ಬ್ರೆಜಿಲ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
July 08th, 08:30 pm
ಇಂದು ಬ್ರೆಜಿಲ್ ಅಧ್ಯಕ್ಷರಿಂದ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವುದು ನನಗೆ ಮಾತ್ರವಲ್ಲದೆ 140 ಕೋಟಿ ಭಾರತೀಯರಿಗೆ ಅತೀವ ಹೆಮ್ಮೆ ಮತ್ತು ಭಾವನಾತ್ಮಕ ಕ್ಷಣವಾಗಿದೆ. ಈ ಗೌರವಕ್ಕಾಗಿ ಅಧ್ಯಕ್ಷರಿಗೆ, ಬ್ರೆಜಿಲ್ ಸರ್ಕಾರಕ್ಕೆ ಮತ್ತು ಬ್ರೆಜಿಲ್ ಜನರಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ.17ನೇ ಬ್ರಿಕ್ಸ್ ಶೃಂಗಸಭೆ - ಪರಿಸರ, ಸಿಒಪಿ-30 ಮತ್ತು ಜಾಗತಿಕ ಆರೋಗ್ಯ ಕುರಿತ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 07th, 11:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪರಿಸರ, ಸಿಒಪಿ-30 ಮತ್ತು ಜಾಗತಿಕ ಆರೋಗ್ಯ ಕುರಿತಾದ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಈ ಅಧಿವೇಶನದಲ್ಲಿ ಬ್ರಿಕ್ಸ್ ಸದಸ್ಯರು, ಪಾಲುದಾರ ರಾಷ್ಟ್ರಗಳು ಮತ್ತು ಆಹ್ವಾನಿತ ರಾಷ್ಟ್ರಗಳು ಭಾಗವಹಿಸಿದ್ದವು. ವಿಶ್ವದ ಭವಿಷ್ಯಕ್ಕಾಗಿ ಇಂತಹ ಮಹತ್ವದ ವಿಷಯ ಕುರಿತು ಅಧಿವೇಶನವನ್ನು ಆಯೋಜಿಸಿದ್ದಕ್ಕಾಗಿ ಅವರು ಬ್ರೆಜಿಲ್ ಗೆ ಧನ್ಯವಾದ ಸಲ್ಲಿಸಿದರು. ಭಾರತಕ್ಕೆ ಹವಾಮಾನ ಬದಲಾವಣೆಯು ಕೇವಲ ಇಂಧನ ಸಮಸ್ಯೆಗಳನ್ನು ನಿಭಾಯಿಸುವುದಲ್ಲ, ಬದಲಾಗಿ ಅದು ಜೀವನ ಮತ್ತು ನಿಸರ್ಗದ ನಡುವಿನ ಸಮತೋಲನದ ಮೇಲೆ ಪರಿಣಾಮ ಬೀರುವುದಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಭಾರತವು ಹವಾಮಾನ ನ್ಯಾಯವನ್ನು ಈಡೇರಿಸಬೇಕಾದ ನೈತಿಕ ಜವಾಬ್ದಾರಿಯಾಗಿ ನೋಡುತ್ತದೆ ಎಂದು ಅವರು ಒತ್ತಿ ಹೇಳಿದರು. ಪರಿಸರ ಕ್ರಮಕ್ಕೆ ಭಾರತದ ಆಳವಾದ ಬದ್ಧತೆಯನ್ನು ಪುನರುಚ್ಚರಿಸಿದ ಅವರು, ಜನರು ಮತ್ತು ಗ್ರಹದ ಅಭಿವೃದ್ಧಿಯನ್ನು ಉತ್ತೇಜಿಸಲು ಅದು ಕೈಗೊಂಡ ಉಪಕ್ರಮಗಳಾದ ಅಂತಾರಾಷ್ಟ್ರೀಯ ಸೌರ ಒಕ್ಕೂಟ, ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯಕ್ಕಾಗಿ ಒಕ್ಕೂಟ, ಜಾಗತಿಕ ಜೈವಿಕ ಇಂಧನ ಒಕ್ಕೂಟ, ಅಂತರರಾಷ್ಟ್ರೀಯ ಬಿಗ್ ಕ್ಯಾಟ್ ಒಕ್ಕೂಟ, ಮಿಷನ್ ಲೈಫ್, ತಾಯಿಯ ಹೆಸರಿನಲ್ಲಿ ಒಂದು ಗಿಡ ಇತ್ಯಾದಿಗಳ ಬಗ್ಗೆ ವಿವರಿಸಿದರು.ಪರಿಸರ, ಸಿಒಪಿ-30 ಮತ್ತು ಜಾಗತಿಕ ಆರೋಗ್ಯದ ಕುರಿತಾದ ಬ್ರಿಕ್ಸ್ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
July 07th, 11:13 pm
ಬ್ರೆಜಿಲ್ ಅಧ್ಯಕ್ಷತೆಯಲ್ಲಿ ಬ್ರಿಕ್ಸ್, ಪರಿಸರ ಮತ್ತು ಆರೋಗ್ಯ ಸುರಕ್ಷತೆಯಂತಹ ಪ್ರಮುಖ ವಿಷಯಗಳಿಗೆ ಹೆಚ್ಚಿನ ಆದ್ಯತೆ ನೀಡಿರುವುದು ನನಗೆ ಸಂತೋಷ ತಂದಿದೆ. ಈ ವಿಷಯಗಳು ಪರಸ್ಪರ ಸಂಬಂಧ ಹೊಂದಿರುವುದು ಮಾತ್ರವಲ್ಲ ಮಾನವೀಯತೆಯ ಉಜ್ವಲ ಭವಿಷ್ಯಕ್ಕೂ ಸಹ ಬಹಳ ಮುಖ್ಯವಾಗಿವೆ.ಪ್ರಧಾನಮಂತ್ರಿ ಅವರಿಂದ ಬ್ರೆಜಿಲ್ ಅಧ್ಯಕ್ಷರ ಭೇಟಿ
November 20th, 08:05 pm
ರಿಯೊ ಡಿ ಜನೈರೊದಲ್ಲಿ ಜಿ-20 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್ ಅಧ್ಯಕ್ಷರಾದ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರನ್ನು ನವೆಂಬರ್ 19 ರಂದು ಭೇಟಿಯಾದರು. ಅಧ್ಯಕ್ಷ ಲುಲಾ ಅವರ ಆತಿಥ್ಯಕ್ಕಾಗಿ ಪ್ರಧಾನಮಂತ್ರಿಗಳು ಧನ್ಯವಾದ ಅರ್ಪಿಸಿ ಬ್ರೆಜಿಲ್ನ ಜಿ-20 ಮತ್ತು ಐ ಬಿ ಎಸ್ ಎ ಅಧ್ಯಕ್ಷತೆಯ ಯಶಸ್ಸಿಗೆ ಅವರನ್ನು ಅಭಿನಂದಿಸಿದರು. ಬಡತನ ಮತ್ತು ಹಸಿವಿನ ವಿರುದ್ಧ ಜಾಗತಿಕ ಒಕ್ಕೂಟವನ್ನು ಸ್ಥಾಪಿಸುವ ಬ್ರೆಜಿಲಿಯನ್ ಉಪಕ್ರಮವನ್ನು ಪ್ರಧಾನಮಂತ್ರಿ ಶ್ಲಾಘಿಸಿದರು ಮತ್ತು ಅದಕ್ಕೆ ಭಾರತದ ದೃಢ ಬೆಂಬಲವನ್ನು ತಿಳಿಸಿದರು. ಜಿ 20 ತ್ರಿ ಸದಸ್ಯ ರಾಷ್ಟ್ರವಾಗಿ, ಜಾಗತಿಕ ದಕ್ಷಿಣದ ಒಳಿತಿಗೆ ಆದ್ಯತೆ ನೀಡಿರುವ ಸುಸ್ಥಿರ ಅಭಿವೃದ್ಧಿ ಮತ್ತು ಜಾಗತಿಕ ಆಡಳಿತ ಸುಧಾರಣೆಯ ಮೇಲೆ ಕೇಂದ್ರೀಕರಿಸಿದ ಬ್ರೆಜಿಲ್ ನ ಜಿ 20 ಕಾರ್ಯಸೂಚಿಗೆ ಭಾರತದ ಬೆಂಬಲವನ್ನು ಪ್ರಧಾನಮಂತ್ರಿ ಒತ್ತಿ ಹೇಳಿದರು, ಮುಂದಿನ ವರ್ಷ ಬ್ರಿಕ್ಸ್ ಮತ್ತು ಸಿಒಪಿ 30ರ ಬ್ರೆಜಿಲ್ ನ ನಾಯಕತ್ವಕ್ಕಾಗಿ ಅವರು ಶುಭ ಕೋರಿದರು ಮತ್ತು ಭಾರತ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಪ್ರಧಾನಿ ಭರವಸೆ ನೀಡಿದರು.