ನವದೆಹಲಿಯಲ್ಲಿ ನಡೆದ 6ನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
November 17th, 08:30 pm
ಭಾರತೀಯ ಪ್ರಜಾಪ್ರಭುತ್ವದಲ್ಲಿ ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಗೆ ಹೊಸ ಎತ್ತರ ನೀಡಿದ ವ್ಯಕ್ತಿತ್ವವನ್ನು ಗೌರವಿಸಲು ಇಂದು ನಾವೆಲ್ಲರೂ ಇಲ್ಲಿ ಒಟ್ಟುಗೂಡಿದ್ದೇವೆ. ಒಬ್ಬ ದಾರ್ಶನಿಕನಾಗಿ, ಸಂಸ್ಥೆಯ ನಿರ್ಮಾತೃವಾಗಿ, ರಾಷ್ಟ್ರೀಯವಾದಿಯಾಗಿ ಮತ್ತು ಮಾಧ್ಯಮ ನಾಯಕನಾಗಿ, ರಾಮನಾಥ್ ಜಿ ಅವರು ಇಂಡಿಯನ್ ಎಕ್ಸ್ಪ್ರೆಸ್ ಸಮೂಹವನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ, ಭಾರತದ ಜನರ ಒಂದು ಧ್ಯೇಯವಾಗಿ ಸ್ಥಾಪಿಸಿದರು. ಅವರ ನಾಯಕತ್ವದಲ್ಲಿ, ಈ ಸಮೂಹವು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳ ಧ್ವನಿಯಾಯಿತು. ಆದ್ದರಿಂದ 21ನೇ ಶತಮಾನದ ಈ ಯುಗದಲ್ಲಿ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ರಾಮನಾಥ್ ಜಿ ಅವರ ಬದ್ಧತೆ, ಅವರ ಪ್ರಯತ್ನಗಳು ಮತ್ತು ಅವರ ದೃಷ್ಟಿಕೋನವು ನಮಗೆ ಸ್ಫೂರ್ತಿಯ ದೊಡ್ಡ ಸೆಲೆಯಾಗಿದೆ. ಈ ಉಪನ್ಯಾಸಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್ಪ್ರೆಸ್ ಗ್ರೂಪ್ಗೆ ನಾನು ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ, ನಿಮ್ಮೆಲ್ಲರನ್ನು ನಾನು ಅಭಿನಂದಿಸುತ್ತೇನೆ.ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 17th, 08:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯಲ್ಲಿ ಇಂಡಿಯನ್ ಎಕ್ಸ್ಪ್ರೆಸ್ ಆಯೋಜಿಸಿದ್ದ ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಭಾರತದಲ್ಲಿ ಪ್ರಜಾಪ್ರಭುತ್ವ, ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಯನ್ನು ಉನ್ನತೀಕರಿಸಿದ ವಿಶಿಷ್ಟ ವ್ಯಕ್ತಿತ್ವವನ್ನು ಗೌರವಿಸಲು ನಾವು ಇಂದು ಒಟ್ಟುಗೂಡಿದ್ದೇವೆ ಎಂದು ಶ್ರೀ ಮೋದಿ ಹೇಳಿದರು. ಶ್ರೀ ರಾಮನಾಥ್ ಗೋಯೆಂಕಾ ಅವರು ದಾರ್ಶನಿಕರಾಗಿ, ಸಂಸ್ಥೆ ನಿರ್ಮಾತೃರಾಗಿ, ರಾಷ್ಟ್ರೀಯತಾವಾದಿಯಾಗಿ ಮತ್ತು ಮಾಧ್ಯಮ ನಾಯಕರಾಗಿ ಇಂಡಿಯನ್ ಎಕ್ಸ್ಪ್ರೆಸ್ ಗ್ರೂಪ್ ಅನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ ಭಾರತದ ಜನರಲ್ಲಿ ಒಂದು ಧ್ಯೇಯವಾಗಿ ಸ್ಥಾಪಿಸಿದರು ಎಂಬುದನ್ನು ಅವರು ಎತ್ತಿ ತೋರಿಸಿದರು. ಅವರ ನಾಯಕತ್ವದಲ್ಲಿ, ಈ ಗುಂಪು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳಿಗೆ ಧ್ವನಿಯಾಯಿತು ಎಂಬುದರತ್ತ ಪ್ರಧಾನಿ ಗಮನ ಸೆಳೆದರು. 21ನೇ ಶತಮಾನದ ಈ ಯುಗದಲ್ಲಿ, ಭಾರತವು ಅಭಿವೃದ್ಧಿ ಹೊಂದುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ಶ್ರೀ ರಾಮನಾಥ್ ಗೋಯೆಂಕಾ ಅವರ ಬದ್ಧತೆ, ಪ್ರಯತ್ನಗಳು ಮತ್ತು ದೃಷ್ಟಿಕೋನವು ಸ್ಫೂರ್ತಿಯ ದೊಡ್ಡ ಮೂಲವಾಗಿದೆ ಎಂದು ಅವರು ಒತ್ತಿ ಹೇಳಿದರು. ಈ ಉಪನ್ಯಾಸ ನೀಡಲು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್ಪ್ರೆಸ್ ಗ್ರೂಪ್ಗೆ ಪ್ರಧಾನಿ ಕೃತಜ್ಞತೆ ಸಲ್ಲಿಸಿದರು ಮತ್ತು ಹಾಜರಿದ್ದ ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.The Congress has now turned into ‘MMC’ - the Muslim League Maowadi Congress: PM Modi at Surat Airport
November 15th, 06:00 pm
Addressing a large gathering at Surat Airport following the NDA’s landslide victory in the Bihar Assembly Elections, Prime Minister Narendra Modi said, “Bihar has achieved a historic victory and if we were to leave Surat without meeting the people of Bihar, our journey would feel incomplete. My Bihari brothers and sisters living in Gujarat, especially in Surat, have the right to this moment and it is my natural responsibility to be part of this celebration with you.”PM Modi greets and addresses a gathering at Surat Airport
November 15th, 05:49 pm
Addressing a large gathering at Surat Airport following the NDA’s landslide victory in the Bihar Assembly Elections, Prime Minister Narendra Modi said, “Bihar has achieved a historic victory and if we were to leave Surat without meeting the people of Bihar, our journey would feel incomplete. My Bihari brothers and sisters living in Gujarat, especially in Surat, have the right to this moment and it is my natural responsibility to be part of this celebration with you.”ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025ರಲ್ಲಿ ಪ್ರಧಾನಮಂತ್ರಿ ಅವರ ಭಾಷಣ
October 17th, 11:09 pm
ಶ್ರೀಲಂಕಾದ ಗೌರವಾನ್ವಿತ ಪ್ರಧಾನಮಂತ್ರಿ ಹರಿಣಿ ಅಮರಸೂರ್ಯ ಜೀ, ಆಸ್ಟ್ರೇಲಿಯಾದ ಗೌರವಾನ್ವಿತ ಮಾಜಿ ಪ್ರಧಾನ ಮಂತ್ರಿ, ನನ್ನ ಸ್ನೇಹಿತ ಟೋನಿ ಅಬಾಟ್ ಜೀ, ಯುಕೆಯ ಮಾಜಿ ಪ್ರಧಾನಿ ರಿಷಿ ಸುನಕ್ ಜೀ, ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ, ನಮಸ್ಕಾರ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025 ಉದ್ದೇಶಿಸಿ ಭಾಷಣ ಮಾಡಿದರು
October 17th, 08:00 pm
ವೈವಿಧ್ಯಮಯ ರಸ್ತೆ ಅಡೆತಡೆಗಳು ಮತ್ತು ವೇಗ ಅಡೆತಡೆಗಳನ್ನು ಎದುರಿಸುತ್ತಿರುವ ಜಗತ್ತಿನಲ್ಲಿ, ತಡೆಯಲಾಗದ ಭಾರತ ದ ಸುತ್ತಲಿನ ಚರ್ಚೆಯು ಸ್ವಾಭಾವಿಕ ಮತ್ತು ಸಮಯೋಚಿತವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಹನ್ನೊಂದು ವರ್ಷಗಳ ಹಿಂದಿನ ಮತ್ತು ಇಂದಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ವಿಷಯವನ್ನು ಇರಿಸಲು ಅವರು ಪ್ರಯತ್ನಿಸಿದರು. 2014ರ ಹಿಂದಿನ ಯುಗವನ್ನು ಸ್ಮರಿಸಿದ ಶ್ರೀ ನರೇಂದ್ರ ಮೋದಿ ಅವರು, ಆ ಸಮಯದಲ್ಲಿ ಅಂತಹ ಶೃಂಗಸಭೆಗಳಲ್ಲಿ ಪ್ರಾಬಲ್ಯ ಹೊಂದಿದ್ದ ಚರ್ಚೆಗಳ ಸ್ವರೂಪವನ್ನು ಬಿಂಬಿಸಿದರು. ಭಾರತವು ಜಾಗತಿಕ ಪ್ರತಿಕೂಲ ಪರಿಸ್ಥಿತಿಯನ್ನು ಹೇಗೆ ತಡೆದುಕೊಳ್ಳುತ್ತದೆ, ಅದು ದುರ್ಬಲ ಐದು ಗುಂಪಿನಿಂದ ಹೇಗೆ ನಿರ್ಗಮಿಸುತ್ತದೆ, ರಾಷ್ಟ್ರವು ಎಷ್ಟು ಕಾಲ ನೀತಿ ಪಾರ್ಶ್ವವಾಯುವಿನಲ್ಲಿ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ದೊಡ್ಡ ಪ್ರಮಾಣದ ಹಗರಣಗಳ ಯುಗವು ಯಾವಾಗ ಕೊನೆಗೊಳ್ಳುತ್ತದೆ ಎಂಬ ಕಳವಳಗಳನ್ನು ಅವರು ಗಮನಸೆಳೆದರು.ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 01st, 10:45 am
ವೇದಿಕೆಯಲ್ಲಿ ಉಪಸ್ಥಿತರಿರುವ ಗೌರವಾನ್ವಿತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಾರ್ಯದರ್ಶಿ(ಸರ್ಕಾರ್ಯವ್ಹ) ಶ್ರೀ ದತ್ತಾತ್ರೇಯ ಹೊಸಬಾಳೆ ಜಿ, ಕೇಂದ್ರ ಸಚಿವರಾದ ಶ್ರೀ ಗಜೇಂದ್ರ ಶೇಖಾವತ್ ಜಿ, ದೆಹಲಿಯ ಜನಪ್ರಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಎಲ್ಲಾ ಸ್ವಯಂಸೇವಕರೆ, ಇತರ ಗಣ್ಯರೆ, ಮಹನೀಯರೆ ಮತ್ತು ಮಹಿಳೆಯರೆ!ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
October 01st, 10:30 am
ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ ಎಸ್ ಎಸ್) ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮೋದಿ ಅವರು, ಎಲ್ಲಾ ನಾಗರಿಕರಿಗೆ ನವರಾತ್ರಿ ಶುಭಾಶಯಗಳನ್ನು ತಿಳಿಸಿದರು, ಇಂದು ಮಹಾ ನವಮಿ ಮತ್ತು ಸಿದ್ಧಿದಾತ್ರಿ ದೇವಿಯ ದಿನವಾಗಿದೆ ಎಂದು ಹೇಳಿದರು. ನಾಳಿನ ವಿಜಯದಶಮಿಯು ಭವ್ಯ ಹಬ್ಬವಾಗಿದ್ದು, ಇದು ಭಾರತೀಯ ಸಂಸ್ಕೃತಿಯ ಅನ್ಯಾಯದ ವಿರುದ್ಧ ನ್ಯಾಯದ ವಿಜಯ, ಸುಳ್ಳಿನ ವಿರುದ್ದ ಸತ್ಯದ ವಿಜಯ ಮತ್ತು ಕತ್ತಲೆಯ ವಿರುದ್ಧ ಬೆಳಕಿನ ವಿಜಯವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನೂರು ವರ್ಷಗಳ ಹಿಂದೆ ಇಂತಹ ಪವಿತ್ರ ಸಂದರ್ಭದಲ್ಲಿ ಸ್ಥಾಪಿಸಲಾಗಿದ್ದು, ಇದು ಕಾಕತಾಳೀಯವಲ್ಲ ಎಂದು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ಸಾವಿರಾರು ವರ್ಷಗಳ ಹಿಂದಿನ ಪ್ರಾಚೀನ ಪರಂಪರೆಯ ಪುನರುಜ್ಜೀವನ ಇದಾಗಿದ್ದು, ಇದರಲ್ಲಿ ರಾಷ್ಟ್ರೀಯ ಪ್ರಜ್ಞೆಯು ಪ್ರತಿ ಯುಗದ ಸವಾಲುಗಳನ್ನು ಎದುರಿಸಲು ಹೊಸ ರೂಪಗಳಲ್ಲಿ ಪ್ರಕಟವಾಗುತ್ತದೆ ಎಂದು ಅವರು ಹೇಳಿದರು. ಈ ಯುಗದಲ್ಲಿ, ಸಂಘವು ಆ ಶಾಶ್ವತ ರಾಷ್ಟ್ರೀಯ ಪ್ರಜ್ಞೆಯ ಸಾಕಾರವಾಗಿದೆ ಎಂದು ಅವರು ಹೇಳಿದರು.ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 23rd, 10:10 pm
ಜಾಗತಿಕ(ವಿಶ್ವ) ನಾಯಕರ ವೇದಿಕೆಗೆ ಆಗಮಿಸಿರುವ ಎಲ್ಲ ಗೌರವಾನ್ವಿತ ಅತಿಥಿಗಳನ್ನು ನಾನು ಸ್ವಾಗತಿಸುತ್ತೇನೆ. ಈ ವೇದಿಕೆಯ ಸಮಯವು ತುಂಬಾ ಪರಿಪೂರ್ಣವಾಗಿದೆ, ಆದ್ದರಿಂದ ನಾನು ಅದನ್ನು ಪ್ರಶಂಸಿಸುತ್ತೇನೆ. ಕಳೆದ ವಾರವಷ್ಟೇ ನಾನು ಕೆಂಪು ಕೋಟೆಯಿಂದ ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಮಾತನಾಡಿದ್ದೆ, ಈಗ ಈ ವೇದಿಕೆ ಆ ಉತ್ಸಾಹದಲ್ಲಿ ಶಕ್ತಿ ಗುಣಕವಾಗಿ ಕಾರ್ಯ ನಿರ್ವಹಿಸುತ್ತಿದೆ.ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 23rd, 05:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಪ್ರಧಾನಮಂತ್ರಿ ಅವರು ವರ್ಲ್ಡ್ ಲೀಡರ್ ಫೋರಂನಲ್ಲಿ ಭಾಗವಹಿಸಿದ್ದ ಎಲ್ಲಾ ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು. ಈ ವೇದಿಕೆಯ ಸಮಯ ಅತ್ಯಂತ ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟ ಶ್ರೀ ಮೋದಿ ಅವರು, ಈ ಸಕಾಲಿಕ ಉಪಕ್ರಮಕ್ಕಾಗಿ ಆಯೋಜಕರನ್ನು ಶ್ಲಾಘಿಸಿದರು.ಕಳೆದ ವಾರವಷ್ಟೇ, ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಕೆಂಪು ಕೋಟೆಯಿಂದ ಮಾತನಾಡಿದ ಅವರು, ಈ ವೇದಿಕೆ ಈಗ ಆ ಚೈತನ್ಯಕ್ಕೆ ಶಕ್ತಿ ವರ್ಧಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.ನಮೀಬಿಯಾದ ರಾಷ್ಟ್ರೀಯ ಅಸೆಂಬ್ಲಿಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 09th, 08:14 pm
ಪ್ರಜಾಪ್ರಭುತ್ವದ ತಾಯಿ ಎನಿಸಿದ ದೇಶದ ಪ್ರತಿನಿಧಿಯಾಗಿ ನಾನು ನಿಮ್ಮ ಮುಂದೆ ನಿಂತಿದ್ದೇನೆ. ನಾನು ನನ್ನೊಂದಿಗೆ 140 ಕೋಟಿ ಭಾರತೀಯರ ಆತ್ಮೀಯ ಶುಭಾಶಯಗಳನ್ನು ತಂದಿದ್ದೇನೆ.Prime Minister addresses the Namibian Parliament
July 09th, 08:00 pm
PM Modi addressed the Parliament of Namibia and expressed gratitude to the people of Namibia for conferring upon him their highest national honour. Recalling the historic ties and shared struggle for freedom between the two nations, he paid tribute to Dr. Sam Nujoma, the founding father of Namibia. He also called for enhanced people-to-people exchanges between the two countries.ಟ್ರಿನಿಡಾಡ್ ಮತ್ತು ಟೊಬಾಗೋ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 04th, 09:30 pm
ಈ ಐತಿಹಾಸಿಕ 'ರೆಡ್ ಹೌಸ್'ನಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡಿದ ಮೊದಲ ಭಾರತೀಯ ಪ್ರಧಾನಿಯಾಗಿರುವುದು ನನಗೆ ದೊರೆತ ವಿನಮ್ರ ಗೌರವ. ಈ ಐತಿಹಾಸಿಕ ಕಟ್ಟಡವು ಟ್ರಿನಿಡಾಡ್ ಮತ್ತು ಟೊಬಾಗೋ ಜನರ ಸ್ವಾತಂತ್ರ್ಯ ಮತ್ತು ಘನತೆಗಾಗಿ ನಡೆದ ಹೋರಾಟ ಹಾಗೂ ತ್ಯಾಗಗಳಿಗೆ ಸಾಕ್ಷಿಯಾಗಿದೆ. ಕಳೆದ ಆರು ದಶಕಗಳಲ್ಲಿ ನೀವು ನ್ಯಾಯನಿಷ್ಠ, ಸರ್ವಸಮ್ಮತ ಹಾಗೂ ಸಮೃದ್ಧಿಯುತ ಪ್ರಜಾಪ್ರಭುತ್ವವನ್ನು ರೂಪಿಸುವಲ್ಲಿ, ಈ ಭವನವು ನಿಮ್ಮ ಪಯಣದ ದೃಢ ಹೆಗ್ಗುರುತಾಗಿ ನಿಂತಿದೆ.ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
July 04th, 09:00 pm
ಸೆನೆಟ್ ಅಧ್ಯಕ್ಷರಾದ ಗೌರವಾನ್ವಿತ ವೇಡ್ ಮಾರ್ಕ್ ಮತ್ತು ಸದನದ ಸ್ಪೀಕರ್ ಗೌರವಾನ್ವಿತ ಜಗದೇವ್ ಸಿಂಗ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತಿನ ಜಂಟಿ ಸಭೆಯನ್ನು ಉದ್ದೇಶಿಸಿ ಇಂದು ಮಾತನಾಡಿದರು. ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನ ಮಂತ್ರಿ ಮೋದಿ ಅವರು, ಈ ಸಂದರ್ಭವು ಭಾರತ-ಟ್ರಿನಿಡಾಡ್ ಮತ್ತು ಟೊಬಾಗೊ ನಡುವಿನ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಮೈಲಿಗಲ್ಲು ಗುರುತಿಸಿದೆ ಎಂದರು.ಘಾನಾ ಗಣರಾಜ್ಯದ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಪಠ್ಯ
July 03rd, 03:45 pm
ಪ್ರಜಾಪ್ರಭುತ್ವ, ಘನತೆ ಮತ್ತು ದೃಢತೆಯ ಚೈತನ್ಯವನ್ನು ಹೊರಸೂಸುವ ಘಾನಾದಲ್ಲಿ ಇರುವುದು ಒಂದು ಸೌಭಾಗ್ಯ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಪ್ರತಿನಿಧಿಯಾಗಿ, ನಾನು 140 ಕೋಟಿ ಭಾರತೀಯರ ಸದ್ಭಾವನೆ ಮತ್ತು ಶುಭಾಶಯಗಳನ್ನು ನನ್ನೊಂದಿಗೆ ತಂದಿದ್ದೇನೆ.ಘಾನಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
July 03rd, 03:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಘಾನಾ ಸಂಸತ್ತಿನ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ, ಈ ಸಾಧನೆ ಮಾಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸಂಸತ್ತಿನ ಸ್ಪೀಕರ್ ಗೌರವಾನ್ವಿತ ಆಲ್ಬನ್ ಕಿಂಗ್ಸ್ಫೋರ್ಡ್ ಸುಮನಾ ಬಾಗ್ಬಿನ್ ಅವರು ಕರೆದಿದ್ದ ಈ ಅಧಿವೇಶನದಲ್ಲಿ ಸಂಸತ್ ಸದಸ್ಯರು, ಸರ್ಕಾರಿ ಅಧಿಕಾರಿಗಳು ಮತ್ತು ಎರಡೂ ರಾಷ್ಟ್ರಗಳ ಗಣ್ಯ ಅತಿಥಿಗಳು ಭಾಗವಹಿಸಿದ್ದರು. ಈ ಭಾಷಣವು ಭಾರತ-ಘಾನಾ ಸಂಬಂಧಗಳಲ್ಲಿ ಮಹತ್ವದ ಕ್ಷಣವನ್ನು ದಾಖಲಿಸಿತು, ಇದು ಎರಡೂ ದೇಶಗಳನ್ನು ಒಂದುಗೂಡಿಸುವ ಪರಸ್ಪರ ಗೌರವ ಮತ್ತು ಹಂಚಿಕೆಯ ಪ್ರಜಾಪ್ರಭುತ್ವ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ.ಜಮ್ಮು-ಕಾಶ್ಮೀರದ ಕತ್ರಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 06th, 12:50 pm
ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಜಿ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಜಿ, ಜಿತೇಂದ್ರ ಸಿಂಗ್ ಜಿ, ವಿ. ಸೋಮಣ್ಣ ಜಿ, ಉಪಮುಖ್ಯಮಂತ್ರಿ ಸುರೇಂದ್ರ ಕುಮಾರ್ ಜಿ, ಜಮ್ಮು-ಕಾಶ್ಮೀರ ವಿಧಾನಸಭೆಯ ವಿಪಕ್ಷ ನಾಯಕ ಸುನಿಲ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿ ಜುಗಲ್ ಕಿಶೋರ್ ಜಿ, ಇಲ್ಲಿರುವ ಜನಪ್ರತಿನಿಧಿಗಳೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ. ಇದು ವೀರ್ ಜೋರಾವರ್ ಸಿಂಗ್ ಜಿ ಅವರ ಭೂಮಿ, ನಾನು ಈ ಭೂಮಿಗೆ ನಮಸ್ಕರಿಸುತ್ತೇನೆ.ಜಮ್ಮು ಮತ್ತು ಕಾಶ್ಮೀರದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 06th, 12:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ದೇಶಕ್ಕೆ ಸಮರ್ಪಿಸಿದರು. ವೀರ ಜೋರಾವರ್ ಸಿಂಗ್ ಅವರ ಭೂಮಿಗೆ ನಮನ ಸಲ್ಲಿಸುತ್ತಾ, ಇಂದಿನ ಕಾರ್ಯಕ್ರಮವು ಭಾರತದ ಏಕತೆ ಮತ್ತು ದೃಢಸಂಕಲ್ಪದ ಭವ್ಯ ಆಚರಣೆಯಾಗಿದೆ ಎಂದು ಹೇಳಿದರು. ಮಾತಾ ವೈಷ್ಣೋದೇವಿಯ ಆಶೀರ್ವಾದದಿಂದ ಕಾಶ್ಮೀರ ಕಣಿವೆ ಈಗ ಭಾರತದ ವಿಶಾಲ ರೈಲ್ವೆ ಜಾಲಕ್ಕೆ ಸಂಪರ್ಕ ಹೊಂದಿದೆ ಎಂದು ಶ್ರೀ ಮೋದಿ ಹೇಳಿದರು. ನಾವು ಯಾವಾಗಲೂ ಮಾತೆ ಭಾರತಿಯನ್ನು ಆಳವಾದ ಭಕ್ತಿಯಿಂದ ಪ್ರಾರ್ಥಿಸುತ್ತೇವೆ, 'ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ' ಎಂದು ಹೇಳುತ್ತೇವೆ, ಇಂದು, ಇದು ನಮ್ಮ ರೈಲ್ವೆ ಜಾಲದಲ್ಲಿಯೂ ಸಹ ವಾಸ್ತವವಾಗಿದೆ ಎಂದು ಪ್ರಧಾನಿ ಉದ್ಗರಿಸಿದರು, ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಮಾರ್ಗ ಯೋಜನೆಯು ಕೇವಲ ಹೆಸರಲ್ಲ, ಜಮ್ಮು ಮತ್ತು ಕಾಶ್ಮೀರದ ಹೊಸ ಶಕ್ತಿಯ ಸಂಕೇತ ಮತ್ತು ಭಾರತದ ಬೆಳೆಯುತ್ತಿರುವ ಸಾಮರ್ಥ್ಯಗಳಿಗೆ ಸಾಕ್ಷಿಯಾಗಿದೆ ಎಂದು ಒತ್ತಿ ಹೇಳಿದರು. ಈ ಪ್ರದೇಶದಲ್ಲಿ ರೈಲು ಮೂಲಸೌಕರ್ಯ ಮತ್ತು ಸಂಪರ್ಕವನ್ನು ಹೆಚ್ಚಿಸುವ ಬದ್ಧತೆಗೆ ಅನುಗುಣವಾಗಿ, ಅವರು ಚೆನಾಬ್ ಮತ್ತು ಅಂಜಿ ರೈಲು ಸೇತುವೆಗಳನ್ನು ಉದ್ಘಾಟಿಸಿದರು ಮತ್ತು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು, ಇದು ಜಮ್ಮು ಮತ್ತು ಕಾಶ್ಮೀರದೊಳಗೆ ಸಂಪರ್ಕವನ್ನು ಹೆಚ್ಚಿಸುತ್ತದೆ. ಇದರ ಜೊತೆಗೆ, ಶ್ರೀ ಮೋದಿ ಅವರು ಜಮ್ಮುವಿನಲ್ಲಿ ಹೊಸ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ ನೆರವೇರಿಸಿದರು, ಈ ಪ್ರದೇಶದಲ್ಲಿ ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸಿದರು, ₹46,000 ಕೋಟಿ ಮೌಲ್ಯದ ಯೋಜನೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯನ್ನು ವೇಗಗೊಳಿಸುತ್ತವೆ, ಪ್ರಗತಿ ಮತ್ತು ಸಮೃದ್ಧಿಗೆ ಚಾಲನೆ ನೀಡುತ್ತವೆ ಎಂದು ಹೇಳಿದರು. ಪ್ರಧಾನಿಯವರು ತಮ್ಮ ಶುಭಾಶಯಗಳನ್ನು ವ್ಯಕ್ತಪಡಿಸಿದರು ಮತ್ತು ಬೆಳವಣಿಗೆ ಹಾಗು ಪರಿವರ್ತನೆಯ ಈ ಹೊಸ ಯುಗಕ್ಕಾಗಿ ಜನರನ್ನು ಅಭಿನಂದಿಸಿದರು.ಪರಾಗ್ವೆ ಅಧ್ಯಕ್ಷ ರೊಂದಿಗಿನ ನಿಯೋಗ ಮಟ್ಟದ ಮಾತುಕತೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಆರಂಭಿಕ ಹೇಳಿಕೆಯ ಕನ್ನಡ ಅನುವಾದ
June 02nd, 03:00 pm
ನಾವು ನಿಮಗೆ ಮತ್ತು ನಿಮ್ಮ ನಿಯೋಗಕ್ಕೆ ಭಾರತಕ್ಕೆ ಆತ್ಮೀಯ ಸ್ವಾಗತವನ್ನು ನೀಡುತ್ತೇವೆ. ಪರಾಗ್ವೆ ದಕ್ಷಿಣ ಅಮೆರಿಕಾದಲ್ಲಿ ಪ್ರಮುಖ ಪಾಲುದಾರ. ನಮ್ಮ ಭೌಗೋಳಿಕತೆಗಳು ವಿಭಿನ್ನವಾಗಿರಬಹುದು, ಆದರೆ ನಾವು ಒಂದೇ ಪ್ರಜಾಪ್ರಭುತ್ವ ಮೌಲ್ಯಗಳನ್ನು ಹಂಚಿಕೊಳ್ಳುತ್ತೇವೆ ಮತ್ತು ಜನರ ಯೋಗಕ್ಷೇಮದ ಬಗ್ಗೆ ಕಾಳಜಿ ವಹಿಸುತ್ತೇವೆ.ಗಾಂಧಿನಗರದಲ್ಲಿ ನಡೆದ ಗುಜರಾತ್ ನಗರಾಭಿವೃದ್ಧಿ ಇತಿಹಾಸದ 20ನೇ ವಾರ್ಷಿಕೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 27th, 11:30 am
ವೇದಿಕೆಯಲ್ಲಿ ಉಪಸ್ಥಿತರಿರುವ ಗುಜರಾತ್ ರಾಜ್ಯಪಾಲರಾದ ಗೌರವಾನ್ವಿತ ಆಚಾರ್ಯ ದೇವವ್ರತ ಜೀ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳೆ, ಮನೋಹರ್ ಲಾಲ್ ಜೀ, ಸಿ.ಆರ್. ಪಾಟೀಲ್ ಜೀ, ಗುಜರಾತ್ ಸರ್ಕಾರದ ಸಚಿವರೆ, ಸಂಸದರೆ, ಶಾಸಕರೆ ಮತ್ತು ಗುಜರಾತ್ನ ವಿವಿಧೆಡೆಯಿಂದ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,