ಇಥಿಯೋಪಿಯಾ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

December 17th, 12:25 pm

ಪುರಾತನ ಜ್ಞಾನ ಮತ್ತು ಆಧುನಿಕ ಆಕಾಂಕ್ಷೆಗಳನ್ನು ಹೊಂದಿರುವ ರಾಷ್ಟ್ರದ ಹೃದಯಭಾಗದಲ್ಲಿರುವ ಈ ಪ್ರಜಾಪ್ರಭುತ್ವದ ದೇವಾಲಯದಲ್ಲಿ ಉಪಸ್ಥಿತರಿರುವುದು ನನಗೆ ಗೌರವದ ಸಂಗತಿಯಾಗಿದೆ. ನಿಮ್ಮ ಸಂಸತ್ತು, ನಿಮ್ಮ ಜನತೆ ಮತ್ತು ನಿಮ್ಮ ಪ್ರಜಾಪ್ರಭುತ್ವದ ಪಯಣದ ಬಗ್ಗೆ ಅಪಾರ ಗೌರವವನ್ನಿಟ್ಟುಕೊಂಡು ನಾನು ಇಲ್ಲಿಗೆ ಬಂದಿದ್ದೇನೆ. ಭಾರತದ 140 ಕೋಟಿ ಜನರ ಪರವಾಗಿ, ನಾನು ಸ್ನೇಹ, ಸದ್ಭಾವನೆ ಮತ್ತು ಸಹೋದರತ್ವದ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ.

ಇಥಿಯೋಪಿಯಾದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 17th, 12:12 pm

ಇಥಿಯೋಪಿಯಾದ ಕಾನೂನು ನಿರ್ಮಾಪಕರಿಗೆ ಭಾರತದ ಜನರಿಂದ ಸ್ನೇಹ ಮತ್ತು ಸದ್ಭಾವನೆಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸಂಸತ್ತನ್ನು ಉದ್ದೇಶಿಸಿ ಮಾತನಾಡುವುದು ಮತ್ತು ಈ ಪ್ರಜಾಪ್ರಭುತ್ವದ ದೇವಾಲಯದ ಮೂಲಕ ಇಥಿಯೋಪಿಯಾದ ಸಾಮಾನ್ಯ ಜನರನ್ನು ಉದ್ದೇಶಿಸಿ ಮಾತನಾಡುವುದು ಒಂದು ಸೌಭಾಗ್ಯ ಎಂಬುದರತ್ತ ಅವರು ಬೆಟ್ಟು ಮಾಡಿದರು. - ರೈತರು, ಉದ್ಯಮಿಗಳು, ಹೆಮ್ಮೆಯ ಮಹಿಳೆಯರು ಮತ್ತು ಯುವಜನರು - ದೇಶದ ಭವಿಷ್ಯವನ್ನು ರೂಪಿಸುತ್ತಿದ್ದಾರೆ ಎಂದು ಅವರು ಹೇಳಿದರು. ಇಥಿಯೋಪಿಯಾದ ಗ್ರೇಟ್ ಹಾನರ್ ನಿಶಾನ್ ಎಂಬ ಅತ್ಯುನ್ನತ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಅವರು ಇಥಿಯೋಪಿಯಾದ ಜನರು ಮತ್ತು ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು. ಸಂಬಂಧದ ಮಹತ್ವವನ್ನು ಪರಿಗಣಿಸಿ, ಭೇಟಿಯ ಸಮಯದಲ್ಲಿ ಎರಡೂ ದೇಶಗಳ ನಡುವಿನ ಹಳೆಯ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಯಾಗಿ ಉನ್ನತೀಕರಿಸಲಾಗಿದೆ ಎಂದು ಹೇಳಿದ ಪ್ರಧಾನಮಂತ್ರಿಯವರು ಇದಕ್ಕೆ ತಮ್ಮ ಸಂತೃಪ್ತಿಯನ್ನು ವ್ಯಕ್ತಪಡಿಸಿದರು.

ಭಾರತ - ಜೋರ್ಡಾನ್ ವ್ಯಾಪಾರ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

December 16th, 12:24 pm

ನಿನ್ನೆ ಘನತೆವೆತ್ತ ಮಹಾರಾಜರೊಂದಿಗೆ ನನ್ನ ಚರ್ಚೆಯ ಸಾರವೂ ಇದಾಗಿತ್ತು. ಭೌಗೋಳಿಕತೆಯನ್ನು ಅವಕಾಶವಾಗಿ ಮತ್ತು ಅವಕಾಶವನ್ನು ಬೆಳವಣಿಗೆಯಾಗಿ ಹೇಗೆ ಪರಿವರ್ತಿಸುವುದು ಎಂಬುದರ ಕುರಿತು ನಾವು ವಿವರವಾದ ಚರ್ಚೆಗಳನ್ನು ನಡೆಸಿದ್ದೇವೆ.

ಭಾರತ-ಜೋರ್ಡಾನ್ ವ್ಯಾಪಾರ ವೇದಿಕೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಮತ್ತು ಘನತೆವೆತ್ತ ದೊರೆ ಅಬ್ದುಲ್ಲಾ II ಅವರ ಭಾಷಣ

December 16th, 12:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಘನವೆತ್ತ ದೊರೆ ಅಬ್ದುಲ್ಲಾ II ಅವರು ಇಂದು ಅಮ್ಮನ್ ನಲ್ಲಿ ನಡೆದ 'ಭಾರತ-ಜೋರ್ಡಾನ್ ವಾಣಿಜ್ಯ ವೇದಿಕೆ'ಯನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಯುವರಾಜ ಹುಸೇನ್ ಹಾಗೂ ಜೋರ್ಡಾನ್ ನ ವಾಣಿಜ್ಯ, ಕೈಗಾರಿಕೆ ಮತ್ತು ಹೂಡಿಕೆ ಸಚಿವರು ಕೂಡ ಭಾಗವಹಿಸಿದ್ದರು. ಉಭಯ ದೇಶಗಳ ನಡುವಿನ ಪರಸ್ಪರ ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸುವ ಮಹತ್ವವನ್ನು ಇಬ್ಬರೂ ನಾಯಕರು ಗುರುತಿಸಿದರು. ಅಲ್ಲದೆ, ಇಲ್ಲಿರುವ ಸಾಮರ್ಥ್ಯ ಮತ್ತು ಅವಕಾಶಗಳನ್ನು ಬಳಸಿಕೊಂಡು ಅಭಿವೃದ್ಧಿ ಹಾಗೂ ಸಮೃದ್ಧಿಯನ್ನಾಗಿ ಪರಿವರ್ತಿಸಲು ಎರಡೂ ಕಡೆಯ ಉದ್ಯಮ ಮುಖಂಡರಿಗೆ ಅವರು ಕರೆ ನೀಡಿದರು. ಜೋರ್ಡಾನ್ನ ಮುಕ್ತ ವ್ಯಾಪಾರ ಒಪ್ಪಂದಗಳು ಮತ್ತು ಭಾರತದ ಆರ್ಥಿಕ ಶಕ್ತಿಯನ್ನು ಒಗ್ಗೂಡಿಸುವ ಮೂಲಕ, ದಕ್ಷಿಣ ಏಷ್ಯಾ ಮತ್ತು ಪಶ್ಚಿಮ ಏಷ್ಯಾ ನಡುವೆ ಹಾಗೂ ಅದರಾಚೆಗೂ ಒಂದು ಆರ್ಥಿಕ ಕಾರಿಡಾರ್ ಅನ್ನು ನಿರ್ಮಿಸಬಹುದು ಎಂದು ರಾಜರು ಅಭಿಪ್ರಾಯಪಟ್ಟರು.

ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ ವಿಸಿ ಮೂಲಕ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

November 27th, 11:01 am

ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಜಿ. ಕಿಶನ್ ರೆಡ್ಡಿ ಜೀ; ಆಂಧ್ರಪ್ರದೇಶದ ಕೈಗಾರಿಕಾ ಸಚಿವರಾದ ಶ್ರೀ ಟಿ. ಜಿ. ಭರತ್ ಜೀ; ಇನ್ ಸ್ಪೇಸ್ ಅಧ್ಯಕ್ಷರಾದ ಶ್ರೀ ಪವನ್ ಗೋಯೆಂಕಾ ಜೀ; ಸ್ಕೈರೂಟ್ ತಂಡ; ಇತರ ಗಣ್ಯರು; ಮಹಿಳೆಯರೇ ಮತ್ತು ಮಹನೀಯರೇ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೈದರಾಬಾದ್‌ನ ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಉದ್ಘಾಟನೆ

November 27th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ತೆಲಂಗಾಣದ ಹೈದರಾಬಾದ್‌ನಲ್ಲಿರುವ ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಂದು ದೇಶವು ಬಾಹ್ಯಾಕಾಶ ಕ್ಷೇತ್ರದಲ್ಲಿ ಅಭೂತಪೂರ್ವ ಅವಕಾಶವನ್ನು ಕಾಣುತ್ತಿದೆ ಎಂದು ಹೇಳಿದರು. ಮತ್ತು ಖಾಸಗಿ ವಲಯವು ಎತ್ತರಕ್ಕೆ ಹಾರಾಡುತ್ತಿರುವುದರಿಂದ ಭಾರತದ ಬಾಹ್ಯಾಕಾಶ ಪೂರಕ ವ್ಯವಸ್ಥೆಯು ಭಾರಿ ಏರಿಕೆಯನ್ನು ಕಂಡಿದೆ ಎಂದು ಪ್ರಮುಖವಾಗಿ ಪ್ರಸ್ತಾಪಿಸಿದರು. ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಭಾರತದ ಹೊಸ ಚಿಂತನೆ, ನಾವೀನ್ಯತೆ ಮತ್ತು ಯುವ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ ಮತ್ತು ದೇಶದ ಯುವಕರ ನಾವೀನ್ಯತೆ, ಅಪಾಯ ಎದುರಿಸುವ ಸಾಮರ್ಥ್ಯ ಮತ್ತು ಉದ್ಯಮಶೀಲತೆ ಹೊಸ ಎತ್ತರವನ್ನು ತಲುಪುತ್ತಿದೆ ಎಂದು ಅವರು ಒತ್ತಿ ಹೇಳಿದರು.

ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ: ಅಧಿವೇಶನ 2

November 22nd, 09:57 pm

ನೈಸರ್ಗಿಕ ವಿಕೋಪಗಳು ಮಾನವೀಯತೆಗೆ ಪ್ರಮುಖ ಸವಾಲನ್ನು ಒಡ್ಡುತ್ತಲೇ ಇವೆ. ಈ ವರ್ಷವೂ ಅವು ಜಾಗತಿಕ ಜನಸಂಖ್ಯೆಯ ಹೆಚ್ಚಿನ ಭಾಗದ ಮೇಲೆ ಪರಿಣಾಮ ಬೀರಿವೆ. ಪರಿಣಾಮಕಾರಿ ವಿಪತ್ತು ಸಿದ್ಧತೆ ಮತ್ತು ಪ್ರತಿಕ್ರಿಯೆಗಾಗಿ ಅಂತಾರಾಷ್ಟ್ರೀಯ ಸಹಕಾರವನ್ನು ಬಲಪಡಿಸುವ ಅಗತ್ಯವನ್ನು ಈ ಘಟನೆಗಳು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ.

ಜೋಹಾನ್ಸ್‌ ಬರ್ಗ್ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು

November 22nd, 09:35 pm

ಯಾರನ್ನೂ ಹಿಂದೆ ಬಿಡದ ಸಮಗ್ರ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆ ಕುರಿತು ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕೌಶಲ್ಯಪೂರ್ಣ ವಲಸೆ, ಪ್ರವಾಸೋದ್ಯಮ, ಆಹಾರ ಭದ್ರತೆ, ಕೃತಕ ಬುದ್ಧಿಮತ್ತೆ, ಡಿಜಿಟಲ್ ಆರ್ಥಿಕತೆ, ನಾವೀನ್ಯತೆ ಮತ್ತು ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯ ಅಡಿಯಲ್ಲಿ ಗುಂಪು ಕಾರ್ಯಚಟುವಟಿಕೆ ಮೂಲಕ ಮಾಡಿದ ಕಾರ್ಯವನ್ನು ಶ್ಲಾಘಿಸಿದರು. ಈ ಪ್ರಕ್ರಿಯೆಯಲ್ಲಿ, ನವದೆಹಲಿ ಶೃಂಗಸಭೆಯ ಸಮಯದಲ್ಲಿ ತೆಗೆದುಕೊಂಡ ಕೆಲವು ಐತಿಹಾಸಿಕ ನಿರ್ಧಾರಗಳನ್ನು ಮುಂದುವರಿಸಲಾಗಿದೆ ಅಭಿವೃದ್ಧಿಯ ಹೊಸ ನಿಯತಾಂಕಗಳನ್ನು ನೋಡುವ ಸಮಯ ಬಂದಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು, ವಿಶೇಷವಾಗಿ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಜಿ20 ಶೃಂಗಸಭೆ ನಡೆದಾಗ, ಬೆಳವಣಿಗೆಯ ಅಸಮತೋಲನ ಮತ್ತು ಪ್ರಕೃತಿಯ ಅತಿಯಾದ ಶೋಷಣೆಯನ್ನು ಪರಿಹರಿಸುವ ಒಂದು ಮಾನದಂಡ ಇದು. ಈ ಸಂದರ್ಭದಲ್ಲಿ, ಭಾರತದ ನಾಗರಿಕತೆಯ ಬುದ್ಧಿವಂತಿಕೆಯ ಆಧಾರದ ಮೇಲೆ ಸಮಗ್ರ ಮಾನವತಾವಾದದ ಕಲ್ಪನೆಯನ್ನು ಅನ್ವೇಷಿಸಬೇಕು ಎಂದು ಅವರು ತಿಳಿಸಿದರು. ಸಮಗ್ರ ಮಾನವತಾವಾದವನ್ನು ಅವರು ವಿಸ್ತರಿಸಿ, ಮಾನವರು, ಸಮಾಜ ಮತ್ತು ಪ್ರಕೃತಿಯ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಳ್ಳುತ್ತಾರೆ ಮತ್ತು ಪ್ರಗತಿ ಮತ್ತು ಗ್ರಹದ ನಡುವಿನ ಸಾಮರಸ್ಯವನ್ನು ಹೇಗೆ ಸಾಧಿಸಬಹುದು ಎಂದು ಹೇಳಿದರು.

ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿರುವ ಜಿ20 ನಾಯಕರ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ

November 19th, 10:42 pm

2025 ರ ನವೆಂಬರ್ 21 ರಿಂದ 23 ರವರೆಗೆ ಪ್ರಧಾನಿ ಮೋದಿ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ಗೆ ಭೇಟಿ ನೀಡಲಿದ್ದು, 20 ನೇ ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಶೃಂಗಸಭೆಯ ಅಧಿವೇಶನಗಳಲ್ಲಿ, ಪ್ರಧಾನಿಯವರು ಜಿ20 ಕಾರ್ಯಸೂಚಿಯಲ್ಲಿನ ಪ್ರಮುಖ ವಿಷಯಗಳ ಕುರಿತು ಭಾರತದ ದೃಷ್ಟಿಕೋನಗಳನ್ನು ಪ್ರಸ್ತುತಪಡಿಸಲಿದ್ದಾರೆ. ಶೃಂಗಸಭೆಯ ಸಂದರ್ಭದಲ್ಲಿ, ಅವರು ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ ಮತ್ತು ದಕ್ಷಿಣ ಆಫ್ರಿಕಾ ಆಯೋಜಿಸುತ್ತಿರುವ ಭಾರತ-ಬ್ರೆಜಿಲ್-ದಕ್ಷಿಣ ಆಫ್ರಿಕಾ (ಐಬಿಎಸ್‌ಎ) ನಾಯಕರ ಸಭೆಯಲ್ಲಿಯೂ ಭಾಗವಹಿಸಲಿದ್ದಾರೆ.

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 19th, 07:01 pm

ತಮಿಳುನಾಡು ರಾಜ್ಯಪಾಲರಾದ ಆರ್.ಎನ್. ರವಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಎಲ್. ಮುರುಗನ್ ಜಿ, ತಮಿಳುನಾಡು ಕೃಷಿ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ. ಕೆ. ರಾಮಸಾಮಿ ಜಿ, ವಿವಿಧ ಕೃಷಿ ಸಂಸ್ಥೆಗಳ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ಇತರೆ ಜನಪ್ರತಿನಿಧಿಗಳೆ, ನನ್ನ ಪ್ರೀತಿಯ ರೈತ ಸಹೋದರ ಸಹೋದರಿಯರೆ ಮತ್ತು ಡಿಜಿಟಲ್ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರಿಕೊಂಡಿರುವ ದೇಶಾದ್ಯಂತದ ಲಕ್ಷಾಂತರ ರೈತರೆ! ನಾನು ನಿಮ್ಮೆಲ್ಲರಿಗೂ ವಣಕ್ಕಂ ಮತ್ತು ನಮಸ್ಕಾರದೊಂದಿಗೆ ಶುಭಾಶಯ ಕೋರುತ್ತೇನೆ. ಮೊದಲನೆಯದಾಗಿ, ಇಲ್ಲಿರುವ ನಿಮ್ಮೆಲ್ಲರಿಗೂ ಮತ್ತು ದೇಶಾದ್ಯಂತದ ನನ್ನ ಎಲ್ಲಾ ರೈತ ಸಹೋದರ ಸಹೋದರಿಯರಿಗೂ ಕ್ಷಮೆ ಯಾಚಿಸಲು ಬಯಸುತ್ತೇನೆ. ಇಂದು ಬೆಳಗ್ಗೆ ನಾನು ಸತ್ಯಸಾಯಿ ಬಾಬಾ ಅವರಿಗೆ ಮೀಸಲಾದ ಪುಟ್ಟಪರ್ತಿ ಕಾರ್ಯಕ್ರಮದಲ್ಲಿದ್ದೆ, ಅಲ್ಲಿ ನಡೆದ ಕಾರ್ಯಕ್ರಮ ನಿರೀಕ್ಷೆಗಿಂತ ಹೆಚ್ಚು ಸಮಯ ನಡೆದ ಕಾರಣ ನಾನು ಇಲ್ಲಿಗೆ ತಲುಪಲು ಸುಮಾರು 1 ತಾಸು ತಡವಾಯಿತು. ಅದರಿಂದ ನಾನಿಲ್ಲಿಗೆ ಬರುವುದು ತಡವಾಯಿತು. ಇದರಿಂದ ನಿಮಗೆ ಉಂಟಾಗಿರಬಹುದಾದ ಯಾವುದೇ ಅನನುಕೂಲತೆಗಾಗಿ ನಾನು ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತೇನೆ. ದೇಶಾದ್ಯಂತ ಅನೇಕ ಜನರು ಕಾಯುತ್ತಿರುವುದನ್ನು ನಾನು ನೋಡುತ್ತಿದ್ದೇನೆ, ಆದ್ದರಿಂದ ನಾನು ನಿಮ್ಮ ಕ್ಷಮೆ ಕೋರುತ್ತೇನೆ.

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು

November 19th, 02:30 pm

ತಮಿಳುನಾಡಿನ ಕೊಯಮತ್ತೂರಿನಲ್ಲಿ ಇಂದು ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ಕೊಯಮತ್ತೂರಿನ ಪವಿತ್ರ ನೆಲದಲ್ಲಿ ಮರುಧಮಲೈ ಮುರುಗನ್ ದೇವರಿಗೆ ನಮಸ್ಕಾರ ಸಲ್ಲಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಕೊಯಮತ್ತೂರು ಸಂಸ್ಕೃತಿ, ಸಹಾನುಭೂತಿ ಮತ್ತು ಸೃಜನಶೀಲತೆಯ ಭೂಮಿ ಎಂದು ಅವರು ಬಣ್ಣಿಸಿದರು ಮತ್ತು ಅದು ದಕ್ಷಿಣ ಭಾರತದ ಉದ್ಯಮಶೀಲ ಶಕ್ತಿಯ ಕೇಂದ್ರವಾಗಿದೆ ಎಂದು ಹೇಳಿದರು. ನಗರದ ಜವಳಿ ವಲಯವು ರಾಷ್ಟ್ರೀಯ ಆರ್ಥಿಕತೆಗೆ ಪ್ರಮುಖ ಕೊಡುಗೆ ನೀಡುತ್ತಿದೆ ಎಂದು ಅವರು ಒತ್ತಿ ಹೇಳಿದರು. ಕೊಯಮತ್ತೂರಿನ ಮಾಜಿ ಸಂಸದರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ಈಗ ಉಪರಾಷ್ಟ್ರಪತಿಯಾಗಿ ದೇಶಕ್ಕೆ ಮಾರ್ಗದರ್ಶನ ನೀಡುತ್ತಿರುವುದರಿಂದ ಕೊಯಮತ್ತೂರು ಈಗ ಮತ್ತಷ್ಟು ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.

ನವೆಂಬರ್ 3 ರಂದು ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ 2025 ಅನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ

November 02nd, 09:29 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 3 ರಂದು ಬೆಳಗ್ಗೆ 9:30ರ ಸುಮಾರಿಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ (ಇ.ಎಸ್.ಟಿ.ಐ.ಸಿ) 2025 ಅನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮುಂಬೈನಲ್ಲಿ ನಡೆದ 'ಕಡಲಯಾನ ನಾಯಕರ ಸಮಾವೇಶ'ದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

October 29th, 04:09 pm

ಮಹಾರಾಷ್ಟ್ರದ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಅವರೇ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಸರ್ಬಾನಂದ ಸೋನೊವಾಲ್ ಅವರೇ, ಶಂತನು ಠಾಕೂರ್ ಅವರೇ ಮತ್ತು ಕೀರ್ತಿವರ್ಧನ್ ಸಿಂಗ್ ಅವರೇ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಅವರೇ ಮತ್ತು ಅಜಿತ್ ಪವಾರ್ ಅವರೇ, ಸಮುದ್ರಯಾನ ಮತ್ತು ಇತರ ಉದ್ಯಮಗಳ ಪ್ರಮುಖರೇ, ಇತರ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿ ಇಂಡಿಯಾ ಮ್ಯಾರಿಟೈಮ್ ವೀಕ್ 2025ರ ಸಂದರ್ಭದಲ್ಲಿ ಕಡಲ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು

October 29th, 04:08 pm

ಇಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ ಇಂಡಿಯಾ ಮ್ಯಾರಿಟೈಮ್ ವೀಕ್ 2025ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಡಲ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಜಾಗತಿಕ ಕಡಲ ಸಿಇಒ ವೇದಿಕೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಜಾಗತಿಕ ಕಡಲ ನಾಯಕರ ಸಮಾವೇಶಕ್ಕೆ ಆಗಮಿಸಿದ ಎಲ್ಲರನ್ನೂ ಸ್ವಾಗತಿಸಿದರು. ಈ ಕಾರ್ಯಕ್ರಮವು 2016ರಲ್ಲಿ ಮುಂಬೈನಲ್ಲಿ ಪ್ರಾರಂಭವಾಯಿತು ಮತ್ತು ಇದೀಗ ಇದು ಜಾಗತಿಕ ಶೃಂಗಸಭೆಯಾಗಿ ವಿಕಸನಗೊಂಡಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು. 85ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆಯು ಬಲವಾದ ಸಂದೇಶವನ್ನು ಕಳುಹಿಸುತ್ತದೆ ಎಂದು ಶ್ರೀ ಮೋದಿ ಬಣ್ಣಿಸಿದರು. ನೌಕಾ ಸಾರಿಗೆ ದಿಗ್ಗಜರ ಸಿಇಒಗಳು, ಸ್ಟಾರ್ಟ್‌ ಅಪ್‌ ಗಳು, ನೀತಿ ನಿರೂಪಕರು ಮತ್ತು ನಾವೀನ್ಯಕಾರರು ಎಲ್ಲರೂ ಈ ಕಾರ್ಯಕ್ರಮದಲ್ಲಿ ಒಗ್ಗೂಡಿರುವುದನ್ನು ಅವರು ಗಮನಿಸಿದರು. ಇದಲ್ಲದೆ, ಸಣ್ಣ ದ್ವೀಪ ರಾಷ್ಟ್ರಗಳ ಪ್ರತಿನಿಧಿಗಳ ಹಾಜರಾತಿಯನ್ನು ಅವರು ಶ್ಲಾಘಿಸಿದರು ಮತ್ತು ಅವರ ಸಾಮೂಹಿಕ ದೃಷ್ಟಿಕೋನವು ಶೃಂಗಸಭೆಯ ಪರಸ್ಪರ ಸಹಕಾರ ಮತ್ತು ಶಕ್ತಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ ಎಂದು ಹೇಳಿದರು.

ಯುನೈಟೆಡ್ ಕಿಂಗ್ ಡಮ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

October 09th, 11:25 am

ಭಾರತಕ್ಕೆ ಮೊದಲ ಭೇಟಿ ನೀಡಿರುವ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್ ಅವರನ್ನು ಇಂದು ಮುಂಬೈನಲ್ಲಿ ಸ್ವಾಗತಿಸಲು ನನಗೆ ಸಂತೋಷವಾಗಿದೆ..

ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 01st, 10:45 am

ವೇದಿಕೆಯಲ್ಲಿ ಉಪಸ್ಥಿತರಿರುವ ಗೌರವಾನ್ವಿತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಾರ್ಯದರ್ಶಿ(ಸರ್ಕಾರ್ಯವ್ಹ) ಶ್ರೀ ದತ್ತಾತ್ರೇಯ ಹೊಸಬಾಳೆ ಜಿ, ಕೇಂದ್ರ ಸಚಿವರಾದ ಶ್ರೀ ಗಜೇಂದ್ರ ಶೇಖಾವತ್ ಜಿ, ದೆಹಲಿಯ ಜನಪ್ರಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಎಲ್ಲಾ ಸ್ವಯಂಸೇವಕರೆ, ಇತರ ಗಣ್ಯರೆ, ಮಹನೀಯರೆ ಮತ್ತು ಮಹಿಳೆಯರೆ!

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು

October 01st, 10:30 am

ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ ಎಸ್‌ ಎಸ್) ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮೋದಿ ಅವರು, ಎಲ್ಲಾ ನಾಗರಿಕರಿಗೆ ನವರಾತ್ರಿ ಶುಭಾಶಯಗಳನ್ನು ತಿಳಿಸಿದರು, ಇಂದು ಮಹಾ ನವಮಿ ಮತ್ತು ಸಿದ್ಧಿದಾತ್ರಿ ದೇವಿಯ ದಿನವಾಗಿದೆ ಎಂದು ಹೇಳಿದರು. ನಾಳಿನ ವಿಜಯದಶಮಿಯು ಭವ್ಯ ಹಬ್ಬವಾಗಿದ್ದು, ಇದು ಭಾರತೀಯ ಸಂಸ್ಕೃತಿಯ ಅನ್ಯಾಯದ ವಿರುದ್ಧ ನ್ಯಾಯದ ವಿಜಯ, ಸುಳ್ಳಿನ ವಿರುದ್ದ ಸತ್ಯದ ವಿಜಯ ಮತ್ತು ಕತ್ತಲೆಯ ವಿರುದ್ಧ ಬೆಳಕಿನ ವಿಜಯವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನೂರು ವರ್ಷಗಳ ಹಿಂದೆ ಇಂತಹ ಪವಿತ್ರ ಸಂದರ್ಭದಲ್ಲಿ ಸ್ಥಾಪಿಸಲಾಗಿದ್ದು, ಇದು ಕಾಕತಾಳೀಯವಲ್ಲ ಎಂದು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ಸಾವಿರಾರು ವರ್ಷಗಳ ಹಿಂದಿನ ಪ್ರಾಚೀನ ಪರಂಪರೆಯ ಪುನರುಜ್ಜೀವನ ಇದಾಗಿದ್ದು, ಇದರಲ್ಲಿ ರಾಷ್ಟ್ರೀಯ ಪ್ರಜ್ಞೆಯು ಪ್ರತಿ ಯುಗದ ಸವಾಲುಗಳನ್ನು ಎದುರಿಸಲು ಹೊಸ ರೂಪಗಳಲ್ಲಿ ಪ್ರಕಟವಾಗುತ್ತದೆ ಎಂದು ಅವರು ಹೇಳಿದರು. ಈ ಯುಗದಲ್ಲಿ, ಸಂಘವು ಆ ಶಾಶ್ವತ ರಾಷ್ಟ್ರೀಯ ಪ್ರಜ್ಞೆಯ ಸಾಕಾರವಾಗಿದೆ ಎಂದು ಅವರು ಹೇಳಿದರು.

ಮುಂದಿನ ದಶಕದ ಭಾರತ - ಜಪಾನ್ ಜಂಟಿ ಮುನ್ನೋಟ: ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮುನ್ನಡೆಸಲು ಎಂಟು ಮಾರ್ಗಗಳು

August 29th, 07:11 pm

ಕಾನೂನುಬದ್ಧ ಆಳ್ವಿಕೆಯ ಆಧಾರದ ಮೇಲೆ ಮುಕ್ತ, ತೆರೆದ, ಶಾಂತಿಯುತ, ಸಮೃದ್ಧ ಮತ್ತು ಸಂಘರ್ಷ-ಮುಕ್ತ ಇಂಡೋ-ಪೆಸಿಫಿಕ್ ಪ್ರದೇಶದ ಸಾಮಾನ್ಯ ದೃಷ್ಟಿಕೋನವನ್ನು ಹೊಂದಿರುವ ಎರಡು ದೇಶಗಳಾಗಿ, ಪೂರಕ ಸಂಪನ್ಮೂಲ ದತ್ತಿ, ತಾಂತ್ರಿಕ ಸಾಮರ್ಥ್ಯಗಳು ಮತ್ತು ವೆಚ್ಚ ಸ್ಪರ್ಧಾತ್ಮಕತೆಯನ್ನು ಹೊಂದಿರುವ ಎರಡು ಆರ್ಥಿಕತೆಗಳು ಮತ್ತು ಸ್ನೇಹ ಮತ್ತು ಪರಸ್ಪರ ಸದ್ಭಾವನೆಯ ದೀರ್ಘ ಸಂಪ್ರದಾಯವನ್ನು ಹೊಂದಿರುವ ಎರಡು ರಾಷ್ಟ್ರಗಳಾಗಿ, ಮುಂದಿನ ದಶಕದಲ್ಲಿ ನಮ್ಮ ದೇಶಗಳಲ್ಲಿ ಮತ್ತು ಪ್ರಪಂಚದಲ್ಲಿ ಒಟ್ಟಾರೆಯಾಗಿ ಬದಲಾವಣೆಗಳು ಮತ್ತು ಅವಕಾಶಗಳನ್ನು ಜಂಟಿಯಾಗಿ ನಿಭಾಯಿಸುವ ಉದ್ದೇಶವನ್ನು ಭಾರತ ಮತ್ತು ಜಪಾನ್ ವ್ಯಕ್ತಪಡಿಸುತ್ತವೆ, ನಮ್ಮ ಆಯಾ ದೇಶೀಯ ಗುರಿಗಳನ್ನು ಸಾಧಿಸಲು ಸಹಾಯ ಮಾಡುತ್ತವೆ ಮತ್ತು ನಮ್ಮ ದೇಶಗಳು ಹಾಗು ಮುಂದಿನ ಪೀಳಿಗೆಯ ಜನರನ್ನು ಹಿಂದೆಂದಿಗಿಂತಲೂ ಹೆಚ್ಚು ನಿಕಟವಾಗಿಸುತ್ತವೆ.

ಭಾರತ-ಫಿಜಿ ಜಂಟಿ ಹೇಳಿಕೆ: ʻವೀಲೋಮನಿ ದೋಸ್ತಿʼಯ ಸ್ಫೂರ್ತಿಯೊಂದಿಗೆ ಪಾಲುದಾರಿಕೆ

August 25th, 01:52 pm

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫಿಜಿ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಸಿಟಿವೇನಿ ರಬೂಕಾ ಅವರು 2025ರ ಆಗಸ್ಟ್ 24 ರಿಂದ 26ರವರೆಗೆ ಭಾರತ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಸ್ತುತ ತಮ್ಮ ಅಧಿಕಾರಾವಧಿಯಲ್ಲಿ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಂಡಿರುವ ಪ್ರಧಾನಮಂತ್ರಿ ರಬುಕಾ ಅವರು ತಮ್ಮ ಪತ್ನಿಯ ಸಂಗಡವಾಗಿ ನವದೆಹಲಿಗೆ ಭೇಟಿ ನೀಡಿದ್ದಾರೆ. ಫಿಜಿ ಆರೋಗ್ಯ ಮತ್ತು ವೈದ್ಯಕೀಯ ಸೇವೆಗಳ ಸಚಿವರಾದ ಗೌರವಾನ್ವಿತ ಶ್ರೀ ಆಂಟೋನಿಯೊ ಲಾಲಬಲಾವು ಮತ್ತು ಫಿಜಿ ಗಣರಾಜ್ಯದ ಸರ್ಕಾರದ ಹಿರಿಯ ಅಧಿಕಾರಿಗಳ ನಿಯೋಗ ಅವರ ಜೊತೆಯಲ್ಲಿದೆ.

ಫಿಜಿ ಪ್ರಧಾನಮಂತ್ರಿ ಅವರ ಜತೆಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

August 25th, 12:30 pm

ಆ ಸಮಯದಲ್ಲಿ, ನಾವು ಭಾರತ-ಪೆಸಿಫಿಕ್‌ ದ್ವೀಪಗಳ ಸಹಕಾರ ವೇದಿಕೆಯನ್ನು (ಎಫ್‌ಐಪಿಐಸಿ) ಪ್ರಾರಂಭಿಸಿದ್ದೇವೆ. ಈ ಉಪಕ್ರಮವು ಭಾರತ-ಫಿಜಿ ಸಂಬಂಧಗಳನ್ನು ಬಲಪಡಿಸುವುದಲ್ಲದೆ, ಇಡೀ ಪೆಸಿಫಿಕ್‌ ಪ್ರದೇಶದೊಂದಿಗಿನ ನಮ್ಮ ಸಂಬಂಧಗಳನ್ನು ಬಲಪಡಿಸಿದೆ. ಇಂದು, ಪ್ರಧಾನಮಂತ್ರಿ ರಬೂಕಾ ಅವರ ಭೇಟಿಯೊಂದಿಗೆ, ನಾವು ನಮ್ಮ ಪಾಲುದಾರಿಕೆಯಲ್ಲಿ ಹೊಸ ಅಧ್ಯಾಯವನ್ನು ಬರೆಯುತ್ತಿದ್ದೇವೆ.