ನಾಂದೇಡ್‌ನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿಆಗಿರುವ ಪ್ರಾಣಹಾನಿಗೆ ಪ್ರಧಾನಮಂತ್ರಿ ಸಂತಾಪ

September 11th, 09:11 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪ್ರಾಣಹಾನಿಯಾಗಿರುವ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ದೆಹಲಿಯ ಸತ್ಯ ನಿಕೇತನದಲ್ಲಿ ಕಟ್ಟಡ ಕುಸಿತದಿಂದ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

September 06th, 08:24 pm

ದೆಹಲಿಯ ಸತ್ಯ ನಿಕೇತನದಲ್ಲಿ ಕಟ್ಟಡ ಕುಸಿತದ ದುರ್ಘಟನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಪ್ರಸಿದ್ಧ ಗುಜರಾತಿ ಸಂಗೀತ ಸಂಯೋಜಕ ಶ್ರೀ ಗೌರಂಗ್ ವ್ಯಾಸ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

September 03rd, 12:25 pm

ಗುಜರಾತಿ ಸಂಗೀತ ಜಗತ್ತಿನ ಪ್ರಸಿದ್ಧ ಸಂಗೀತ ಸಂಯೋಜಕ ಶ್ರೀ ಗೌರಂಗ್ ವ್ಯಾಸ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಮಧ್ಯಪ್ರದೇಶದ ರೇವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

September 02nd, 07:46 pm

ಮಧ್ಯಪ್ರದೇಶದ ರೇವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಕೌಶಂಬಿಯಲ್ಲಿ ಪಟಾಕಿ ಕಾರ್ಖಾನೆ ಅವಘಡದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

August 31st, 10:00 pm

ಉತ್ತರಪ್ರದೇಶದ ಕೌಶಂಬಿಯಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಶ್ರೀ ಮೋದಿ ಅವರು ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ನಾರ್ವೆಯ ದೊರೆ ಐದನೇ ಹರಾಲ್ಡ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

August 28th, 04:33 pm

ನಾರ್ವೆ ಸಾಮ್ರಾಜ್ಯದ ದೊರೆ ಐದನೇ ಹರಾಲ್ಡ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ನಾರ್ವೆಗೆ ಭೇಟಿ ನೀಡಿದ್ದಾಗ ಅವರನ್ನು ಭೇಟಿಯಾಗಿದ್ದನ್ನು ಸ್ಮರಿಸಿಕೊಂಡ ಶ್ರೀ ಮೋದಿ ಅವರು, ನಾರ್ವೆಯ ಜನರು ಮತ್ತು ರಾಷ್ಟ್ರಕ್ಕೆ ಅವರ ಆತ್ಮೀಯತೆ ಮತ್ತು ಆಳವಾದ ಸೇವಾ ಪ್ರಜ್ಞೆಯನ್ನು ಸ್ಮರಿಸಿದ್ದಾರೆ.

ಶ್ರೀ ಎ. ಬಾಲಕೃಷ್ಣನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ

August 27th, 12:11 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವೇಕಾನಂದ ಕೇಂದ್ರದ ಅಖಿಲ ಭಾರತ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಶ್ರೀ ಎ. ಬಾಲಕೃಷ್ಣನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಶ್ರೀ ಬಾಲಕೃಷ್ಣನ್ ಜಿ ಅವರು ಸಮಾಜಕ್ಕೆ ನೀಡಿರುವ ಗಣನೀಯ ಕೊಡುಗೆಯನ್ನು ಶ್ರೀ ನರೇಂದ್ರ ಮೋದಿ ಸ್ಮರಿಸಿದ್ದಾರೆ, ಅವರು ತಮ್ಮ ಜೀವನದ ಐದು ದಶಕಗಳಿಗೂ ಅಧಿಕ ಕಾಲ ಸ್ವಾಮಿ ವಿವೇಕಾನಂದರ ಆದರ್ಶಗಳಿಗೆ ಮತ್ತು ರಾಷ್ಟ್ರದ ಸೇವೆಗೆ ಮೀಸಲಿಟ್ಟಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಅವರು ಈಶಾನ್ಯ ರಾಜ್ಯಗಳೊಂದಿಗೆ ವಿಶೇಷವಾಗಿ ಗಾಢವಾದ ಸಂಬಂಧವನ್ನು ಹೊಂದಿದ್ದರು. ಶೈಕ್ಷಣಿಕ, ಸಾಮಾಜಿಕ ಮತ್ತು ರಾಷ್ಟ್ರ ನಿರ್ಮಾಣ ಚಟುವಟಿಕೆಗಳಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ನೇಪಾಳ ಪ್ರಧಾನಮಂತ್ರಿ ಅವರೊಂದಿಗೆ ಪ್ರಧಾನಮಂತ್ರಿ ಅವರ ಮಾತುಕತೆ

August 26th, 06:02 pm

ನೇಪಾಳದಲ್ಲಿ ಪ್ರವಾಹ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಲ್ಲಿನ ಪ್ರಧಾನಮಂತ್ರಿ ಶ್ರೀ ಬಾಲೇಂದ್ರ ಶಾ ಅವರೊಂದಿಗೆ ಮಾತನಾಡಿ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಭಾರತದ ಜನರು ನೇಪಾಳದಲ್ಲಿರುವ ತಮ್ಮ ಸಹೋದರ ಸಹೋದರಿಯರಿಗೆ ಬೆಂಬಲವಾಗಿ ನಿಂತಿದ್ದಾರೆ ಎಂದು ಶ್ರೀ ಮೋದಿ ಅವರು ಭರವಸೆ ನೀಡಿದ್ದಾರೆ.

ತೆಲಂಗಾಣದ ಸೂರ್ಯಪೇಟ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

August 26th, 02:21 pm

ತೆಲಂಗಾಣದ ಸೂರ್ಯಪೇಟೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ಮೋದಿ ಅವರು ಪ್ರಾರ್ಥಿಸಿದ್ದಾರೆ.

ಕೋಲ್ಕತ್ತಾದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುರಿತು ಪ್ರಧಾನಮಂತ್ರಿ ಸಂತಾಪ

August 19th, 02:34 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಕೋಲ್ಕತ್ತಾದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳದ ಬಿರ್ಭೂಮ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ

August 17th, 01:32 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಬಿರ್ಭೂಮ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಿಹಾರದ ಲಖಿಸರೈನಲ್ಲಿ ಘಟಿಸಿದ ಕಾಲ್ತುಳಿತದಲ್ಲಿ ಸಂಭವಿಸಿದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ

August 17th, 12:08 pm

ಬಿಹಾರದ ಲಖಿಸರೈನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಹಿಮಾಚಲ ಪ್ರದೇಶದ ಚಂಬಾದಲ್ಲಿ ಘಟಿಸಿದ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

August 08th, 11:52 am

ಹಿಮಾಚಲ ಪ್ರದೇಶದ ಚಂಬಾದಲ್ಲಿ ಘಟಿಸಿದ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಶ್ರೀ ಡಿ.ವೈ. ಪಾಟೀಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

August 04th, 03:57 pm

ಖ್ಯಾತ ಶಿಕ್ಷಣ ತಜ್ಞ ಮತ್ತು ದಾನಿ ಶ್ರೀ ಡಿ.ವೈ. ಪಾಟೀಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಶ್ರೀ ಡಿ.ವೈ. ಪಾಟೀಲ್ ಅವರು ಯಾವಾಗಲೂ ಇತರರ ಜೀವನ, ವಿಶೇಷವಾಗಿ ಬಡವರ ಜೀವನವನ್ನು ಸುಧಾರಿಸಲು ಶ್ರಮಿಸುತ್ತಿದ್ದರು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

Prime Minister expresses grief over loss of lives due to building collapse in Thane

July 31st, 01:08 pm

The Prime Minister, Shri Narendra Modi has expressed deep grief over the loss of lives due to the collapse of a building in Thane, Maharashtra.

ಸಿಕ್ಕಿಂನ ನಾಮ್ಚಿಯಲ್ಲಿ ಸುರಂಗ ಕುಸಿತದಿಂದಾದ ಜೀವಹಾನಿಗೆ ಪ್ರಧಾನಮಂತ್ರಿ ಶೋಕ

July 21st, 01:01 pm

ಸಿಕ್ಕಿಂನ ನಾಮ್ಚಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತದಿಂದ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದುಃಖ ವ್ಯಕ್ತಪಡಿಸಿದ್ದಾರೆ. ಅವರು ಮೃತರ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಶ್ರೀಮತಿ ಚೆನ್ನಮ್ಮ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

July 18th, 09:00 pm

ಮಾಜಿ ಪ್ರಧಾನಮಂತ್ರಿ ಶ್ರೀ ದೇವೇಗೌಡ ಅವರ ಪತ್ನಿ ಶ್ರೀಮತಿ ಚೆನ್ನಮ್ಮ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಶ್ರೀಮತಿ ಚೆನ್ನಮ್ಮ ಅವರು ತಮ್ಮ ವಿನಮ್ರತೆ ಮತ್ತು ಸಮಾಜ ಸೇವೆಯೆಡೆಗೆ ತಮ್ಮ ಒಲವಿನಿಂದಾಗಿ ಮೆಚ್ಚುಗೆಗೆ ಪಾತ್ರರಾಗಿದ್ದರು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಅವಘಡದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

July 18th, 07:13 pm

ಗುಜರಾತ್ ನ ಅಹಮದಾಬಾದ್ ನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ದುಃಖ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಆಡಳಿತ ಸಂತ್ರಸ್ತರಿಗೆ ಎಲ್ಲ ಸಾಧ್ಯ ನೆರವನ್ನು ಒದಗಿಸುತ್ತಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿದೋಣಿ ಮುಳುಗಿ ಸಂಭವಿಸಿದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ

July 13th, 09:55 pm

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿದೋಣಿ ಮುಳುಗಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕತಾರ್ ದೇಶದ ಅಮೀರ್ ಘನತೆವೆತ್ತ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

July 12th, 03:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕತಾರ್ ರಾಷ್ಟ್ರಪಿತ ಅಮೀರ್ ಘನತೆವೆತ್ತ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.