ತಮಿಳುನಾಡಿನ ತೂತುಕುಡಿಯಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 26th, 08:16 pm
ತಮಿಳುನಾಡು ರಾಜ್ಯಪಾಲರಾದ ಗೌರವಾನ್ವಿತ ಆರ್.ಎನ್. ರವಿ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಕಿಂಜರಾಪು ರಾಮಮೋಹನ್ ನಾಯ್ಡು ಜಿ, ಡಾ. ಎಲ್. ಮುರುಗನ್ ಜಿ, ತಮಿಳುನಾಡು ಸಚಿವರಾದ ತಂಗಂ ತೆನ್ನರಸು ಜಿ, ಡಾ. ಟಿ.ಆರ್.ಬಿ. ರಾಜಾ ಜಿ, ಪಿ. ಗೀತಾ ಜೀವನ್ ಜಿ, ಅನಿತಾ ಆರ್. ರಾಧಾಕೃಷ್ಣನ್ ಜಿ, ಸಂಸದೆ ಕನಿಮೊಳಿ ಜಿ, ತಮಿಳುನಾಡು ಬಿಜೆಪಿ ಅಧ್ಯಕ್ಷರು ಮತ್ತು ನಮ್ಮ ಶಾಸಕರಾದ ನಾಯನಾರ್ ನಾಗೇಂದ್ರನ್ ಜಿ, ಮತ್ತು ತಮಿಳುನಾಡಿನ ನನ್ನ ಸಹೋದರ ಸಹೋದರಿಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ತೂತುಕುಡಿಯಲ್ಲಿ ₹4800 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು
July 26th, 07:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ತೂತುಕುಡಿಯಲ್ಲಿ ₹4800 ಕೋಟಿಗೂ ಹೆಚ್ಚು ಮೌಲ್ಯದ ದೇಶದ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು. ಪ್ರಾದೇಶಿಕ ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸುವ, ಸಾರಿಗೆ ಸೌಲಭ್ಯದ ದಕ್ಷತೆಯನ್ನು ಹೆಚ್ಚಿಸುವ, ಶುದ್ಧ ಇಂಧನ ಮೂಲಸೌಕರ್ಯವನ್ನು ಬಲಪಡಿಸುವ ಹಾಗು ತಮಿಳುನಾಡಿನಾದ್ಯಂತ ನಾಗರಿಕರ ಜೀವನ ಮಟ್ಟವನ್ನು ಸುಧಾರಿಸುವ ಬಹು ವಲಯಗಳಲ್ಲಿ ಪ್ರಮುಖವಾದ ಯೋಜನೆಗಳ ಸರಣಿ ಇದಾಗಿದೆ. ಕಾರ್ಗಿಲ್ ವಿಜಯ ದಿವಸದ ಸಂದರ್ಭದಲ್ಲಿ, ಶ್ರೀ ಮೋದಿ ಕಾರ್ಗಿಲ್ ನ ವೀರ ಸೇನಾನಿಗಳಿಗೆ ಗೌರವ ಸಲ್ಲಿಸಿದರು ಮತ್ತು ವೀರ ಯೋಧರಿಗೆ ನಮನ ಸಲ್ಲಿಸಿದರು ಮತ್ತು ರಾಷ್ಟ್ರಕ್ಕಾಗಿ ಬೆಲೆಕಟ್ಟಲಾಗದ ತ್ಯಾಗ ಮಾಡಿದ ಹುತಾತ್ಮರಿಗೆ ಹೃತ್ಪೂರ್ವಕ ಗೌರವ ಸಲ್ಲಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ
June 29th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.ಚೆನಾಬ್ ರೈಲು ಸೇತುವೆ ನಿರ್ಮಾಣದಲ್ಲಿ ಭಾಗಿಯಾಗಿರುವ ಜನರೊಂದಿಗೆ ಪ್ರಧಾನಮಂತ್ರಿ ಸಂವಾದ
June 06th, 03:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಚೆನಾಬ್ ರೈಲು ಸೇತುವೆ ನಿರ್ಮಾಣದಲ್ಲಿ ಭಾಗಿಯಾಗಿರುವ ಕೆಲವು ಜನರೊಂದಿಗೆ ಸಂವಾದ ನಡೆಸಿದರು. ರಾಷ್ಟ್ರಕ್ಕಾಗಿ ಆಧುನಿಕ ಮೂಲಸೌಕರ್ಯಗಳನ್ನು ನಿರ್ಮಿಸುವ ಅವರ ಅಚಲ ಬದ್ಧತೆಯನ್ನು ಶ್ರೀ ನರೇಂದ್ರ ಮೋದಿ ಶ್ಲಾಘಿಸಿದರು.ಚೆನಾಬ್ ರೈಲು ಸೇತುವೆಯ ಮೇಲೆ ತ್ರಿವರ್ಣ ಧ್ವಜ ಹಾರಾಡುತ್ತದೆ: ಪ್ರಧಾನಮಂತ್ರಿ
June 06th, 02:59 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಪ್ರತಿಮ ಚೆನಾಬ್ ರೈಲು ಸೇತುವೆಯ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದ್ದನ್ನು ಸಂಭ್ರಮಿಸಿದ್ದಾರೆ, ಇದು ಅಪಾರ ರಾಷ್ಟ್ರೀಯ ಹೆಮ್ಮೆಯ ಕ್ಷಣ ಮತ್ತು ಅತ್ಯಂತ ಸವಾಲಿನ ಭೂಪ್ರದೇಶಗಳಲ್ಲಿ ಭವಿಷ್ಯದ ಮೂಲಸೌಕರ್ಯಗಳನ್ನು ನಿರ್ಮಿಸುವ ಭಾರತದ ಬೆಳೆಯುತ್ತಿರುವ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ ಎಂದು ಬಣ್ಣಿಸಿದ್ದಾರೆ.ಜಮ್ಮು-ಕಾಶ್ಮೀರದ ಕತ್ರಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 06th, 12:50 pm
ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಜಿ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಜಿ, ಜಿತೇಂದ್ರ ಸಿಂಗ್ ಜಿ, ವಿ. ಸೋಮಣ್ಣ ಜಿ, ಉಪಮುಖ್ಯಮಂತ್ರಿ ಸುರೇಂದ್ರ ಕುಮಾರ್ ಜಿ, ಜಮ್ಮು-ಕಾಶ್ಮೀರ ವಿಧಾನಸಭೆಯ ವಿಪಕ್ಷ ನಾಯಕ ಸುನಿಲ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿ ಜುಗಲ್ ಕಿಶೋರ್ ಜಿ, ಇಲ್ಲಿರುವ ಜನಪ್ರತಿನಿಧಿಗಳೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ. ಇದು ವೀರ್ ಜೋರಾವರ್ ಸಿಂಗ್ ಜಿ ಅವರ ಭೂಮಿ, ನಾನು ಈ ಭೂಮಿಗೆ ನಮಸ್ಕರಿಸುತ್ತೇನೆ.ಜಮ್ಮು ಮತ್ತು ಕಾಶ್ಮೀರದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 06th, 12:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ದೇಶಕ್ಕೆ ಸಮರ್ಪಿಸಿದರು. ವೀರ ಜೋರಾವರ್ ಸಿಂಗ್ ಅವರ ಭೂಮಿಗೆ ನಮನ ಸಲ್ಲಿಸುತ್ತಾ, ಇಂದಿನ ಕಾರ್ಯಕ್ರಮವು ಭಾರತದ ಏಕತೆ ಮತ್ತು ದೃಢಸಂಕಲ್ಪದ ಭವ್ಯ ಆಚರಣೆಯಾಗಿದೆ ಎಂದು ಹೇಳಿದರು. ಮಾತಾ ವೈಷ್ಣೋದೇವಿಯ ಆಶೀರ್ವಾದದಿಂದ ಕಾಶ್ಮೀರ ಕಣಿವೆ ಈಗ ಭಾರತದ ವಿಶಾಲ ರೈಲ್ವೆ ಜಾಲಕ್ಕೆ ಸಂಪರ್ಕ ಹೊಂದಿದೆ ಎಂದು ಶ್ರೀ ಮೋದಿ ಹೇಳಿದರು. ನಾವು ಯಾವಾಗಲೂ ಮಾತೆ ಭಾರತಿಯನ್ನು ಆಳವಾದ ಭಕ್ತಿಯಿಂದ ಪ್ರಾರ್ಥಿಸುತ್ತೇವೆ, 'ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ' ಎಂದು ಹೇಳುತ್ತೇವೆ, ಇಂದು, ಇದು ನಮ್ಮ ರೈಲ್ವೆ ಜಾಲದಲ್ಲಿಯೂ ಸಹ ವಾಸ್ತವವಾಗಿದೆ ಎಂದು ಪ್ರಧಾನಿ ಉದ್ಗರಿಸಿದರು, ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಮಾರ್ಗ ಯೋಜನೆಯು ಕೇವಲ ಹೆಸರಲ್ಲ, ಜಮ್ಮು ಮತ್ತು ಕಾಶ್ಮೀರದ ಹೊಸ ಶಕ್ತಿಯ ಸಂಕೇತ ಮತ್ತು ಭಾರತದ ಬೆಳೆಯುತ್ತಿರುವ ಸಾಮರ್ಥ್ಯಗಳಿಗೆ ಸಾಕ್ಷಿಯಾಗಿದೆ ಎಂದು ಒತ್ತಿ ಹೇಳಿದರು. ಈ ಪ್ರದೇಶದಲ್ಲಿ ರೈಲು ಮೂಲಸೌಕರ್ಯ ಮತ್ತು ಸಂಪರ್ಕವನ್ನು ಹೆಚ್ಚಿಸುವ ಬದ್ಧತೆಗೆ ಅನುಗುಣವಾಗಿ, ಅವರು ಚೆನಾಬ್ ಮತ್ತು ಅಂಜಿ ರೈಲು ಸೇತುವೆಗಳನ್ನು ಉದ್ಘಾಟಿಸಿದರು ಮತ್ತು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು, ಇದು ಜಮ್ಮು ಮತ್ತು ಕಾಶ್ಮೀರದೊಳಗೆ ಸಂಪರ್ಕವನ್ನು ಹೆಚ್ಚಿಸುತ್ತದೆ. ಇದರ ಜೊತೆಗೆ, ಶ್ರೀ ಮೋದಿ ಅವರು ಜಮ್ಮುವಿನಲ್ಲಿ ಹೊಸ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ ನೆರವೇರಿಸಿದರು, ಈ ಪ್ರದೇಶದಲ್ಲಿ ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸಿದರು, ₹46,000 ಕೋಟಿ ಮೌಲ್ಯದ ಯೋಜನೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯನ್ನು ವೇಗಗೊಳಿಸುತ್ತವೆ, ಪ್ರಗತಿ ಮತ್ತು ಸಮೃದ್ಧಿಗೆ ಚಾಲನೆ ನೀಡುತ್ತವೆ ಎಂದು ಹೇಳಿದರು. ಪ್ರಧಾನಿಯವರು ತಮ್ಮ ಶುಭಾಶಯಗಳನ್ನು ವ್ಯಕ್ತಪಡಿಸಿದರು ಮತ್ತು ಬೆಳವಣಿಗೆ ಹಾಗು ಪರಿವರ್ತನೆಯ ಈ ಹೊಸ ಯುಗಕ್ಕಾಗಿ ಜನರನ್ನು ಅಭಿನಂದಿಸಿದರು.ಜೂನ್ 6 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಮಂತ್ರಿ ಭೇಟಿ
June 04th, 12:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 6 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಈ ಪ್ರದೇಶದಲ್ಲಿ ರೈಲು ಮೂಲಸೌಕರ್ಯ ಮತ್ತು ಸಂಪರ್ಕವನ್ನು ಹೆಚ್ಚಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನ ಮಂತ್ರಿಗಳು ಬೆಳಿಗ್ಗೆ 11 ಗಂಟೆಗೆ ಚೆನಾಬ್ ಸೇತುವೆಯನ್ನು ಉದ್ಘಾಟಿಸಲಿದ್ದಾರೆ ಮತ್ತು ಸೇತುವೆಯ ಡೆಕ್‌ಗೆ ಭೇಟಿ ನೀಡಲಿದ್ದಾರೆ. ನಂತರ, ಅವರು ಅಂಜಿ ಸೇತುವೆಗೆ ಭೇಟಿ ನೀಡಿ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಅವರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬಳಿಕ, ಅವರು ಕತ್ರಾದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.ರಾಜಸ್ಥಾನದ ಬಿಕಾನೇರ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 22nd, 12:00 pm
ರಾಜಸ್ಥಾನ ರಾಜ್ಯಪಾಲರಾದ ಹರಿಭಾವು ಬಾಗ್ಡೆ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀಮನ್ ಭಜನ್ ಲಾಲ್ ಜಿ, ಮಾಜಿ ಮುಖ್ಯಮಂತ್ರಿ ಸಹೋದರಿ ವಸುಂಧರಾ ರಾಜೇ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಜಿ, ಅರ್ಜುನ್ ರಾಮ್ ಮೇಘವಾಲ್ ಜಿ, ರಾಜಸ್ಥಾನದ ಉಪಮುಖ್ಯಮಂತ್ರಿ ದಿಯಾ ಕುಮಾರಿ ಜಿ, ಪ್ರೇಮ್ ಚಂದ್ ಜಿ, ರಾಜಸ್ಥಾನ ಸರ್ಕಾರದ ಸಚಿವರುಗಳೆ, ಸಂಸತ್ತಿನ ನನ್ನ ಸಹೋದ್ಯೋಗಿ ಮದನ್ ರಾಥೋಡ್ ಜಿ, ಇತರೆ ಸಂಸದರು ಮತ್ತು ಶಾಸಕರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ರಾಜಸ್ಥಾನದ ಬಿಕಾನೇರ್‌ನಲ್ಲಿ 26,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ, ಶಿಲಾನ್ಯಾಸ ಮತ್ತು ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 22nd, 11:30 am
ರಾಜಸ್ಥಾನದ ಬಿಕಾನೇರ್‌ನಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 26,000 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ, ಕಾರ್ಯಕ್ರಮದಲ್ಲಿ ನೆರೆದಿದ್ದ ಬೃಹತ್ ಜನಸಮೂಹವನ್ನು ಸ್ವಾಗತಿಸಿ ಮಾತನಾಡಿದ ಅವರು, ಆನ್‌ಲೈನ್‌ನಲ್ಲಿ ಭಾಗವಹಿಸಿರುವ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜನರನ್ನು ಶ್ಲಾಘಿಸಿದರು. ಹಲವಾರು ರಾಜ್ಯಪಾಲರು, ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್‌ಗಳು ಮತ್ತು ಇತರೆ ಸಾರ್ವಜನಿಕ ಪ್ರತಿನಿಧಿಗಳು ಇಲ್ಲಿ ಉಪಸ್ಥಿತರಿದ್ದು, ಜತೆಗೆ ದೇಶಾದ್ಯಂತ ಸಂಪರ್ಕ ಹೊಂದಿರುವ ಎಲ್ಲಾ ಗೌರವಾನ್ವಿತ ಗಣ್ಯರು ಮತ್ತು ನಾಗರಿಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.ಶ್ರೀನಗರದಲ್ಲಿ ನಡೆದ “ಯುವಜನರ ಸಬಲೀಕರಣ ಮತ್ತು ಜೆ ಅಂಡ್ ಕೆ ಪರಿವರ್ತನೆ’’ ಕಾರ್ಯಕ್ರಮನ್ನುದ್ದೇಶಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
June 20th, 07:00 pm
ಜಮ್ಮು ಮತ್ತು ಕಾಶ್ಮೀರದ ಲೆಫ್ಸಿನೆಂಟ್ ಗೌರ್ನರ್ ಶ್ರೀ ಮನೋಜ್ ಸಿನ್ಹಾಜಿ, ನನ್ನ ಸಂಪುಟದ ಸಹೋದ್ಯೋಗಿ ಶ್ರೀ ಪ್ರತಾಪ್ ರಾವ್ ಜಾದವ್ ಜಿ, ಇತರ ಗಣ್ಯರೇ ಮತ್ತು ಜಮ್ಮು ಮತ್ತು ಕಾಶ್ಮೀರದಾದ್ಯಂತ ಇರುವ ನನ್ನ ಯುವ ಸ್ನೇಹಿತರೇ ಹಾಗೂ ನನ್ನೆಲ್ಲಾ ಸಹೋದರ ಮತ್ತು ಸಹೋದರಿಯರೇ..!ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ 'ಯುವಕರ ಸಬಲೀಕರಣ, ಜಮ್ಮು ಮತ್ತು ಕಾಶ್ಮೀರವನ್ನು ಪರಿವರ್ತಿಸುವುದು' ಕುರಿತ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 20th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್ ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ (ಎಸ್.ಕೆ.ಐ.ಸಿ.ಸಿ.) ನಲ್ಲಿ ನಡೆದ 'ಯುವಕರ ಸಬಲೀಕರಣ, ಜಮ್ಮು ಮತ್ತು ಕಾಶ್ಮೀರವನ್ನು ಪರಿವರ್ತಿಸುವುದು' ಕುರಿತ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು. ರಸ್ತೆ, ನೀರು ಸರಬರಾಜು ಮತ್ತು ಉನ್ನತ ಶಿಕ್ಷಣದಲ್ಲಿ ಮೂಲಸೌಕರ್ಯ ಕ್ಷೇತ್ರಗಳನ್ನು ಒಳಗೊಂಡ 1,500 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಜಮ್ಮು ಮತ್ತು ಕಾಶ್ಮೀರದಲ್ಲಿ ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. 1,800 ಕೋಟಿ ರೂ.ಗಳ ಕೃಷಿ ಮತ್ತು ಸಂಬಂಧಿತ ವಲಯಗಳ ಯೋಜನೆಯಲ್ಲಿ ಸ್ಪರ್ಧಾತ್ಮಕತೆ ಸುಧಾರಣೆ ಯೋಜನೆಗೆ (ಜೆಕೆಸಿಐಪಿ) ಅವರು ಚಾಲನೆ ನೀಡಿದರು. ಶ್ರೀ ನರೇಂದ್ರ ಮೋದಿ ಅವರು 200 ಹೊಸ ಸರ್ಕಾರಿ ನೇಮಕಾತಿದಾರರಿಗೆ ಉದ್ಯೋಗ ಪತ್ರಗಳನ್ನು ಹಸ್ತಾಂತರಿಸಲು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ವಸ್ತುಪ್ರದರ್ಶನವನ್ನು ವೀಕ್ಷಿಸಿದರು ಮತ್ತು ಕೇಂದ್ರಾಡಳಿತ ಪ್ರದೇಶದ ಯುವ ಸಾಧಕರೊಂದಿಗೆ ಸಂವಾದ ನಡೆಸಿದರು.ಹರ್ ಘರ್ ತಿರಂಗಾ ಆಂದೋಲನ ಕುರಿತಂತೆ ಉತ್ಸಾಹದ ದೃಷ್ಟಾಂತಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ
August 14th, 02:34 pm
ದೇಶಾದ್ಯಂತ ಹರ್ ಘರ್ ತಿರಂಗಾ ಆಂದೋಲನವನ್ನು ಆಚರಿಸಿದ ವಿವಿಧ ಉದಾಹರಣೆಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.ಚಿನಾಬ್ ನದಿಗೆ ಅಡ್ಡಲಾಗಿ ಕಮಾನು ಆಕಾರದಲ್ಲಿ ವಿಶ್ವದ ಅತಿ ಎತ್ತರದ ಸೇತುವೆ ನಿರ್ಮಾಣ ಕಾರ್ಯ ಪೂರ್ಣಗೊಳಿಸಿದ್ದಕ್ಕೆ ಪ್ರಧಾನಮಂತ್ರಿ ಶ್ಲಾಘನೆ
April 05th, 08:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ರೈಲ್ವೆ, ಚಿನಾಬ್ ನದಿಗೆ ಅಡ್ಡಲಾಗಿ ವಿಶ್ವದ ಅತಿ ಎತ್ತರದ ಕಮಾನು ಆಕಾರದ ಸೇತುವೆ ನಿರ್ಮಾಣ ಪೂರ್ಣಗೊಳಿಸಿರುವುದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಪ್ರಮುಖ ಮೂಲಸೌಕರ್ಯ ವಲಯಗಳ ನಿರ್ವಹಣೆಯನ್ನು ಪ್ರಧಾನಿ ಪರಿಶೀಲಿಸಿದರು
April 26th, 12:25 pm
ರಸ್ತೆಗಳು, ರೈಲುಗಳು, ವಿಮಾನ ನಿಲ್ದಾಣಗಳು, ಬಂದರುಗಳು, ಡಿಜಿಟಲ್ ಮತ್ತು ಕಲ್ಲಿದ್ದಲು ಸೇರಿದಂತೆ ಪ್ರಮುಖ ಮೂಲಸೌಕರ್ಯ ಕ್ಷೇತ್ರಗಳ ಪ್ರಗತಿಯನ್ನು ನರೇಂದ್ರ ಮೋದಿ ಪರಿಶೀಲಿಸಿದರು . ಹೋಸ್ಟ್ ಯೋಜನೆಗಳಲ್ಲಿ ಗಮನಾರ್ಹ ಸುಧಾರಣೆ ಮಾಡಲಾಗಿದೆ . ಪ್ರಧಾನಿ ಗ್ರಾಮೀಣ ರಸ್ತೆ ನಿರ್ಮಾಣ ಮತ್ತು ಅದರ ಗುಣಮಟ್ಟವನ್ನು ಸಮರ್ಥ ಮತ್ತು ಕಠಿಣ ಮೇಲ್ವಿಚಾರಣೆಯನ್ನು ನಿರ್ದೇಶಿಸಿದ್ದಾರೆ .ಪ್ರಧಾನಿ ಮೋದಿ ರಸ್ತೆ ನಿರ್ಮಾಣದಲ್ಲಿ ಹೊಸ ತಂತ್ರಜ್ಞಾನಗಳನ್ನು ಬಳಸಿಕೊಳ್ಳುವಂತೆ ನಿರ್ದೇಶಿಸಿದ್ದಾರೆ.