ಮನ್ ಕಿ ಬಾತ್ ನಲ್ಲಿ 2027 ರ ಡಿಜಿಟಲ್ ಜನಗಣತಿಯನ್ನು ಯಶಸ್ವಿಗೊಳಿಸುವಂತೆ ಪ್ರಧಾನಿ ಮೋದಿ ದೇಶವಾಸಿಗಳನ್ನು ಕೋರಿದ್ದಾರೆ
April 26th, 11:30 am
ಈ ತಿಂಗಳ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಪರಮಾಣು ಮತ್ತು ಪವನ ಇಂಧನ ಕ್ಷೇತ್ರಗಳಲ್ಲಿ ಭಾರತದ ಪ್ರಗತಿಯನ್ನು ಎತ್ತಿ ತೋರಿಸಿದರು. ಭಗವಾನ್ ಬುದ್ಧನ ಬೋಧನೆಗಳು, ಬೀಟಿಂಗ್ ರಿಟ್ರೀಟ್ ಸಮಾರಂಭ, ಪ್ರಕೃತಿ ಸಂರಕ್ಷಣೆ, ಬಿದಿರು ವಲಯ, ಪ್ರಾಚೀನ ಗ್ರಂಥಗಳು ಮತ್ತು ಗಣಿತ ಒಲಿಂಪಿಯಾಡ್ ಕಾರ್ಯಕ್ರಮ ಸೇರಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಅವರು ಸ್ಪರ್ಶಿಸಿದರು. ನಡೆಯುತ್ತಿರುವ ಡಿಜಿಟಲ್ ಜನಗಣತಿ ಅಭಿಯಾನದ ಬಗ್ಗೆಯೂ ಪ್ರಧಾನಿ ಮಾತನಾಡಿದರು ಮತ್ತು ಪ್ರತಿಯೊಬ್ಬರೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸಿದರು.ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ದುರಂತಕ್ಕೆ ಶೋಕ ವ್ಯಕ್ತಪಡಿಸಿದ ಪ್ರಧಾನಮಂತ್ರಿ
April 14th, 10:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ದುರಂತಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಛತ್ತೀಸ್ ಗಢ ಮುಖ್ಯಮಂತ್ರಿ
April 07th, 02:07 pm
ಛತ್ತೀಸಗಢದ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಮನ್ ಕಿ ಬಾತ್‌ನಲ್ಲಿ ಪಶ್ಚಿಮ ಏಷ್ಯಾ ಬಿಕ್ಕಟ್ಟನ್ನು ನಿವಾರಿಸಲು 140 ಕೋಟಿ ಭಾರತೀಯರ ಒಗ್ಗಟ್ಟಿನಲ್ಲಿ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ
March 29th, 11:30 am
ಈ ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದರು ಮತ್ತು ಬಿಕ್ಕಟ್ಟನ್ನು ನಿವಾರಿಸಲು ಒಗ್ಗಟ್ಟಾಗಿ ಉಳಿಯುವ ಅಗತ್ಯವನ್ನು ಒತ್ತಿ ಹೇಳಿದರು. ನಾಗರಿಕರು ವದಂತಿಗಳಿಂದ ದಾರಿತಪ್ಪಿಸಬೇಡಿ ಮತ್ತು ಸರ್ಕಾರ ನೀಡುವ ಮಾಹಿತಿಯನ್ನು ಮಾತ್ರ ಅವಲಂಬಿಸಬೇಕೆಂದು ಅವರು ಮನವಿ ಮಾಡಿದರು. ಜ್ಞಾನ ಭಾರತಂ ಸಮೀಕ್ಷೆ, ಕ್ರೀಡೆ ಮತ್ತು ಫಿಟ್‌ನೆಸ್, ನೀರಿನ ಸಂರಕ್ಷಣೆ, ಮೀನು ಸಾಕಣೆ ಮತ್ತು ಸೌರಶಕ್ತಿಯಂತಹ ಪ್ರಮುಖ ವಿಷಯಗಳ ಮೇಲೂ ಪ್ರಧಾನಿ ಮಾತನಾಡಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ 2026ರ ಎರಡನೇ ಸಂಚಿಕೆಯಲ್ಲಿ ಕೊಯಮತ್ತೂರು, ಛತ್ತೀಸ್‌ಗಢ, ಗುಜರಾತ್ ಮತ್ತು ಅಸ್ಸಾಂನ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದ ಕೆಲವು ದೃಶ್ಯಗಳನ್ನು ಹಂಚಿಕೊಂಡಿದ್ದಾರೆ.
February 10th, 05:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ (ಪಿಪಿಸಿ) 2026ರ 9ನೇ ಆವೃತ್ತಿಯಲ್ಲಿ ವಿದ್ಯಾರ್ಥಿಗಳೊಂದಿಗಿನ ಸಂವಾದದ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ಪಿಪಿಸಿ 2026ರ ಎರಡನೇ ಸಂಚಿಕೆಯಲ್ಲಿ ಕೊಯಮತ್ತೂರು, ಛತ್ತೀಸ್‌ಗಢ, ಗುಜರಾತ್ ಮತ್ತು ಅಸ್ಸಾಂನ ಪರೀಕ್ಷಾ ಯೋಧರೊಂದಿಗೆ ಪ್ರಧಾನಮಂತ್ರಿ ಅವರು ಅನೌಪಚಾರಿಕ ಸಂವಾದ ನಡೆಸಿದರು. ‘ಪರೀಕ್ಷಾ ಪೇ ಚರ್ಚಾ’ದ ವಿಶೇಷ ಆವೃತ್ತಿಗೆ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು, ಈ ಬಾರಿ ಕಾರ್ಯಕ್ರಮವನ್ನು ದೇಶದ ವಿವಿಧ ಭಾಗಗಳಲ್ಲಿನಡೆಸಲಾಗಿದೆ ಎಂದು ಹೇಳಿದರು.'ಬಸ್ತಾರ್ ಪಂಡಂ' ಹಬ್ಬದ ವಿಶೇಷ ಆಚರಣೆಗಾಗಿ ಛತ್ತೀಸ್ ಗಢದ ಜನರನ್ನು ಅಭಿನಂದಿಸಿದ ಪ್ರಧಾನಮಂತ್ರಿ
February 10th, 10:42 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸ್ ಗಢದಲ್ಲಿ ಫೆಬ್ರವರಿ 7ರಿಂದ 9 ರವರೆಗೆ 'ಬಸ್ತಾರ್ ಪಂಡಂ' ಉತ್ಸವದ ವಿಶೇಷ ಆಚರಣೆಗಾಗಿ ಛತ್ತೀಸ್ ಗಢದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ.2ನೇ ಸಂಚಿಕೆಯ “ಪರೀಕ್ಷಾ ಪೇ ಚರ್ಚಾ 2026” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ
February 09th, 10:30 am
ನನ್ನ ಪ್ರೀತಿಯ ಸ್ನೇಹಿತರೆ, ಪರೀಕ್ಷಾ ಪೇ ಚರ್ಚಾದ ಈ ಮಹತ್ವದ ಆವೃತ್ತಿಗೆ ಸ್ವಾಗತ. ಈ ಬಾರಿ ಇದು ಸ್ವಲ್ಪ ವಿಭಿನ್ನವಾಗಿದೆ, ಸ್ವಲ್ಪ ವಿಶೇಷವೂ ಆಗಿದೆ. ಅನೇಕ ವಿದ್ಯಾರ್ಥಿಗಳು ಪರೀಕ್ಷಾ ಪೇ ಚರ್ಚಾವನ್ನು ದೇಶದ ವಿವಿಧ ಭಾಗಗಳಲ್ಲಿಯೂ ನಡೆಸಬೇಕೆಂದು ಸೂಚಿಸಿದ್ದರು. ಆದ್ದರಿಂದ ಈ ಬಾರಿ, ನಾನು ಭಾರತದಾದ್ಯಂತ ವಿದ್ಯಾರ್ಥಿಗಳೊಂದಿಗೆ ಕುಳಿತು ಈ ಚರ್ಚೆಗಳನ್ನು ನಡೆಸಿದ್ದೇನೆ. ಈ ವಿಶೇಷ ಸಂಚಿಕೆಯಲ್ಲಿ, ನೀವು ಅದನ್ನು ನಿಖರವಾಗಿ ನೋಡುತ್ತೀರಿ. ತಮಿಳುನಾಡಿನ ಕೊಯಮತ್ತೂರಿನಿಂದ ಪ್ರಾರಂಭಿಸೋಣ. ತಮಿಳುನಾಡಿನ ವಿದ್ಯಾರ್ಥಿಗಳ ಶಕ್ತಿ ಮತ್ತು ಕುತೂಹಲ ನನಗೆ ತುಂಬಾ ಪ್ರಭಾವ ಬೀರಿದೆ, ನೋಡೋಣ.ಪರೀಕ್ಷಾ ಪೇ ಚರ್ಚಾ 2026ರ ಎರಡನೇ ಸಂಚಿಕೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೊಯಮತ್ತೂರು, ರಾಯ್‌ಪುರ, ದೇವಮೊಗ್ರಾ ಮತ್ತು ಗುವಾಹಟಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು
February 09th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಪರೀಕ್ಷಾ ಪೇ ಚರ್ಚಾ' 2026ರ 9ನೇ ಆವೃತ್ತಿಯ ಮುಂದುವರಿದ ಭಾಗವಾಗಿ ಇಂದು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪರೀಕ್ಷಾ ಪೇ ಚರ್ಚಾ 2026ರ ಎರಡನೇ ಸಂಚಿಕೆಯ ಅವಧಿಯಲ್ಲಿ ಪ್ರಧಾನಮಂತ್ರಿಯವರು ಕೊಯಮತ್ತೂರು, ರಾಯ್‌ಪುರ, ದೇವಮೊಗ್ರಾ ಮತ್ತು ಗುವಾಹಟಿಯ 'ಎಕ್ಸಾಮ್ ವಾರಿಯರ್ಸ್' (ಪರೀಕ್ಷಾ ಯೋಧರ) ಜೊತೆಗೆ ಅನೌಪಚಾರಿಕ ಸಂವಾದ ನಡೆಸಿದರು. 'ಪರೀಕ್ಷಾ ಪೇ ಚರ್ಚಾ'ದ ವಿಶೇಷ ಆವೃತ್ತಿಗೆ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶ್ರೀ ಮೋದಿಯವರು, ಈ ಬಾರಿ ಕಾರ್ಯಕ್ರಮವನ್ನು ದೇಶದ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿದೆ ಎಂದು ಉಲ್ಲೇಖಿಸಿದರು.ರಾಯ್‌ಪುರದಲ್ಲಿ ನಡೆದ 60ನೇ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರ/ಇನ್‌ಸ್ಪೆಕ್ಟರ್ ಜನರಲ್‌ಗಳ ಸಮ್ಮೇಳನದ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
November 30th, 05:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಯ್ ಪುರದಲ್ಲಿಂದು ನಡೆದ 60ನೇ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರ/ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಮೂರು ದಿನಗಳ ಸಮಾವೇಶದ ಘೋಷವಾಕ್ಯ “ವಿಕಸಿತ ಭಾರತ; ಭದ್ರತಾ ಆಯಾಮಗಳು’’ ಎಂಬುದಾಗಿದೆ.ಪ್ರಧಾನಮಂತ್ರಿ ನವೆಂಬರ್ 29-30 ರಂದು ರಾಯ್‌ಪುರದಲ್ಲಿ ನಡೆಯಲಿರುವ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರ/ಇನ್‌ಸ್ಪೆಕ್ಟರ್ ಜನರಲ್‌ಗಳ 60 ನೇ ಸಮ್ಮೇಳನದಲ್ಲಿ ಭಾಗಿ
November 27th, 12:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ನವೆಂಬರ್ 29-30ರಂದು ಛತ್ತೀಸ್‌ಗಢದ ರಾಯ್‌ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ನಡೆಯಲಿರುವ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರು/ಇನ್‌ಸ್ಪೆಕ್ಟರ್ ಜನರಲ್‌ಗಳ 60 ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.ನವದೆಹಲಿಯಲ್ಲಿ ನಡೆದ 6ನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
November 17th, 08:30 pm
ಭಾರತೀಯ ಪ್ರಜಾಪ್ರಭುತ್ವದಲ್ಲಿ ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಗೆ ಹೊಸ ಎತ್ತರ ನೀಡಿದ ವ್ಯಕ್ತಿತ್ವವನ್ನು ಗೌರವಿಸಲು ಇಂದು ನಾವೆಲ್ಲರೂ ಇಲ್ಲಿ ಒಟ್ಟುಗೂಡಿದ್ದೇವೆ. ಒಬ್ಬ ದಾರ್ಶನಿಕನಾಗಿ, ಸಂಸ್ಥೆಯ ನಿರ್ಮಾತೃವಾಗಿ, ರಾಷ್ಟ್ರೀಯವಾದಿಯಾಗಿ ಮತ್ತು ಮಾಧ್ಯಮ ನಾಯಕನಾಗಿ, ರಾಮನಾಥ್ ಜಿ ಅವರು ಇಂಡಿಯನ್ ಎಕ್ಸ್‌ಪ್ರೆಸ್ ಸಮೂಹವನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ, ಭಾರತದ ಜನರ ಒಂದು ಧ್ಯೇಯವಾಗಿ ಸ್ಥಾಪಿಸಿದರು. ಅವರ ನಾಯಕತ್ವದಲ್ಲಿ, ಈ ಸಮೂಹವು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳ ಧ್ವನಿಯಾಯಿತು. ಆದ್ದರಿಂದ 21ನೇ ಶತಮಾನದ ಈ ಯುಗದಲ್ಲಿ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ರಾಮನಾಥ್ ಜಿ ಅವರ ಬದ್ಧತೆ, ಅವರ ಪ್ರಯತ್ನಗಳು ಮತ್ತು ಅವರ ದೃಷ್ಟಿಕೋನವು ನಮಗೆ ಸ್ಫೂರ್ತಿಯ ದೊಡ್ಡ ಸೆಲೆಯಾಗಿದೆ. ಈ ಉಪನ್ಯಾಸಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್‌ಗೆ ನಾನು ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ, ನಿಮ್ಮೆಲ್ಲರನ್ನು ನಾನು ಅಭಿನಂದಿಸುತ್ತೇನೆ.ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 17th, 08:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಆಯೋಜಿಸಿದ್ದ ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಭಾರತದಲ್ಲಿ ಪ್ರಜಾಪ್ರಭುತ್ವ, ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಯನ್ನು ಉನ್ನತೀಕರಿಸಿದ ವಿಶಿಷ್ಟ ವ್ಯಕ್ತಿತ್ವವನ್ನು ಗೌರವಿಸಲು ನಾವು ಇಂದು ಒಟ್ಟುಗೂಡಿದ್ದೇವೆ ಎಂದು ಶ್ರೀ ಮೋದಿ ಹೇಳಿದರು. ಶ್ರೀ ರಾಮನಾಥ್ ಗೋಯೆಂಕಾ ಅವರು ದಾರ್ಶನಿಕರಾಗಿ, ಸಂಸ್ಥೆ ನಿರ್ಮಾತೃರಾಗಿ, ರಾಷ್ಟ್ರೀಯತಾವಾದಿಯಾಗಿ ಮತ್ತು ಮಾಧ್ಯಮ ನಾಯಕರಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್ ಅನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ ಭಾರತದ ಜನರಲ್ಲಿ ಒಂದು ಧ್ಯೇಯವಾಗಿ ಸ್ಥಾಪಿಸಿದರು ಎಂಬುದನ್ನು ಅವರು ಎತ್ತಿ ತೋರಿಸಿದರು. ಅವರ ನಾಯಕತ್ವದಲ್ಲಿ, ಈ ಗುಂಪು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳಿಗೆ ಧ್ವನಿಯಾಯಿತು ಎಂಬುದರತ್ತ ಪ್ರಧಾನಿ ಗಮನ ಸೆಳೆದರು. 21ನೇ ಶತಮಾನದ ಈ ಯುಗದಲ್ಲಿ, ಭಾರತವು ಅಭಿವೃದ್ಧಿ ಹೊಂದುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ಶ್ರೀ ರಾಮನಾಥ್ ಗೋಯೆಂಕಾ ಅವರ ಬದ್ಧತೆ, ಪ್ರಯತ್ನಗಳು ಮತ್ತು ದೃಷ್ಟಿಕೋನವು ಸ್ಫೂರ್ತಿಯ ದೊಡ್ಡ ಮೂಲವಾಗಿದೆ ಎಂದು ಅವರು ಒತ್ತಿ ಹೇಳಿದರು. ಈ ಉಪನ್ಯಾಸ ನೀಡಲು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್‌ಗೆ ಪ್ರಧಾನಿ ಕೃತಜ್ಞತೆ ಸಲ್ಲಿಸಿದರು ಮತ್ತು ಹಾಜರಿದ್ದ ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.ಗುಜರಾತ್‌ನ ದೇಡಿಯಾಪದದಲ್ಲಿ ನಡೆದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
November 15th, 03:15 pm
ಜೈ ಜೋಹರ್! ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ ಜೀ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಗುಜರಾತ್ ಬಿ.ಜೆ.ಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜೀ, ಗುಜರಾತ್ ಸರ್ಕಾರದ ಸಚಿವರಾದ ನರೇಶ್‌ಭಾಯಿ ಪಟೇಲ್ ಮತ್ತು ಜಯರಾಮ್‌ಭಾಯಿ ಗಮಿತ್ ಜೀ, ಸಂಸತ್ತಿನಲ್ಲಿ ನನ್ನ ಹಳೆಯ ಸಹೋದ್ಯೋಗಿ ಮನ್ಸುಖ್‌ಭಾಯಿ ವಾಸವ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಭಗವಾನ್ ಬಿರ್ಸಾ ಮುಂಡಾ ಅವರ ಕುಟುಂಬದ ಎಲ್ಲಾ ಸದಸ್ಯರೇ, ಈ ಕಾರ್ಯಕ್ರಮದ ಭಾಗವಾಗಿರುವ ದೇಶದ ಮೂಲೆ ಮೂಲೆಗಳಿಂದ ಬಂದ ನನ್ನ ಬುಡಕಟ್ಟು ಸಹೋದರ, ಸಹೋದರಿಯರೇ, ಇತರ ಎಲ್ಲಾ ಗಣ್ಯರು ಮತ್ತು ಈ ಸಮಯದಲ್ಲಿ ಹಲವಾರು ರಾಷ್ಟ್ರೀಯ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ ಅನೇಕ ಜನರು. ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಅವರು, ಸಚಿವರು ಮತ್ತು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೇಡಿಯಾಪಾಡಾದಲ್ಲಿ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅಂಗವಾಗಿ ಜನಜಾತೀಯಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
November 15th, 03:00 pm
ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಸ್ಮರಣಾರ್ಥ ಗುಜರಾತಿನ ದೇಡಿಯಾಪಾಡಾದಲ್ಲಿ ಇಂದು ನಡೆದ ಜನಜಾತೀಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ₹9,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನರ್ಮದಾ ಮಾತೆಯ ಪವಿತ್ರ ಭೂಮಿ ಇಂದು ಮತ್ತೊಂದು ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದ ಶ್ರೀ ಮೋದಿ, ಭಾರತದ ಏಕತೆ ಮತ್ತು ವೈವಿಧ್ಯತೆಯನ್ನು ಸಂಭ್ರಮಿಸಲು ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ 150ನೇ ಜಯಂತಿಯನ್ನು ಇದೇ ಸ್ಥಳದಲ್ಲಿ ಆಚರಿಸಲಾಯಿತು ಎಂದು ನೆನಪಿಸಿಕೊಂಡರು, ಅಂದು ಭಾರತ ಪರ್ವಕ್ಕೆ ಚಾಲನೆ ನೀಡಲಾಯಿತು. ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅದ್ಧೂರಿ ಆಚರಣೆಯೊಂದಿಗೆ, ನಾವು ಭಾರತ ಪರ್ವದ ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಗವಾನ್ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದರು. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಇಡೀ ಬುಡಕಟ್ಟು ಪ್ರದೇಶದಲ್ಲಿ ಸ್ವಾತಂತ್ರ್ಯದ ಮನೋಭಾವವನ್ನು ಜಾಗೃತಗೊಳಿಸಿದ ಗೋವಿಂದ ಗುರುಗಳ ಆಶೀರ್ವಾದ ಸಹ ಈ ಕಾರ್ಯಕ್ರಮಕ್ಕೆ ಇದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಅವರು ವೇದಿಕೆಯಿಂದ ಗೋವಿಂದ ಗುರುಗಳಿಗೆ ಗೌರವ ನಮನ ಸಲ್ಲಿಸಿದರು. ಸ್ವಲ್ಪ ಸಮಯದ ಹಿಂದೆ ದೇವಮೋಗ್ರ ಮಾತೆಯ ದೇಗುಲಕ್ಕೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿತು ಮತ್ತು ಮತ್ತೊಮ್ಮೆ ಅವರ ಪಾದಗಳಿಗೆ ನಮಸ್ಕರಿಸಿದೆ ಎಂದು ಅವರು ಹೇಳಿದರು.ನವ ರಾಯ್ ಪುರದಲ್ಲಿ ನಡೆದ ಛತ್ತೀಸ್ ಗಢ ರಾಜ್ಯ ರೂಪಿಕರಣದ ರಜತ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 01st, 03:30 pm
ಛತ್ತೀಸ್ ಗಢದ ಗೌರವಾನ್ವಿತ ರಾಜ್ಯಪಾಲ ಶ್ರೀ ರಾಮೆನ್ ಡೇಕಾ ಜಿ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿಗಳು, ಶ್ರೀ ಜುವಾಲ್ ಓರಾಮ್ ಜಿ, ಶ್ರೀ ದುರ್ಗಾ ದಾಸ್ ಉಯಿಕೆ ಜಿ ಮತ್ತು ಶ್ರೀ ತೋಖಾನ್ ಸಾಹು ಜಿ, ರಾಜ್ಯ ವಿಧಾನಸಭೆಯ ಸ್ಪೀಕರ್ ಶ್ರೀ ರಮಣ್ ಸಿಂಗ್ ಜಿ, ಉಪಮುಖ್ಯಮಂತ್ರಿ ಶ್ರೀ ಅರುಣ್ ಸಾವೋ ಜಿ ಮತ್ತು ಶ್ರೀ ವಿಜಯ್ ಶರ್ಮಾ ಜಿ, ಸಚಿವರುಗಳೇ, ಸಾರ್ವಜನಿಕ ಪ್ರತಿನಿಧಿಗಳೇ ಮತ್ತು ಛತ್ತೀಸ್ ಗಢದ ಮೂಲೆ ಮೂಲೆಗಳಿಂದ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೇ,ಛತ್ತೀಸ್ ಗಢ ರಜತ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 01st, 03:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವ ರಾಯ್ ಪುರದಲ್ಲಿ ಛತ್ತೀಸ್ ಗಢ ರಾಜ್ಯ ರಚನೆಯ 25ನೇ ವರ್ಷಾಚರಣೆಯ ಅಂಗವಾಗಿ ಛತ್ತೀಸ್ ಗಢ ರಜತ ಮಹೋತ್ಸವವನ್ನುದ್ದೇಶಿಸಿ ಭಾಷಣ ಮಾಡಿದರು. ರಸ್ತೆಗಳು, ಕೈಗಾರಿಕೆ, ಆರೋಗ್ಯ ರಕ್ಷಣೆ ಮತ್ತು ಇಂಧನದಂತಹ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡ 14,260 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಮತ್ತು ಪರಿವರ್ತಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಛತ್ತೀಸ್ ಗಢದ ಜನತೆಗೆ ಶುಭಾಶಯ ಕೋರಿದರು, ಇಂದು ಛತ್ತೀಸ್ ಗಢ ರಾಜ್ಯ ರಚನೆಯಾಗಿ 25 ವರ್ಷಗಳನ್ನು ಪೂರೈಸಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಛತ್ತೀಸ್ ಗಢದ ಎಲ್ಲಾ ಜನರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸಿದರು.ನವ ರಾಯ್‌ಪುರದಲ್ಲಿ ಛತ್ತೀಸ್‌ಗಢ ವಿಧಾನಸಭಾ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 01st, 01:30 pm
ಛತ್ತೀಸ್‌ಗಢದ ಅಭಿವೃದ್ಧಿಯ ಪಯಣಕ್ಕೆ ಇಂದು ಸುವರ್ಣ ಆರಂಭವಾಗಿದೆ. ವೈಯಕ್ತಿಕವಾಗಿ ಇದು ನನಗೆ ತುಂಬಾ ವಿಶೇಷ ಮತ್ತು ಸಂತೋಷದ ದಿನವಾಗಿದೆ. ಹಲವಾರು ದಶಕಗಳಿಂದ ನಾನು ಈ ಭೂಮಿಯೊಂದಿಗೆ ಸುದೀರ್ಘ ಭಾವನಾತ್ಮಕ ಬಾಂಧವ್ಯ ಹೊಂದಿದ್ದೇನೆ. ಒಬ್ಬ ಕೆಲಸಗಾರನಾಗಿ, ನಾನು ಛತ್ತೀಸ್‌ಗಢದಲ್ಲಿ ಸಾಕಷ್ಟು ಸಮಯ ಕಳೆದಿದ್ದೇನೆ, ಈ ಸ್ಥಳದಿಂದ ನಾನು ಬಹಳಷ್ಟು ಕಲಿತಿದ್ದೇನೆ. ಛತ್ತೀಸ್‌ಗಢದ ಜನರು ಮತ್ತು ಮಣ್ಣು ನನ್ನ ಜೀವನವನ್ನು ಬಹಳ ಆಶೀರ್ವದಿಸಿದೆ ಮತ್ತು ರೂಪಿಸಿದೆ. ಛತ್ತೀಸ್‌ಗಢದ ಕಲ್ಪನೆ ಮತ್ತು ಪರಿಕಲ್ಪನೆಯಿಂದ, ಅದರ ರಚನೆಗೆ ಕಾರಣವಾದ ಸಂಕಲ್ಪದವರೆಗೆ ಮತ್ತು ಆ ಕನಸಿನ ಸಾಕಾರದವರೆಗೆ, ರಾಜ್ಯದ ರೂಪಾಂತರದ ಪ್ರತಿಯೊಂದು ಹಂತಕ್ಕೂ ನಾನು ಸಾಕ್ಷಿಯಾಗಿದ್ದೇನೆ. ಇಂದು ಛತ್ತೀಸ್‌ಗಢವು ತನ್ನ 25 ವರ್ಷಗಳ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲು ತಲುಪುತ್ತಿರುವಾಗ, ಈ ಐತಿಹಾಸಿಕ ಕ್ಷಣದ ಭಾಗವಾಗಲು ನನಗೆ ಮತ್ತೊಮ್ಮೆ ಗೌರವ ದೊರೆತಿದೆ. ಈ ಬೆಳ್ಳಿ ಮಹೋತ್ಸವ ಆಚರಣೆ ಗುರುತಿಸಲು ರಾಜ್ಯದ ಜನರಿಗಾಗಿ ಈ ಹೊಸ ಶಾಸಕಾಂಗ ಕಟ್ಟಡವನ್ನು ಉದ್ಘಾಟಿಸಲು ನಾನು ಅದೃಷ್ಟಶಾಲಿಯಾಗಿದ್ದೇನೆ. ಈ ಶುಭ ಸಂದರ್ಭದಲ್ಲಿ ಛತ್ತೀಸ್‌ಗಢದ ಜನರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.ಛತ್ತೀಸ್‌ಗಢದ ನವ ರಾಯ್‌ಪುರದಲ್ಲಿ ಛತ್ತೀಸ್‌ಗಢ ವಿಧಾನಸಭಾ ನೂತನ ಕಟ್ಟಡವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 01st, 01:00 pm
ಛತ್ತೀಸ್‌ಗಢದ ನವ ರಾಯ್‌ಪುರದಲ್ಲಿ ಇಂದು ಛತ್ತೀಸ್‌ಗಢ ವಿಧಾನಸಭೆಯ ಹೊಸ ಕಟ್ಟಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಛತ್ತೀಸ್‌ಗಢದ ಅಭಿವೃದ್ಧಿ ಪ್ರಯಾಣಕ್ಕೆ ಇಂದಿನ ದಿನ ಸುವರ್ಣ ಆರಂಭ ಎಂದು ಹೇಳಿದರು. ವೈಯಕ್ತಿಕವಾಗಿ, ಇದು ತಮಗೆ ಬಹಳ ಸಂತೋಷದಾಯಕ ಮತ್ತು ಮಹತ್ವದ ದಿನ ಎಂದು ಅವರು ಹೇಳಿದರು. ಹಲವಾರು ದಶಕಗಳಿಂದ ಪೋಷಿಸಲ್ಪಟ್ಟ ಈ ಭೂಮಿಯೊಂದಿಗಿನ ತಮ್ಮ ಆಳವಾದ ಭಾವನಾತ್ಮಕ ಬಾಂಧವ್ಯವನ್ನು ಅವರು ಉಲ್ಲೇಖಿಸಿದರು. ಪಕ್ಷದ ಕಾರ್ಯಕರ್ತನಾಗಿ ತಾವಿಲ್ಲಿದ್ದ ಸಮಯವನ್ನು ನೆನಪಿಸಿಕೊಳ್ಳುತ್ತಾ, ಶ್ರೀ ಮೋದಿ ಅವರು ಛತ್ತೀಸ್‌ಗಢದಲ್ಲಿ ತಾವು ಸಾಕಷ್ಟು ಸಮಯವನ್ನು ಕಳೆದಿದ್ದನ್ನು ಮತ್ತು ಬಹಳಷ್ಟು ಕಲಿತುದನ್ನು ಹೇಳಿದರು. ಛತ್ತೀಸ್‌ಗಢದ ದೃಷ್ಟಿಕೋನ, ಅದರ ಸೃಷ್ಟಿಗಾಗಿನ ಸಂಕಲ್ಪ ಮತ್ತು ಆ ಸಂಕಲ್ಪದ ನೆರವೇರಿಕೆಯನ್ನು ಅವರು ನೆನಪಿಸಿಕೊಂಡರು, ಛತ್ತೀಸ್‌ಗಢದ ರೂಪಾಂತರದ ಪ್ರತಿ ಕ್ಷಣಕ್ಕೂ ತಾವು ಸಾಕ್ಷಿಯಾಗಿರುವುದನ್ನು ಅವರು ಉಲ್ಲೇಖಿಸಿದರು. ರಾಜ್ಯವು ತನ್ನ 25 ವರ್ಷಗಳ ಪ್ರಯಾಣದಲ್ಲಿ ಪ್ರಮುಖ ಮೈಲಿಗಲ್ಲನ್ನು ತಲುಪುತ್ತಿರುವಾಗ, ಈ ಕ್ಷಣದ ಭಾಗವಾಗಲು ಅವಕಾಶ ನೀಡಿದ್ದಕ್ಕಾಗಿ ಅವರು ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಬೆಳ್ಳಿ ಮಹೋತ್ಸವ ಆಚರಣೆಯ ಸಂದರ್ಭದಲ್ಲಿ, ರಾಜ್ಯದ ಜನತೆಗಾಗಿ ಹೊಸ ವಿಧಾನಸಭಾ ಕಟ್ಟಡವನ್ನು ಉದ್ಘಾಟಿಸುವ ಸೌಭಾಗ್ಯ ತಮಗೆ ಸಿಕ್ಕಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಸಂದರ್ಭದಲ್ಲಿ ಛತ್ತೀಸ್‌ಗಢದ ಜನರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ಅವರು ತಮ್ಮ ಶುಭಾಶಯಗಳು ಮತ್ತು ಅಭಿನಂದನೆಗಳನ್ನು ವ್ಯಕ್ತಪಡಿಸಿದರು.ನವ ರಾಯಪುರದಲ್ಲಿ ಬ್ರಹ್ಮಕುಮಾರಿಯರ ಧ್ಯಾನ ಕೇಂದ್ರ “ಶಾಂತಿ ಶಿಖರ್” ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 01st, 11:15 am
ಛತ್ತೀಸ್‌ಗಢ ರಾಜ್ಯಪಾಲರಾದ ಶ್ರೀ ರಾಮೆನ್ ಡೇಕಾ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ, ರಾಜಯೋಗಿನಿ ಸಹೋದರಿ ಜಯಂತಿ, ರಾಜಯೋಗಿ ಮೃತ್ಯುಂಜಯ್, ಎಲ್ಲಾ ಬ್ರಹ್ಮ ಕುಮಾರಿ ಸಹೋದರಿಯರೆ, ಇಲ್ಲಿ ಉಪಸ್ಥಿತರಿರುವ ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ಛತ್ತೀಸ್ ಗಢದ ನವ ರಾಯ್ ಪುರದಲ್ಲಿ ಶಾಂತಿ ಶಿಖರ - ಧ್ಯಾನ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ನೆರೆದಿದ್ದ ಬ್ರಹ್ಮ ಕುಮಾರಿಗಳನ್ನುದ್ದೇಶಿಸಿ ಭಾಷಣ ಮಾಡಿದರು
November 01st, 11:00 am
ಛತ್ತೀಸ್ ಗಢದ ನವ ರಾಯ್ ಪುರದಲ್ಲಿ ಇಂದು ಆಧ್ಯಾತ್ಮಿಕ ಕಲಿಕೆ, ಶಾಂತಿ ಮತ್ತು ಧ್ಯಾನಕ್ಕಾಗಿ ಆಧುನಿಕ ಕೇಂದ್ರವಾದ ಶಾಂತಿ ಶಿಖರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರಹ್ಮ ಕುಮಾರಿಗಳನ್ನು ಉದ್ದೇಶಿಸಿ ಭಾಷಣ ಮಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಛತ್ತೀಸ್ ಗಢ ರಚನೆಯಾಗಿ 25 ವರ್ಷಗಳು ತುಂಬುತ್ತಿರುವುದರಿಂದ ಇಂದು ಅತ್ಯಂತ ವಿಶೇಷ ದಿನವಾಗಿದೆ ಎಂದು ಹೇಳಿದರು. ಛತ್ತೀಸ್ ಗಢ, ಜಾರ್ಖಂಡ್ ಮತ್ತು ಉತ್ತರಾಖಂಡ್ ಗಳ ಜೊತೆಗೆ ಸ್ಥಾಪನೆಯಾಗಿ 25 ವರ್ಷಗಳು ಪೂರ್ಣಗೊಂಡಿವೆ . ದೇಶಾದ್ಯಂತ ಹಲವಾರು ಇತರ ರಾಜ್ಯಗಳು ಇಂದು ತಮ್ಮ ರಾಜ್ಯತ್ವ ದಿನವನ್ನು ಆಚರಿಸುತ್ತಿವೆ ಎಂದು ಹೇಳಿದರು. ಈ ಎಲ್ಲಾ ರಾಜ್ಯಗಳ ಜನತೆಗೆ ಅವರ ರಾಜ್ಯತ್ವ ದಿನದಂದು ಶ್ರೀ ಮೋದಿ ಅವರು ಶುಭಾಶಯಗಳನ್ನು ತಿಳಿಸಿದರು. ರಾಜ್ಯಗಳ ಅಭಿವೃದ್ಧಿಯು ರಾಷ್ಟ್ರದ ಪ್ರಗತಿಗೆ ಇಂಧನ ನೀಡುತ್ತದೆ ಎಂಬ ಮಾರ್ಗದರ್ಶಿ ತತ್ವದಿಂದ ಪ್ರೇರಿತರಾಗಿ, ನಾವು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಧ್ಯೇಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.