ವಾರಣಾಸಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ/ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯ ಅವರ ಭಾಷಣ
April 11th, 11:00 am
ವೇದಿಕೆಯಲ್ಲಿ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್; ಮುಖ್ಯಮಂತ್ರಿ, ಗೌರವಾನ್ವಿತ ಶ್ರೀ ಯೋಗಿ ಆದಿತ್ಯನಾಥ್; ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್; ಹಾಜರಿದ್ದ ಗೌರವಾನ್ವಿತ ಮಂತ್ರಿಗಳು; ಇತರ ಸಾರ್ವಜನಿಕ ಪ್ರತಿನಿಧಿಗಳು; ಬನಾಸ್ ಡೈರಿಯ ಅಧ್ಯಕ್ಷ ಶಂಕರ್ ಭಾಯ್ ಚೌಧರಿ; ಮತ್ತು ತಮ್ಮ ಆಶೀರ್ವಾದವನ್ನು ಅರ್ಪಿಸಲು ಇಷ್ಟು ದೊಡ್ಡ ಸಂಖ್ಯೆಯಲ್ಲಿಇಲ್ಲಿ ನೆರೆದಿರುವ ನನ್ನ ಪ್ರೀತಿಯ ಕುಟುಂಬ ಸದಸ್ಯರೆಲ್ಲರೂ- ನಮ್ಮ ಕಾಶಿ ಕುಟುಂಬದ ಪ್ರೀತಿಯ ಜನರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು. ಈ ಸಂದರ್ಭದಲ್ಲಿ ನಾನು ವಿನಮ್ರತೆಯಿಂದ ನಿಮ್ಮ ಆಶೀರ್ವಾದವನ್ನು ಕೋರುತ್ತೇನೆ. ಈ ಅಗಾಧ ಪ್ರೀತಿಗೆ ನಾನು ನಿಜವಾಗಿಯೂ ಋುಣಿಯಾಗಿದ್ದೇನೆ. ಕಾಶಿ ನನ್ನದು, ನಾನು ಕಾಶಿಗೆ ಸೇರಿದವನು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ 3,880 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
April 11th, 10:49 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ 3,880 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಶಿಯೊಂದಿಗಿನ ತಮ್ಮ ಆಳವಾದ ಸಂಬಂಧವನ್ನು ಎತ್ತಿ ತೋರಿಸಿದರು, ತಮಗೆ ಕುಟುಂಬದವರು ಮತ್ತು ಈ ಪ್ರದೇಶದ ಜನರು ನೀಡಿದ ಆಶೀರ್ವಾದಕ್ಕಾಗಿ ಅವರಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ತಮಗೆ ನೀಡಿರುವ ಪ್ರೀತಿ ಮತ್ತು ಬೆಂಬಲವನ್ನು ಶ್ಲಾಘಿಸಿದರು. ಈ ಪ್ರೀತಿಗೆ ತಾವು ಋಣಿಯಾಗಿರುವುದಾಗಿ ಅವರು ಒತ್ತಿ ಹೇಳಿದರು, ಕಾಶಿ ತಮ್ಮದು ಮತ್ತು ತಾವು ಕಾಶಿಗೆ ಸೇರಿದವರು ಎಂದು ಹೇಳಿದರು. ನಾಳೆ ಹನುಮಾನ್ ಜಯಂತಿಯ ಶುಭ ಸಂದರ್ಭ ಎಂದು ಹೇಳಿದ ಶ್ರೀ ಮೋದಿ, ಕಾಶಿಯಲ್ಲಿ ಸಂಕಟ ಮೋಚನ ಮಹಾರಾಜರ ಸನ್ನಿಧಿಗೆ ಭೇಟಿ ನೀಡುವ ಅವಕಾಶ ಸಿಕ್ಕಿದ್ದು ತಮಗೆ ದೊರೆತ ಗೌರವ ಎಂದರು. ಹನುಮಾನ್ ಜಯಂತಿಗೂ ಮುನ್ನ, ಕಾಶಿಯ ಜನರು ಅಭಿವೃದ್ಧಿಯ ಹಬ್ಬವನ್ನು ಆಚರಿಸಲು ಹೇಗೆ ಒಗ್ಗೂಡಿದ್ದಾರೆ ಎಂಬುದನ್ನು ಅವರು ಎತ್ತಿ ತೋರಿಸಿದರು.