ಪ್ರಧಾನಮಂತ್ರಿ ಅವರು ಯುನೈಟೆಡ್ ಕಿಂಗ್‌ಡಮ್‌ನ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಆಂಡಿ ಬರ್ನಹ್ಯಾಮ್ ಅವರನ್ನು ಅಭಿನಂದಿಸಿದ್ದಾರೆ

July 21st, 08:09 am

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯುನೈಟೆಡ್ ಕಿಂಗ್‌ಡಮ್‌ನ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀ ಆಂಡಿ ಬರ್ನ್‌ಹ್ಯಾಮ್ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಭಾರತ-ಯು.ಕೆ. ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ ಮತ್ತು ಸಾಮಾಜಿಕ ಭದ್ರತೆ ಒಪ್ಪಂದದ ಕುರಿತ ಲೇಖನವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

July 15th, 12:58 pm

ಭಾರತ-ಯು.ಕೆ. ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ (ಸಿ.ಇ.ಟಿ.ಎ.) ಮತ್ತು ಸಾಮಾಜಿಕ ಭದ್ರತೆ ಒಪ್ಪಂದದ ಕುರಿತು ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಬರೆದ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಂಚಿಕೊಂಡಿದ್ದಾರೆ. ಇದು ಭಾರತ-ಯು.ಕೆ. ಪಾಲುದಾರಿಕೆಯಲ್ಲಿ ಮಹತ್ವದ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ. ಈ ಎರಡು ಒಪ್ಪಂದಗಳು ಭಾರತ ಮತ್ತು ಯುನೈಟೆಡ್ ಕಿಂಗ್ ಡಮ್ ನಡುವಿನ ಆರ್ಥಿಕ ಸಂಪರ್ಕಗಳನ್ನು ಮತ್ತಷ್ಟು ಗಾಢವಾಗಿಸುತ್ತದೆ ಮತ್ತು ಎರಡೂ ದೇಶಗಳ ಹಂಚಿಕೆಯ ಮಹತ್ವಾಕಾಂಕ್ಷೆಯನ್ನು ಅವರ ಜನರಿಗೆ ಸ್ಪಷ್ಟವಾದ ಅವಕಾಶಗಳಾಗಿ ಪರಿವರ್ತಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.