3ನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆಯಲ್ಲಿ ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
July 09th, 12:29 pm
ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಎಂಪಿ ಅವರ ಆತಿಥ್ಯದಲ್ಲಿ, ಜುಲೈ 9, 2026 ರಂದು ಮೆಲ್ಬೋರ್ನ್ ನಲ್ಲಿ ನಡೆದ 3ನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಗೌರ್ನಮೆಂಟ್ ಹೌಸ್ ಗೆ ಆಗಮಿಸಿದ ಪ್ರಧಾನಮಂತ್ರಿ ಮೋದಿಯವರನ್ನು ಪ್ರಧಾನಮಂತ್ರಿ ಅಲ್ಬನೀಸ್ ಅವರು ಆತ್ಮೀಯವಾಗಿ ಬರಮಾಡಿಕೊಂಡು, ಗೌರವ ವಂದನೆಗಳೊಂದಿಗೆ ಅಧಿಕೃತವಾಗಿ ಸ್ವಾಗತಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಭಾರತಕ್ಕಾಗಿ ಆಸ್ಟ್ರೇಲಿಯಾ ಪ್ರಧಾನಮಂತ್ರಿಯವರ ವಿಶೇಷ ವ್ಯಾಪಾರ ರಾಯಭಾರಿ ಗೌರವಾನ್ವಿತ ಟೋನಿ ಅಬಾಟ್ ನಡುವೆ ಸಭೆ
August 05th, 06:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 2021ರ ಆಗಸ್ಟ್ 2ರಿಂದ 6ರವರೆಗೆ ಭಾರತ ಪ್ರವಾಸ ಕೈಗೊಂಡಿರುವ ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಗೌರವಾನ್ವಿತ ಟೋನಿ ಅಬಾಟ್ ಅವರನ್ನು ಭೇಟಿ ಮಾಡಿದ್ದರು. ಅವರು ಭಾರತಕ್ಕಾಗಿ ಆಸ್ಟ್ರೇಲಿಯಾ ಪ್ರಧಾನಮಂತ್ರಿಯವರ ವಿಶೇಷ ವ್ಯಾಪಾರ ರಾಯಭಾರಿಯಾಗಿ ಅಧಿಕೃತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.