ಸಾರ್ವಜನಿಕ ಆರೋಗ್ಯ ಸೌಲಭ್ಯಗಳಲ್ಲಿ 162 ಪಿಎಸ್ಎ ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳ ಸ್ಥಾಪನೆಗೆ ಪಿಎಂ ಕೇರ್ಸ್ ಫಂಡ್ ಟ್ರಸ್ಟ್ ನಿಂದ ರೂ. 201.58 ಕೋಟಿ
January 05th, 05:25 pm
ಪ್ರಧಾನಮಂತ್ರಿಗಳ ನಾಗರಿಕ ನೆರವು ಮತ್ತು ತುರ್ತು ಪರಿಸ್ಥಿತಿ ಪರಿಹಾರ (ಪಿಎಂ ಕೇರ್ಸ್) ಫಂಡ್ ಟ್ರಸ್ಟ್ ದೇಶದ ಸಾರ್ವಜನಿಕ ಆರೋಗ್ಯ ಸೌಲಭ್ಯಗಳಲ್ಲಿ ಹೆಚ್ಚುವರಿಯಾಗಿ 162 ಮೀಸಲಾದ ಪಿಎಸ್ಎ ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು 201.58 ಕೋಟಿ ರೂ.ಗಳನ್ನು ನಿಗದಿಪಡಿಸಿದೆ.