ಭಾರತ – ಜರ್ಮನಿ ಜಂಟಿ ಹೇಳಿಕೆ

January 12th, 03:50 pm

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಜರ್ಮನಿ ಒಕ್ಕೂಟ ಗಣರಾಜ್ಯದ ಫೆಡರಲ್ ಚಾನ್ಸಲರ್ ಘನತೆವೆತ್ತ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರು 2026ರ ಜನವರಿ 12-13 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಚಾನ್ಸಲರ್ ಅವರೊಂದಿಗೆ 23 ಪ್ರಮುಖ ಜರ್ಮನ್ ಸಿಇಒಗಳು ಮತ್ತು ಉದ್ಯಮ ರಂಗದ ನಾಯಕರನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.

ರಷ್ಯಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

December 05th, 02:00 pm

ಇಂದು 23 ನೇ ಭಾರತ-ರಷ್ಯಾ ಶೃಂಗಸಭೆಗೆ ಅಧ್ಯಕ್ಷ ಪುಟಿನ್ ಅವರನ್ನು ಸ್ವಾಗತಿಸಲು ನನಗೆ ಸಂತೋಷವಾಗಿದೆ. ನಮ್ಮ ದ್ವಿಪಕ್ಷೀಯ ಸಂಬಂಧವು ಹಲವಾರು ಐತಿಹಾಸಿಕ ಮೈಲಿಗಲ್ಲುಗಳ ಮೂಲಕ ಸಾಗುತ್ತಿರುವ ಸಮಯದಲ್ಲಿ ಅವರ ಭೇಟಿ ಬಂದಿದೆ. ನಿಖರವಾಗಿ 25 ವರ್ಷಗಳ ಹಿಂದೆ, ಅಧ್ಯಕ್ಷ ಪುಟಿನ್ ನಮ್ಮ ಕಾರ್ಯತಂತ್ರದ ಪಾಲುದಾರಿಕೆಗೆ ಅಡಿಪಾಯ ಹಾಕಿದರು. ಹದಿನೈದು ವರ್ಷಗಳ ಹಿಂದೆ, 2010 ರಲ್ಲಿ, ನಮ್ಮ ಪಾಲುದಾರಿಕೆಯನ್ನು ವಿಶೇಷ ಮತ್ತು ಸವಲತ್ತು ಪಡೆದ/ಆದ್ಯತೆಯ ಕಾರ್ಯತಂತ್ರದ ಪಾಲುದಾರಿಕೆ ಮಟ್ಟಕ್ಕೆ ಏರಿಸಲಾಯಿತು.

PM Modi’s remarks during the joint press meet with Russian President Vladimir Putin

December 05th, 01:50 pm

PM Modi addressed the joint press meet with President Putin, highlighting the strong and time-tested India-Russia partnership. He said the relationship has remained steady like the Pole Star through global challenges. PM Modi announced new steps to boost economic cooperation, connectivity, energy security, cultural ties and people-to-people linkages. He reaffirmed India’s commitment to peace in Ukraine and emphasised the need for global unity in the fight against terrorism.

ಜಪಾನ್ ಪ್ರಧಾನಮಂತ್ರಿ ಗೌರವಾನ್ವಿತ ಸನೇ ತಕೈಚಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ; ಭಾರತ-ಜಪಾನ್ ವಿಶೇಷ ಕಾರ್ಯತಾಂತ್ರಿಕ ಮತ್ತು ಜಾಗತಿಕ ಸಹಭಾಗಿತ್ವ ಮತ್ತಷ್ಟು ಮುಂದುವರಿಸುವ ಬಗ್ಗೆ ಚರ್ಚೆ

October 29th, 01:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಪಾನ್ ಪ್ರಧಾನಮಂತ್ರಿ ಗೌರವಾನ್ವಿತ ಸನೇ ತಕೈಚಿ ಅವರೊಂದಿಗೆ ಆತ್ಮೀಯ ಮಾತುಕತೆ ನಡೆಸಿದರು.

ಮಾರಿಷಸ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

September 11th, 12:30 pm

ನನ್ನ ಸಂಸದೀಯ ಕ್ಷೇತ್ರಕ್ಕೆ ನಿಮ್ಮನ್ನು ಸ್ವಾಗತಿಸುವುದು ನನಗೆ ಹೆಮ್ಮೆಯ ವಿಷಯವಾಗಿದೆ. ಕಾಶಿಯು ಸದಾ ಭಾರತದ ನಾಗರಿಕತೆ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ.

ಭಾರತ ಬಗ್ಗೆ ವಿಶ್ವಾಸದ ಮಾತುಗಳಿಗೆ ಸಿಂಗಾಪುರ ಪ್ರಧಾನಮಂತ್ರಿ ಲಾರೆನ್ಸ್ ವಾಂಗ್ ಗೆ ಧನ್ಯವಾದ ಹೇಳಿದ ಪ್ರಧಾನಮಂತ್ರಿ ಮೋದಿ

September 04th, 01:04 pm

ಭಾರತ ಬಗ್ಗೆ ವಿಶ್ವಾಸದ ಮಾತುಗಳನ್ನಾಡಿದ ಸಿಂಗಾಪುರ ಪ್ರಧಾನಮಂತ್ರಿ ಶ್ರೀ ಲಾರೆನ್ಸ್ ವಾಂಗ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಧನ್ಯವಾದ ಹೇಳಿದ್ದಾರೆ. ವಿಕಸಿತ ಭಾರತವನ್ನು ನಿರ್ಮಿಸುವ ನಮ್ಮ ಪಯಣದಲ್ಲಿ ಸಿಂಗಾಪುರವು ಮೌಲ್ಯಯುತ ಪಾಲುದಾರ ದೇಶ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

ಚೀನಾ ಅಧ್ಯಕ್ಷರಾದ ಕ್ಸಿ ಜಿನ್ಪಿಂಗ್ ಅವರೊಂದಿಗೆ ಪ್ರಧಾನಮಂತ್ರಿ ಅವರ ದ್ವಿಪಕ್ಷೀಯ ಮಾತುಕತೆ

August 31st, 11:00 am

ಆಗಸ್ಟ್ 31, 2025 ರಂದು ಟಿಯಾಂಜಿನ್ ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆಯ (ಎಸ್.ಸಿ.ಒ.) ನಾಯಕರ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಅಧ್ಯಕ್ಷರಾದ ಶ್ರೀ ಕ್ಸಿ ಜಿನ್ಪಿಂಗ್ ಅವರನ್ನು ಭೇಟಿಯಾದರು.

ಫಿಲಿಪ್ಪೀನ್ಸ್ ಅಧ್ಯಕ್ಷರೊಂದಿಗೆ ಜಂಟಿ ಮಾಧ್ಯಮ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಮಾಧ್ಯಮ ಹೇಳಿಕೆಯ ಕನ್ನಡ ಅನುವಾದ

August 05th, 11:06 am

ಮೊದಲನೆಯದಾಗಿ, ನಾನು ಅಧ್ಯಕ್ಷರನ್ನು ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಈ ವರ್ಷ, ಭಾರತ ಮತ್ತು ಫಿಲಿಪ್ಪೀನ್ಸ್ ರಾಜತಾಂತ್ರಿಕ ಸಂಬಂಧಗಳ 75ನೇ ವರ್ಷವನ್ನು ಆಚರಿಸುತ್ತಿವೆ. ಮತ್ತು ಈ ಸಂದರ್ಭದಲ್ಲಿ, ಈ ಭೇಟಿಯು ವಿಶೇಷ ಮಹತ್ವವನ್ನು ಪಡೆದಿದೆ. ನಮ್ಮ ರಾಜತಾಂತ್ರಿಕ ಸಂಬಂಧಗಳು ಇತ್ತೀಚಿನವಾದರೂ, ನಮ್ಮ ನಾಗರಿಕ ಸಂಪರ್ಕವು ಪ್ರಾಚೀನ ಕಾಲದಿಂದಲೂ ಇದೆ. ರಾಮಾಯಣದ ಫಿಲಿಪ್ಪೀನ್ಸ್ ಆವೃತ್ತಿ - ಮಹಾರಾಡಿಯಾ ಲಾವಾನಾ ನಮ್ಮ ಆಳವಾಗಿ ಬೇರೂರಿರುವ ಸಾಂಸ್ಕೃತಿಕ ಬಂಧಕ್ಕೆ ಜೀವಂತ ಪುರಾವೆಯಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಅಂಚೆ ಚೀಟಿಗಳು, ಎರಡೂ ದೇಶಗಳ ರಾಷ್ಟ್ರೀಯ ಹೂವುಗಳನ್ನು ಒಳಗೊಂಡಿದ್ದು, ನಮ್ಮ ಸ್ನೇಹದ ಪರಿಮಳವನ್ನು ಸುಂದರವಾಗಿ ಸಂಕೇತಿಸುತ್ತವೆ.

ಸಮಗ್ರ ಕಾರ್ಯತಾಂತ್ರಿಕ ಪಾಲುದಾರಿಕೆ ಮತ್ತಷ್ಟು ಬಲಪಡಿಸುವ ಬದ್ಧತೆ ಪುನರುಚ್ಚರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಯು.ಎ.ಇ ಅಧ್ಯಕ್ಷ ಗೌರವಾನ್ವಿತ ಮೊಹಮ್ಮದ್ ಬಿನ್ ಝಾಯೆದ್

July 31st, 12:36 pm

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ದೂರವಾಣಿ ಮೂಲಕ ಸಂಯುಕ್ತ ಅರಬ್ ಎಮಿರೇಟ್ಸ್ (ಯು.ಎ.ಇ) ಅಧ್ಯಕ್ಷರಾದ ಗೌರವಾನ್ವಿತ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಸಮಾಲೋಚನೆ ನಡೆಸಿದರು.