ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬ್ರೆಜಿಲ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ
February 21st, 12:30 pm
ಭಾರತ-ಬ್ರೆಜಿಲ್ ಸಂಬಂಧಗಳು ಅಧ್ಯಕ್ಷ ಲೂಲಾ ಅವರ ದೃಷ್ಟಿಕೋನ ಮತ್ತು ಸ್ಪೂರ್ತಿದಾಯಕ ನಾಯಕತ್ವದಿಂದ ದೀರ್ಘಕಾಲದಿಂದ ಪ್ರಯೋಜನ ಪಡೆದಿವೆ. ಕಳೆದ ಕೆಲವು ವರ್ಷಗಳಿಂದ, ನಾನು ಅವರನ್ನು ಹಲವಾರು ಸಂದರ್ಭಗಳಲ್ಲಿ ಭೇಟಿಯಾಗುವ ಸೌಭಾಗ್ಯವನ್ನು ಪಡೆದಿದ್ದೇನೆ. ಅಂತಹ ಪ್ರತಿಯೊಂದು ಸಂವಾದದಲ್ಲೂ, ಭಾರತದ ಬಗ್ಗೆ ಅವರ ಆತ್ಮೀಯ ಸ್ನೇಹ ಮತ್ತು ಶಾಶ್ವತ ನಂಬಿಕೆಯನ್ನು ನಾನು ವೈಯಕ್ತಿಕವಾಗಿ ಅನುಭವಿಸಿದ್ದೇನೆ.ನವದೆಹಲಿಯಲ್ಲಿ ನಡೆದ 2ನೇ ವಿಶ್ವ ಆರೋಗ್ಯ ಸಂಘಟನೆ(ಡಬ್ಲ್ಯು.ಹೆಚ್.ಒ)ಯ ಸಾಂಪ್ರದಾಯಿಕ ಔಷಧದ ಜಾಗತಿಕ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 19th, 08:11 pm
ವಿಶ್ವ ಆರೋಗ್ಯ ಸಂಘಟನೆ(ಡಬ್ಲ್ಯು.ಹೆಚ್.ಒ)ಯ ಮಹಾನಿರ್ದೇಶಕರಾದ ನಮ್ಮ ತುಳಸಿ ಭಾಯಿ ಡಾ. ಟೆಡ್ರೊಸ್, ಕೇಂದ್ರ ಆರೋಗ್ಯ ಸಚಿವರಾದ, ನನ್ನ ಸಹೋದ್ಯೋಗಿ ಜೆ. ಪಿ. ನಡ್ಡಾ ಜಿ, ಆಯುಷ್ ಖಾತೆ ರಾಜ್ಯ ಸಚಿವರಾದ ಪ್ರತಾಪ್‌ರಾವ್ ಜಾಧವ್ ಜಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಇತರೆ ದೇಶಗಳ ಸಚಿವರೆ, ವಿವಿಧ ರಾಷ್ಟ್ರಗಳ ರಾಯಭಾರಿಗಳೆ, ಎಲ್ಲಾ ಗಣ್ಯ ಪ್ರತಿನಿಧಿಗಳೆ, ಸಾಂಪ್ರದಾಯಿಕ ಔಷಧ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಗೌರವಾನ್ವಿತ ತಜ್ಞರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎರಡನೇ ಡಬ್ಲ್ಯು ಎಚ್ ಒ ಜಾಗತಿಕ ಸಾಂಪ್ರದಾಯಿಕ ವೈದ್ಯ ಪದ್ಧತಿ ಶೃಂಗಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು
December 19th, 07:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಎರಡನೇ ಡಬ್ಲ್ಯು ಎಚ್ ಒ ಜಾಗತಿಕ ಸಾಂಪ್ರದಾಯಿಕ ವೈದ್ಯ ಪದ್ಧತಿ ಶೃಂಗಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಕಳೆದ ಮೂರು ದಿನಗಳಲ್ಲಿ ಸಾಂಪ್ರದಾಯಿಕ ವೈದ್ಯಕೀಯ ಕ್ಷೇತ್ರದಲ್ಲಿ ವಿಶ್ವದಾದ್ಯಂತದ ತಜ್ಞರು ಗಂಭೀರ ಮತ್ತು ಅರ್ಥಪೂರ್ಣ ಚರ್ಚೆಗಳಲ್ಲಿ ತೊಡಗಿದ್ದಾರೆ ಎಂದು ಎತ್ತಿ ತೋರಿಸಿದರು. ಈ ಉದ್ದೇಶಕ್ಕಾಗಿ ಭಾರತವು ಒಂದು ಬಲಿಷ್ಠ ವೇದಿಕೆಯಾಗಿ ಸೇವೆ ಸಲ್ಲಿಸುತ್ತಿರುವುದಕ್ಕೆ ಅವರು ಸಂತೋಷ ವ್ಯಕ್ತಪಡಿಸಿದರು ಮತ್ತು ಈ ಪ್ರಕ್ರಿಯೆಯಲ್ಲಿ ಡಬ್ಲ್ಯು ಎಚ್ ಒ ದ ಸಕ್ರಿಯ ಪಾತ್ರವನ್ನು ಗಮನಿಸಿದರು. ಶೃಂಗಸಭೆಯ ಯಶಸ್ವಿ ಆಯೋಜನೆಗಾಗಿ ಅವರು ಡಬ್ಲ್ಯು ಎಚ್ ಒ , ಭಾರತ ಸರ್ಕಾರದ ಆಯುಷ್ ಸಚಿವಾಲಯ ಮತ್ತು ಉಪಸ್ಥಿತರಿದ್ದ ಎಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು.ಬಿಹಾರದ ಭಾಗಲ್ಪುರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 24th, 02:35 pm
ವೇದಿಕೆಯಲ್ಲಿರುವ ನಮ್ಮ ಪ್ರೀತಿಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಿ ಅವರೊಂದಿಗೆ ಗೌರವಾನ್ವಿತ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಜಿ ಇದ್ದಾರೆ, ಅವರು ಬಿಹಾರದ ಅಭಿವೃದ್ಧಿಗೆ ತಮ್ಮ ಸಮರ್ಪಣೆ ಮೂಲಕ ವ್ಯಾಪಕ ಮೆಚ್ಚುಗೆ ಪಡೆದಿದ್ದಾರೆ. ನನ್ನ ಗೌರವಾನ್ವಿತ ಸಂಪುಟ ಸಹೋದ್ಯೋಗಿಗಳಾದ ಶಿವರಾಜ್ ಸಿಂಗ್ ಚೌಹಾಣ್ ಜಿ, ಜಿತನ್ ರಾಮ್ ಮಾಂಝಿ ಜಿ, ಲಲ್ಲನ್ ಸಿಂಗ್ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ - ರಾಜ್ಯ ಸಚಿವರಾದ ಶ್ರೀ ರಾಮನಾಥ್ ಠಾಕೂರ್ ಜಿ, ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಜಿ, ವಿಜಯ್ ಸಿನ್ಹಾ ಜಿ, ರಾಜ್ಯದ ಇತರೆ ಸಚಿವರೆ, ಸಾರ್ವಜನಿಕ ಪ್ರತಿನಿಧಿಗಳೆ, ಗಣ್ಯರೆ ಮತ್ತು ಬಿಹಾರದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,ಪಿಎಂ ಕಿಸಾನ್ ನ 19ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಬಿಹಾರದ ಭಾಗಲ್ ಪುರದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
February 24th, 02:30 pm
ರೈತರ ಕಲ್ಯಾಣವನ್ನು ಖಾತ್ರಿಪಡಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಭಾಗಲ್ ಪುರದಲ್ಲಿ ಪಿಎಂ ಕಿಸಾನ್ ನ 19ನೇ ಕಂತನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ವರ್ಚುವಲ್ ಮೂಲಕ ಭಾಗವಹಿಸಿದ ಎಲ್ಲ ಗಣ್ಯರು ಮತ್ತು ಜನರನ್ನು ಶ್ರೀ ಮೋದಿ ಸ್ವಾಗತಿಸಿದರು. ಮಹಾಕುಂಭದ ಪವಿತ್ರ ಅವಧಿಯಲ್ಲಿ ಮಂದಾರಾಚಲದ ಭೂಮಿಯಲ್ಲಿ ಹೆಜ್ಜೆ ಹಾಕುವುದು ಒಂದು ದೊಡ್ಡ ಸೌಭಾಗ್ಯ ಎಂದು ಅವರು ಹೇಳಿದರು. ಈ ಸ್ಥಳವು ಆಧ್ಯಾತ್ಮಿಕತೆ, ಪರಂಪರೆ ಮತ್ತು ವಿಕ್ಷಿತ್ ಭಾರತದ ಸಾಮರ್ಥ್ಯವನ್ನು ಹೊಂದಿದೆ ಎಂದು ಅವರು ಹೇಳಿದರು. ಇದು ಹುತಾತ್ಮ ತಿಲ್ಕಾ ಮಾಂಝಿ ಅವರ ಭೂಮಿ ಮತ್ತು ಸಿಲ್ಕ್ ಸಿಟಿ ಎಂದು ಕೂಡಾ ಪ್ರಸಿದ್ಧವಾಗಿದೆ ಎಂದು ಶ್ರೀ ಮೋದಿ ಹೇಳಿದರು. ಬಾಬಾ ಅಜ್ಜೈಬಿನಾಥ್ ಅವರ ಪವಿತ್ರ ಭೂಮಿಯಲ್ಲಿ ಮುಂಬರುವ ಮಹಾ ಶಿವರಾತ್ರಿಗೆ ಸಿದ್ಧತೆಗಳು ನಡೆದಿವೆ ಎಂದು ಅವರು ಉಲ್ಲೇಖಿಸಿದರು. ಇಂತಹ ಪವಿತ್ರ ಸಮಯದಲ್ಲಿ ಪಿಎಂ ಕಿಸಾನ್ ನ 19 ನೇ ಕಂತನ್ನು ಬಿಡುಗಡೆ ಮಾಡುವ ಅದೃಷ್ಟ ನನ್ನದಾಗಿದೆ ಮತ್ತು ಸುಮಾರು 22,000 ಕೋಟಿ ರೂ.ಗಳನ್ನು ನೇರ ಲಾಭ/ನಗದು ವರ್ಗಾವಣೆಯ ಮೂಲಕ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಅವರು ಹೇಳಿದರು.ಮೂರು ಕೃತಕ ಬುದ್ಧಿಮತ್ತೆಯ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆಯನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ
October 15th, 10:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಆರೋಗ್ಯ, ಕೃಷಿ ಮತ್ತು ಸುಸ್ಥಿರ ನಗರಗಳ ಮೇಲೆ ಕೇಂದ್ರೀಕೃತವಾದ ಮೂರು ಕೃತಕ ಬುದ್ಧಿಮತ್ತೆಯ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆಯನ್ನು ಶ್ಲಾಘಿಸಿದ್ದಾರೆ.2ನೇ ʻಜಾಗತಿಕ ದಕ್ಷಿಣದ ಧ್ವನಿʼ (ವಾಯ್ಸ್ ಆಫ್ ಗ್ಲೋಬಲ್ ಸೌತ್) ಶೃಂಗಸಭೆ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಉದ್ಘಾಟನಾ ಭಾಷಣದ ಕನ್ನಡ ಅನುವಾದ
November 17th, 04:03 pm
140 ಕೋಟಿ ಭಾರತೀಯರ ಪರವಾಗಿ, 2ನೇ ʻಜಾಗತಿಕ ದಕ್ಷಿಣದ ಧ್ವನಿʼ(ವಾಯ್ಸ್ ಆಫ್ ಗ್ಲೋಬಲ್ ಸೌತ್) ಶೃಂಗಸಭೆಯ ಉದ್ಘಾಟನಾ ಅಧಿವೇಶನಕ್ಕೆ ನಿಮ್ಮೆಲ್ಲರನ್ನೂ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ʻಜಾಗತಿಕ ದಕ್ಷಿಣದ ಧ್ವನಿʼಯು 21ನೇ ಶತಮಾನದ ಬದಲಾಗುತ್ತಿರುವ ವಿಶ್ವದ ಅತ್ಯಂತ ವಿಶಿಷ್ಟ ವೇದಿಕೆಯಾಗಿದೆ. ಭೌಗೋಳಿಕವಾಗಿ, ಜಾಗತಿಕ ದಕ್ಷಿಣವು ಯಾವಾಗಲೂ ಅಸ್ತಿತ್ವದಲ್ಲಿದೆ. ಆದರೆ ಇದು ಮೊದಲ ಬಾರಿಗೆ ಈ ರೀತಿಯ ಧ್ವನಿಯನ್ನು ಪಡೆಯುತ್ತಿದೆ. ಮತ್ತು ಇದು ನಮ್ಮೆಲ್ಲರ ಜಂಟಿ ಪ್ರಯತ್ನದಿಂದ ಸಾಧ್ಯವಾಗಿದೆ. ನಾವು 100ಕ್ಕೂ ಹೆಚ್ಚು ವಿಭಿನ್ನ ದೇಶಗಳು, ಆದರೆ ನಾವು ಒಂದೇ ರೀತಿಯ ಆಸಕ್ತಿಗಳು ಮತ್ತು ಸಮಾನ ಆದ್ಯತೆಗಳನ್ನು ಹೊಂದಿದ್ದೇವೆ.