ಪ್ರಧಾನಮಂತ್ರಿಗಳಿಂದ ಅವರ ಸ್ವಯಂ ಗಣತಿ ಪೂರ್ಣ; ನಾಗರಿಕರು ತಮ್ಮ ಕುಟುಂಬದ ವಿವರಗಳೊಂದಿಗೆ ಸ್ವಯಂ ಗಣತಿ ಮಾಡಿಕೊಳ್ಳುವ ಮೂಲಕ ಗಣತಿ ಪ್ರಕ್ರಿಯೆಯಲ್ಲಿ ಭಾಗಿಯಾಗುವಂತೆ ಮನವಿ

April 01st, 08:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆರಂಭವಾದ ಮನೆಗಳ ಪಟ್ಟಿ ಮತ್ತು ವಸತಿ ಕಾರ್ಯಾಚರಣೆಗಳಿಗೆ ಸಂಬಂಧಿಸಿದ 2027ರ ಜನಗಣತಿಯ ಮೊದಲ ಹಂತದಲ್ಲಿ ತಮ್ಮ ಸ್ವಯಂ ಗಣತಿಯನ್ನು ಪೂರ್ಣಗೊಳಿಸಿದ್ದಾರೆ. ಇದೇ ಮೊದಲ ಬಾರಿಗೆ ಡಿಜಿಟಲ್ ರೂಪದಲ್ಲಿ ಜನಗಣತಿಯ ದತ್ತಾಂಶ ಸಂಗ್ರಹಿಸಲಾಗುತ್ತಿದೆ. ಭಾರತದ ಜನರು ತಮ್ಮ ಕುಟುಂಬದ ವಿವರಗಳೊಂದಿಗೆ ಸ್ವಯಂ ಗಣತಿ ಮಾಡಲು ಅವಕಾಶ ನೀಡಲಾಗಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

2027ರ ಭಾರತದ ಜನಗಣತಿ ಯೋಜನೆಗೆ ಸಂಪುಟದ ಅನುಮೋದನೆ

December 12th, 04:13 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, 11,718.24 ಕೋಟಿ ರೂ. ವೆಚ್ಚದಲ್ಲಿ 2027ರ ಭಾರತದ ಜನಗಣತಿಯನ್ನು ನಡೆಸುವ ಪ್ರಸ್ತಾವನೆಯನ್ನು ಅನುಮೋದಿಸಿದೆ.