ಮಕ್ಕಳ ಮತ್ತು ಕೌಟುಂಬಿಕ ಚಲನಚಿತ್ರ ವಿಭಾಗದಲ್ಲಿ “ಬಾಫ್ಟಾ” ಪ್ರಶಸ್ತಿ ಗೆದ್ದ “ಬೂಂಗ್” ಚಿತ್ರ ತಂಡವನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ, “ಇದು ಮಣಿಪುರ ಮತ್ತು ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣವಾಗಿದೆ” ಎಂದು ಅವರು ಹೇಳಿದ್ದಾರೆ
February 23rd, 05:10 pm
ಇ.ಇ. ಬಿ.ಎ.ಎಫ್.ಟಿ.ಎ. ಚಲನಚಿತ್ರ ಪ್ರಶಸ್ತಿಗಳಲ್ಲಿ ಮಕ್ಕಳ ಮತ್ತು ಕೌಟುಂಬಿಕ ಚಲನಚಿತ್ರ ವಿಭಾಗದಲ್ಲಿ “ಬೂಂಗ್” ಚಲನಚಿತ್ರವನ್ನು ವಿಜೇತ ಎಂದು ಬ್ರಿಟಿಷ್ ಅಕಾಡೆಮಿ ಆಫ್ ಫಿಲ್ಮ್ ಅಂಡ್ ಟೆಲಿವಿಷನ್ ಆರ್ಟ್ಸ್ (ಬಿ.ಎ.ಎಫ್.ಟಿ.ಎ) ಘೋಷಿಸಿದೆ."ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ"ದಂದು ಹೆಣ್ಣು ಮಗುವಿನ ಘನತೆ, ಅವಕಾಶ ಮತ್ತು ಸಬಲೀಕರಣದ ಬದ್ಧತೆಯನ್ನು ಪ್ರಧಾನಮಂತ್ರಿ ಅವರು ಪುನರುಚ್ಚರಿಸಿದ್ದಾರೆ
January 24th, 07:08 pm
ಪ್ರತಿಯೊಂದು ಹೆಣ್ಣು ಮಗುವೂ ಘನತೆ, ಅವಕಾಶ ಮತ್ತು ಭರವಸೆಯ ಜೀವನವನ್ನು ನಡೆಸುವಂತೆ ನೋಡಿಕೊಳ್ಳುವ ಸರ್ಕಾರದ ಅಚಲ ಸಂಕಲ್ಪವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪುನರುಚ್ಚರಿಸಿದ್ದಾರೆ.ಇಥಿಯೋಪಿಯಾ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
December 17th, 12:25 pm
ಪುರಾತನ ಜ್ಞಾನ ಮತ್ತು ಆಧುನಿಕ ಆಕಾಂಕ್ಷೆಗಳನ್ನು ಹೊಂದಿರುವ ರಾಷ್ಟ್ರದ ಹೃದಯಭಾಗದಲ್ಲಿರುವ ಈ ಪ್ರಜಾಪ್ರಭುತ್ವದ ದೇವಾಲಯದಲ್ಲಿ ಉಪಸ್ಥಿತರಿರುವುದು ನನಗೆ ಗೌರವದ ಸಂಗತಿಯಾಗಿದೆ. ನಿಮ್ಮ ಸಂಸತ್ತು, ನಿಮ್ಮ ಜನತೆ ಮತ್ತು ನಿಮ್ಮ ಪ್ರಜಾಪ್ರಭುತ್ವದ ಪಯಣದ ಬಗ್ಗೆ ಅಪಾರ ಗೌರವವನ್ನಿಟ್ಟುಕೊಂಡು ನಾನು ಇಲ್ಲಿಗೆ ಬಂದಿದ್ದೇನೆ. ಭಾರತದ 140 ಕೋಟಿ ಜನರ ಪರವಾಗಿ, ನಾನು ಸ್ನೇಹ, ಸದ್ಭಾವನೆ ಮತ್ತು ಸಹೋದರತ್ವದ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ.ಇಥಿಯೋಪಿಯಾದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 17th, 12:12 pm
ಇಥಿಯೋಪಿಯಾದ ಕಾನೂನು ನಿರ್ಮಾಪಕರಿಗೆ ಭಾರತದ ಜನರಿಂದ ಸ್ನೇಹ ಮತ್ತು ಸದ್ಭಾವನೆಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸಂಸತ್ತನ್ನು ಉದ್ದೇಶಿಸಿ ಮಾತನಾಡುವುದು ಮತ್ತು ಈ ಪ್ರಜಾಪ್ರಭುತ್ವದ ದೇವಾಲಯದ ಮೂಲಕ ಇಥಿಯೋಪಿಯಾದ ಸಾಮಾನ್ಯ ಜನರನ್ನು ಉದ್ದೇಶಿಸಿ ಮಾತನಾಡುವುದು ಒಂದು ಸೌಭಾಗ್ಯ ಎಂಬುದರತ್ತ ಅವರು ಬೆಟ್ಟು ಮಾಡಿದರು. - ರೈತರು, ಉದ್ಯಮಿಗಳು, ಹೆಮ್ಮೆಯ ಮಹಿಳೆಯರು ಮತ್ತು ಯುವಜನರು - ದೇಶದ ಭವಿಷ್ಯವನ್ನು ರೂಪಿಸುತ್ತಿದ್ದಾರೆ ಎಂದು ಅವರು ಹೇಳಿದರು. ಇಥಿಯೋಪಿಯಾದ ಗ್ರೇಟ್ ಹಾನರ್ ನಿಶಾನ್ ಎಂಬ ಅತ್ಯುನ್ನತ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಅವರು ಇಥಿಯೋಪಿಯಾದ ಜನರು ಮತ್ತು ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು. ಸಂಬಂಧದ ಮಹತ್ವವನ್ನು ಪರಿಗಣಿಸಿ, ಭೇಟಿಯ ಸಮಯದಲ್ಲಿ ಎರಡೂ ದೇಶಗಳ ನಡುವಿನ ಹಳೆಯ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಯಾಗಿ ಉನ್ನತೀಕರಿಸಲಾಗಿದೆ ಎಂದು ಹೇಳಿದ ಪ್ರಧಾನಮಂತ್ರಿಯವರು ಇದಕ್ಕೆ ತಮ್ಮ ಸಂತೃಪ್ತಿಯನ್ನು ವ್ಯಕ್ತಪಡಿಸಿದರು.ಅಂಧ ಮಹಿಳಾ ಟಿ20 ವಿಶ್ವಕಪ್ ಚಾಂಪಿಯನ್‌ಗಳೊಂದಿಗಿನ ಪ್ರಧಾನಮಂತ್ರಿ ಅವರ ಸಂವಾದದ ಕನ್ನಡ ಅನುವಾದ
November 28th, 10:15 am
ಸಾರ್, ಆಕೆ ಸಹಿ ಮಾಡುತ್ತಾರೆ ಎಂದು ನಿಮಗೆ ಹೇಗೆ ಗೊತ್ತುಭಾರತೀಯ ಅಂಧ ಮಹಿಳಾ ಟಿ 20 ವಿಶ್ವಕಪ್ ಚಾಂಪಿಯನ್‌ಗಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 28th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ 7, ಲೋಕ ಕಲ್ಯಾಣ್ ಮಾರ್ಗದಲ್ಲಿ ನಿನ್ನೆ ಭಾರತೀಯ ಅಂಧ ಮಹಿಳಾ ಟಿ20 ವಿಶ್ವಕಪ್ ಚಾಂಪಿಯನ್‌ಗಳೊಂದಿಗೆ ಸಂವಾದ ನಡೆಸಿದರು. ಶ್ರೀ ನರೇಂದ್ರ ಮೋದಿ ಅವರು ಆಟಗಾರ್ತಿಯರೊಂದಿಗೆ ಆತ್ಮೀಯವಾಗಿ ಮಾತನಾಡಿದರು, ಅವರ ದೃಢಸಂಕಲ್ಪದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಆತ್ಮವಿಶ್ವಾಸ ಮತ್ತು ಸ್ಥಿತಿಸ್ಥಾಪಕತ್ವದಿಂದ ತಮ್ಮ ಪಯಣವನ್ನು ಮುಂದುವರಿಸಲು ಅವರನ್ನು ಪ್ರೋತ್ಸಾಹಿಸಿದರು. ಕಠಿಣ ಪರಿಶ್ರಮದ ಮೂಲಕ ಮುನ್ನಡೆಯುವವರು ಕ್ರೀಡಾ ಕ್ಷೇತ್ರದಲ್ಲಿ ಮಾತ್ರವಲ್ಲದೆ ಜೀವನದಲ್ಲಿಯೂ ಸಹ ಎಂದಿಗೂ ವಿಫಲರಾಗುವುದಿಲ್ಲ ಎಂದು ಅವರು ಒತ್ತಿ ಹೇಳಿದರು. ಆಟಗಾರರು ತಮ್ಮದೇ ಆದ ಅಸ್ಮಿತೆಯನ್ನು ಸೃಷ್ಟಿಸಿಕೊಂಡಿದ್ದು, ಅದು ಅವರ ಆತ್ಮವಿಶ್ವಾಸವನ್ನು ಬಲಪಡಿಸುತ್ತದೆ ಎಂದು ಅವರು ಉಲ್ಲೇಖಿಸಿದರು.ಗುಜರಾತ್‌ನ ದೇಡಿಯಾಪದದಲ್ಲಿ ನಡೆದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
November 15th, 03:15 pm
ಜೈ ಜೋಹರ್! ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ ಜೀ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಗುಜರಾತ್ ಬಿ.ಜೆ.ಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜೀ, ಗುಜರಾತ್ ಸರ್ಕಾರದ ಸಚಿವರಾದ ನರೇಶ್‌ಭಾಯಿ ಪಟೇಲ್ ಮತ್ತು ಜಯರಾಮ್‌ಭಾಯಿ ಗಮಿತ್ ಜೀ, ಸಂಸತ್ತಿನಲ್ಲಿ ನನ್ನ ಹಳೆಯ ಸಹೋದ್ಯೋಗಿ ಮನ್ಸುಖ್‌ಭಾಯಿ ವಾಸವ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಭಗವಾನ್ ಬಿರ್ಸಾ ಮುಂಡಾ ಅವರ ಕುಟುಂಬದ ಎಲ್ಲಾ ಸದಸ್ಯರೇ, ಈ ಕಾರ್ಯಕ್ರಮದ ಭಾಗವಾಗಿರುವ ದೇಶದ ಮೂಲೆ ಮೂಲೆಗಳಿಂದ ಬಂದ ನನ್ನ ಬುಡಕಟ್ಟು ಸಹೋದರ, ಸಹೋದರಿಯರೇ, ಇತರ ಎಲ್ಲಾ ಗಣ್ಯರು ಮತ್ತು ಈ ಸಮಯದಲ್ಲಿ ಹಲವಾರು ರಾಷ್ಟ್ರೀಯ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ ಅನೇಕ ಜನರು. ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಅವರು, ಸಚಿವರು ಮತ್ತು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೇಡಿಯಾಪಾಡಾದಲ್ಲಿ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅಂಗವಾಗಿ ಜನಜಾತೀಯಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
November 15th, 03:00 pm
ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಸ್ಮರಣಾರ್ಥ ಗುಜರಾತಿನ ದೇಡಿಯಾಪಾಡಾದಲ್ಲಿ ಇಂದು ನಡೆದ ಜನಜಾತೀಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ₹9,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನರ್ಮದಾ ಮಾತೆಯ ಪವಿತ್ರ ಭೂಮಿ ಇಂದು ಮತ್ತೊಂದು ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದ ಶ್ರೀ ಮೋದಿ, ಭಾರತದ ಏಕತೆ ಮತ್ತು ವೈವಿಧ್ಯತೆಯನ್ನು ಸಂಭ್ರಮಿಸಲು ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ 150ನೇ ಜಯಂತಿಯನ್ನು ಇದೇ ಸ್ಥಳದಲ್ಲಿ ಆಚರಿಸಲಾಯಿತು ಎಂದು ನೆನಪಿಸಿಕೊಂಡರು, ಅಂದು ಭಾರತ ಪರ್ವಕ್ಕೆ ಚಾಲನೆ ನೀಡಲಾಯಿತು. ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅದ್ಧೂರಿ ಆಚರಣೆಯೊಂದಿಗೆ, ನಾವು ಭಾರತ ಪರ್ವದ ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಗವಾನ್ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದರು. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಇಡೀ ಬುಡಕಟ್ಟು ಪ್ರದೇಶದಲ್ಲಿ ಸ್ವಾತಂತ್ರ್ಯದ ಮನೋಭಾವವನ್ನು ಜಾಗೃತಗೊಳಿಸಿದ ಗೋವಿಂದ ಗುರುಗಳ ಆಶೀರ್ವಾದ ಸಹ ಈ ಕಾರ್ಯಕ್ರಮಕ್ಕೆ ಇದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಅವರು ವೇದಿಕೆಯಿಂದ ಗೋವಿಂದ ಗುರುಗಳಿಗೆ ಗೌರವ ನಮನ ಸಲ್ಲಿಸಿದರು. ಸ್ವಲ್ಪ ಸಮಯದ ಹಿಂದೆ ದೇವಮೋಗ್ರ ಮಾತೆಯ ದೇಗುಲಕ್ಕೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿತು ಮತ್ತು ಮತ್ತೊಮ್ಮೆ ಅವರ ಪಾದಗಳಿಗೆ ನಮಸ್ಕರಿಸಿದೆ ಎಂದು ಅವರು ಹೇಳಿದರು.ನವ ರಾಯ್‌ಪುರದ “ಸತ್ಯಸಾಯಿ ಸಂಜೀವಿನಿ ಮಕ್ಕಳ ಹೃದ್ರೋಗ ಆಸ್ಪತ್ರೆ”ಯಲ್ಲಿ ಯಶಸ್ವೀ ಹೃದ್ರೋಗ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಮಕ್ಕಳೊಂದಿಗೆ ಪ್ರಧಾನಮಂತ್ರಿ ಸಂವಾದ
November 01st, 05:30 pm
ನಾನು ಹಾಕಿ ಚಾಂಪಿಯನ್. ನಾನು ಹಾಕಿಯಲ್ಲಿ 5 ಪದಕಗಳನ್ನು ಗೆದ್ದಿದ್ದೇನೆ. ನನ್ನ ಶಾಲೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿದಾಗ, ನನ್ನ ಹೃದಯದಲ್ಲಿ ರಂಧ್ರವಿದೆ ಎಂದು ವೈದ್ಯರು ಪತ್ತೆ ಹಚ್ಚಿದರು. ನಾನು ಚಿಕಿತ್ಸೆಗಾಗಿ ಇಲ್ಲಿಗೆ ಬಂದೆ, ಶಸ್ತ್ರಚಿಕಿತ್ಸೆಗೆ ಒಳಗಾದೆ, ನಾನೀಗ ಗುಣಮುಖವಾಗಿದ್ದು, ನಾನು ಮತ್ತೆ ಹಾಕಿ ಆಡಬಹುದು.ಜನ್ಮಜಾತ ಹೃದಯ ಕಾಯಿಲೆಗಳನ್ನು ಉತ್ತಮ ಚಿಕಿತ್ಸೆ ಮೂಲಕ ನಿವಾರಿಸಿಕೊಂಡ ಮಕ್ಕಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ
November 01st, 05:15 pm
'ಹೃದಯದ ಮಾತು (ದಿಲ್ ಕಿ ಬಾತ್)' ಕಾರ್ಯಕ್ರಮದ ಭಾಗವಾಗಿ, ಛತ್ತೀಸ್ ಗಢದ ನವ ರಾಯ್ ಪುರದ ಶ್ರೀ ಸತ್ಯ ಸಾಯಿ ಸಂಜೀವನಿ ಆಸ್ಪತ್ರೆಯಲ್ಲಿ ನಡೆದ 'ಜೀವನದ ಉಡುಗೊರೆ' ಸಮಾರಂಭದಲ್ಲಿ ಜನ್ಮಜಾತ ಹೃದಯ ಕಾಯಿಲೆಗಳಿಂದ ಯಶಸ್ವಿಯಾಗಿ ಚಿಕಿತ್ಸೆ ಪಡೆದ 2500 ಮಕ್ಕಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂವಾದ ನಡೆಸಿದರು.ನವೆಂಬರ್ 1ರಂದು ಛತ್ತೀಸ್ ಗಢಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
October 31st, 12:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 1ರಂದು ಛತ್ತೀಸ್ ಗಢಕ್ಕೆ ಭೇಟಿ ನೀಡಲಿದ್ದಾರೆ.ಸೆಪ್ಟೆಂಬರ್ 17ರಂದು ಮಧ್ಯಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ
September 16th, 02:49 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಧಾರ್ ನಲ್ಲಿ 'ಸ್ವಸ್ಥ ನಾರಿ ಸಶಕ್ತ ಪರಿವಾರ್' ಮತ್ತು '8ನೇ ರಾಷ್ಟ್ರೀಯ ಪೋಷಣ್ ಮಾಹ್' ಅಭಿಯಾನಗಳಿಗೆ ಅವರು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಹಲವಾರು ಇತರ ಉಪಕ್ರಮಗಳಿಗೆ ಶಂಕುಸ್ಥಾಪನೆ ಮತ್ತು ಚಾಲನೆ ನೀಡಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಡೆಹ್ರಾಡೂನ್‌ಗೆ ಭೇಟಿ ನೀಡಿದ ಪ್ರಧಾನಮಂತ್ರಿ, ಉತ್ತರಾಖಂಡದಲ್ಲಿ ಪ್ರವಾಹದಿಂದ ಆಗಿರುವ ಹಾನಿಯ ಮೌಲ್ಯಮಾಪನಕ್ಕಾಗಿ ಪರಿಶೀಲನಾ ಸಭೆ ನಡೆಸಿದರು
September 11th, 06:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಸೆಪ್ಟೆಂಬರ್ 11ರಂದು ಡೆಹ್ರಾಡೂನ್‌ಗೆ ಭೇಟಿ ನೀಡಿದರು ಮತ್ತು ಪ್ರವಾಹ ಪರಿಸ್ಥಿತಿ ಮತ್ತು ಉತ್ತರಾಖಂಡದ ಪೀಡಿತ ಪ್ರದೇಶಗಳಲ್ಲಿ ಮೇಘಸೊಧೀೕಟ, ಮಳೆ ಮತ್ತು ಭೂಕುಸಿತದಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದರು.ಪಂಜಾಬ್‌ನ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಮಂತ್ರಿ
September 09th, 05:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಸೆಪ್ಟೆಂಬರ್ 9ರಂದು ಪಂಜಾಬ್‌ಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿಅವರು ಪ್ರವಾಹ ಪರಿಸ್ಥಿತಿ ಮತ್ತು ಪಂಜಾಬ್‌ನ ಪೀಡಿತ ಪ್ರದೇಶಗಳಲ್ಲಿ ಮೇಘಸ್ಫೋಟ ಮತ್ತು ಭಾರಿ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದರು.‘ವೋಕಲ್ ಫಾರ್ ಲೋಕಲ್’ – ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಸ್ವದೇಶಿ ಹೆಮ್ಮೆಯಿಂದ ಹಬ್ಬಗಳನ್ನು ಆಚರಿಸಲು ಒತ್ತಾಯಿಸಿದರು
August 31st, 11:30 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಿದ ಭದ್ರತಾ ಪಡೆಗಳು ಮತ್ತು ನಾಗರಿಕರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ರೀಡಾಕೂಟಗಳು, ಸೌರಶಕ್ತಿ, ‘ಆಪರೇಷನ್ ಪೋಲೊ’ ಮತ್ತು ಭಾರತೀಯ ಸಂಸ್ಕೃತಿಯ ಜಾಗತಿಕ ಹರಡುವಿಕೆಯಂತಹ ಪ್ರಮುಖ ವಿಷಯಗಳನ್ನು ಸಹ ಅವರು ಪ್ರಸ್ತಾಪಿಸಿದರು. ಹಬ್ಬದ ಋತುವಿನಲ್ಲಿ ಮೇಡ್-ಇನ್-ಇಂಡಿಯಾ ಉತ್ಪನ್ನಗಳನ್ನು ಖರೀದಿಸುವ ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಪ್ರಧಾನಿ ನಾಗರಿಕರಿಗೆ ನೆನಪಿಸಿದರು.ನಮೀಬಿಯಾ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
July 09th, 07:55 pm
ತಮ್ಮ ನಮೀಬಿಯಾ ಅಧಿಕೃತ ಪ್ರವಾಸದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಂಡ್‌ಹೋಕ್ ನಲ್ಲಿರುವ ಸ್ಟೇಟ್ ಹೌಸ್ ನಲ್ಲಿ ನಮೀಬಿಯಾ ಅಧ್ಯಕ್ಷರಾದ ಗೌರವಾನ್ವಿತ ಡಾ. ನೆಟುಂಬೊ ನಂದಿ-ನದೈತ್ವಾ ಅವರನ್ನು ಭೇಟಿಯಾದರು. ಸ್ಟೇಟ್ ಹೌಸ್ ಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ಅಧ್ಯಕ್ಷೆ ನಂದಿ-ನದೈತ್ವಾ ಅವರು ಆತ್ಮೀಯವಾಗಿ ಬರಮಾಡಿಕೊಂಡು, ಅವರಿಗೆ ವಿಧ್ಯುಕ್ತ ಸ್ವಾಗತವನ್ನು ನೀಡಿದರು. ಭಾರತದಿಂದ ನಮೀಬಿಯಾ ಗೆ ಪ್ರಧಾನಮಂತ್ರಿ ಮಟ್ಟದಲ್ಲಿ ಈ ಭೇಟಿಯು 27 ವರ್ಷಗಳ ನಂತರ ನಡೆದಿದೆ. ಅಲ್ಲದೆ, ಈ ವರ್ಷದ ಮಾರ್ಚ್ ನಲ್ಲಿ ಅಧಿಕಾರ ವಹಿಸಿಕೊಂಡ ನಂತರ ಅಧ್ಯಕ್ಷೆ ನಂದಿ-ನದೈತ್ವಾ ಅವರು ಆಯೋಜಿಸಿದ ಮೊದಲ ದ್ವಿಪಕ್ಷೀಯ ಅಧಿಕೃತ ಭೇಟಿ ಇದಾಗಿತ್ತು.ಅಮೆರಿಕ ಉಪಾಧ್ಯಕ್ಷ ಮತ್ತು ಕುಟುಂಬಕ್ಕೆ ಪ್ರಧಾನಮಂತ್ರಿ ಆತಿಥ್ಯ
April 21st, 08:56 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಮೆರಿಕಾದ ಉಪಾಧ್ಯಕ್ಷರಾದ ಗೌರವಾನ್ವಿತ ಜೆ.ಡಿ. ವ್ಯಾನ್ಸ್ ಅವರನ್ನು ಭೇಟಿ ಮಾಡಿದರು. ಅವರೊಂದಿಗೆ ಎರಡನೇ ಮಹಿಳೆ ಶ್ರೀಮತಿ ಉಷಾ ವ್ಯಾನ್ಸ್, ಅವರ ಮಕ್ಕಳು ಮತ್ತು ಯು.ಎಸ್. ಆಡಳಿತದ ಹಿರಿಯ ಸದಸ್ಯರು ಇದ್ದರು.ಬವಾಲಿಯಾಲಿ ಧಾಮ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 20th, 04:35 pm
ಮಹಂತ್ ಶ್ರೀ ರಾಮ್ ಬಾಪು ಜಿ, ಸಮಾಜದ ಗೌರವಾನ್ವಿತ ಸದಸ್ಯರೆ ಮತ್ತು ಇಲ್ಲಿ ನೆರೆದಿರುವ ಲಕ್ಷಾಂತರ ಶ್ರದ್ಧಾಭಕ್ತಿಯುಳ್ಳ ಸಹೋದರ ಸಹೋದರಿಯರೆ - ನಮಸ್ಕಾರ ಮತ್ತು ಜೈ ಠಾಕುರ್!ಬವಾಲಿಯಾಲಿ ಧಾಮ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
March 20th, 04:30 pm
ಗುಜರಾತ್‌ನ ಭರ್ವಾಡ್ ಸಮುದಾಯದ ಬವಲಿಯಾಲಿ ಧಾಮ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಅವರು ಮಹಾಂತ ಶ್ರೀ ರಾಮ್ ಬಾಪು ಜಿ, ಸಮುದಾಯದ ಮುಖಂಡರು ಮತ್ತು ಸಾವಿರಾರು ಭಕ್ತರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು. ಭರ್ವಾಡ್ ಸಮುದಾಯದ ಸಂಪ್ರದಾಯಗಳಿಗೆ ಮತ್ತು ಈ ಸಂಪ್ರದಾಯಗಳನ್ನು ಎತ್ತಿಹಿಡಿಯಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಪೂಜ್ಯ ಸಂತರು ಮತ್ತು ಮಹಾಂತರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ, ಐತಿಹಾಸಿಕ ಮಹಾಕುಂಭದ ಅಪಾರ ಸಂತೋಷ ಮತ್ತು ಹೆಮ್ಮೆಯನ್ನು ಪ್ರಸ್ತಾಪಿಸಿದರು. ಈ ಪವಿತ್ರ ಕಾರ್ಯಕ್ರಮದ ಸಮಯದಲ್ಲಿ ಮಹಾಂತ ಶ್ರೀ ರಾಮ್ ಬಾಪು ಜಿ ಅವರಿಗೆ ಮಹಾಮಂಡಲೇಶ್ವರ ಎಂಬ ಬಿರುದು ನೀಡಿ ಗೌರವಿಸಿದ ಮಹತ್ವದ ಸಂದರ್ಭವನ್ನು ಪ್ರಸ್ತಾಪಿಸಿದರು. ಇದು ಒಂದು ಸ್ಮರಣೀಯ ಸಾಧನೆ ಮತ್ತು ಎಲ್ಲರಿಗೂ ಅಪಾರ ಸಂತೋಷದ ಕ್ಷಣವಾಗಿದೆ. ಸಮುದಾಯದ ಕುಟುಂಬಗಳಿಗೆ ಮಹಾಂತ ಶ್ರೀ ರಾಮ್ ಬಾಪು ಜಿ ಅವರ ಕೊಡುಗೆಗಳು ಮತ್ತು ಸಾಧನೆಗಳನ್ನು ಆಚರಿಸುವ ಸಂದರ್ಭದಲ್ಲಿ ಅವರು ಶುಭಾಶಯಗಳನ್ನು ತಿಳಿಸಿದರು.ಪ್ರಧಾನಮಂತ್ರಿಗಳು ಚಾಲನೆ ನೀಡಿದ್ದ ಬೇಟಿ ಬಚಾವೋ, ಬೇಟಿ ಪಡಾವೋ ಆಂದೋಲನಕ್ಕೆ ದಶಕ ಪೂರೈಸಿದ ಸಂಭ್ರಮ
January 22nd, 10:04 am
ಬೇಟಿ ಬಚಾವೋ, ಬೇಟಿ ಪಡಾವೋ ಆಂದೋಲನ ಯಶಸ್ವಿಯಾಗಿ 10 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇದು ಪರಿವರ್ತನಾತ್ಮಕ, ಜನಶಕ್ತಿಯ ಕೇಂದ್ರಿತ ಉಪಕ್ರಮವಾಗಿದೆ ಮತ್ತು ಸಮಾಜದ ಎಲ್ಲಾ ಸ್ತರ ಜನರಿಂದ ಪಾಲ್ಗೊಳ್ಳುವಿಕೆಗೆ ಸೆಳೆಯುವಲ್ಲಿ ಯಶಸ್ವಿಯಾಗಿದೆ ಎಂದು ಬಣ್ಣಿಸಿದರು. ಬೇಟಿ ಬಚಾವೋ, ಬೇಟಿ ಪಡಾವೋ ಆಂದೋಲನವು ಲಿಂಗ ತಾರತಮ್ಯವನ್ನು ನಿವಾರಿಸುವಲ್ಲಿ ಮತ್ತು ಹೆಣ್ಣು ಮಕ್ಕಳ ಸಬಲೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಅವರು ಎತ್ತಿ ಹೇಳಿದರು. ಐತಿಹಾಸಿಕವಾಗಿ ಕಡಿಮೆ ಮಕ್ಕಳ ಲಿಂಗ ಅನುಪಾತಗಳನ್ನು ಹೊಂದಿರುವ ಜಿಲ್ಲೆಗಳು ಯೋಜನೆ ಅನುಷ್ಠಾನದ ನಂತರ ಗಮನಾರ್ಹ ಸುಧಾರಣೆ ಕಂಡಿರುವುದು ವರದಿಯಾಗಿದೆ ಹಾಗೂ ಈ ಆಂದೋಲನವನ್ನು ತಳಮಟ್ಟದಲ್ಲಿ ಕ್ರಿಯಾಶೀಲವಾಗಿ ಮುನ್ನಡೆಸಿದ ಎಲ್ಲ ಪಾಲುದಾರರನ್ನೂ ಶ್ರೀ ಮೋದಿ ಅವರು ಅಭಿನಂದಿಸಿದ್ದಾರೆ.