ಫಿಡೆ ವಿಶ್ವ ಬ್ಲಿಟ್ಜ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಜಯಿಸಿರುವ ಅರ್ಜುನ್ ಎರಿಗೈಸಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
December 31st, 09:04 am
ದೋಹಾದಲ್ಲಿ ನಡೆದ ಫಿಡೆ ವಿಶ್ವ ಬ್ಲಿಟ್ಜ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಜಯಿಸಿರುವ ಭಾರತೀಯ ಚೆಸ್ ಗ್ರ್ಯಾಂಡ್‌ಮಾಸ್ಟರ್ ಅರ್ಜುನ್ ಎರಿಗೈಸಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ. ಫಿಡೆ ರ‍್ಯಾಪಿಡ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಇತ್ತೀಚೆಗಷ್ಟೇ ಕಂಚಿನ ಪದಕ ಜಯಿಸಿದ್ದು ಈಗ ಈ ಸಾಧನೆಯು, ಜಾಗತಿಕ ಚೆಸ್ ರಂಗದಲ್ಲಿ ಭಾರತಕ್ಕೆ ಮತ್ತೊಂದು ಹೆಮ್ಮೆಯ ಕ್ಷಣವಾಗಿದೆ.2025ರ ಫಿಡೆ ವಿಶ್ವ ರಾಪಿಡ್ ಚೆಸ್ ಚಾಂಪಿಯನ್ ಷಿಪ್ ನಲ್ಲಿ ಕಂಚಿನ ಪದಕ ಗೆದ್ದ ಅರ್ಜುನ್ ಎರಿಗೈಸಿ ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು
December 29th, 03:38 pm
ದೋಹಾದಲ್ಲಿ ನಡೆದ ಫಿಡೆ ವಿಶ್ವ ರಾಪಿಡ್ ಚೆಸ್ ಚಾಂಪಿಯನ್ ಷಿಪ್ ನ ಮುಕ್ತ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಅರ್ಜುನ್ ಎರಿಗೈಸಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಅವರ ಧೈರ್ಯ ಗಮನಾರ್ಹವಾಗಿದೆ. ಅವರ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ, ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.2025ರ ಫಿಡೆ ವಿಶ್ವ ರಾಪಿಡ್ ಚೆಸ್ ಚಾಂಪಿಯನ್ ಷಿಪ್ ನಲ್ಲಿ ಕಂಚಿನ ಪದಕ ಗೆದ್ದ ಕೊನೇರು ಹಂಪಿಗೆ ಪ್ರಧಾನಮಂತ್ರಿ ಅಭಿನಂದನೆ
December 29th, 03:35 pm
ದೋಹಾದಲ್ಲಿ ನಡೆದ 2025ರ ಫಿಡೆ ವಿಶ್ವ ರಾಪಿಡ್ ಚೆಸ್ ಚಾಂಪಿಯನ್ ಷಿಪ್ ನ ಮಹಿಳಾ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಕೊನೇರು ಹಂಪಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಆಟದ ಬಗ್ಗೆ ಅವರ ಸಮರ್ಪಣೆ ಶ್ಲಾಘನೀಯ. ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆಗಳು, ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ಎಫ್.ಐ.ಡಿ.ಇ ವಿಶ್ವಕಪ್ ಭಾರತಕ್ಕೆ ಮರಳುವುದನ್ನು ಸ್ವಾಗತಿಸಿದ ಪ್ರಧಾನಮಂತ್ರಿ
August 26th, 11:30 pm
ಭಾರತವು ಪ್ರತಿಷ್ಠಿತ ಎಫ್.ಐ.ಡಿ.ಇ ವಿಶ್ವಕಪ್ 2025ನ್ನು ಆಯೋಜಿಸಲು ಸಜ್ಜಾಗುತ್ತಿರುವಾಗ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಪಾರ ಹೆಮ್ಮೆ ಮತ್ತು ಉತ್ಸಾಹವನ್ನು ವ್ಯಕ್ತಪಡಿಸಿದ್ದಾರೆ, ಈ ಪಂದ್ಯಾವಳಿಯು ಎರಡು ದಶಕಗಳ ನಂತರ ಭಾರತದ ನೆಲಕ್ಕೆ ಮರಳಿದೆ.ಪ್ರಧಾನಮಂತ್ರಿ ಅವರು ದಿವ್ಯಾ ದೇಶಮುಖ್ ಅವರನ್ನು ಗ್ರ್ಯಾಂಡ್ ಮಾಸ್ಟರ್ ಆಗಿದ್ದಕ್ಕೆ ಅಭಿನಂದಿಸಿದ್ದಾರೆ
July 29th, 06:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿವ್ಯಾ ದೇಶಮುಖ್ ಅವರನ್ನು ಕೇವಲ 2025 ಫಿಡೆ (FIDE) ಮಹಿಳಾ ವಿಶ್ವಕಪ್ ಗೆದ್ದಿರುವುದಕ್ಕೆ ಮಾತ್ರವಲ್ಲದೇ ಗ್ರ್ಯಾಂಡ್ ಮಾಸ್ಟರ್ ಆಗಿದ್ದಕ್ಕೆ ಅಭಿನಂದಿಸಿದ್ದಾರೆ. “ಅವರ ಸಾಧನೆ ಜನರನ್ನು ಪ್ರೇರೇಪಿಸುತ್ತದೆ ಮತ್ತು ಯುವಜನರಲ್ಲಿ ಚೆಸ್ ಅನ್ನು ಮತ್ತಷ್ಟು ಪ್ರಖ್ಯಾತಗೊಳಿಸಲು ಕೊಡುಗೆ ನೀಡುತ್ತದೆ” ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಎಫ್ ಐ ಡಿ ಇ ಮಹಿಳಾ ವಿಶ್ವ ಚೆಸ್ ಚಾಂಪಿಯನ್ 2025 ದಿವ್ಯಾ ದೇಶಮುಖ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
July 28th, 06:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫಿಡೆ ಮಹಿಳಾ ವಿಶ್ವ ಚೆಸ್ ಚಾಂಪಿಯನ್ 2025 ಆಗಿ ಹೊರಹೊಮ್ಮಿರುವ ದಿವ್ಯಾ ದೇಶಮುಖ್ ಅವರನ್ನು ಅಭಿನಂದಿಸಿದ್ದಾರೆ. ಕೊನೇರು ಹಂಪಿ ಅವರೂ ಕೂಡ ಪಂದ್ಯಾವಳಿಯಾದ್ಯಂತ ಅಗಾಧ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಇಬ್ಬರೂ ಆಟಗಾರ್ತಿಯರಿಗೆ ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಕೆಗಳು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಲಂಡನ್‌ನಲ್ಲಿ ನಡೆದ ವಿಶ್ವ ತಂಡ ಬ್ಲಿಟ್ಜ್ ಚಾಂಪಿಯನ್ಶಿಶಿಪ್‌ನ ಬ್ಲಿಟ್ಜ್ ಸೆಮಿಫೈನಲ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದ್ದಕ್ಕಾಗಿ ದಿವ್ಯಾ ದೇಶಮುಖ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
June 19th, 02:00 pm
ಲಂಡನ್‌ನಲ್ಲಿ ನಡೆದ ವಿಶ್ವ ಟೀಮ್ ಬ್ಲಿಟ್ಜ್ ಚಾಂಪಿಯನ್ಶಿಪ್‌ನ ಬ್ಲಿಟ್ಜ್ ಸೆಮಿಫೈನಲ್‌ನ ಎರಡನೇ ಸುತ್ತಿನಲ್ಲಿ, ವಿಶ್ವದ ನಂ. 1 ಹೌ ಯಿಫಾನ್ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ್ದಕ್ಕಾಗಿ ಭಾರತೀಯ ಚೆಸ್ ಪ್ರತಿಭೆ ದಿವ್ಯಾ ದೇಶಮುಖ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಅಭಿನಂದಿಸಿದ್ದಾರೆ.ನಾರ್ವೆ ಚೆಸ್ 2025ರಲ್ಲಿ ಮ್ಯಾಗ್ನಸ್ ಕಾರ್ಲ್ಸನ್ ವಿರುದ್ಧ ಮೊಟ್ಟಮೊದಲ ಗೆಲುವು ಸಾಧಿಸಿದ ಗುಕೇಶ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
June 02nd, 08:23 pm
ನಾರ್ವೆ ಚೆಸ್ 2025ರ 6ನೇ ಸುತ್ತಿನಲ್ಲಿ ಮ್ಯಾಗ್ನಸ್ ಕಾರ್ಲ್ ಸನ್ ವಿರುದ್ಧ ಮೊದಲ ಗೆಲುವು ಸಾಧಿಸಿದ ಗುಕೇಶ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಅತ್ಯದ್ಭುತ ಗೆಲುವಿಗಾಗಿ ಅಭಿನಂದನೆಗಳು. ನಾರ್ವೆ ಚೆಸ್ 2025ರ 6ನೇ ಸುತ್ತಿನಲ್ಲಿ ಮ್ಯಾಗ್ನಸ್ ಕಾರ್ಲ್ಸನ್ ವಿರುದ್ಧ ಅವರ ಪ್ರಪ್ರಥಮ ಗೆಲುವು ಅವರ ಪ್ರತಿಭೆ ಮತ್ತು ಸಮರ್ಪಣೆಯನ್ನು ಪ್ರದರ್ಶಿಸುತ್ತದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.The National Games are a celebration of India's incredible sporting talent: PM Modi in Dehradun
January 28th, 09:36 pm
PM Modi during the 38th National Games inauguration in Dehradun addressed the nation's youth, highlighting the role of sports in fostering unity, fitness, and national development. He emphasized the government's efforts in promoting sports, the importance of sports infrastructure, and India's growing sports economy.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಹ್ರಾಡೂನ್‌ನಲ್ಲಿ 38ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿದರು
January 28th, 09:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ 38ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿದರು. ನಂತರ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಉತ್ತರಾಖಂಡ ಇಂದು ಯುವಜನರ ಶಕ್ತಿಯಿಂದ ಬೆಳಗುತ್ತಿದೆ ಎಂದರು. ಬಾಬಾ ಕೇದಾರನಾಥ, ಬದರೀನಾಥ ಮತ್ತು ಗಂಗಾ ಮಾತೆಯ ಆಶೀರ್ವಾದದಿಂದ 38ನೇ ರಾಷ್ಟ್ರೀಯ ಕ್ರೀಡಾಕೂಟ ಇಂದು ಆರಂಭವಾಗುತ್ತಿದೆ ಎಂದರು. ಇದು ಉತ್ತರಾಖಂಡದ ರಚನೆಯ 25ನೇ ವರ್ಷವಾಗಿದೆ ಎಂಬುದನ್ನು ಒತ್ತಿ ಹೇಳಿದ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರದಾದ್ಯಂತದ ಯುವಕರು ಈ ಯುವ ರಾಜ್ಯದಲ್ಲಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲಿದ್ದಾರೆ ಎಂದರು. ಈ ಕಾರ್ಯಕ್ರಮವು ‘ಏಕ್ ಭಾರತ್, ಶ್ರೇಷ್ಠ ಭಾರತ್’ ನ ಸುಂದರವಾದ ಚಿತ್ರವನ್ನು ಪ್ರದರ್ಶಿಸಿತು ಎಂದು ಅವರು ಹೇಳಿದರು. ರಾಷ್ಟ್ರೀಯ ಕ್ರೀಡಾಕೂಟದ ಈ ಆವೃತ್ತಿಯಲ್ಲಿಅನೇಕ ಸ್ಥಳೀಯ ಆಟಗಳನ್ನು ಸೇರಿಸಲಾಗಿದೆ ಮತ್ತು ಪರಿಸರ ಸ್ನೇಹಿ ವಸ್ತುಗಳ ಬಳಕೆ ಇರುವುದರಿಂದ ‘ಗ್ರೀನ್ ಗೇಮ್ಸ್’(ಹಸಿರು ಕ್ರೀಡಾಕೂಟ) ಘೋಷವಾಕ್ಯವಾಗಿದೆ ಎಂದು ಅವರು ಹೇಳಿದರು. ಈ ವಿಷಯದ ಬಗ್ಗೆ ಮತ್ತಷ್ಟು ವಿವರಿಸಿದ ಪ್ರಧಾನಮಂತ್ರಿ ಅವರು, ಟ್ರೋಫಿಗಳು ಮತ್ತು ಪದಕಗಳನ್ನು ಸಹ ಇ-ತ್ಯಾಜ್ಯದಿಂದ ತಯಾರಿಸಲಾಗಿದೆ ಮತ್ತು ಪ್ರತಿ ಪದಕ ವಿಜೇತರ ಹೆಸರಿನಲ್ಲಿಒಂದು ಮರವನ್ನು ನೆಡಲಾಗುವುದು, ಇದು ಉತ್ತಮ ಉಪಕ್ರಮವಾಗಿದೆ ಎಂದು ಅವರು ಹೇಳಿದರು. ಉತ್ತಮ ಪ್ರದರ್ಶನಕ್ಕಾಗಿ ಅವರು ಎಲ್ಲಾ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಇಂತಹ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಉತ್ತರಾಖಂಡ ಸರ್ಕಾರ ಮತ್ತು ಜನರನ್ನು ಅವರು ಅಭಿನಂದಿಸಿದರು.ಚೆಸ್ ಚಾಂಪಿಯನ್ ಕೊನೇರು ಹಂಪಿ ಅವರಿಂದ ಪ್ರಧಾನಮಂತ್ರಿ ಭೇಟಿ
January 03rd, 08:42 pm
ಚೆಸ್ ಚಾಂಪಿಯನ್ ಕೊನೇರು ಹಂಪಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಕೊನೇರು ಹಂಪಿ ಅವರು ಭಾರತಕ್ಕೆ ಅಪಾರ ಹೆಮ್ಮೆ ತಂದಿದ್ದಾರೆ ಎಂದು ಶ್ಲಾಘಿಸಿರುವ ಶ್ರೀ ಮೋದಿ ಅವರು, ಹಂಪಿ ಅವರ ತೀಕ್ಷ್ಣ ಬುದ್ಧಿಮತ್ತೆ ಮತ್ತು ಅಚಲವಾದ ಬದ್ಧತೆಯು ಸ್ಪಷ್ಟವಾಗಿ ಗೋಚರಿಸಿದೆ ಎಂದು ಬಣ್ಣಿಸಿದ್ದಾರೆ.2024ರ ಎಫ್.ಐ.ಡಿ.ಇ. ಮಹಿಳಾ ವಿಶ್ವ ರಾಪಿಡ್ ಚಾಂಪಿಯನ್ ಶಿಪ್ ವಿಜೇತ ಹಂಪಿ ಕೊನೇರು ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
December 29th, 03:34 pm
2024ರ ಫಿಡೆ ಮಹಿಳಾ ವಿಶ್ವ ರ‍್ಯಾಪಿಡ್ ಚಾಂಪಿಯನ್ ಶಿಪ್ ಗೆದ್ದ ಹಂಪಿ ಕೊನೇರು ಅವರನ್ನು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು. ಅವರ ಧೈರ್ಯ ಮತ್ತು ತೇಜಸ್ಸು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತದೆ ಎಂದು ಅವರನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದರು.ಪ್ರಧಾನಮಂತ್ರಿಯವರನ್ನು ಭೇಟಿಯಾದ ಚೆಸ್ ಚಾಂಪಿಯನ್ ಶ್ರೀ ಗುಕೇಶ್ ಡಿ
December 28th, 06:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಚೆಸ್ ಚಾಂಪಿಯನ್ ಶ್ರೀ ಗುಕೇಶ್ ಡಿ ಅವರು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ಗುಕೇಶ್ ಡಿ ಅವರ ಸಂಕಲ್ಪ ಮತ್ತು ಸಮರ್ಪಣೆಯನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದರು ಮತ್ತು ಅವರ ಆತ್ಮವಿಶ್ವಾಸವು ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ ಎಂದು ಹೇಳಿದರು. ಆನಂತರ ನಮ್ಮ ಸಂಭಾಷಣೆ ಯೋಗ ಮತ್ತು ಧ್ಯಾನದ ಪರಿವರ್ತಕ ಸಾಮರ್ಥ್ಯದ ವಿಷಯಗಳ ಕಡೆಗೆ ಸಾಗಿತು ಎಂದು ಪ್ರಧಾನಮಂತ್ರಿಯವರು ತಿಳಿಸಿದ್ದಾರೆ.ವಿಶ್ವದ ಅತಿ ಕಿರಿಯ ಚೆಸ್ ಚಾಂಪಿಯನ್ ಗುಕೇಶ್ ಡಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
December 12th, 07:35 pm
ಅತಿ ಕಿರಿಯ ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿರುವ ಗುಕೇಶ್ ಡಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ. ಗುಕೇಶ್ ಅವರ ಸಾಧನೆ ಐತಿಹಾಸಿಕ ಮತ್ತು ಮಾದರಿ ಎಂದು ಪ್ರಧಾನಿ ಶ್ಲಾಘಿಸಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಲೈವ್ ಚೆಸ್ ರೇಟಿಂಗ್ ನಲ್ಲಿ 2800ರ ಗಡಿ ದಾಟಿದ್ದಕ್ಕಾಗಿ ಅರ್ಜುನ್ ಎರಿಗೈಸಿ ಅವರನ್ನು ಅಭಿನಂದಿಸಿದ್ದಾರೆ
October 27th, 11:08 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಲೈವ್ ಚೆಸ್ ರೇಟಿಂಗ್ ನಲ್ಲಿ 2800ರ ಗಡಿ ದಾಟಿದ ಭಾರತೀಯ ಚೆಸ್ ಗ್ರ್ಯಾಂಡ್ ಮಾಸ್ಟರ್ ಅರ್ಜುನ್ ಎರಿಗೈಸಿ ಅವರನ್ನು ಅಭಿನಂದಿಸಿದ್ದಾರೆ.45ನೇ ಚೆಸ್ ಒಲಿಂಪಿಯಾಡ್ ನಲ್ಲಿ ಮುಕ್ತ ಮತ್ತು ಮಹಿಳಾ ವಿಭಾಗದಲ್ಲಿ ಚಿನ್ನ ಗೆದ್ದ ಭಾರತ ತಂಡ ಪ್ರಧಾನಮಂತ್ರಿ ಶ್ಲಾಘನೆ
September 23rd, 01:15 am
45ನೇ ಚೆಸ್ ಒಲಿಂಪಿಯಾಡ್‌ನ ಮುಕ್ತ ಮತ್ತು ಮಹಿಳೆಯರ ವಿಭಾಗದಲ್ಲಿ ಚಿನ್ನ ಗೆದ್ದ ಭಾರತ ತಂಡಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ತಮ್ಮ ಗಮನಾರ್ಹ ಸಾಧನೆ ತೋರಿಸಿದ ಪುರುಷ ಮತ್ತು ಮಹಿಳಾ ಚೆಸ್ ತಂಡಗಳನ್ನು ಅವರು ಅಭಿನಂದಿಸಿದ್ದಾರೆ.ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
June 30th, 11:00 am
'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಧಾನಮಂತ್ರಿ ಸಂವಾದ
January 23rd, 06:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿ.ಎಂ.ಆರ್.ಬಿ.ಪಿ.) ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದರು.ತಮಿಳುನಾಡಿನ ಚೆನ್ನೈನಲ್ಲಿ ನಡೆದ ಖೇಲೋ ಇಂಡಿಯಾ ಯೂತ್ ಗೇಮ್ಸ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 19th, 06:33 pm
ತಮಿಳುನಾಡಿನ ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಜೀ, ಮುಖ್ಯಮಂತ್ರಿ ಶ್ರೀ ಎಂ.ಕೆ. ಸ್ಟಾಲಿನ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅನುರಾಗ್ ಠಾಕೂರ್, ಎಲ್. ಮುರುಗನ್ ಮತ್ತು ನಿಶಿತ್ ಪ್ರಾಮಾಣಿಕ್, ತಮಿಳುನಾಡು ಸರ್ಕಾರದ ಸಚಿವ ಉದಯನಿಧಿ ಸ್ಟಾಲಿನ್ ಮತ್ತು ಭಾರತದ ಮೂಲೆ ಮೂಲೆಗಳಿಂದ ಇಲ್ಲಿಗೆ ಬಂದಿರುವ ನನ್ನ ಯುವ ಸ್ನೇಹಿತರೇ.ತಮಿಳುನಾಡಿನ ಚೆನ್ನೈನಲ್ಲಿ ʻಖೇಲೋ ಇಂಡಿಯಾ ಯೂತ್ ಗೇಮ್ಸ್-2023ʼರ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿಗಳು
January 19th, 06:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಚೆನ್ನೈನಲ್ಲಿ ʻಖೇಲೋ ಇಂಡಿಯಾ ಯೂತ್ ಗೇಮ್ಸ್-2023ʼರ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿದರು. ಪ್ರಸಾರ ಕ್ಷೇತ್ರಕ್ಕೆ ಸಂಬಂಧಿಸಿದ ಸುಮಾರು 250 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಶ್ರೀ ಮೋದಿ ಅವರು ಚಾಲನೆ ನೀಡಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಅವರು ಸಾಕ್ಷಿಯಾದರು. ʻಖೇಲೋ ಇಂಡಿಯಾ ಯೂತ್ ಗೇಮ್ಸ್ʼ ಉದ್ಘಾಟನೆಯ ಸಂಕೇತವಾಗಿ ಇಬ್ಬರು ಕ್ರೀಡಾಪಟುಗಳು ನೀಡಿದ ಕ್ರೀಡಾ ಜ್ಯೋತಿಯನ್ನು ಅಗ್ಗಿಷ್ಟಿಕೆಯ ಮೇಲೆ ಇರಿಸುವ ಮೂಲಕ ಕ್ರೀಡಾಕೂಟಕ್ಕೆ ಪ್ರಧಾನಿ ಅಧಿಕೃತ ಚಾಲನೆ ನೀಡಿದರು.