'ವಂದೇ ಮಾತರಂ' ನ ಚೈತನ್ಯವು ಭಾರತದ ಅಮರ ಪ್ರಜ್ಞೆಗೆ ಸಂಬಂಧಿಸಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
October 26th, 11:30 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಅಕ್ಟೋಬರ್ 31 ರಂದು ನಡೆದ ಸರ್ದಾರ್ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯಂದು ಪ್ರಧಾನಿ ಮೋದಿ ಅವರಿಗೆ ಗೌರವ ಸಲ್ಲಿಸಿದರು. ಛಠ್ ಪೂಜಾ ಉತ್ಸವ, ಪರಿಸರ ಸಂರಕ್ಷಣೆ, ಭಾರತೀಯ ನಾಯಿ ತಳಿಗಳು, ಭಾರತೀಯ ಕಾಫಿ, ಬುಡಕಟ್ಟು ಸಮುದಾಯದ ನಾಯಕರು ಮತ್ತು ಸಂಸ್ಕೃತ ಭಾಷೆಯ ಪ್ರಾಮುಖ್ಯತೆಯಂತಹ ಆಸಕ್ತಿದಾಯಕ ವಿಷಯಗಳನ್ನು ಅವರು ಸ್ಪರ್ಶಿಸಿದರು. 'ವಂದೇ ಮಾತರಂ' ಹಾಡಿನ 150 ನೇ ವರ್ಷದ ಬಗ್ಗೆ ಪ್ರಧಾನಿಯವರು ವಿಶೇಷವಾಗಿ ಉಲ್ಲೇಖಿಸಿದರು.ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
April 27th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ನಿಮ್ಮೊಂದಿಗೆ ನಾನು 'ಮನದ ಮಾತು' ಆಡುತ್ತಿರುವಾಗ, ನನ್ನ ಹೃದಯ ನೋವಿನಿಂದ ಭಾರವಾಗಿದೆ. ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ಘಟನೆ ದೇಶದ ಪ್ರತಿಯೊಬ್ಬ ನಾಗರಿಕನನ್ನು ದುಃಖದ ಮಡುವಿನಲ್ಲಿ ಮುಳುಗಿಸಿದೆ. ಸಂತ್ರಸ್ತ ಕುಟುಂಬಗಳ ಬಗ್ಗೆ ಪ್ರತಿ ಭಾರತೀಯನಲ್ಲೂ ಅಪಾರ ಸಹಾನುಭೂತಿಯಿದೆ. ರಾಜ್ಯ, ಭಾಷೆಯನ್ನು ಮೀರಿ ಎಲ್ಲ ಜನರು ಈ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವನ್ನು ಸ್ವತಃ ಅನುಭವಿಸುತ್ತಿದ್ದಾರೆ. ಭಯೋತ್ಪಾದಕ ದಾಳಿಯ ಚಿತ್ರಗಳನ್ನು ನೋಡಿದ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ನನಗೆ ಅನಿಸುತ್ತದೆ. ಪಹಲ್ಗಾಮ್‌ನಲ್ಲಿ ನಡೆದ ಈ ದಾಳಿಯು ಭಯೋತ್ಪಾದನೆಗೆ ಉತ್ತೇಜನ ನೀಡುವವರ ಹತಾಶೆಯನ್ನು ತೋರಿಸುತ್ತದೆ ಮತ್ತು ಅವರ ಹೇಡಿತನವನ್ನು ಪ್ರದರ್ಶಿಸುತ್ತದೆ. ಶಾಲಾ ಕಾಲೇಜುಗಳಲ್ಲಿ ಹುರುಪು ತುಂಬಿರುವಂತಹ ಕಾಲದಲ್ಲಿ, ನಿರ್ಮಾಣ ಕಾರ್ಯಗಳು ಅಭೂತಪೂರ್ವ ವೇಗವನ್ನು ಪಡೆದುಕೊಂಡಿರುವಾಗ, ಕಾಶ್ಮೀರದಲ್ಲಿ ಶಾಂತಿ ಮರುಕಳಿಸುತ್ತಿರುವ ಇಂತಹ ಸಮಯದಲ್ಲಿ, ಪ್ರಜಾಪ್ರಭುತ್ವ ಬಲಿಷ್ಠಗೊಳ್ಳುತ್ತಿರುವಾಗ, ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆಯ ಏರಿಕೆ ಕಂಡುಬರುತ್ತಿರುವಾಗ, ಜನರ ಆದಾಯ ಹೆಚ್ಚುತ್ತಿರುವಾಗ, ಯುವಕರಿಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿದ್ದಾಗ, ದೇಶದ ಶತ್ರುಗಳು, ಜಮ್ಮು ಮತ್ತು ಕಾಶ್ಮೀರದ ವೈರಿಗಳಿಗೆ ಇದನ್ನು ಸಹಿಸಲಾಗಲಿಲ್ಲ. ಭಯೋತ್ಪಾದಕರು ಮತ್ತಷ್ಟು ಭಯೋತ್ಪಾದನೆ ಹೆಚ್ಚಿಸಲು ಬಯಸುತ್ತಿದ್ದಾರೆ. ಕಾಶ್ಮೀರವನ್ನು ಮತ್ತೆ ನಾಶಮಾಡಲು ಹುನ್ನಾರದಿಂದ ಇಷ್ಟು ದೊಡ್ಡ ಘಟನೆ ನಡೆಯುವಂತೆ ಪಿತೂರಿ ನಡೆಸಿದರು. ದೇಶದ ಏಕತೆ, 140 ಕೋಟಿ ಭಾರತೀಯರ ಒಗ್ಗಟ್ಟು, ಭಯೋತ್ಪಾದನೆಯ ವಿರುದ್ಧದ ಈ ಯುದ್ಧದಲ್ಲಿ ನಮ್ಮ ದೊಡ್ಡ ಶಕ್ತಿಯಾಗಿದೆ. ಈ ಒಗ್ಗಟ್ಟೆ ಭಯೋತ್ಪಾದನೆಯ ವಿರುದ್ಧದ ನಮ್ಮ ಹೋರಾಟದಲ್ಲಿ ನಿರ್ಣಾಯಕ ಪಾತ್ರವಾಹಿಸಲಿದೆ. ದೇಶ ಎದುರಿಸುತ್ತಿರುವ ಈ ಸವಾಲನ್ನು ಎದುರಿಸಲು ನಾವು ನಮ್ಮ ಸಂಕಲ್ಪವನ್ನು ಬಲಪಡಿಸಿಕೊಳ್ಳಬೇಕು. ಒಂದು ರಾಷ್ಟ್ರ ರೂಪದಲ್ಲಿ ಬಲವಾದ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು. ಈ ಭಯೋತ್ಪಾದಕ ದಾಳಿಯ ನಂತರ ಸಂಪೂರ್ಣ ದೇಶ ಒಕ್ಕೊರಲಿನಿಂದ ಧ್ವನಿಯೆತ್ತಿರುವುದನ್ನು ಇಂದು ಜಗತ್ತೇ ನೋಡುತ್ತಿದೆ.ಎನ್ಎಕ್ಸ್ ಟಿ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 01st, 11:00 am
ನ್ಯೂಸ್ಎಕ್ಸ್ ವರ್ಲ್ಡ್‌ನ ಶುಭಾರಂಭಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳು. ಇಂದು ಹಿಂದಿ ಮತ್ತು ಇಂಗ್ಲಿಷ್ ಸೇರಿದಂತೆ ನಿಮ್ಮ ನೆಟ್‌ವರ್ಕ್‌ನ ಎಲ್ಲಾ ಪ್ರಾದೇಶಿಕ ವಾಹಿನಿಗಳು ಜಾಗತಿಕವಾಗಿ ಬೆಳೆಯುತ್ತಿವೆ, ಇಂದು ಅನೇಕ ಫೆಲೋಶಿಪ್‌ಗಳು ಮತ್ತು ವಿದ್ಯಾರ್ಥಿವೇತನಗಳನ್ನು ಸಹ ಪ್ರಾರಂಭಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಿಗಾಗಿ ನಿಮ್ಮೆಲ್ಲರಿಗೂ ನಾನು ಶುಭ ಹಾರೈಸುತ್ತೇನೆ.ಎನ್ ಎಕ್ಸ್ ಟಿ ಕಾನ್‌ಕ್ಲೇವ್‌ನಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 01st, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ NXT ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನ್ಯೂಸ್ ಎಕ್ಸ್ ವರ್ಲ್ಡ್ ಶುಭಾರಂಭಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ನೆಟ್‌ವರ್ಕ್ ಹಿಂದಿ, ಇಂಗ್ಲಿಷ್ ಮತ್ತು ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಚಾನೆಲ್‌ಗಳನ್ನು ಒಳಗೊಂಡಿದೆ ಮತ್ತು ಇಂದು ಅದು ಜಾಗತಿಕ ಮಟ್ಟದಲ್ಲಿದೆ ಎಂದು ಅವರು ಗಮನ ಸೆಳೆದರು. ಅವರು ಹಲವಾರು ಫೆಲೋಶಿಪ್‌ಗಳು ಮತ್ತು ಸ್ಕಾಲರ್‌ಶಿಪ್‌ಗಳ ಪ್ರಾರಂಭದ ಬಗ್ಗೆಯೂ ಹೇಳಿದರು, ಈ ಕಾರ್ಯಕ್ರಮಗಳಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.