ಕೆನಡಾ ಪ್ರಧಾನಮಂತ್ರಿ ಅವರ ಭೇಟಿಯೊಂದಿಗೆ ಉಭಯ ರಾಷ್ಟ್ರಗಳ ನಡುವಿನ ನಿಜವಾದ ನವೀಕರಿಸಿದ ಪಾಲುದಾರಿಕೆಗೆ ಬಲವಾದ ಅಡಿಪಾಯವನ್ನು ನಿರ್ಮಿಸಲಾಗಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು
March 03rd, 10:16 pm
ಕೆನಡಾದ ಪ್ರಧಾನಮಂತ್ರಿ ಮಾರ್ಕ್ ಕಾರ್ನೆ ಅವರ ಭಾರತ ಭೇಟಿ ಎರಡೂ ರಾಷ್ಟ್ರಗಳ ನಡುವಿನ ನೈಜ ನವೀಕೃತ ಪಾಲುದಾರಿಕೆಗೆ ಭದ್ರ ಬುನಾದಿ ಹಾಕಿದೆ ಎಂದು ಪ್ರಧಾನಮಂತ್ರಿ ಹೇಳಿದರು.ಭಾರತ-ಕೆನಡಾ ನಾಯಕರ ಜಂಟಿ ಹೇಳಿಕೆ
March 02nd, 05:05 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಮಂತ್ರಣದ ಮೇರೆಗೆ, ಕೆನಡಾದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು 2026 ರ ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು ಕೆನಡಾದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಮತ್ತು 2018 ರ ನಂತರ ಕೆನಡಾದ ಪ್ರಧಾನ ಮಂತ್ರಿಯೊಬ್ಬರು ಭಾರತಕ್ಕೆ ನೀಡಿದ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಪ್ರಧಾನಮಂತ್ರಿ ಕಾರ್ನೆ ಅವರೊಂದಿಗೆ ಹಿರಿಯ ಸಚಿವರು, ಪ್ರಾಂತೀಯ ನಾಯಕರು ಮತ್ತು ಪ್ರಮುಖ ಸಿಇಒಗಳನ್ನು ಒಳಗೊಂಡ ಕೆನಡಾದ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಿತಾಂಶಗಳ ವಿವರ
March 02nd, 05:04 pm
ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಿತಾಂಶಗಳ ವಿವರಭಾರತ-ಕೆನಡಾ ಸಿಇಒ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
March 02nd, 02:30 pm
ಭಾರತ - ಕೆನಡಾ ಸಿಇಒ ವೇದಿಕೆಯಲ್ಲಿ ನಿಮ್ಮೆಲ್ಲರೊಂದಿಗೆ ಸೇರಲು ನನಗೆ ಸಂತೋಷವಾಗುತ್ತಿದೆ. ತಮ್ಮ ಸಕಾರಾತ್ಮಕ ಆಲೋಚನೆಗಳನ್ನು ಹಂಚಿಕೊಂಡಿದ್ದಕ್ಕಾಗಿ ನಾನು ಪ್ರಧಾನಮಂತ್ರಿ ಕಾರ್ನೆ ಅವರಿಗೆ ವಿಶೇಷ ಧನ್ಯವಾದಗಳನ್ನು ಅರ್ಪಿಸುತ್ತೇನೆ.ಕೆನಡಾ ಪ್ರಧಾನಮಂತ್ರಿ ಅವರೊಂದಿಗೆ ಪ್ರಧಾನಮಂತ್ರಿ ಮೋದಿ ಅವರಿಂದ ಜಂಟಿ ಪತ್ರಿಕಾ ಹೇಳಿಕೆ
March 02nd, 11:40 am
ನಮ್ಮ ಮೊದಲ ಸಭೆಯಿಂದಲೇ ನಮ್ಮ ಸಂಬಂಧವು ನವೀಕೃತ ಶಕ್ತಿ, ಪರಸ್ಪರ ನಂಬಿಕೆ ಮತ್ತು ಸಕಾರಾತ್ಮಕ ಮನೋಭಾವದಿಂದ ತುಂಬಿದೆ. ಸಹಕಾರದ ಎಲ್ಲಾ ಕ್ಷೇತ್ರಗಳಲ್ಲಿ ಬೆಳೆಯುತ್ತಿರುವ ಆವೇಗಕ್ಕೆ ನನ್ನ ಸ್ನೇಹಿತ ಪ್ರಧಾನಿ ಕಾರ್ನಿ ಅವರು ಕಾರಣ ಎಂದು ನಾನು ಹೇಳಲು ಬಯಸುತ್ತೇನೆ.ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿ
February 26th, 10:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಕೆನಡಾ ಪ್ರಧಾನಮಂತ್ರಿ ಮಾನ್ಯ ಮಾರ್ಕ್ ಕಾರ್ನಿ ಅವರು 2026ರ ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. ಇದು ಪ್ರಧಾನಮಂತ್ರಿ ಕಾರ್ನಿ ಅವರ ಮೊದಲ ಅಧಿಕೃತ ಭಾರತ ಭೇಟಿಯಾಗಲಿದೆ.ಎಐ ಪ್ರಗತಿಯಿಂದ ಟಿ20 ವಿಶ್ವಕಪ್ ವರೆಗೆ, ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ ಭಾರತದ ಏರಿಕೆಯನ್ನು ಪ್ರದರ್ಶಿಸುತ್ತಾರೆ
February 22nd, 11:30 am
ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ದೆಹಲಿಯಲ್ಲಿ ನಡೆದ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ತಮ್ಮ ಅನುಭವಗಳ ಬಗ್ಗೆ ಮಾತನಾಡಿದರು. ಭಾರತೀಯ ಮೂಲದ ಕ್ರಿಕೆಟಿಗರು, ಅಂಗಾಂಗ ದಾನ, ನದಿ ಉತ್ಸವಗಳು, ಡಿಜಿಟಲ್ ಸುರಕ್ಷತೆ, ಪರೀಕ್ಷಾ ಪೆ ಚರ್ಚಾ ಮತ್ತು ಇನ್ನೂ ಅನೇಕ ಪ್ರಮುಖ ವಿಷಯಗಳನ್ನು ಅವರು ಸ್ಪರ್ಶಿಸಿದರು. ಫೆಬ್ರವರಿ 23 ರಂದು ರಾಷ್ಟ್ರಪತಿ ಭವನದಲ್ಲಿ 'ರಾಜಾಜಿ ಉತ್ಸವ' ಆಚರಿಸಲಾಗುವುದು ಎಂದು ಅವರು ಹೈಲೈಟ್ ಮಾಡಿದರು. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಿ ಅವರಿಗೆ ಪ್ರಧಾನಿ ಗೌರವ ಸಲ್ಲಿಸಿದರು, ನಾರಿ ಶಕ್ತಿಯೊಂದಿಗಿನ ಅವರ ಆಳವಾದ ಸಂಪರ್ಕವನ್ನು ಗಮನಿಸಿದರು.ಕೆನಡಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
February 11th, 03:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೆನಡಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶ್ರೀ ನರೇಂದ್ರ ಮೋದಿ ಅವರು ಹಾರೈಸಿದ್ದಾರೆ. “ಈ ತೀವ್ರ ದುಃಖದ ಸಮಯದಲ್ಲಿ ಭಾರತ, ಕೆನಡಾದ ಜನತೆಯೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ’’ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಜೋಹಾನ್ಸ್‌ಬರ್ಗ್ ನಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾದ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
November 23rd, 09:41 pm
ಭಾರತ-ಕೆನಡಾ ಪಾಲುದಾರಿಕೆಯ ಪ್ರಗತಿಯನ್ನು ಪರಿಶೀಲಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜೋಹಾನ್ಸ್‌ಬರ್ಗ್ ನಲ್ಲಿ ನಡೆದ ಜಿ20 ನಾಯಕರ ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಮಾರ್ಕ್ ಕಾರ್ನೆ ಅವರನ್ನು ಭೇಟಿ ಮಾಡಿದರು.Joint statement by the Government of India, the Government of Australia and the Government of Canada
November 22nd, 09:21 pm
India, Australia, and Canada have agreed to enter into a new trilateral partnership: the Australia-Canada-India Technology and Innovation (ACITI) Partnership. The three sides agreed to strengthen their ambition in cooperation on critical and emerging technologies. The Partnership will also examine the development and mass adoption of artificial intelligence to improve citizens' lives.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಕೆನಡಾದ ವಿದೇಶಾಂಗ ಸಚಿವರು
October 13th, 02:42 pm
ಕೆನಡಾದ ವಿದೇಶಾಂಗ ಸಚಿವರಾದ ಶ್ರೀಮತಿ ಅನಿತಾ ಆನಂದ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಪ್ರಧಾನಮಂತ್ರಿ ಅವರಿಂದ ಅಕ್ಟೋಬರ್ 8ರಂದು 9ನೇ ಆವೃತ್ತಿಯ ಇಂಡಿಯನ್ ಮೊಬೈಲ್ ಕಾಂಗ್ರೆಸ್ ಉದ್ಘಾಟನೆ
October 07th, 10:27 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನವದೆಹಲಿಯ ಯಶೋಭೂಮಿಯಲ್ಲಿ 2025ರ ಅಕ್ಟೋಬರ್ 8ರಂದು ಏಷ್ಯಾದ ಅತಿದೊಡ್ಡ ದೂರಸಂಪರ್ಕ, ಮಾಧ್ಯಮ ಮತ್ತು ತಂತ್ರಜ್ಞಾನ ಕಾರ್ಯಕ್ರಮ ಇಂಡಿಯಾ ಮೊಬೈಲ್ ಕಾಂಗ್ರೆಸ್ (ಐಎಂಸಿ)ಯ 9ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ.‘ವೋಕಲ್ ಫಾರ್ ಲೋಕಲ್’ – ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಸ್ವದೇಶಿ ಹೆಮ್ಮೆಯಿಂದ ಹಬ್ಬಗಳನ್ನು ಆಚರಿಸಲು ಒತ್ತಾಯಿಸಿದರು
August 31st, 11:30 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಿದ ಭದ್ರತಾ ಪಡೆಗಳು ಮತ್ತು ನಾಗರಿಕರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ರೀಡಾಕೂಟಗಳು, ಸೌರಶಕ್ತಿ, ‘ಆಪರೇಷನ್ ಪೋಲೊ’ ಮತ್ತು ಭಾರತೀಯ ಸಂಸ್ಕೃತಿಯ ಜಾಗತಿಕ ಹರಡುವಿಕೆಯಂತಹ ಪ್ರಮುಖ ವಿಷಯಗಳನ್ನು ಸಹ ಅವರು ಪ್ರಸ್ತಾಪಿಸಿದರು. ಹಬ್ಬದ ಋತುವಿನಲ್ಲಿ ಮೇಡ್-ಇನ್-ಇಂಡಿಯಾ ಉತ್ಪನ್ನಗಳನ್ನು ಖರೀದಿಸುವ ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಪ್ರಧಾನಿ ನಾಗರಿಕರಿಗೆ ನೆನಪಿಸಿದರು.ಬಿಹಾರದ ಸಿವಾನ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 20th, 01:00 pm
ನಾನು ಎಲ್ಲರಿಗೂ ನಮಸ್ಕರಿಸುತ್ತೇನೆ. ಬಾಬಾ ಮಹೇಂದ್ರನಾಥ್, ಬಾಬಾ ಹಂಸನಾಥ್, ಸೋಹಗ್ರಾ ಧಾಮ್, ಮಾತೆ ತಾವೇ ಭವಾನಿ, ಮಾತೆ ಅಂಬಿಕಾ ಭವಾನಿ, ದೇಶದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಮತ್ತು ಲೋಕನಾಯಕ್ ಜಯಪ್ರಕಾಶ್ ನಾರಾಯಣ್ ಅವರ ಪುಣ್ಯ ಭೂಮಿಯಲ್ಲಿರುವ ಎಲ್ಲರಿಗೂ ನಾನು ನಮಸ್ಕರಿಸುತ್ತೇನೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಸಿವಾನ್ ನಲ್ಲಿ 5,200 ಕೋಟಿ ರೂ.ಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು
June 20th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಸಿವಾನ್ ನಲ್ಲಿ 5,200 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಹಾಜರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ ಅವರು, ಬಾಬಾ ಮಹೇಂದ್ರ ನಾಥ್ ಮತ್ತು ಬಾಬಾ ಹನ್ಸ್ ನಾಥ್ ಅವರಿಗೆ ಗೌರವ ನಮನ ಸಲ್ಲಿಸಿದರು ಮತ್ತು ಸೊಹಗಾರ ಧಾಮದ ಪವಿತ್ರ ಉಪಸ್ಥಿತಿಯನ್ನು ಸ್ಮರಿಸಿದರು. ಅವರು ಮಾ ತವೆ ಭವಾನಿ ಮತ್ತು ಮಾ ಅಂಬಿಕಾ ಭವಾನಿ ಅವರಿಗೂ ನಮಸ್ಕರಿಸಿದರು. ಪ್ರಧಾನಮಂತ್ರಿ ಅವರು ದೇಶದ ಮೊದಲ ರಾಷ್ಟ್ರಪತಿ ದೇಶ್ ರತ್ನ ಡಾ. ರಾಜೇಂದ್ರ ಪ್ರಸಾದ್ ಮತ್ತು ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಸ್ಮರಣೆಯನ್ನು ಗೌರವಿಸಿದರು.ಜಿ7 ಶೃಂಗಸಭೆ ಸಂದರ್ಭದಲ್ಲಿ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಸಂವಾದ
June 18th, 05:03 pm
2025ರ ಜೂನ್ 17 ರಂದು ಕೆನಡಾದ ಕನನಾಸ್ಕಿಸ್‌ನಲ್ಲಿ ನಡೆದ ಜಿ 7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರಾದ ಶ್ರೀ ಆಂಟೋನಿಯೊ ಕೋಸ್ಟಾ ಅವರೊಂದಿಗೆ ಫಲಪ್ರದ ಸಂಭಾಷಣೆ ನಡೆಸಿದರು.ಜಿ7 ಶೃಂಗಸಭೆಯ ಸಂದರ್ಭದಲ್ಲಿ ಕೊರಿಯಾ ಗಣರಾಜ್ಯದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
June 18th, 03:17 pm
ಜೂನ್ 17, 2025 ರಂದು ಕೆನಡಾದ ಕನನಾಸ್ಕಿಸ್ ನಲ್ಲಿ ನಡೆದ 51 ನೇ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೊರಿಯಾ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಲೀ ಜೇ-ಮ್ಯುಂಗ್ ಅವರನ್ನು ಭೇಟಿಯಾದರು. ವಾಣಿಜ್ಯ, ಹೂಡಿಕೆ, ತಂತ್ರಜ್ಞಾನ, ಹಸಿರು ಹೈಡ್ರೋಜನ್, ಹಡಗು ನಿರ್ಮಾಣ ಮತ್ತು ಇತರ ಕ್ಷೇತ್ರಗಳಲ್ಲಿ ಭಾರತ ಮತ್ತು ಕೊರಿಯಾ ಗಣರಾಜ್ಯ ಒಟ್ಟಾಗಿ ಕೆಲಸ ಮಾಡಲು ಬಯಸುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.ಜಿ7 ಶೃಂಗಸಭೆಯಲ್ಲಿ ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಸಂವಾದ
June 18th, 03:05 pm
2025ರ ಜೂನ್ 17 ರಂದು ಕೆನಡಾದ ಕನನಾಸ್ಕಿಸ್‌ನಲ್ಲಿ ನಡೆದ ಜಿ 7 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಸಿರಿಲ್ ರಾಮಫೋಸಾ ಮತ್ತು ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ವಿಸ್ತಾರವಾದ ಮತ್ತು ಹೃತ್ಪೂರ್ವಕ ಸಂಭಾಷಣೆಗಳನ್ನು ನಡೆಸಿದರು. ಜಾಗತಿಕ ದಕ್ಷಿಣದ ಉದ್ದೇಶವನ್ನು ಸಮರ್ಥಿಸುವ ಭಾರತದ ಅಚಲ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.ಜಿ7 ಶೃಂಗಸಭೆಯ ಸಂದರ್ಭದಲ್ಲಿ ಯುರೋಪಿಯನ್ ಆಯೋಗದ ಅಧ್ಯಕ್ಷರ ಜೊತೆ ಪ್ರಧಾನಮಂತ್ರಿ ಸಂವಾದ
June 18th, 03:04 pm
2025ರ ಜೂನ್ 17 ರಂದು ಕೆನಡಾದ ಕನನಾಸ್ಕಿಸ್‌ನಲ್ಲಿ ನಡೆದ ಜಿ 7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುರೋಪಿಯನ್ ಆಯೋಗದ ಅಧ್ಯಕ್ಷರಾದ ಶ್ರೀಮತಿ ಉರ್ಸುಲಾ ವಾನ್ ಡೆರ್ ಲೇಯೆನ್ ಅವರೊಂದಿಗೆ ಫಲಪ್ರದ ಚರ್ಚೆ ನಡೆಸಿದರು.ಜಿ7 ಶೃಂಗಸಭೆಯಲ್ಲಿ ಜಪಾನ್ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ಸಂವಾದ
June 18th, 03:00 pm
2025ರ ಜೂನ್ 17 ರಂದು ಕೆನಡಾದ ಕನನಾಸ್ಕಿಸ್‌ನಲ್ಲಿ ನಡೆದ 51ನೇ ಜಿ7 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಪಾನ್ ಜಿ7 ಶೃಂಗಸಭೆಯಲ್ಲಿ ಜಪಾನ್ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಶಿಗೇರು ಇಶಿಬಾ ಅವರೊಂದಿಗೆ ಒಳನೋಟವುಳ್ಳ ಸಂವಾದ ನಡೆಸಿದರು. ವಿವಿಧ ವಲಯಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸಲು ಭಾರತ ಮತ್ತು ಜಪಾನ್ ಬದ್ಧವಾಗಿವೆ ಎಂದು ನಾಯಕರು ದೃಢಪಡಿಸಿದರು.