ಯುರೋಪ್ ದುಂಡು ಮೇಜಿನ ಕೈಗಾರಿಕಾ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 18th, 05:00 am
ಮೊದಲನೆಯದಾಗಿ, ಈ ದುಂಡು ಮೇಜಿನ ಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಸ್ವೀಡನ್ ಪ್ರಧಾನಮಂತ್ರಿ ಉಲ್ಫ್ ಕ್ರಿಸ್ಟರ್ಸನ್ ಅವರಿಗೆ ನಾನು ಹೃತ್ಪೂರ್ವಕವಾಗಿ ಧನ್ಯವಾದ ಹೇಳುತ್ತೇನೆ. ಈ ಸಭೆ ಗೋಥೆನ್‌ಬರ್ಗ್‌ನಲ್ಲಿ ನಡೆಯುತ್ತಿರುವುದು ನನಗೆ ಸಂತೋಷ ತಂದಿದೆ. ಇದು ನಾವೀನ್ಯತೆಗೆ ಹೆಸರುವಾಸಿಯಾಗಿದೆ ಮಾತ್ರವಲ್ಲದೆ, ಯುರೋಪಿನ ಉತ್ಪಾದನಾ ಮನೋಭಾವದ ಚೈತನ್ಯಶೀಲ ಸಂಕೇತವಾಗಿಯೂ ನಿಂತಿದೆ.ಯೂರೋಪ್ ದುಂಡು ಮೇಜಿನ ಕೈಗಾರಿಕಾ ಸಭೆ (ಇಆರ್‌ಟಿ) ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 17th, 12:12 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026 ಮೇ 17ರಂದು ಗೋಥೆನ್‌ಬರ್ಗ್‌ನಲ್ಲಿ ನಡೆದ ಯೂರೋಪ್ ದುಂಡು ಮೇಜಿನ ಕೈಗಾರಿಕಾ ಸಭೆ(ಇಆರ್‌ಟಿ)ಯನ್ನು ಉದ್ದೇಶಿಸಿ ಮಾತನಾಡಿದರು. ಸ್ವೀಡನ್ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಉಲ್ಫ್ ಕ್ರಿಸ್ಟರ್ಸನ್, ಐರೋಪ್ಯ ಒಕ್ಕೂಟ ಆಯೋಗದ ಅಧ್ಯಕ್ಷರಾದ ಶ್ರೀಮತಿ ಉರ್ಸುಲಾ ವಾನ್ ಡೆರ್ ಲೇಯೆನ್, ಯೂರೋಪಿನ ಹಿರಿಯ ಉದ್ಯಮ ಮುಖಂಡರು ಮತ್ತು ಪ್ರಮುಖ ಯೂರೋಪ್ ಮತ್ತು ಭಾರತೀಯ ಕಂಪನಿಗಳ ಪ್ರತಿನಿಧಿಗಳು ವೋಲ್ವೊ ಸಮೂಹ ಆಯೋಜಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದರು.ನೆದರ್‌ಲ್ಯಾಂಡ್ಸ್‌ನಲ್ಲಿ ನಡೆದ ಸಿಇಒಗಳ ದುಂಡುಮೇಜಿನ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
May 16th, 10:00 pm
ವಿಶ್ವದ ಕೆಲವು ಅತ್ಯಂತ ನವೀನ ಕಂಪನಿಗಳ ನಾಯಕರ ಜತೆ ಇಂದು ನಾನು ಇಲ್ಲಿರುವುದು ನನಗೆ ತುಂಬಾ ಸಂತೋಷ ತಂದಿದೆ. ಇಂದು 300ಕ್ಕೂ ಹೆಚ್ಚು ಡಚ್ ಕಂಪನಿಗಳು ಭಾರತದ ಯಶೋಗಾಥೆಯ ಭಾಗವಾಗಿವೆ. ಭಾರತದ ಮೇಲಿನ ನಿಮ್ಮ ದೃಷ್ಟಿಕೋನ ಮತ್ತು ವಿಶ್ವಾಸದಿಂದಾಗಿ, ಯುರೋಪ್ ಪೈಕಿ ನೆದರ್‌ಲ್ಯಾಂಡ್ಸ್ ಭಾರತದ ಅತಿದೊಡ್ಡ ಹೂಡಿಕೆದಾರರಾಗಿ ಮತ್ತು 2ನೇ ಅತಿದೊಡ್ಡ ವ್ಯಾಪಾರ ಪಾಲುದಾರರಾಗಿ ಮಾರ್ಪಟ್ಟಿದೆ.ಸಿಇಒ ದುಂಡುಮೇಜಿನ ಸಭೆ, ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಜವಾಬ್ದಾರಿಯುತ ಕೃತಕ ಬುದ್ಧಿಮತ್ತೆಗೆ ಜಾಗತಿಕ ಬದ್ಧತೆಯನ್ನು ಬಿಂಬಿಸಿದ ಪ್ರಧಾನಮಂತ್ರಿ
February 19th, 10:05 pm
ಕೃತಕ ಬುದ್ಧಿಮತ್ತೆ, ತಂತ್ರಜ್ಞಾನ ಮತ್ತು ನಾವೀನ್ಯತೆಯ ಪ್ರಪಂಚದ ಪ್ರಮುಖ ಮಧ್ಯಸ್ಥಗಾರರನ್ನು ಒಟ್ಟುಗೂಡಿಸಿದ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಸಿಇಒ ದುಂಡುಮೇಜಿನ ಸಭೆಯ ಫಲಿತಾಂಶಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದರು.