'ಮನ್ ಕಿ ಬಾತ್' ಜನರ ಸಾಮೂಹಿಕ ಪ್ರಯತ್ನಗಳನ್ನು ಸಾರ್ವಜನಿಕರಿಗೆ ತಿಳಿಸಲು ಅತ್ಯುತ್ತಮ ವೇದಿಕೆಯಾಗಿದೆ: ಪ್ರಧಾನಿ ಮೋದಿ
November 30th, 11:30 am
ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನ ದಿನಾಚರಣೆ, ವಂದೇ ಮಾತರಂನ 150 ನೇ ವಾರ್ಷಿಕೋತ್ಸವ, ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ, ಐಎನ್ಎಸ್ 'ಮಹೆ' ಸೇರ್ಪಡೆ ಮತ್ತು ಕುರುಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಗೀತಾ ಮಹೋತ್ಸವ ಸೇರಿದಂತೆ ನವೆಂಬರ್ ತಿಂಗಳ ಪ್ರಮುಖ ಘಟನೆಗಳನ್ನು ಹೈಲೈಟ್ ಮಾಡಿದರು. ದಾಖಲೆಯ ಆಹಾರ ಧಾನ್ಯ ಮತ್ತು ಜೇನುತುಪ್ಪ ಉತ್ಪಾದನೆ, ಭಾರತದ ಕ್ರೀಡಾ ಯಶಸ್ಸುಗಳು, ವಸ್ತು ಸಂಗ್ರಹಾಲಯಗಳು ಮತ್ತು ನೈಸರ್ಗಿಕ ಕೃಷಿಯಂತಹ ಹಲವಾರು ಪ್ರಮುಖ ವಿಷಯಗಳನ್ನು ಸಹ ಅವರು ಸ್ಪರ್ಶಿಸಿದರು. ಎಲ್ಲರೂ ಕಾಶಿ-ತಮಿಳು ಸಂಗಮದ ಭಾಗವಾಗಬೇಕೆಂದು ಪ್ರಧಾನಿ ಒತ್ತಾಯಿಸಿದರು.ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಮಂತ್ರಿ ಸಂವಾದ
August 19th, 09:43 am
ಹಾಗಾದರೆ, ಆಸನ ವ್ಯವಸ್ಥೆಗೆ ಸಂಬಂಧಿಸಿದಂತೆ, ಅದು ಹಾಗೆಯೇ ಉಳಿದಿದೆಯೇ?ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ
August 19th, 09:42 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ನಿನ್ನೆ ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ ಸಂವಾದ ನಡೆಸಿದರು. ಬಾಹ್ಯಾಕಾಶ ಪಯಣದ ಪರಿವರ್ತನಾತ್ಮಕ ಅನುಭವಗಳ ಬಗ್ಗೆ ಬೆಳಕು ಚೆಲ್ಲಿದ, ಪ್ರಧಾನಮಂತ್ರಿ ಅವರು, ಇಂತಹ ಮಹತ್ವದ ಪ್ರಯಾಣವನ್ನು ಕೈಗೊಂಡ ನಂತರ, ಒಬ್ಬರ ಬದಲಾವಣೆಯನ್ನು ಅನುಭವಿಸಬೇಕು ಎಂದು ಹೇಳಿದರು ಮತ್ತು ಗಗನಯಾತ್ರಿಗಳು ಈ ಪರಿವರ್ತನೆಯನ್ನು ಹೇಗೆ ಗ್ರಹಿಸುತ್ತಾರೆ ಮತ್ತು ಅನುಭವಿಸುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದರು. ಪ್ರಧಾನಮಂತ್ರಿ ಅವರ ಮಾತಿಗೆ ಪ್ರತಿಕ್ರಿಯಿಸಿದ ಶುಭಾಂಶು ಶುಕ್ಲಾ, ಬಾಹ್ಯಾಕಾಶದಲ್ಲಿನ ಪರಿಸರವು ಅತ್ಯಂತ ವಿಭಿನ್ನವಾಗಿದೆ, ಗುರುತ್ವಾಕರ್ಷಣೆಯ ಅನುಪಸ್ಥಿತಿಯು ಪ್ರಮುಖ ಅಂಶವಾಗಿದೆ ಎಂದು ಹೇಳಿದರು.ಜಾಗತಿಕ ಬಾಹ್ಯಾಕಾಶ ಪರಿಶೋಧನೆ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸ್ ಭಾಷಣ
May 07th, 12:00 pm
ಗೌರವಾನ್ವಿತ ಪ್ರತಿನಿಧಿಗಳೆ, ಗೌರವಾನ್ವಿತ ವಿಜ್ಞಾನಿಗಳೆ, ಅನುಶೋಧಕರೆ, ಗಗನಯಾತ್ರಿಗಳೆ ಮತ್ತು ವಿಶ್ವದೆಲ್ಲೆಡೆಯಿಂದ ಆಗಮಿಸಿರುವ ಸ್ನೇಹಿತರೆ,ಬಾಹ್ಯಾಕಾಶ ಅನ್ವೇಷಣೆ ಕುರಿತ ಜಾಗತಿಕ ಸಮ್ಮೇಳನ (ಜಿಎಲ್ಇಎಕ್ಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
May 07th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಾಹ್ಯಾಕಾಶ ಅನ್ವೇಷಣೆ ಕುರಿತ ಜಾಗತಿಕ ಸಮ್ಮೇಳನ (ಜಿಎಲ್ಇಎಕ್ಸ್) 2025ನ್ನು ಉದ್ದೇಶಿಸಿ ಭಾಷಣ ಮಾಡಿದರು. ವಿಶ್ವದಾದ್ಯಂತದ ಗೌರವಾನ್ವಿತ ಪ್ರತಿನಿಧಿಗಳು, ವಿಜ್ಞಾನಿಗಳು ಮತ್ತು ಗಗನಯಾತ್ರಿಗಳನ್ನು ಸ್ವಾಗತಿಸಿದ ಅವರು, ಜಿಎಲ್ಇಎಕ್ಸ್ 2025ರಲ್ಲಿ ಭಾರತದ ಗಮನಾರ್ಹ ಬಾಹ್ಯಾಕಾಶ ಪ್ರಯಾಣವನ್ನು ಪ್ರಸ್ತಾಪಿಸಿದ ಅವರು ಬಾಹ್ಯಾಕಾಶವು ಕೇವಲ ಒಂದು ಗಮ್ಯಸ್ಥಾನವಲ್ಲ ಜೊತೆಗೆ ಅದು ಕುತೂಹಲ, ಧೈರ್ಯ ಮತ್ತು ಸಾಮೂಹಿಕ ಪ್ರಗತಿಯ ಘೋಷಣೆಯಾಗಿದೆ ಎಂದು ಹೇಳಿದರು. 1963ರಲ್ಲಿ ಸಣ್ಣ ರಾಕೆಟ್ ಉಡಾವಣೆಯಿಂದ ಹಿಡಿದು ಚಂದ್ರನ ದಕ್ಷಿಣ ಧ್ರುವದ ಬಳಿ ಇಳಿದ ಮೊದಲ ರಾಷ್ಟ್ರವಾಗುವವರೆಗೆ ಭಾರತದ ಬಾಹ್ಯಾಕಾಶ ಸಾಧನೆಗಳು ಈ ಸ್ಫೂರ್ತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಅವರು ಒತ್ತಿ ಹೇಳಿದರು. ಭಾರತೀಯ ರಾಕೆಟ್ ಗಳು ಪೇಲೋಡ್ ಗಳಿಗಿಂತ (ಸಾಮರ್ಥ್ಯಕ್ಕಿಂತ) ಹೆಚ್ಚಿನದನ್ನು ಸಾಗಿಸುತ್ತವೆ - ಅವು 1.4 ಬಿಲಿಯನ್ ಭಾರತೀಯರ ಕನಸುಗಳನ್ನು ಹೊತ್ತೊಯ್ಯುತ್ತವೆ ಎಂದು ಅವರು ಹೇಳಿದರು, ಭಾರತದ ಬಾಹ್ಯಾಕಾಶ ಪ್ರಗತಿಗಳು ಗಮನಾರ್ಹ ವೈಜ್ಞಾನಿಕ ಮೈಲಿಗಲ್ಲುಗಳಾಗಿವೆ ಮತ್ತು ಮಾನವ ಚೈತನ್ಯವು ಗುರುತ್ವಾಕರ್ಷಣೆಯನ್ನು ಮೀರಬಲ್ಲದು ಎಂಬುದಕ್ಕೆ ಪುರಾವೆಯಾಗಿದೆ ಎಂದು ಹೇಳಿದರು. 2014 ರಲ್ಲಿ ಮೊದಲ ಪ್ರಯತ್ನದಲ್ಲೇ ಮಂಗಳ ಗ್ರಹವನ್ನು ತಲುಪಿದ ಭಾರತದ ಐತಿಹಾಸಿಕ ಸಾಧನೆಯನ್ನು ಅವರು ಸ್ಮರಿಸಿದರು. ಚಂದ್ರಯಾನ -1 ಚಂದ್ರನ ಮೇಲ್ಮೈಯಲ್ಲಿ ನೀರನ್ನು ಕಂಡುಹಿಡಿಯಲು ಸಹಾಯ ಮಾಡಿತು, ಚಂದ್ರಯಾನ -2 ಚಂದ್ರನ ಮೇಲ್ಮೈಯ ಅತಿ ಹೆಚ್ಚು ರೆಸಲ್ಯೂಶನ್ (ಸ್ಪಷ್ಟ) ಚಿತ್ರಗಳನ್ನು ಒದಗಿಸಿತು ಮತ್ತು ಚಂದ್ರಯಾನ -3 ಚಂದ್ರನ ದಕ್ಷಿಣ ಧ್ರುವದ ತಿಳುವಳಿಕೆಯನ್ನು ಹೆಚ್ಚಿಸಿತು ಎಂದು ಅವರು ಒತ್ತಿ ಹೇಳಿದರು. ಭಾರತವು ದಾಖಲೆಯ ಸಮಯದಲ್ಲಿ ಕ್ರಯೋಜೆನಿಕ್ ಎಂಜಿನ್ ಗಳನ್ನು ಅಭಿವೃದ್ಧಿಪಡಿಸಿದೆ, ಒಂದೇ ಕಾರ್ಯಾಚರಣೆಯಲ್ಲಿ 100 ಉಪಗ್ರಹಗಳನ್ನು ಉಡಾವಣೆ ಮಾಡಿದೆ ಮತ್ತು ಭಾರತೀಯ ಉಡಾವಣಾ ವಾಹನಗಳನ್ನು ಬಳಸಿಕೊಂಡು 34 ದೇಶಗಳಿಗೆ 400 ಕ್ಕೂ ಹೆಚ್ಚು ಉಪಗ್ರಹಗಳನ್ನು ಯಶಸ್ವಿಯಾಗಿ ನಿಯೋಜಿಸಿದೆ ಎಂಬುದರತ್ತ ಅವರು ಗಮನಸೆಳೆದರು. ಭಾರತದ ಇತ್ತೀಚಿನ ಸಾಧನೆಗಳತ್ತ ಬೆಟ್ಟು ಮಾಡಿದ ಅವರು ಈ ವರ್ಷ ಎರಡು ಉಪಗ್ರಹಗಳನ್ನು ಬಾಹ್ಯಾಕಾಶದಲ್ಲಿ ಸ್ಥಾಪಿಸಿರುವುದು ಬಾಹ್ಯಾಕಾಶ ಅನ್ವೇಷನೆಯತ್ತ ಪ್ರಮುಖ ಹೆಜ್ಜೆಯಾಗಿದೆ ಎಂದರು.ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
April 27th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ನಿಮ್ಮೊಂದಿಗೆ ನಾನು 'ಮನದ ಮಾತು' ಆಡುತ್ತಿರುವಾಗ, ನನ್ನ ಹೃದಯ ನೋವಿನಿಂದ ಭಾರವಾಗಿದೆ. ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ಘಟನೆ ದೇಶದ ಪ್ರತಿಯೊಬ್ಬ ನಾಗರಿಕನನ್ನು ದುಃಖದ ಮಡುವಿನಲ್ಲಿ ಮುಳುಗಿಸಿದೆ. ಸಂತ್ರಸ್ತ ಕುಟುಂಬಗಳ ಬಗ್ಗೆ ಪ್ರತಿ ಭಾರತೀಯನಲ್ಲೂ ಅಪಾರ ಸಹಾನುಭೂತಿಯಿದೆ. ರಾಜ್ಯ, ಭಾಷೆಯನ್ನು ಮೀರಿ ಎಲ್ಲ ಜನರು ಈ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವನ್ನು ಸ್ವತಃ ಅನುಭವಿಸುತ್ತಿದ್ದಾರೆ. ಭಯೋತ್ಪಾದಕ ದಾಳಿಯ ಚಿತ್ರಗಳನ್ನು ನೋಡಿದ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ನನಗೆ ಅನಿಸುತ್ತದೆ. ಪಹಲ್ಗಾಮ್‌ನಲ್ಲಿ ನಡೆದ ಈ ದಾಳಿಯು ಭಯೋತ್ಪಾದನೆಗೆ ಉತ್ತೇಜನ ನೀಡುವವರ ಹತಾಶೆಯನ್ನು ತೋರಿಸುತ್ತದೆ ಮತ್ತು ಅವರ ಹೇಡಿತನವನ್ನು ಪ್ರದರ್ಶಿಸುತ್ತದೆ. ಶಾಲಾ ಕಾಲೇಜುಗಳಲ್ಲಿ ಹುರುಪು ತುಂಬಿರುವಂತಹ ಕಾಲದಲ್ಲಿ, ನಿರ್ಮಾಣ ಕಾರ್ಯಗಳು ಅಭೂತಪೂರ್ವ ವೇಗವನ್ನು ಪಡೆದುಕೊಂಡಿರುವಾಗ, ಕಾಶ್ಮೀರದಲ್ಲಿ ಶಾಂತಿ ಮರುಕಳಿಸುತ್ತಿರುವ ಇಂತಹ ಸಮಯದಲ್ಲಿ, ಪ್ರಜಾಪ್ರಭುತ್ವ ಬಲಿಷ್ಠಗೊಳ್ಳುತ್ತಿರುವಾಗ, ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆಯ ಏರಿಕೆ ಕಂಡುಬರುತ್ತಿರುವಾಗ, ಜನರ ಆದಾಯ ಹೆಚ್ಚುತ್ತಿರುವಾಗ, ಯುವಕರಿಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿದ್ದಾಗ, ದೇಶದ ಶತ್ರುಗಳು, ಜಮ್ಮು ಮತ್ತು ಕಾಶ್ಮೀರದ ವೈರಿಗಳಿಗೆ ಇದನ್ನು ಸಹಿಸಲಾಗಲಿಲ್ಲ. ಭಯೋತ್ಪಾದಕರು ಮತ್ತಷ್ಟು ಭಯೋತ್ಪಾದನೆ ಹೆಚ್ಚಿಸಲು ಬಯಸುತ್ತಿದ್ದಾರೆ. ಕಾಶ್ಮೀರವನ್ನು ಮತ್ತೆ ನಾಶಮಾಡಲು ಹುನ್ನಾರದಿಂದ ಇಷ್ಟು ದೊಡ್ಡ ಘಟನೆ ನಡೆಯುವಂತೆ ಪಿತೂರಿ ನಡೆಸಿದರು. ದೇಶದ ಏಕತೆ, 140 ಕೋಟಿ ಭಾರತೀಯರ ಒಗ್ಗಟ್ಟು, ಭಯೋತ್ಪಾದನೆಯ ವಿರುದ್ಧದ ಈ ಯುದ್ಧದಲ್ಲಿ ನಮ್ಮ ದೊಡ್ಡ ಶಕ್ತಿಯಾಗಿದೆ. ಈ ಒಗ್ಗಟ್ಟೆ ಭಯೋತ್ಪಾದನೆಯ ವಿರುದ್ಧದ ನಮ್ಮ ಹೋರಾಟದಲ್ಲಿ ನಿರ್ಣಾಯಕ ಪಾತ್ರವಾಹಿಸಲಿದೆ. ದೇಶ ಎದುರಿಸುತ್ತಿರುವ ಈ ಸವಾಲನ್ನು ಎದುರಿಸಲು ನಾವು ನಮ್ಮ ಸಂಕಲ್ಪವನ್ನು ಬಲಪಡಿಸಿಕೊಳ್ಳಬೇಕು. ಒಂದು ರಾಷ್ಟ್ರ ರೂಪದಲ್ಲಿ ಬಲವಾದ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು. ಈ ಭಯೋತ್ಪಾದಕ ದಾಳಿಯ ನಂತರ ಸಂಪೂರ್ಣ ದೇಶ ಒಕ್ಕೊರಲಿನಿಂದ ಧ್ವನಿಯೆತ್ತಿರುವುದನ್ನು ಇಂದು ಜಗತ್ತೇ ನೋಡುತ್ತಿದೆ.Armed forces have taken India’s pride to new heights: PM Modi in Lepcha
November 12th, 03:00 pm
PM Modi addressed brave jawans at Lepcha, Himachal Pradesh on the occasion of Diwali. Addressing the jawans he said, Country is grateful and indebted to you for this. That is why one ‘Diya’ is lit for your safety in every household”, he said. “The place where jawans are posted is not less than any temple for me. Wherever you are, my festival is there. This is going on for perhaps 30-35 years”, he added.ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ವೀರ ಯೋಧರೊಂದಿಗೆ ದೀಪಾವಳಿಯನ್ನು ಆಚರಿಸಿದ ಪ್ರಧಾನಮಂತ್ರಿ
November 12th, 02:31 pm
ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ದೀಪಾವಳಿ ಹಬ್ಬ ಮತ್ತು ಯೋಧರ ಧೈರ್ಯದ ಪ್ರತಿಧ್ವನಿಯ ಸಮ್ಮಿಲನ ದೇಶದ ಪ್ರತಿಯೊಬ್ಬ ಪ್ರಜೆಗೂ ಜ್ಞಾನೋದಯದ ಕ್ಷಣವಾಗಿದೆ ಎಂದು ಅವರು ಹೇಳಿದರು. ಈಗ ಮೊದಲ ಗ್ರಾಮವೆಂದು ಪರಿಗಣಿಸಲ್ಪಟ್ಟಿರುವ ದೇಶದ ಕೊನೆಯ ಗ್ರಾಮದಿಂದ ಭಾರತದ ಗಡಿ ಪ್ರದೇಶಗಳ ಯೋಧರೊಂದಿಗೆ ಅವರು ದೀಪಾವಳಿಯ ಶುಭಾಶಯಗಳನ್ನು ತಿಳಿಸಿದರು.Chandrayaan Mission and PM Modi’s Penchant Towards Space Tech
September 03rd, 02:25 pm
Prime Minister Narendra Modi always had a keen interest in technology and an inclination towards space-tech long before he became the PM. In 2006, when Shri Modi was the Chief Minister of Gujarat, he accompanied the then President APJ Abdul Kalam to the Space Applications Centre (SAC), ISRO, Ahmedabad.ಬೆಂಗಳೂರಿನ ಇಸ್ರೋ ಕೇಂದ್ರದಿಂದ ಮರಳಿದ ನಂತರ ದೆಹಲಿಯಲ್ಲಿ ನೆರೆದಿದ್ದವರನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಆಂಗ್ಲ ಅನುವಾದ
August 26th, 01:18 pm
ಇಂದು ಬೆಳಿಗ್ಗೆ ನಾವು ಬೆಂಗಳೂರಿಗೆ ಭೇಟಿ ನೀಡಿದ್ದೆ. ನಾನು ಬೆಳಿಗ್ಗೆಯೇ ಇಲ್ಲಿಗೆ ಆಗಮಿಸಿದೆ ಮತ್ತು ದೇಶಕ್ಕಾಗಿ ಅದ್ಭುತ ಸಾದನೆಯನ್ನು ಮಾಡಿದ ವಿಜ್ಞಾನಿಗಳನ್ನು ಭೇಟಿ ಮಾಡಲು ನಿರ್ಧರಿಸಿದೆ. ಹಾಗಾಗಿ ನಾನು ಇಂದು ಬೆಳಗಿನ ಜಾವವೇ ಬೆಂಗಳೂರಿಗೆ ಹೋಗಿದ್ದೆ. ಆದರೆ ಸುರ್ಯೋದಯಕ್ಕೂ ಮುನ್ನವೇ ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡು ಜನರು ಚಂದ್ರಯಾನದ ಯಶಸ್ಸುನ್ನು ಸಂಭ್ರಮಿಸಿದ ರೀತಿ ನಂಬಲಾಗದಷ್ಟು ಸ್ಪೂರ್ತಿದಾಯಕವಾಗಿತ್ತು. ಮತ್ತು ಈಗ ಸೂರ್ಯನು ತೀವ್ರವಾದ ಬಿಸಿಲಿನಲ್ಲಿ ಸುಡುತ್ತಿದ್ದಾನೆ, ಅದು ಚರ್ಮವನ್ನೂ ಸಹ ಸುಡುತ್ತದೆ.ಇಲ್ಲಿಗೆ ಬಂದಿರುವ ನಿಮ್ಮೊಂದಿಗೆ ಈ ತೀವ್ರವಾದ ಬಿಸಿಲಿನಲ್ಲಿ ಚಂದ್ರಯಾನದ ಯಶಸ್ಸಿನ ಸಂತೋಷದಲ್ಲಿ ಪಾಲ್ಗೊಳ್ಳಲು ಮತ್ತು ಆಚರಣೆಯ ಆನಂದ ಹಂಚಿಕೊಳ್ಳುವ ಸೌಭಾಗ್ಯ ನನಗೆ ದೊರೆತಿದೆ. ಅದಕ್ಕಾಗಿ ನಾನು ಎಲ್ಲರನ್ನೂ ಅಭಿನಂದಿಸುತ್ತೇನೆ.ದೆಹಲಿಗೆ ಆಗಮಿಸಿದ ಪ್ರಧಾನಮಂತ್ರಿಯವರಿಗೆ ನಾಗರಿಕರಿಂದ ಭವ್ಯ ಸ್ವಾಗತ
August 26th, 12:33 pm
ದೆಹಲಿಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ʻಚಂದ್ರಯಾನ -3ʼ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿದ ಹಿನ್ನೆಲೆಯಲ್ಲಿ ಇಸ್ರೋ ತಂಡದೊಂದಿಗೆ ಸಂವಹನ ನಡೆಸಿದ ನಂತರ ಪ್ರಧಾನಿ ಮೋದಿ ಇಂದು ಬೆಂಗಳೂರಿನಿಂದ ದೆಹಲಿಗೆ ಬಂದಿಳಿದರು. ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್‌ನ 4 ದಿನಗಳ ಪ್ರವಾಸದ ನಂತರ ಪ್ರಧಾನಿ ಮೋದಿ ನೇರವಾಗಿ ಬೆಂಗಳೂರಿಗೆ ತೆರಳಿದ್ದರು. ಶ್ರೀ ಜೆ.ಪಿ. ನಡ್ಡಾ ಅವರು ಪ್ರಧಾನಮಂತ್ರಿಯವರನ್ನು ಸ್ವಾಗತಿಸಿದರು. ಪ್ರಧಾನಿಯವರ ವಿದೇಶಿ ಭೇಟಿಯ ಯಶಸ್ಸಿಗಾಗಿ ಹಾಗೂ ಭಾರತೀಯ ವಿಜ್ಞಾನಿಗಳ ಮಹತ್ವದ ಸಾಧನೆಗಾಗಿ ಪ್ರಧಾನ ಮಂತ್ರಿಗಳನ್ನು ನಡ್ಡಾ ಅವರು ಸನ್ಮಾನಿಸಿದರು.ಚಂದ್ರಯಾನ -3 ಮಿಷನ್ ಯಶಸ್ಸಿನ ಕುರಿತು ಇಸ್ರೊ ತಂಡವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
August 26th, 08:15 am
ಇಂದು, ನಿಮ್ಮೆಲ್ಲರ ನಡುವೆ ನಾನು ಹೊಸ ರೀತಿಯ ಸಂತೋಷವನ್ನು ಅನುಭವಿಸುತ್ತಿದ್ದೇನೆ. ಬಹುಶಃ ಬಹಳ ಅಪರೂಪದ ಸಂದರ್ಭಗಳಲ್ಲಿ ಒಬ್ಬರು ಅಂತಹ ಸಂತೋಷವನ್ನು ಅನುಭವಿಸುತ್ತಾರೆ. ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಒಬ್ಬರ ಮನಸ್ಸು ಸಂಪೂರ್ಣವಾಗಿ ಸಂತೋಷದಿಂದ ತುಂಬಿದಾಗ ಮತ್ತು ಅದರ ಪರಿಣಾಮವಾಗಿ ಅವನು ಪ್ರಕ್ಷುಬ್ಧನಾಗುವಾಗ ಇಂತಹ ಘಟನೆಗಳು ಸಂಭವಿಸುತ್ತವೆ. ಈ ಬಾರಿ ನನಗೂ ಅದೇ ರೀತಿಯದ್ದೊಂದು ಸಂಭವಿಸಿತು, ಮತ್ತು ನಾನು ತುಂಬಾ ಪ್ರಕ್ಷುಬ್ಧನಾಗಿದ್ದೆ. ನಾನು ದಕ್ಷಿಣ ಆಫ್ರಿಕಾದಲ್ಲಿದ್ದೆ, ಮತ್ತು ನಂತರ ಗ್ರೀಸ್ ನಲ್ಲಿ ಒಂದು ಕಾರ್ಯಕ್ರಮವಿತ್ತು. ಆದ್ದರಿಂದ ನಾನು ಅಲ್ಲಿರಬೇಕಾಗಿತ್ತು ಆದರೆ ನನ್ನ ಮನಸ್ಸು ಸಂಪೂರ್ಣವಾಗಿ ನಿಮ್ಮ ಮೇಲೆ ಕೇಂದ್ರೀಕೃತವಾಗಿತ್ತು. ಆದರೆ ಕೆಲವೊಮ್ಮೆ ನಾನು ನಿಮ್ಮೆಲ್ಲರಿಗೂ ಅನ್ಯಾಯ ಮಾಡುತ್ತಿದ್ದೇನೆ ಎಂದು ನನಗೆ ಅನಿಸುತ್ತದೆ. ನನ್ನ ಚಡಪಡಿಕೆ ನಿಮಗೆ ಸಮಸ್ಯೆಯನ್ನು ಸೃಷ್ಟಿಸುತ್ತದೆ. ನೀವು ಮುಂಜಾನೆ ಇಲ್ಲಿಗೆ ಬರಬೇಕಾಯಿತು ಆದರೆ ನಾನು ಬಂದು ನಿಮಗೆ ನಮಸ್ಕರಿಸಲು ಬಯಸುತ್ತೇನೆ. ಇದು ನಿಮಗೆ ಅನಾನುಕೂಲವಾಗಿರಬೇಕು, ಆದರೆ ನಾನು ಭಾರತಕ್ಕೆ ಬಂದಿಳಿದ ಕೂಡಲೇ ನಿಮ್ಮನ್ನು ನೋಡಲು ಬಯಸುತ್ತೇನೆ. ನಾನು ನಿಮ್ಮೆಲ್ಲರಿಗೂ ನಮಸ್ಕರಿಸಲು, ನಿಮ್ಮ ಕಠಿಣ ಪರಿಶ್ರಮಕ್ಕೆ ನಮಸ್ಕರಿಸಲು, ನಿಮ್ಮ ತಾಳ್ಮೆಗೆ ನಮಸ್ಕರಿಸಲು, ನಿಮ್ಮ ಉತ್ಸಾಹಕ್ಕೆ ವಂದಿಸಲು, ನಿಮ್ಮ ಚೈತನ್ಯಕ್ಕೆ ವಂದಿಸಲು ಮತ್ತು ನಿಮ್ಮ ಸ್ಫೂರ್ತಿಗೆ ವಂದಿಸಲು ಬಯಸುತ್ತೇನೆ. ನೀವು ದೇಶವನ್ನು ಯಾವ ಎತ್ತರಕ್ಕೆ ಕೊಂಡೊಯ್ದಿದ್ದೀರಿ ಎಂಬುದು ಸಾಮಾನ್ಯ ಯಶಸ್ಸಲ್ಲ. ಇದು ಅನಂತ ಬಾಹ್ಯಾಕಾಶದಲ್ಲಿ ಭಾರತದ ವೈಜ್ಞಾನಿಕ ಸಾಮರ್ಥ್ಯದ ಘೋಷಣೆಯಾಗಿದೆ.ಚಂದ್ರಯಾನ-3ರ ಯಶಸ್ಸಿನ ಕುರಿತು ಇಸ್ರೋ ತಂಡವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ
August 26th, 07:49 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗ್ರೀಸ್ ನಿಂದ ಆಗಮಿಸಿದ ನಂತರ ಬೆಂಗಳೂರಿನ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್ವರ್ಕ್ (ISTRAC) ಗೆ ಭೇಟಿ ನೀಡಿದರು ಮತ್ತು ಚಂದ್ರಯಾನ-3 ರ ಯಶಸ್ಸಿನ ಕುರಿತು ಇಸ್ರೋ ತಂಡವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನ ಮಂತ್ರಿಯವರು ಚಂದ್ರಯಾನ-3 ಮಿಷನ್ ನಲ್ಲಿ ಭಾಗಿಯಾಗಿರುವ ಇಸ್ರೋ ವಿಜ್ಞಾನಿಗಳನ್ನು ಭೇಟಿ ಮಾಡಿದರು ಮತ್ತು ಅವರೊಂದಿಗೆ ಸಂವಾದ ನಡೆಸಿದರು, ಅಲ್ಲಿ ಅವರಿಗೆ ಚಂದ್ರಯಾನ-3 ಮಿಷನ್ ನಲ್ಲಿನ ಸಂಶೋಧನೆಗಳು ಮತ್ತು ಪ್ರಗತಿಯ ಬಗ್ಗೆ ವಿವರಿಸಲಾಯಿತು.ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ ಮಹಾನ್ ವ್ಯಕ್ತಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಮಂತ್ರಿ
March 12th, 03:21 pm
ಸ್ವಾತಂತ್ರ್ಯ ಆಂದೋಲನದ ಎಲ್ಲಾ ಚಳವಳಿಗಳು, ದಂಗೆ, ಹೋರಾಟ ಮತ್ತು ಹೋರಾಟಗಾರರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದ ಯಶೋಗಾಥೆಯಲ್ಲಿ ಸರಿಯಾಗಿ ಗುರುತಿಸಲಾಗದ ಚಳವಳಿ, ಹೋರಾಟಗಳು ಮತ್ತು ವ್ಯಕ್ತಿತ್ವಗಳಿಗೆ ಅವರು ವಿಶೇಷ ಗೌರವ ಸಲ್ಲಿಸಿದರು. ಅಹಮದಾಬಾದ್ ನ ಸಾಬರಮತಿ ಆಶ್ರಮದಲ್ಲಿಂದು “ ಸ್ವಾತಂತ್ರ್ಯದ ಅಮೃತ ಮಹೋತ್ಸವ “ಭಾರತ@75” ಉದ್ಘಾಟಿಸಿ ಅವರು ಮಾತನಾಡಿದರು.“ಅಜಾದಿ ಕಾ ಅಮೃತ್ ಮಹೋತ್ಸವ್” ಪೂರ್ವಭಾವೀ ಕಾರ್ಯಕ್ರಮಗಳ ಉದ್ಘಾಟನಾ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
March 12th, 10:31 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮದಾಬಾದ್ ನ ಸಾಬರಮತಿ ಆಶ್ರಮದಿಂದ ಪಾದಯಾತ್ರೆಗೆ ಹಸಿರು ನಿಶಾನೆ ತೋರಿ, (ಭಾರತ@75), ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭದ ಪೂರ್ವಭಾವಿ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಅವರು ಭಾರತ@75 ಆಚರಣೆ ಕುರಿತ ವಿವಿಧ ಇತರ ಸಾಂಸ್ಕೃತಿಕ ಮತ್ತು ಡಿಜಿಟಲ್ ಉಪಕ್ರಮಗಳನ್ನೂ ಉದ್ಘಾಟಿಸಿದರು. ಗುಜರಾತ್ ರಾಜ್ಯಪಾಲ ಶ್ರೀ ಆಚಾರ್ಯ ದೇವವ್ರತ್, ಕೇಂದ್ರ ಸಂಸ್ಕೃತಿ ಖಾತೆ ರಾಜ್ಯ ಸಚಿವ (ಸ್ವತಂತ್ರ ನಿರ್ವಹಣೆ) ಶ್ರೀ ಪ್ರಹ್ಲಾದ ಸಿಂಗ್ ಪಟೇಲ್, ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.ಭಾರತ@75 “ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಪೂರ್ವಭಾವಿ ಚಟುವಟಿಕೆಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
March 12th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮದಾಬಾದ್ ನ ಸಾಬರಮತಿ ಆಶ್ರಮದಿಂದ ಪಾದಯಾತ್ರೆಗೆ ಹಸಿರು ನಿಶಾನೆ ತೋರಿ, (ಭಾರತ@75), ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭದ ಪೂರ್ವಭಾವಿ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಅವರು ಭಾರತ@75 ಆಚರಣೆ ಕುರಿತ ವಿವಿಧ ಇತರ ಸಾಂಸ್ಕೃತಿಕ ಮತ್ತು ಡಿಜಿಟಲ್ ಉಪಕ್ರಮಗಳನ್ನೂ ಉದ್ಘಾಟಿಸಿದರು. ಗುಜರಾತ್ ರಾಜ್ಯಪಾಲ ಶ್ರೀ ಆಚಾರ್ಯ ದೇವವ್ರತ್, ಕೇಂದ್ರ ಸಂಸ್ಕೃತಿ ಖಾತೆ ರಾಜ್ಯ ಸಚಿವ (ಸ್ವತಂತ್ರ ನಿರ್ವಹಣೆ) ಶ್ರೀ ಪ್ರಹ್ಲಾದ ಸಿಂಗ್ ಪಟೇಲ್, ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.India has a rich legacy in science, technology and innovation: PM Modi
December 22nd, 04:31 pm
Prime Minister Narendra Modi delivered the inaugural address at India International Science Festival (IISF) 2020. PM Modi said, All our efforts are aimed at making India the most trustworthy centre for scientific learning. At the same time, we want our scientific community to share and grow with the best of global talent.PM delivers inaugural address at IISF 2020
December 22nd, 04:27 pm
Prime Minister Narendra Modi delivered the inaugural address at India International Science Festival (IISF) 2020. PM Modi said, All our efforts are aimed at making India the most trustworthy centre for scientific learning. At the same time, we want our scientific community to share and grow with the best of global talent.Address by the President of India Shri Ram Nath Kovind to the joint sitting of Two Houses of Parliament
January 31st, 01:59 pm
In his remarks ahead of the Budget Session of Parliament, PM Modi said, Let this session focus upon maximum possible economic issues and the way by which India can take advantage of the global economic scenario.ಚಂದ್ರಯಾನ ಮತ್ತು ಇಸ್ರೋ ವಿಜ್ಞಾನಿಗಳ ಶ್ರಮದ ಬಗ್ಗೆ ಪ್ರಧಾನಮಂತ್ರಿ ಏನು ಹೇಳಿದರೆಂಬುದನ್ನು ಇಲ್ಲಿ ಓದಿ...
January 24th, 11:00 am
ಪರೀಕ್ಷಾ ಪೆ ಚರ್ಚಾ ಸಭಾಂಗಣದಲ್ಲಿ ಪ್ರಧಾನಮಂತ್ರಿ ಮೋದಿ ಅವರು, ವೈಫಲ್ಯವನ್ನು ಮೆಟ್ಟಿ ನಿಲ್ಲುವ ವಿಚಾರದಲ್ಲಿ ಚಂದ್ರಯಾನದ ಇಳಿಯುವಿಕೆ ಒಂದು ಸ್ಪಷ್ಟ ಉದಾಹಣೆ. “ಚಂದ್ರಯಾನ ಇಳಿಯುವ ಸಂದರ್ಭದಲ್ಲಿ ತಮ್ಮ ಇಸ್ರೋ ಭೇಟಿ ಮತ್ತು ಶ್ರಮಪಟ್ಟು ದುಡಿಯುವ ವಿಜ್ಞಾನಿಗಳೊಂದಿಗೆ ಕಳೆದ ಸಮಯವನ್ನು ಎಂದಿಗೂ ಮರೆಯುವುದಿಲ್ಲ’’ ಎಂದರು.