The teacher recruitment scam has destroyed thousands of families’ dreams: PM Modi in Birbhum, West Bengal
April 09th, 11:45 am
PM Modi launched a sharp attack on the TMC in his address at a massive public meeting in Birbhum, West Bengal. He alleged large-scale irregularities in welfare schemes and called for a decisive mandate for change in the upcoming Assembly elections. He urged people to press the lotus button at every booth and ensure a government that delivers development, dignity and security.The pot of TMC’s sins is now full: PM Modi in Asansol, West Bengal
April 09th, 11:40 am
PM Modi addressed a massive public meeting in Asansol, West Bengal, where he raised concerns over women’s safety, governance and illegal infiltration. Calling for a decisive mandate in the upcoming Assembly elections, he sharply criticised the ruling dispensation, alleging a politics of fear. The PM asserted that if there is one party committed to ensuring women’s rights, it is the BJP.PM Modi’s Haldia, Asansol & Birbhum rallies build massive momentum ahead of West Bengal polls
April 09th, 11:30 am
Prime Minister Narendra Modi delivered a high-energy address in Haldia, galvanising BJP supporters and setting the tone for the upcoming West Bengal Assembly elections. Addressing a massive gathering, PM Modi invoked the spirit of past political transformation and projected a similar wave sweeping across the state.ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಕೈಗೊಳ್ಳುತ್ತಿರುವ ಕ್ರಮಗಳ ಪರಾಮರ್ಶೆಗಾಗಿ ತಮ್ಮ ನೇತೃತ್ವದಲ್ಲಿ ಭದ್ರತೆ ಕುರಿತಾದ ಸಂಪುಟ ಸಮಿತಿ (ಸಿಸಿಎಸ್) ಸಭೆಯ ನಡೆಸಿದ ಪ್ರಧಾನಮಂತ್ರಿ
April 01st, 10:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ವಿವಿಧ ಸಚಿವಾಲಯಗಳು/ಇಲಾಖೆಗಳು ಕೈಗೊಂಡಿರುವ ಕ್ರಮಗಳ ಪರಾಮರ್ಶೆಗಾಗಿ ಇಂದು ದಿಲ್ಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿಯ (ಸಿಸಿಎಸ್) ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಬಿಕ್ಕಟ್ಟು ಎದುರಿಸಲು ಮುಂದೆ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆಯೂ ಚರ್ಚಿಸಿದರು. ಈ ವಿಷಯದ ಬಗ್ಗೆ ನಡೆದ ಎರಡನೇ ವಿಶೇಷ ʻಸಿಸಿಎಸ್ʼ ಸಭೆ ಇದಾಗಿದೆ.ಪಶ್ಚಿಮ ಏಷ್ಯಾದ ಸಂಘರ್ಷದ ಹಿನ್ನೆಲೆಯಲ್ಲಿ ಪರಿಸ್ಥಿತಿ ಮತ್ತು ಪರಿಹಾರ ಕ್ರಮಗಳ ಪರಾಮರ್ಶೆಗಾಗಿ ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಭದ್ರತಾ ವಿಷಯಗಳ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆಯಿತು
March 22nd, 09:06 pm
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಪರಿಸ್ಥಿತಿ ಹಾಗೂ ಪ್ರಸ್ತುತ ಮತ್ತು ಪ್ರಸ್ತಾವಿತ ಪರಿಹಾರ ಕ್ರಮಗಳನ್ನು ಪರಾಮರ್ಶಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭದ್ರತಾ ವಿಷಯಗಳ ಸಂಪುಟ ಸಮಿತಿ (ಸಿಸಿಎಸ್) ಸಭೆಯ ಅಧ್ಯಕ್ಷತೆ ವಹಿಸಿದ್ದರು.ಕೋಟಾ ವಿಮಾನ ನಿಲ್ದಾಣ ನಿರ್ಮಾಣದ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವೀಡಿಯೊ ಕಾನ್ಫರೆನ್ಸ್ ಭಾಷಣ
March 07th, 03:15 pm
ಕಳೆದ ವಾರವಷ್ಟೇ ನನಗೆ ರಾಜಸ್ಥಾನಕ್ಕೆ ಭೇಟಿ ನೀಡುವ ಅವಕಾಶ ಸಿಕ್ಕಿತು. ಪವಿತ್ರ ಭೂಮಿ ಅಜ್ಮೀರ್‌ನಿಂದ, ಸಾವಿರಾರು ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿದ್ದೇವೆ. ಅದೇ ಕಾರ್ಯಕ್ರಮದಲ್ಲಿ, ರಾಜಸ್ಥಾನದ 21,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಲಾಯಿತು. ಅಜ್ಮೀರ್ ಭೇಟಿಯ ಕೆಲವೇ ದಿನಗಳ ನಂತರ, ಇಂದು ಕೋಟಾಗೆ ಸಂಪರ್ಕ ಹೊಂದಿದ ಈ ಪ್ರಮುಖ ವಿಮಾನ ನಿಲ್ದಾಣ ಯೋಜನೆಯನ್ನು ಪ್ರಾರಂಭಿಸುವ ಸೌಭಾಗ್ಯ ನನಗೆ ಸಿಕ್ಕಿದೆ. ಒಂದೇ ವಾರದೊಳಗೆ, ರಾಜಸ್ಥಾನದಲ್ಲಿನ ಈ 2 ಪ್ರಮುಖ ಅಭಿವೃದ್ಧಿ ಕಾರ್ಯಕ್ರಮಗಳು ಪ್ರಬಲ ಸಂದೇಶವನ್ನು ರವಾನಿಸುತ್ತವೆ. ರಾಜಸ್ಥಾನ ಇಂದು ಎಷ್ಟು ವೇಗವಾಗಿ ಪ್ರಗತಿ ಸಾಧಿಸುತ್ತಿದೆ ಎಂಬುದನ್ನು ಅವು ತೋರಿಸುತ್ತವೆ. ಅದು ಮೂಲಸೌಕರ್ಯವಾಗಿರಲಿ, ಯುವಕರಿಗೆ ಉದ್ಯೋಗಾವಕಾಶಗಳಾಗಲಿ, ರೈತರು ಮತ್ತು ಮಹಿಳೆಯರ ಯೋಜನೆಗಳಾಗಲಿ ಅಥವಾ ಪ್ರತಿಯೊಂದು ವಲಯದ ಉಪಕ್ರಮಗಳು ರಾಜಸ್ಥಾನದಾದ್ಯಂತ ಹೆಚ್ಚಿನ ವೇಗದಲ್ಲಿ ನಡೆಯುತ್ತಿವೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಕೋಟಾ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ; ಪ್ರದೇಶದ ಪರಿವರ್ತನೆಗೆ ಒತ್ತು
March 07th, 02:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ ಕೋಟಾ ವಿಮಾನ ನಿಲ್ದಾಣದ ಶಂಕುಸ್ಥಾಪನೆ ನೆರವೇರಿಸಿದರು. ಇದು ಹಾಡೋತಿ ಪ್ರಾಂತ್ಯದ ಪಾಲಿಗೆ ಒಂದು ಮಹತ್ವದ ಮೈಲಿಗಲ್ಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನವು ಅಭೂತಪೂರ್ವ ವೇಗದಲ್ಲಿ ಪ್ರಗತಿ ಹೊಂದುತ್ತಿದೆ. ಈ ಹೊಸ ವಿಮಾನ ನಿಲ್ದಾಣವು ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಗೆ ವೇಗವರ್ಧಕವಾಗಲಿದೆ, ಎಂದು ಒತ್ತಿಹೇಳಿದರು.PM chairs 50th meeting of PRAGATI
December 31st, 08:11 pm
PM Modi chaired the 50th meeting of PRAGATI earlier today, marking a significant milestone in a decade-long journey of cooperative, outcome-driven governance. During the meeting, he reviewed five critical infrastructure projects across various sectors, spanning 5 States, with a cumulative cost of more than ₹40,000 crore. The PM remarked that PRAGATI is a powerful accelerator to achieve Viksit Bharat @ 2047.ಝರಿಯಾ ಕಲ್ಲಿದ್ದಲು ಕ್ಷೇತ್ರದಲ್ಲಿ ಬೆಂಕಿ ಅವಘಡ, ಭೂಕುಸಿತ ಮತ್ತು ಬಾಧಿತ ಕುಟುಂಬಗಳ ಪುನರ್ವಸತಿಗಾಗಿ ಪರಿಷ್ಕೃತ ಝರಿಯಾ ಮಾಸ್ಟರ್ ಪ್ಲಾನ್ ಗೆ ಸಂಪುಟದ ಅನುಮೋದನೆ
June 25th, 03:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ಝರಿಯಾ ಕಲ್ಲಿದ್ದಲು ಕ್ಷೇತ್ರದಲ್ಲಿ ಬೆಂಕಿ ಅವಘಡ, ಭೂ ಕುಸಿತ ಮತ್ತು ಬಾಧಿತ ಕುಟುಂಬಗಳ ಪುನರ್ವಸತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಪರಿಷ್ಕೃತ ಝರಿಯಾ ಮಾಸ್ಟರ್ ಪ್ಲಾನ್ (ಜೆಎಂಪಿ) ಅನ್ನು ಅನುಮೋದಿಸಿದೆ. ಪರಿಷ್ಕೃತ ಯೋಜನೆಯ ಅನುಷ್ಠಾನಕ್ಕೆ ಒಟ್ಟು ಹಣಕಾಸು ವೆಚ್ಚ 5,940.47 ಕೋಟಿ ರೂ. ಆಗಿದೆ. ಹಂತವಾರು ವಿಧಾನವು ಬೆಂಕಿ ಮತ್ತು ಭೂಕುಸಿತ ನಿರ್ವಹಣೆ ಮತ್ತು ಬಾಧಿತ ಕುಟುಂಬಗಳ ಪುನರ್ವಸತಿಯನ್ನು ಅತ್ಯಂತ ದುರ್ಬಲ ಸ್ಥಳಗಳಿಂದ ಆದ್ಯತೆಯ ಆಧಾರದ ಮೇಲೆ ಕೈಗೊಳ್ಳುವುದನ್ನು ಖಚಿತಪಡಿಸುತ್ತದೆ.Cabinet approves two multitracking projects across Indian Railways covering various states
June 11th, 03:05 pm
The Cabinet Committee on Economic Affairs, chaired by PM Modi, has approved Koderma – Barkakana Doubling and Ballari – Chikjajur Doubling projects of Ministry of Railways with total cost of Rs. 6,405 crore. These initiatives will improve travel convenience, reduce logistic cost, decrease oil imports and contribute to lower CO2 emissions, supporting sustainable and efficient rail operations and generate employment.Cabinet approves two multitracking projects across Indian Railways in Maharashtra and Madhya Pradesh
May 28th, 03:43 pm
The Cabinet Committee on Economic Affairs chaired by PM Modi has approved two multitracking projects across Indian Railways in Maharashtra and Madhya Pradesh. These initiatives will improve travel convenience, reduce logistic cost, decrease oil imports and contribute to lower CO2 emissions, supporting sustainable and efficient rail operations.ವಿದ್ಯುತ್ ವಲಯಕ್ಕೆ ಕಲ್ಲಿದ್ದಲು ಹಂಚಿಕೆಗಾಗಿ ಪರಿಷ್ಕೃತ ಶಕ್ತಿ (ಭಾರತದಲ್ಲಿ ಕಲ್ಲಿದ್ದಲನ್ನು ಪಾರದರ್ಶಕವಾಗಿ ಬಳಸಿಕೊಳ್ಳುವ ಮತ್ತು ಹಂಚಿಕೆ ಮಾಡುವ ಯೋಜನೆ) ನೀತಿಗೆ ಸಂಪುಟದ ಅನುಮೋದನೆ
May 07th, 12:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಕೇಂದ್ರ ವಲಯ/ರಾಜ್ಯ ವಲಯ/ಸ್ವತಂತ್ರ ವಿದ್ಯುತ್ ಉತ್ಪಾದಕರ (ಐಪಿಪಿ) ಉಷ್ಣ ವಿದ್ಯುತ್ ಸ್ಥಾವರಗಳಿಗೆ ಹೊಸ ಕಲ್ಲಿದ್ದಲು ಸಂಪರ್ಕಕ್ಕೆ ಅನುಮೋದನೆ ನೀಡಿದೆ. ಪರಿಷ್ಕೃತ ಶಕ್ತಿ ನೀತಿಯಡಿಯಲ್ಲಿ ಈ ಕೆಳಗಿನ ಎರಡು ವಿಂಡೋಗಳನ್ನು ಪ್ರಸ್ತಾಪಿಸಲಾಗಿದೆ:ಇಂಡಿಯಾ ಸ್ಟೀಲ್-2025 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 24th, 02:00 pm
ಇಂದು ಮತ್ತು ಮುಂದಿನ 2 ದಿನಗಳಲ್ಲಿ ಭಾರತದ ಉದಯೋನ್ಮುಖ ವಲಯ ಉಕ್ಕಿನ ಕ್ಷೇತ್ರದ ಸಾಮರ್ಥ್ಯಗಳು ಮತ್ತು ಸಂಭಾವ್ಯ ಸಾಮರ್ಥ್ಯದ ಬಗ್ಗೆ ನಾವು ವ್ಯಾಪಕ ಚರ್ಚೆಗಳಲ್ಲಿ ತೊಡಗಿಸಿಕೊಳ್ಳಲಿದ್ದೇವೆ. ಇದು ಭಾರತದ ಪ್ರಗತಿಯ ಬೆನ್ನೆಲುಬಾಗಿ ರೂಪುಗೊಳ್ಳುವ ವಲಯವಾಗಿದೆ, 'ವಿಕಸಿತ ಭಾರತ'(ಅಭಿವೃದ್ಧಿ ಹೊಂದಿದ ಭಾರತ)ಕ್ಕೆ ಬಲವಾದ ಅಡಿಪಾಯವಾಗಿದ್ದು, ದೇಶದಲ್ಲಿ ಪರಿವರ್ತನೆಯ ಹೊಸ ಅಧ್ಯಾಯ ಬರೆಯುತ್ತಿದೆ. ಇಂಡಿಯಾ ಸ್ಟೀಲ್-2025 ಕಾರ್ಯಕ್ರಮಕ್ಕೆ ನಿಮ್ಮೆಲ್ಲರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಈ ಕಾರ್ಯಕ್ರಮವು ಹೊಸ ವಿಚಾರ, ಆಲೋಚನೆಗಳನ್ನು ಹಂಚಿಕೊಳ್ಳಲು, ಹೊಸ ಪಾಲುದಾರಿಕೆಗಳನ್ನು ರೂಪಿಸಲು ಮತ್ತು ನಾವೀನ್ಯತೆಯನ್ನು ಉತ್ತೇಜಿಸಲು ಹೊಸ ಅನಾವರಣ ವೇದಿಕೆಯಾಗಿ ಕಾರ್ಯ ನಿರ್ವಹಿಸುತ್ತದೆ ಎಂಬ ವಿಶ್ವಾಸ ನನಗಿದೆ. ಇದು ಉಕ್ಕಿನ ವಲಯದಲ್ಲಿ ಹೊಸ ಅಧ್ಯಾಯಕ್ಕೆ ಭದ್ರ ಬುನಾದಿ ಹಾಕುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂಡಿಯಾ ಸ್ಟೀಲ್ 2025 ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
April 24th, 01:30 pm
ಮುಂಬೈನಲ್ಲಿ ಇಂದು ನಡೆದ ಇಂಡಿಯಾ ಸ್ಟೀಲ್ 2025 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಸಂದೇಶದ ಮೂಲಕ ತಮ್ಮ ಭಾಷಣ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಉದಯೋನ್ಮುಖ ವಲಯವಾದ ಉಕ್ಕು ಉದ್ಯಮದ ಸಾಮರ್ಥ್ಯ ಮತ್ತು ಅವಕಾಶಗಳ ಕುರಿತು ಮುಂದಿನ ಎರಡು ದಿನಗಳು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ಈ ವಲಯವು ಭಾರತದ ಪ್ರಗತಿಯ ಅಡಿಪಾಯವಾಗಿದೆ, ಅಭಿವೃದ್ಧಿ ಹೊಂದಿದ ಭಾರತದ ಅಡಿಪಾಯವನ್ನು ಬಲಪಡಿಸುತ್ತದೆ ಮತ್ತು ದೇಶದಲ್ಲಿ ಪರಿವರ್ತನೆಯ ಹೊಸ ಅಧ್ಯಾಯವನ್ನು ಬರೆಯುತ್ತಿದೆ ಎಂದು ಅವರು ಹೇಳಿದರು. ಇಂಡಿಯಾ ಸ್ಟೀಲ್ 2025ಕ್ಕೆ ಎಲ್ಲರನ್ನು ಸ್ವಾಗತಿಸಿದ ಪ್ರಧಾನಿ, ಹೊಸ ವಿಚಾರಗಳನ್ನು ಹಂಚಿಕೊಳ್ಳಲು, ಹೊಸ ಪಾಲುದಾರಿಕೆಗಳನ್ನು ರೂಪಿಸಲು ಮತ್ತು ನಾವೀನ್ಯತೆಯನ್ನು ಉತ್ತೇಜಿಸಲು ಈ ಕಾರ್ಯಕ್ರಮವು ಒಂದು ಚಿಮ್ಮುಹಲಗೆಯಾಗಿ ಕಾರ್ಯನಿರ್ವಹಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮವು ಉಕ್ಕು ವಲಯದಲ್ಲಿ ಹೊಸ ಅಧ್ಯಾಯಕ್ಕೆ ಅಡಿಪಾಯ ಹಾಕಲಿದೆ ಎಂದು ಅವರು ಒತ್ತಿ ಹೇಳಿದರು.ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 08th, 08:30 pm
ಈ ಶೃಂಗಸಭೆಯ ಮೂಲಕ ದೇಶ ಮತ್ತು ವಿಶ್ವಾದ್ಯಂತದ ಗೌರವಾನ್ವಿತ ಅತಿಥಿಗಳೊಂದಿಗೆ ಮತ್ತು ನಿಮ್ಮ ಪ್ರೇಕ್ಷಕರೊಂದಿಗೆ ಸಂಪರ್ಕ ಸಾಧಿಸಲು ನೀವು ನನಗೆ ಅವಕಾಶ ನೀಡಿದ್ದಕ್ಕಾಗಿ ನಾನು “ನೆಟ್‌ವರ್ಕ್ 18”ಗೆ ನನ್ನ ಕೃತಜ್ಞತೆ ವ್ಯಕ್ತಪಡಿಸುತ್ತೇನೆ. ಈ ವರ್ಷದ ಶೃಂಗಸಭೆಯನ್ನು ಭಾರತದ ಯುವಕರ ಆಕಾಂಕ್ಷೆಗಳೊಂದಿಗೆ ನೀವು ಸಂಪರ್ಕಿಸಿದ್ದೀರಿ ಎಂಬುದನ್ನು ತಿಳಿದು ನನಗೆ ಸಂತೋಷವಾಗಿದೆ. ಈ ವರ್ಷದ ಆರಂಭದಲ್ಲಿ, ವಿವೇಕಾನಂದ ಜಯಂತಿಯಂದು, ಭಾರತ್ ಮಂಟಪದಲ್ಲಿ ವಿಕಸಿತ ಭಾರತ ಯುವ ನಾಯಕರ ಸಂವಾದ ನಡೆಸಲಾಯಿತು. ಆ ಸಮಯದಲ್ಲಿ, ಯುವಕರ ಕಣ್ಣುಗಳಲ್ಲಿ ಕನಸುಗಳ ಮಿಂಚು, ಅವರ ಸಂಕಲ್ಪ ಶಕ್ತಿ ಮತ್ತು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಅವರ ಉತ್ಸಾಹವನ್ನು ನಾನು ನೋಡಿದೆ. 2047ರ ವೇಳೆಗೆ ನಾವು ಭಾರತವನ್ನು ಕೊಂಡೊಯ್ಯಲು ಬಯಸುವ ಎತ್ತರ ಮತ್ತು ನಾವು ಅನುಸರಿಸುತ್ತಿರುವ ಮಾರ್ಗಸೂಚಿಯನ್ನು ನಾವು ಪ್ರತಿ ಹಂತದಲ್ಲೂ ಚರ್ಚಿಸುವುದನ್ನು ಮುಂದುವರಿಸಿದರೆ, 'ಅಮೃತ' (ಅಮೃತ ಕಾಲ) ಖಂಡಿತವಾಗಿಯೂ ಹೊರಹೊಮ್ಮುತ್ತದೆ. ಈ 'ಅಮೃತ'ವು 'ಅಮೃತ ಕಾಲ'ದ ಪೀಳಿಗೆಗೆ ಶಕ್ತಿ ಮತ್ತು ನಿರ್ದೇಶನ ನೀಡುವ ಜತೆಗೆ, ಭಾರತಕ್ಕೆ ಆವೇಗವನ್ನು ನೀಡುತ್ತದೆ. ಈ ಶೃಂಗಸಭೆಯಲ್ಲಿ ನಾನು ನಿಮ್ಮನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನ್ಯೂಸ್18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ
April 08th, 08:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನ್ಯೂಸ್18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಮಾವೇಶದಲ್ಲಿ ಭಾರತ ಮತ್ತು ಪ್ರಪಂಚದಾದ್ಯಂತದ ಗಣ್ಯ ಅತಿಥಿಗಳೊಂದಿಗೆ ಸಂವಹನ ನಡೆಸಲು ಅವಕಾಶ ನೀಡಿದ್ದಕ್ಕಾಗಿ ಅವರು ನೆಟ್ವರ್ಕ್18 ಗೆ ಕೃತಜ್ಞತೆ ಸಲ್ಲಿಸಿದರು. ಈ ವರ್ಷದ ಶೃಂಗಸಭೆಯು ಭಾರತದ ಯುವಕರ ಆಕಾಂಕ್ಷೆಗಳ ಮೇಲೆ ಗಮನ ಕೇಂದ್ರೀಕರಿಸಿದ್ದನ್ನು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ವರ್ಷದ ಆರಂಭದಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯಂದು ಭಾರತ್ ಮಂಟಪದಲ್ಲಿ ನಡೆದ ‘ವಿಕಸಿತ ಭಾರತ ಯುವ ನಾಯಕರ ಸಂವಾದ’ (Viksit Bharat Young Leaders Dialogue) ಮಹತ್ವವನ್ನು ಒತ್ತಿ ಹೇಳಿದ ಅವರು, ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಯುವಕರ ಕನಸುಗಳು, ದೃಢಸಂಕಲ್ಪ ಮತ್ತು ಉತ್ಸಾಹದ ಬಗ್ಗೆ ಮಾತನಾಡಿದರು. ಭಾರತದ ಪ್ರಗತಿಗಾಗಿ 2047 ರವರೆಗಿನ ಮಾರ್ಗಸೂಚಿಯನ್ನು ಅವರು ಒತ್ತಿ ಹೇಳಿದರು, ಪ್ರತಿ ಹಂತದಲ್ಲೂ ನಿರಂತರ ಚಿಂತನೆ ಅಮೂಲ್ಯವಾದ ಒಳನೋಟಗಳನ್ನು ನೀಡುತ್ತದೆ ಎಂದು ಅವರು ಹೇಳಿದರು. ಈ ಒಳನೋಟಗಳು ಅಮೃತ ಕಾಲದ ಪೀಳಿಗೆಗೆ ಶಕ್ತಿ ತುಂಬುತ್ತವೆ, ಮಾರ್ಗದರ್ಶನ ನೀಡುತ್ತವೆ ಮತ್ತು ವೇಗವನ್ನು ಹೆಚ್ಚಿಸುತ್ತವೆ ಎಂದು ಅವರು ಹೇಳಿದರು. ಅವರು ಶೃಂಗಸಭೆಯ ಯಶಸ್ಸಿಗೆ ತಮ್ಮ ಅಭಿನಂದನೆಗಳು ಮತ್ತು ಶುಭ ಹಾರೈಕೆಗಳನ್ನು ತಿಳಿಸಿದರು.ಭಾರತೀಯ ರೈಲ್ವೆಯ 4 ಬಹುಮಾರ್ಗಗಳ ನಿರ್ಮಾಣ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ
April 04th, 03:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ರೈಲ್ವೆ ಸಚಿವಾಲಯದ ಪ್ರಮುಖ 4 ಯೋಜನೆಗಳಿಗೆ ಅನುಮೋದನೆ ನೀಡಿದೆ. ಒಟ್ಟು ಅಂದಾಜು ವೆಚ್ಚ 18,658 ಕೋಟಿ ರೂ. ಆಗಿದೆ. 3 ರಾಜ್ಯಗಳ 15 ಜಿಲ್ಲೆಗಳನ್ನು ಒಳಗೊಂಡ 4 ಯೋಜನೆಗಳು ಅಂದರೆ ಮಹಾರಾಷ್ಟ್ರ, ಒಡಿಶಾ ಮತ್ತು ಛತ್ತೀಸ್‌ಗಢವನ್ನು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ರೈಲು ಮಾರ್ಗಗಳ ಜಾಲವನ್ನು ಸುಮಾರು 1,247 ಕಿ.ಮೀ.ಗಳಷ್ಟು ಹೆಚ್ಚಿಸುತ್ತವೆ.ಭಾರತದ ಒಂದು ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆಯ ಐತಿಹಾಸಿಕ ಸಾಧನೆಗೆ ಪ್ರಧಾನಮಂತ್ರಿಯವರಿಂದ ಶ್ಲಾಘನೆ
March 21st, 01:19 pm
ಒಂದು ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆಯ ಭಾರತದ ಈ ಐತಿಹಾಸಿಕ ಸಾಧನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ಲಾಘಿಸಿದ್ದು, ಇಂಧನ ಭದ್ರತೆ, ಆರ್ಥಿಕ ಬೆಳವಣಿಗೆ ಮತ್ತು ಸ್ವಾವಲಂಬನೆಗೆ ಗಮನಾರ್ಹ ಬದ್ಧತೆಯನ್ನು ಎತ್ತಿ ತೋರಿಸಿದ್ದಾರೆ.ಬಿಹಾರದ ಭಾಗಲ್ಪುರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 24th, 02:35 pm
ವೇದಿಕೆಯಲ್ಲಿರುವ ನಮ್ಮ ಪ್ರೀತಿಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಿ ಅವರೊಂದಿಗೆ ಗೌರವಾನ್ವಿತ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಜಿ ಇದ್ದಾರೆ, ಅವರು ಬಿಹಾರದ ಅಭಿವೃದ್ಧಿಗೆ ತಮ್ಮ ಸಮರ್ಪಣೆ ಮೂಲಕ ವ್ಯಾಪಕ ಮೆಚ್ಚುಗೆ ಪಡೆದಿದ್ದಾರೆ. ನನ್ನ ಗೌರವಾನ್ವಿತ ಸಂಪುಟ ಸಹೋದ್ಯೋಗಿಗಳಾದ ಶಿವರಾಜ್ ಸಿಂಗ್ ಚೌಹಾಣ್ ಜಿ, ಜಿತನ್ ರಾಮ್ ಮಾಂಝಿ ಜಿ, ಲಲ್ಲನ್ ಸಿಂಗ್ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ - ರಾಜ್ಯ ಸಚಿವರಾದ ಶ್ರೀ ರಾಮನಾಥ್ ಠಾಕೂರ್ ಜಿ, ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಜಿ, ವಿಜಯ್ ಸಿನ್ಹಾ ಜಿ, ರಾಜ್ಯದ ಇತರೆ ಸಚಿವರೆ, ಸಾರ್ವಜನಿಕ ಪ್ರತಿನಿಧಿಗಳೆ, ಗಣ್ಯರೆ ಮತ್ತು ಬಿಹಾರದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,ಪಿಎಂ ಕಿಸಾನ್ ನ 19ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಬಿಹಾರದ ಭಾಗಲ್ ಪುರದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
February 24th, 02:30 pm
ರೈತರ ಕಲ್ಯಾಣವನ್ನು ಖಾತ್ರಿಪಡಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಭಾಗಲ್ ಪುರದಲ್ಲಿ ಪಿಎಂ ಕಿಸಾನ್ ನ 19ನೇ ಕಂತನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ವರ್ಚುವಲ್ ಮೂಲಕ ಭಾಗವಹಿಸಿದ ಎಲ್ಲ ಗಣ್ಯರು ಮತ್ತು ಜನರನ್ನು ಶ್ರೀ ಮೋದಿ ಸ್ವಾಗತಿಸಿದರು. ಮಹಾಕುಂಭದ ಪವಿತ್ರ ಅವಧಿಯಲ್ಲಿ ಮಂದಾರಾಚಲದ ಭೂಮಿಯಲ್ಲಿ ಹೆಜ್ಜೆ ಹಾಕುವುದು ಒಂದು ದೊಡ್ಡ ಸೌಭಾಗ್ಯ ಎಂದು ಅವರು ಹೇಳಿದರು. ಈ ಸ್ಥಳವು ಆಧ್ಯಾತ್ಮಿಕತೆ, ಪರಂಪರೆ ಮತ್ತು ವಿಕ್ಷಿತ್ ಭಾರತದ ಸಾಮರ್ಥ್ಯವನ್ನು ಹೊಂದಿದೆ ಎಂದು ಅವರು ಹೇಳಿದರು. ಇದು ಹುತಾತ್ಮ ತಿಲ್ಕಾ ಮಾಂಝಿ ಅವರ ಭೂಮಿ ಮತ್ತು ಸಿಲ್ಕ್ ಸಿಟಿ ಎಂದು ಕೂಡಾ ಪ್ರಸಿದ್ಧವಾಗಿದೆ ಎಂದು ಶ್ರೀ ಮೋದಿ ಹೇಳಿದರು. ಬಾಬಾ ಅಜ್ಜೈಬಿನಾಥ್ ಅವರ ಪವಿತ್ರ ಭೂಮಿಯಲ್ಲಿ ಮುಂಬರುವ ಮಹಾ ಶಿವರಾತ್ರಿಗೆ ಸಿದ್ಧತೆಗಳು ನಡೆದಿವೆ ಎಂದು ಅವರು ಉಲ್ಲೇಖಿಸಿದರು. ಇಂತಹ ಪವಿತ್ರ ಸಮಯದಲ್ಲಿ ಪಿಎಂ ಕಿಸಾನ್ ನ 19 ನೇ ಕಂತನ್ನು ಬಿಡುಗಡೆ ಮಾಡುವ ಅದೃಷ್ಟ ನನ್ನದಾಗಿದೆ ಮತ್ತು ಸುಮಾರು 22,000 ಕೋಟಿ ರೂ.ಗಳನ್ನು ನೇರ ಲಾಭ/ನಗದು ವರ್ಗಾವಣೆಯ ಮೂಲಕ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಅವರು ಹೇಳಿದರು.