ಶ್ರೀ ಕೇದಾರನಾಥ ಧಾಮ ಉದ್ಘಾಟನೆ ಮತ್ತು ಚಾರ್ ಧಾಮ್ ಯಾತ್ರೆಗೆ ಚಾಲನೆ ನೀಡಿದ ಪ್ರಧಾನಮಂತ್ರಿ

April 22nd, 11:28 am

ಈ ವರ್ಷದ ಚಾರ್ ಧಾಮ್ ಯಾತ್ರೆಯ ಆರಂಭದ ಅಂಗವಾಗಿ ದೇವಭೂಮಿ ಉತ್ತರಾಖಂಡದಲ್ಲಿ ಶ್ರೀ ಕೇದಾರನಾಥ ಧಾಮದ ಬಾಗಿಲುಗಳನ್ನು ತೆರೆದ ಪವಿತ್ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಇಂದು ಗೌರವ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ, ಯಾತ್ರೆಗಾಗಿ ಉತ್ತರಾಖಂಡಕ್ಕೆ ಭೇಟಿ ನೀಡುವ ಎಲ್ಲಾ ಭಕ್ತರನ್ನು ಉದ್ದೇಶಿಸಿ ಪತ್ರದ ಮೂಲಕ ಪ್ರಧಾನಮಂತ್ರಿ ಅವರು ತಮ್ಮ ಹೃತ್ಪೂರ್ವಕ ಭಾವನೆಗಳನ್ನು ಹಂಚಿಕೊಂಡಿದ್ದಾರೆ ಮತ್ತು ಅವರ ಯೋಗಕ್ಷೇಮಕ್ಕಾಗಿ ತಮ್ಮ ಶುಭ ಹಾರೈಕೆಗಳನ್ನು ಮತ್ತು ಪ್ರಾರ್ಥನೆಗಳನ್ನು ತಿಳಿಸಿದ್ದಾರೆ.

ಭಾರತ - ಮಾರಿಷಸ್ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆ

March 12th, 12:30 pm

140 ಕೋಟಿ ಭಾರತೀಯರ ಪರವಾಗಿ, ಮಾರಿಷಸ್ ಜನತೆಗೆ ಅವರ ರಾಷ್ಟ್ರೀಯ ದಿನದಂದು ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ರಾಷ್ಟ್ರೀಯ ದಿನದ ಸಂದರ್ಭದಲ್ಲಿ ಮತ್ತೊಮ್ಮೆ ಮಾರಿಷಸ್‌ ಗೆ ಭೇಟಿ ನೀಡುತ್ತಿರುವುದು ನನಗೆ ಅತ್ಯಂತ ಗೌರವದ ವಿಷಯವಾಗಿದೆ. ಈ ಗೌರವಕ್ಕಾಗಿ ಪ್ರಧಾನಿ ನವೀನಚಂದ್ರ ರಾಮಗೂಲಮ್ ಮತ್ತು ಮಾರಿಷಸ್ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ತುರ್ತು ಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ವವನ್ನು ತುಳಿಯುವ ಪ್ರಯತ್ನ ನಡೆದಿದೆ: ಮನ್ ಕಿ ಬಾತ್ ವೇಳೆ ಪ್ರಧಾನಿ ಮೋದಿ

June 26th, 11:30 am

ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನಪಿಸಿಕೊಂಡರು. ದೌರ್ಜನ್ಯಗಳ ಹೊರತಾಗಿಯೂ ಪ್ರಜಾಪ್ರಭುತ್ವದಲ್ಲಿ ಜನರ ನಂಬಿಕೆಯನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಬಾಹ್ಯಾಕಾಶ ಕ್ಷೇತ್ರ, ಕ್ರೀಡೆ, ಭಾರತದ ಸಂಪ್ರದಾಯಗಳು ಮತ್ತು ಸಂಸ್ಕೃತಿಯಲ್ಲಿ ಹೆಚ್ಚುತ್ತಿರುವ ಸ್ಟಾರ್ಟ್‌ಅಪ್‌ಗಳಂತಹ ಹಲವಾರು ಇತರ ವಿಷಯಗಳ ಕುರಿತು ಪ್ರಧಾನಿ ಮೋದಿ ಮಾತನಾಡಿದರು. ಸ್ವಚ್ಛತೆ ಮತ್ತು ನೀರಿನ ಸಂರಕ್ಷಣೆಯತ್ತ ನಾಗರಿಕರ ಪ್ರಯತ್ನವನ್ನು ಅವರು ಶ್ಲಾಘಿಸಿದರು.