜೀವಿ ಮತ್ತು ರಾಜಕಾರಣಿಯಾಗಿ ಅವರನ್ನು ಸ್ಮರಿಸಿರುವ ಪ್ರಧಾನಮಂತ್ರಿ, ಮೌಲ್ಯಗಳನ್ನು ಸೃಷ್ಟಿಸುವಲ್ಲಿ ಮತ್ತು ಮನುಕುಲದ ಘನತೆಯನ್ನು ಉಲೇಖಿಸುವಲ್ಲಿ ನಂಬಿಕೆ ಇಟ್ಟಿದ್ದ ರಾಜಾಜಿ ಅವರು 20ನೇ ಶತಮಾನದ ಅತ್ಯಂತ ತೀಕ್ಷ್ಣ ಮನಸ್ಸಿನವರಲ್ಲಿ ಒಬ್ಬರಾಗಿದ್ದಾರೆ ಎಂದು ತಿಳಿಸಿದ್ದಾರೆ.ಶ್ರೀ ಸಿ. ರಾಜಗೋಪಾಲಾಚಾರಿಯವರನ್ನು ಅವರ ಜನ್ಮ ಜಯಂತಿಯಂದು ಸ್ಮರಿಸಿದ ಪ್ರಧಾನಮಂತ್ರಿ
December 10th, 04:18 pm
ಶ್ರೀ ಸಿ. ರಾಜಗೋಪಾಲಾಚಾರಿಯವರ ಜನ್ಮ ಜಯಂತಿಯಂದು ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ರಾಜಗೋಪಾಲಾಚಾರಿಯವರು ಬಹುಮುಖಿ ವ್ಯಕ್ತಿತ್ವವಾಗಿದ್ದು, ಆಡಳಿತ, ಸಾಹಿತ್ಯ ಮತ್ತು ಸಾಮಾಜಿಕ ಸಬಲೀಕರಣದ ಮೇಲೆ ಪ್ರಬಲವಾದ ಪ್ರಭಾವ ಬೀರಿದ್ದಾರೆ ಎಂದು ಹೇಳಿದರು.ವಾರಾಣಸಿಯಲ್ಲಿ ಕಾಶಿ ತಮಿಳು ಸಂಗಮ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಭಾಷಾಂತರ.
November 19th, 07:00 pm
ಕಾರ್ಯಕ್ರಮದಲ್ಲಿ ಉಪಸ್ತಿತರಿರುವ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಧರ್ಮೇಂದ್ರ ಪ್ರಧಾನ್ ಜೀ ಮತ್ತು ಶ್ರೀ ಎಲ್. ಮುರುಗನ್ ಜೀ, ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಜಿ, ವಿಶ್ವವಿಖ್ಯಾತ ಸಂಗೀತಗಾರ ಮತ್ತು ರಾಜ್ಯಸಭಾ ಸದಸ್ಯರಾದ ಇಳಯರಾಜಾ ಜಿ, ಬಿ ಹೆಚ್ ಯು ಉಪಕುಲಪತಿ ಸುಧೀರ್ ಜೈನ್, ಐಐಟಿ ಮದ್ರಾಸ್ ನಿರ್ದೇಶಕರಾದ ಪ್ರೊಫೆಸರ್ ಕಾಮಕೋಟಿ ಜಿ, ಇತರ ಎಲ್ಲ ಗಣ್ಯರು ಮತ್ತು ಕಾಶಿ ಮತ್ತು ತಮಿಳುನಾಡಿನಿಂದ ಬಂದ ನನ್ನ ಎಲ್ಲ ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ,ಉತ್ತರ ಪ್ರದೇಶದ ವಾರಾಣಸಿಯಲ್ಲಿ 'ಕಾಶಿ ತಮಿಳು ಸಂಗಮಂ' ಉದ್ಘಾಟಿಸಿದ ಪ್ರಧಾನಮಂತ್ರಿ
November 19th, 02:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ತಿಂಗಳಿಡೀ ಆಯೋಜಿಸಲಾಗಿರುವ 'ಕಾಶಿ ತಮಿಳು ಸಂಗಮಂ' ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದ ಉದ್ದೇಶವೆಂದರೆ ದೇಶದ ಅತ್ಯಂತ ಪ್ರಮುಖ ಮತ್ತು ಪ್ರಾಚೀನ ಕಲಿಕಾ ಕ್ಷೇತ್ರಗಳಲ್ಲಿ ಎರಡು ತಾಣಗಳಾದ ತಮಿಳುನಾಡು ಮತ್ತು ಕಾಶಿ ನಡುವಿನ ಪ್ರಾಚೀನ ಸಂಬಂಧಗಳನ್ನು ಆಚರಿಸುವುದು, ಪುನರುಚ್ಚರಿಸುವುದು ಮತ್ತು ಮರುಶೋಧಿಸುವುದಾಗಿದೆ. ತಮಿಳುನಾಡಿನಿಂದ 2500ಕ್ಕೂ ಹೆಚ್ಚು ಪ್ರತಿನಿಧಿಗಳು ಕಾಶಿಗೆ ಭೇಟಿ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು 'ತಿರುಕ್ಕುರಳ್' ಪುಸ್ತಕವನ್ನು ಮತ್ತು ಅದರ 13 ಭಾಷೆಗಳ ಅನುವಾದವನ್ನು ಬಿಡುಗಡೆ ಮಾಡಿದರು. ಆರತಿಯ ನಂತರ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಅವರು ಸಾಕ್ಷಿಯಾದರು.ಸಿ. ರಾಜಗೋಪಾಲಾಚಾರಿ ಜಯಂತಿ ಅಂಗವಾಗಿ ಅವರಿಗೆ ನಮನ ಸಲ್ಲಿಸಿದ ಪ್ರಧಾನಿ
December 10th, 12:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಸಿ.ರಾಜಗೋಪಾಲಾಚಾರಿ ಅವರು ಜಯಂತಿ ಅಂಗವಾಗಿ ರಾಜಗೋಪಾಲಚಾರಿ ಅವರಿಗೆ ನಮನ ಸಲ್ಲಿಸಿದ್ದಾರೆ.PM pays tribute to C Rajagopalachari on his birth anniversary
December 10th, 11:41 am