ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಅವರ ಉತ್ತರ
February 05th, 05:35 pm
ವಂದನಾ ನಿರ್ಣಯಕ್ಕೆ ಬೆಂಬಲವಾಗಿ ಈ ಸದನದ ಮುಂದೆ ನನ್ನ ಭಾವನೆಗಳನ್ನು ಮಂಡಿಸುವುದು ನನ್ನ ಸೌಭಾಗ್ಯವೇ ಸರಿ.ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ
February 05th, 05:00 pm
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಿಸಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುತ್ತಾ, ವಂದನಾ ನಿರ್ಣಯವನ್ನು ಬೆಂಬಲಿಸಿ ತಮ್ಮ ಭಾವನೆಗಳನ್ನು ಹಂಚಿಕೊಳ್ಳುವ ಸೌಭಾಗ್ಯ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಳೆದ ವರ್ಷದಲ್ಲಿ ಅಭಿವೃದ್ಧಿ ಹೊಂದಿದ ಭಾರತದತ್ತ ಸಾಗುವ ಪ್ರಯಾಣದಲ್ಲಿ ತ್ವರಿತ ಪ್ರಗತಿಯಾಗಿದ್ದು, ಪ್ರತಿಯೊಂದು ವಲಯದಲ್ಲಿ ಮತ್ತು ಸಮಾಜದ ಎಲ್ಲಾ ವರ್ಗಗಳಲ್ಲಿ ಪರಿವರ್ತನೆ ಗೋಚರಿಸುತ್ತಿದೆ, ರಾಷ್ಟ್ರವು ಸರಿಯಾದ ದಿಕ್ಕಿನಲ್ಲಿ ಹೆಚ್ಚಿನ ವೇಗದಲ್ಲಿ ಮುಂದುವರಿಯುತ್ತಿದೆ ಎಂದು ಹೇಳಿದರು. ರಾಷ್ಟ್ರಪತಿಗಳು ಈ ವಿಷಯಗಳನ್ನು ಸೂಕ್ಷ್ಮತೆ ಮತ್ತು ಸ್ಪಷ್ಟತೆಯೊಂದಿಗೆ ಪ್ರಸ್ತುತಪಡಿಸಿದ್ದಾರೆ ಎಂಬುದನ್ನೂ ಶ್ರೀ ಮೋದಿ ಉಲ್ಲೇಖಿಸಿದರು.ಭಾರತದ ರಾಷ್ಟ್ರಪತಿ ಅವರಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಗಣ್ಯ ವ್ಯಕ್ತಿಗಳಿಗೆ ಪ್ರಧಾನಮಂತ್ರಿ ಅಭಿನಂದನೆ
July 13th, 10:47 am
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ರಾಷ್ಟ್ರಪತಿ ಅವರಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ನಾಲ್ವರು ಗಣ್ಯ ವ್ಯಕ್ತಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭ ಹಾರೈಕೆಗಳನ್ನು ಸಲ್ಲಿಸಿದ್ದಾರೆ.