ಕಾಮನ್‌ವೆಲ್ತ್ ರಾಷ್ಟ್ರಗಳ ಲೋಕಸಭೆಗಳ ಸ್ಪೀಕರ್‌ಗಳು ಮತ್ತು ಅಧ್ಯಕ್ಷಾಧಿಕಾರಿಗಳ 28ನೇ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

January 15th, 11:00 am

ಲೋಕಸಭೆಯ ಗೌರವಾನ್ವಿತ ಸ್ಪೀಕರ್ ಶ್ರೀ ಓಂ ಬಿರ್ಲಾ ಜೀ, ರಾಜ್ಯಸಭೆಯ ಉಪಸಭಾಪತಿ ಶ್ರೀ ಹರಿವಂಶ್ ಜೀ, ಅಂತರ-ಸಂಸದೀಯ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಟುಲಿಯಾ ಆಕ್ಸನ್, ಕಾಮನ್ವೆಲ್ತ್ ಸಂಸದೀಯ ಸಂಘದ ಅಧ್ಯಕ್ಷರಾದ ಶ್ರೀ ಕ್ರಿಸ್ಟೋಫರ್ ಕಲಿಲಾ, ಕಾಮನ್ವೆಲ್ತ್ ದೇಶಗಳ ಸ್ಪೀಕರ್‌ಗಳು ಮತ್ತು ಸಭಾಧ್ಯಕ್ಷರು, ಹಾಗು ಪ್ರತಿನಿಧಿಗಳೇ, ಮಹಿಳೆಯರೇ ಮತ್ತು ಮಹನೀಯರೇ!

ಸಂವಿದಾನ ಸದನದ ಸೆಂಟ್ರಲ್ ಹಾಲ್‌ನಲ್ಲಿ ಕಾಮನ್‌ವೆಲ್ತ್‌ನ ಸ್ಪೀಕರ್‌ಗಳು ಮತ್ತು ಪೀಠಾಸೀನಾಧಿಕಾರಿಗಳ 28ನೇ ಸಮ್ಮೇಳನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 15th, 10:32 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ನವದೆಹಲಿಯ ಸಂಸತ್ ಭವನದ ಸಂಕೀರ್ಣದಲ್ಲಿರುವ ಸಂವಿಧಾನ ಸದನದ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಕಾಮನ್‌ವೆಲ್ತ್‌ನ ಸ್ಪೀಕರ್‌ಗಳು ಮತ್ತು ಸಭಾಧ್ಯಕ್ಷರ 28 ನೇ ಸಮ್ಮೇಳನವನ್ನು (ಸಿಎಸ್‌ಪಿಒಸಿ) ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶ್ರೀ ನರೇಂದ್ರ ಮೋದಿ, ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸ್ಪೀಕರ್ ಪಾತ್ರ ವಿಶಿಷ್ಟವಾಗಿದೆ ಎಂದು ಹೇಳಿದರು. ಸ್ಪೀಕರ್‌ಗೆ ಹೆಚ್ಚು ಮಾತನಾಡಲು ಅವಕಾಶವಿಲ್ಲ, ಆದರೆ ಅವರ ಜವಾಬ್ದಾರಿ ಇತರರ ಮಾತುಗಳನ್ನು ಕೇಳುವುದು ಮತ್ತು ಪ್ರತಿಯೊಬ್ಬರೂ ತಮ್ಮ ಅನಿಸಿಕೆಗಳನ್ನು ಅಭಿವ್ಯಕ್ತ ವ್ಯಕ್ತಪಡಿಸಲು ಅವಕಾಶ ದೊರಕುವಂತೆ ನೋಡಿಕೊಳ್ಳುವುದಾಗಿದೆ ಎಂದು ಅವರು ಒತ್ತಿ ಹೇಳಿದರು. ಗದ್ದಲದ ಮತ್ತು ಅತಿಯಾದ ಉತ್ಸಾಹಭರಿತ ಸದಸ್ಯರನ್ನು ಸಹ ನಗುವಿನೊಂದಿಗೆ ನಿಭಾಯಿಸುವ ಸ್ಪೀಕರ್‌ಗಳ ಸಾಮಾನ್ಯ ಲಕ್ಷಣವೆಂದರೆ ತಾಳ್ಮೆ ಎಂದು ಅವರು ಬಲವಾಗಿ ಪ್ರತಿಪಾದಿಸಿದರು.

ಜನವರಿ 15 ರಂದು ಕಾಮನ್‌ವೆಲ್ತ್‌ನ 28ನೇ ಸ್ಪೀಕರ್‌ಗಳು ಮತ್ತು ಅಧ್ಯಕ್ಷತೆ ವಹಿಸುವವರ ಸಮ್ಮೇಳನವನ್ನು ಪ್ರಧಾನಮಂತ್ರಿ ಅವರು ಉದ್ಘಾಟಿಸಲಿದ್ದಾರೆ

January 14th, 11:19 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 15, 2026 ರಂದು ಬೆಳಿಗ್ಗೆ 10:30ಕ್ಕೆ ನವದೆಹಲಿಯ ಸಂಸತ್ ಭವನದ ಸಂಕೀರ್ಣದ ಸಂವಿಧಾನ್ ಸದನದ ಕೇಂದ್ರ ಸಭಾಂಗಣದಲ್ಲಿ ಕಾಮನ್‌ವೆಲ್ತ್‌ನ ಸ್ಪೀಕರ್‌ಗಳು ಮತ್ತು ಅಧ್ಯಕ್ಷತೆ ವಹಿಸುವವರ 28ನೇ ಸಮ್ಮೇಳನವನ್ನು (CSPOC) ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.