ಕೇರಳಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ವಿ.ಡಿ. ಸತೀಶನ್ ಜಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
May 18th, 02:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಕೇರಳಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ವಿ.ಡಿ. ಸತೀಶನ್ ಜಿ ಅವರನ್ನು ಅಭಿನಂದಿಸಿದ್ದಾರೆ.ಸಿಕ್ಕಿಂ ರಾಜ್ಯ ಸಂಸ್ಥಾಪನಾ ದಿನದಂದು ಸಿಕ್ಕಿಂ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ
May 16th, 01:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಸಿಕ್ಕಿಂ ಜನತೆಗೆ ಶುಭಾಶಯ ಕೋರಿದ್ದಾರೆ, ಈ ವರ್ಷ ಸಿಕ್ಕಿಂ ತನ್ನ 50ನೇ ರಾಜ್ಯೋತ್ಸವ ದಿನವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಇದು ಐತಿಹಾಸಿಕ ಮೈಲಿಗಲ್ಲಾಗಿದೆ. ಭಾರತದ ಅಭಿವೃದ್ಧಿ ಪಯಣಕ್ಕೆ ಸಿಕ್ಕಿಂನ ಕೊಡುಗೆ ಆಳವಾಗಿ ಮೌಲ್ಯಯುತವಾಗಿದೆ ಮತ್ತು ಪ್ರಶಂಸಿಸಲ್ಪಡುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. 50ನೇ ರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಸಿಕ್ಕಿಂಗೆ ತಾವು ಇತ್ತೀಚೆಗೆ ಭೇಟಿ ನೀಡಿದ್ದನ್ನು ಸ್ಮರಿಸಿದ ಪ್ರಧಾನಮಂತ್ರಿ ಅವರು, ರಾಜ್ಯದ ಜನರು ತೋರಿದ ಆತ್ಮೀಯತೆ ಮತ್ತು ವಾತ್ಸಲ್ಯದಿಂದ ತಮ್ಮನ್ನು ಆಳವಾಗಿ ಸ್ಪರ್ಶಿಸಿದ್ದೇನೆ ಎಂದು ಹೇಳಿದರು.ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಸಿ. ಜೋಸೆಫ್ ವಿಜಯ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
May 10th, 11:10 am
ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಿರು ಸಿ. ಜೋಸೆಫ್ ವಿಜಯ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್) 2026 ರ ಜನವರಿ 1 ರಿಂದ ಅನ್ವಯವಾಗುವಂತೆ ಹೆಚ್ಚುವರಿ ಶೇ. 2 ರಷ್ಟು ನೀಡಲು ಸಂಪುಟದ ಅನುಮೋದನೆ
April 18th, 03:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಬೆಲೆ ಏರಿಕೆಯನ್ನು ಸರಿದೂಗಿಸಲು, ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ ಶೇ. 2 ರಷ್ಟು ತುಟ್ಟಿ ಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್) ಬಿಡುಗಡೆ ಮಾಡಲು ಅನುಮೋದನೆ ನೀಡಿದೆ. ಇದು 2026 ರ ಜನವರಿ 1 ರಿಂದ ಅನ್ವಯವಾಗಲಿದ್ದು ಮೂಲ ವೇತನ/ಪಿಂಚಣಿಯ ಪ್ರಸ್ತುತದ ಶೇ.58 ದರಕ್ಕೆ ಹೆಚ್ಚುವರಿಯಾಗಿ ಸಿಗಲಿದೆ.ಪಶ್ಚಿಮ ಬಂಗಾಳದ ಕೋಲ್ಕೊತಾದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 14th, 02:15 pm
ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶಾಂತನು ಠಾಕೂರ್ ಜಿ, ಸುಕಾಂತ ಮಜುಂದಾರ್ ಜಿ, ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಶುಭೇಂದು ಅಧಿಕಾರಿ ಜಿ, ನನ್ನ ಸಹ ಸಂಸದ ಶಮಿಕ್ ಭಟ್ಟಾಚಾರ್ಯ ಜಿ, ಇತರೆ ಜನಪ್ರತಿನಿಧಿಗಳೆ, ಮಹಿಳೆಯರೆ ಮತ್ತು ಮಹನೀಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 18,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗು ಉದ್ಘಾಟನೆ ನೆರವೇರಿಸಿದರು
March 14th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 18,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು, ಕೋಲ್ಕತ್ತಾದ ನೆಲದಿಂದ, ಪಶ್ಚಿಮ ಬಂಗಾಳ ಮತ್ತು ಪೂರ್ವ ಭಾರತಕ್ಕೆ ಅಭಿವೃದ್ಧಿಯ ಹೊಸ ಅಧ್ಯಾಯವನ್ನು ಬರೆಯಲಾಗುತ್ತಿದೆ ಎಂದು ಹೇಳಿದರು.ಕೋಟಾ ವಿಮಾನ ನಿಲ್ದಾಣ ನಿರ್ಮಾಣದ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವೀಡಿಯೊ ಕಾನ್ಫರೆನ್ಸ್ ಭಾಷಣ
March 07th, 03:15 pm
ಕಳೆದ ವಾರವಷ್ಟೇ ನನಗೆ ರಾಜಸ್ಥಾನಕ್ಕೆ ಭೇಟಿ ನೀಡುವ ಅವಕಾಶ ಸಿಕ್ಕಿತು. ಪವಿತ್ರ ಭೂಮಿ ಅಜ್ಮೀರ್‌ನಿಂದ, ಸಾವಿರಾರು ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿದ್ದೇವೆ. ಅದೇ ಕಾರ್ಯಕ್ರಮದಲ್ಲಿ, ರಾಜಸ್ಥಾನದ 21,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಾಯಿತು. ಅಜ್ಮೀರ್ ಭೇಟಿಯ ಕೆಲವೇ ದಿನಗಳ ನಂತರ, ಇಂದು ಕೋಟಾಗೆ ಸಂಪರ್ಕ ಹೊಂದಿದ ಈ ಪ್ರಮುಖ ವಿಮಾನ ನಿಲ್ದಾಣ ಯೋಜನೆಯನ್ನು ಪ್ರಾರಂಭಿಸುವ ಸೌಭಾಗ್ಯ ನನಗೆ ಸಿಕ್ಕಿದೆ. ಒಂದೇ ವಾರದೊಳಗೆ, ರಾಜಸ್ಥಾನದಲ್ಲಿನ ಈ 2 ಪ್ರಮುಖ ಅಭಿವೃದ್ಧಿ ಕಾರ್ಯಕ್ರಮಗಳು ಪ್ರಬಲ ಸಂದೇಶವನ್ನು ರವಾನಿಸುತ್ತವೆ. ರಾಜಸ್ಥಾನ ಇಂದು ಎಷ್ಟು ವೇಗವಾಗಿ ಪ್ರಗತಿ ಸಾಧಿಸುತ್ತಿದೆ ಎಂಬುದನ್ನು ಅವು ತೋರಿಸುತ್ತವೆ. ಅದು ಮೂಲಸೌಕರ್ಯವಾಗಿರಲಿ, ಯುವಕರಿಗೆ ಉದ್ಯೋಗಾವಕಾಶಗಳಾಗಲಿ, ರೈತರು ಮತ್ತು ಮಹಿಳೆಯರ ಯೋಜನೆಗಳಾಗಲಿ ಅಥವಾ ಪ್ರತಿಯೊಂದು ವಲಯದ ಉಪಕ್ರಮಗಳು ರಾಜಸ್ಥಾನದಾದ್ಯಂತ ಹೆಚ್ಚಿನ ವೇಗದಲ್ಲಿ ನಡೆಯುತ್ತಿವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಕೋಟಾ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ; ಪ್ರದೇಶದ ಪರಿವರ್ತನೆಗೆ ಒತ್ತು
March 07th, 02:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ ಕೋಟಾ ವಿಮಾನ ನಿಲ್ದಾಣದ ಶಂಕುಸ್ಥಾಪನೆ ನೆರವೇರಿಸಿದರು. ಇದು ಹಾಡೋತಿ ಪ್ರಾಂತ್ಯದ ಪಾಲಿಗೆ ಒಂದು ಮಹತ್ವದ ಮೈಲಿಗಲ್ಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನವು ಅಭೂತಪೂರ್ವ ವೇಗದಲ್ಲಿ ಪ್ರಗತಿ ಹೊಂದುತ್ತಿದೆ. ಈ ಹೊಸ ವಿಮಾನ ನಿಲ್ದಾಣವು ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಗೆ ವೇಗವರ್ಧಕವಾಗಲಿದೆ, ಎಂದು ಒತ್ತಿಹೇಳಿದರು.ಕಚ್ಚಾ ಸೆಣಬಿಗೆ 2026-27ರ ಹಂಗಾಮಿನ ಕನಿಷ್ಠ ಬೆಂಬಲ ಬೆಲೆಗೆ ಸಂಪುಟದ ಅನುಮೋದನೆ
February 24th, 04:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026-27ನೇ ಸಾಲಿನ ಮಾರುಕಟ್ಟೆ ಋತುವಿಗಾಗಿ ಕಚ್ಚಾ ಸೆಣಬಿನ ಕನಿಷ್ಠ ಬೆಂಬಲ ಬೆಲೆಗೆ (ಎಂ ಎಸ್ ಪಿ) ಇಂದು ಅನುಮೋದನೆ ನೀಡಿದೆ.“ಕೇರಳ’’ ರಾಜ್ಯದ ಹೆಸರನ್ನು “ಕೇರಳಂ’’ ಎಂದು ಬದಲಾಯಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ
February 24th, 03:20 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಇಂದು ‘ಕೇರಳ’ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿತು.ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಕಾರ್ಯದರ್ಶಿಗಳ ಉನ್ನತ ಮಟ್ಟದ ಸಭೆ
May 08th, 02:17 pm
ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸನ್ನದ್ಧತೆ ಮತ್ತು ಅಂತರ-ಸಚಿವಾಲಯಗಳ ಸಮನ್ವಯವನ್ನು ಪರಿಶೀಲಿಸಲು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳ ಉನ್ನತ ಮಟ್ಟದ ಸಭೆ ಇಂದು ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಅನುಷ್ಠಾನಗೊಳಿಸಿದ್ದಕ್ಕಾಗಿ ದೆಹಲಿ ಸರ್ಕಾರವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
April 11th, 08:56 am
ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ (ಪಿ.ಎಂ-ಎ.ಬಿ.ಹೆಚ್.ಐ.ಎಂ) ಅನ್ನು ಜಾರಿಗೆ ತಂದಿದ್ದಕ್ಕಾಗಿ ಮತ್ತು ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಪಿ.ಎಂ-ಜೆ.ಎ.ವೈ) ಅಡಿಯಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್ ಗಳ ವಿತರಣೆ ಕಾರ್ಯವನ್ನು ಪ್ರಾರಂಭಿಸಿದ್ದಕ್ಕಾಗಿ ದೆಹಲಿ ಸರ್ಕಾರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ಲಾಘಿಸಿದ್ದಾರೆ.ಚಂದ್ರ ಮತ್ತು ಮಂಗಳನ ನಂತರ, ಶುಕ್ರನ ಮೇಲೆ ವೈಜ್ಞಾನಿಕ ಅನ್ವೇಷಣೆಗೆ ಲಕ್ಷ್ಯ ಇರಿಸಿದ ಭಾರತ
September 18th, 04:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಶುಕ್ರ ಗ್ರಹದ ಕ್ಷಕ್ಷೆಯ ಅಭಿಯಾನ[ವಿಒಎಂ]ಕ್ಕೆ ಅನುಮೋದನೆ ನೀಡಲಾಗಿದೆ. ಇದು ಚಂದ್ರ ಮತ್ತು ಮಂಗಳವನ್ನು ಮೀರಿ ಶುಕ್ರನನ್ನು ಅನ್ವೇಷಿಸುವ ಮತ್ತು ಅಧ್ಯಯನ ಮಾಡುವ ಸರ್ಕಾರದ ದೃಷ್ಟಿಯತ್ತ ಮಹತ್ವದ ಹೆಜ್ಜೆಯಾಗಿದೆ. ಶುಕ್ರ, ಭೂಮಿಗೆ ಹತ್ತಿರವಿರುವ ಗ್ರಹ ಮತ್ತು ಭೂಮಿಯಂತೆಯೇ ಪರಿಸ್ಥಿತಿಗಳಲ್ಲಿ ರೂಪುಗೊಂಡಿದೆ ಎಂದು ನಂಬಲಾಗಿದೆ, ಗ್ರಹಗಳ ಪರಿಸರವು ಹೇಗೆ ವಿಭಿನ್ನವಾಗಿ ವಿಕಸನಗೊಳ್ಳಬಹುದು ಎಂಬುದನ್ನು ಅರ್ಥಮಾಡಿಕೊಳ್ಳಲು ಇದು ಒಂದು ಅನನ್ಯ ಅವಕಾಶವನ್ನು ನೀಡಲಿದೆ.ಪದ್ಮ ಪ್ರಶಸ್ತಿಗಳಿಗೆ ಪ್ರೇರಣಾದಾಯಕ ವ್ಯಕ್ತಿಗಳ ನಾಮನಿರ್ದೇಶನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮನವಿ
September 09th, 06:00 pm
ಪ್ರತಿಷ್ಠಿತ ಪದ್ಮ ಪ್ರಶಸ್ತಿಗಾಗಿ ನಾಮನಿರ್ದೇಶನ ಪ್ರಕ್ರಿಯೆಯಲ್ಲಿ ಭಾರತದ ಜನರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ.ಸವಾಲಿನ ಈ ಸಮಯದಲ್ಲಿ ನಾವೆಲ್ಲರೂ ಕೇರಳದ ಜನರೊಂದಿಗೆ ನಿಲ್ಲುವೆವು – ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 10th, 10:58 pm
ವಯನಾಡಿನಲ್ಲಿ ಭೂಕುಸಿತದಲ್ಲಿ ಬಾಧಿತರಾದವರಿಗೆ ಎಲ್ಲಾ ಸಾಧ್ಯ ನೆರವನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಎಕ್ಸ್ ನಲ್ಲಿ ಸರಣಿ ಪೋಸ್ಟ್ ಗಳನ್ನು ಮಾಡಿರುವ ಪ್ರಧಾನಮಂತ್ರಿಗಳು, “ವಯನಾಡಿನ ಭೂಕುಸಿತ ದುರಂತದಿಂದ ನಮ್ಮೆಲ್ಲರಿಗೂ ದುಃಖವಾಗಿದೆ. ದುರಂತ ಸಂಭವಿಸಿದಾಗಿನಿಂದ, ನಾನು ಪರಿಸ್ಥಿತಿಯ ಬಗ್ಗೆ ನಿಕಟ ನಿಗಾ ವಹಿಸಿದ್ದೇನೆ. ಬಾಧಿತರಿಗೆ ನೆರವು ನೀಡಲು ಎಲ್ಲಾ ಸಂಪನ್ಮೂಲಗಳನ್ನು ಕೇಂದ್ರ ಸರ್ಕಾರ ಒದಗಿಸಿದೆ. ಇಂದು ನಾನು ಅಲ್ಲಿಗೆ ಭೇಟಿ ನೀಡಿ ಪರಾಮರ್ಶೆ ನಡೆಸಿದ್ದೇನೆ. ನಾನು ವೈಮಾನಿಕ ಸಮೀಕ್ಷೆಯನ್ನೂ ಕೈಗೊಂಡೆನು” ಎಂದು ಹೇಳಿದ್ದಾರೆ.ಕೇರಳದ ವಯನಾಡ್ ನ ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ
August 10th, 07:40 pm
ಈ ದುರಂತದ ಬಗ್ಗೆ ನಾನು ಮೊದಲು ತಿಳಿದಾಗಿನಿಂದ, ನಾನು ನಿರಂತರ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಕೇಂದ್ರ ಸರ್ಕಾರದ ಎಲ್ಲಾ ಸಂಬಂಧಿತ ಇಲಾಖೆಗಳನ್ನು ವಿಳಂಬವಿಲ್ಲದೆ ಸಜ್ಜುಗೊಳಿಸುವುದು ಕಡ್ಡಾಯವಾಗಿದೆ ಮತ್ತು ಈ ದುರಂತ ಘಟನೆಯಿಂದ ಬಾಧಿತರಾದವರನ್ನು ಬೆಂಬಲಿಸುವ ನಮ್ಮ ಪ್ರಯತ್ನಗಳಲ್ಲಿ ನಾವು ಒಂದಾಗಿದ್ದೇವೆ.ವಯನಾಡಿನಲ್ಲಿ ಭೂಕುಸಿತದಿಂದ ಸಂತ್ರಸ್ತರಾದವರ ಜೊತೆ ನಮ್ಮ ಪ್ರಾರ್ಥನೆ ಇದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ, ಪರಿಹಾರ ಕಾರ್ಯಗಳಲ್ಲಿ ನೆರವು ನೀಡಲು ಸಾಧ್ಯವಿರುವ ಎಲ್ಲ ಬೆಂಬಲವನ್ನು ಕೇಂದ್ರವು ಭರವಸೆ ನೀಡುತ್ತದೆ
August 10th, 07:36 pm
ಕೇರಳದ ವಯನಾಡಿನಲ್ಲಿ ಭೂಕುಸಿತದಿಂದ ಬಾಧಿತರಾದವರಿಗೆ ನಮ್ಮ ಪ್ರಾರ್ಥನೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ ಮತ್ತು ಪರಿಹಾರ ಕಾರ್ಯದಲ್ಲಿ ಕೇಂದ್ರದಿಂದ ಎಲ್ಲ ಸಾಧ್ಯ ಬೆಂಬಲದ ಭರವಸೆ ನೀಡಿದ್ದಾರೆ. ಪರಿಹಾರ ಕಾರ್ಯ ಮತ್ತು ಎಲ್ಲಾ ನೆರವನ್ನು ನೀಡಲು ರಾಜ್ಯ ಸರ್ಕಾರದೊಂದಿಗೆ ಕೇಂದ್ರ ಸರ್ಕಾರ ಬೆಂಬಲ ನೀಡುತ್ತಿದೆ ಎಂದು ಅವರು ಹೇಳಿದ್ದಾರೆ. ಪ್ರಧಾನಮಂತ್ರಿ ಇಂದು ಕೇರಳದ ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಭೂಕುಸಿತದಿಂದ ಬಾಧಿತವಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.