ಸೆಪ್ಟೆಂಬರ್ 25 ನವದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿರುವ 'ವಿಶ್ವ ಆಹಾರ ಮೇಳ ಭಾರತ 2025' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ
September 24th, 06:33 pm
'ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ' (PMFME) ಯೋಜನೆಯಡಿ, ಆಹಾರ ಸಂಸ್ಕರಣಾ ವಲಯದಲ್ಲಿನ ಸೂಕ್ಷ್ಮ ಯೋಜನೆಗಳಿಗಾಗಿ ಸುಮಾರು 26,000 ಫಲಾನುಭವಿಗಳಿಗೆ ₹770 ಕೋಟಿಗೂ ಅಧಿಕ ಮೊತ್ತದ ಸಾಲ-ಸಂಯೋಜಿತ ನೆರವನ್ನು ವಿತರಿಸಲಾಗುವುದು.ಬಿಹಾರದ ಸಿವಾನ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 20th, 01:00 pm
ನಾನು ಎಲ್ಲರಿಗೂ ನಮಸ್ಕರಿಸುತ್ತೇನೆ. ಬಾಬಾ ಮಹೇಂದ್ರನಾಥ್, ಬಾಬಾ ಹಂಸನಾಥ್, ಸೋಹಗ್ರಾ ಧಾಮ್, ಮಾತೆ ತಾವೇ ಭವಾನಿ, ಮಾತೆ ಅಂಬಿಕಾ ಭವಾನಿ, ದೇಶದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಮತ್ತು ಲೋಕನಾಯಕ್ ಜಯಪ್ರಕಾಶ್ ನಾರಾಯಣ್ ಅವರ ಪುಣ್ಯ ಭೂಮಿಯಲ್ಲಿರುವ ಎಲ್ಲರಿಗೂ ನಾನು ನಮಸ್ಕರಿಸುತ್ತೇನೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಸಿವಾನ್ ನಲ್ಲಿ 5,200 ಕೋಟಿ ರೂ.ಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು
June 20th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಸಿವಾನ್ ನಲ್ಲಿ 5,200 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಹಾಜರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿ ಅವರು, ಬಾಬಾ ಮಹೇಂದ್ರ ನಾಥ್ ಮತ್ತು ಬಾಬಾ ಹನ್ಸ್ ನಾಥ್ ಅವರಿಗೆ ಗೌರವ ನಮನ ಸಲ್ಲಿಸಿದರು ಮತ್ತು ಸೊಹಗಾರ ಧಾಮದ ಪವಿತ್ರ ಉಪಸ್ಥಿತಿಯನ್ನು ಸ್ಮರಿಸಿದರು. ಅವರು ಮಾ ತವೆ ಭವಾನಿ ಮತ್ತು ಮಾ ಅಂಬಿಕಾ ಭವಾನಿ ಅವರಿಗೂ ನಮಸ್ಕರಿಸಿದರು. ಪ್ರಧಾನಮಂತ್ರಿ ಅವರು ದೇಶದ ಮೊದಲ ರಾಷ್ಟ್ರಪತಿ ದೇಶ್ ರತ್ನ ಡಾ. ರಾಜೇಂದ್ರ ಪ್ರಸಾದ್ ಮತ್ತು ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಸ್ಮರಣೆಯನ್ನು ಗೌರವಿಸಿದರು.ಸೈಪ್ರಸ್ ಮತ್ತು ಭಾರತ ನಡುವಿನ ಸಮಗ್ರ ಪಾಲುದಾರಿಕೆ ಅನುಷ್ಠಾನದ ಕುರಿತು ಜಂಟಿ ಘೋಷಣೆ
June 16th, 03:20 pm
ಸೈಪ್ರಸ್ ಗಣರಾಜ್ಯದ ಅಧ್ಯಕ್ಷರಾದ ಶ್ರೀ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು, 2025ರ ಜೂನ್ 15 ರಿಂದ 16 ರವರೆಗೆ ಸೈಪ್ರಸ್‌ಗೆ ಅಧಿಕೃತ ಭೇಟಿ ನೀಡಿದ ಭಾರತ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಎರಡು ದಶಕಗಳ ಬಳಿಕ, ಭಾರತದ ಪ್ರಧಾನಿಯೊಬ್ಬರು ಸೈಪ್ರಸ್ ಗೆ ನೀಡಿದ ಈ ಭೇಟಿಯು, ಉಭಯ ರಾಷ್ಟ್ರಗಳ ನಡುವಿನ ಗಾಢ ಮತ್ತು ಶಾಶ್ವತ ಸ್ನೇಹವನ್ನು ಪುನರುಚ್ಚರಿಸುವ ಒಂದು ಐತಿಹಾಸಿಕ ಮೈಲಿಗಲ್ಲಾಗಿದೆ. ಈ ಭೇಟಿಯು, ಕೇವಲ ಸಮಾನ ಇತಿಹಾಸದ ಆಚರಣೆಯಾಗಿರದೆ, ಜಂಟಿ ವ್ಯೂಹಾತ್ಮಕ ದೃಷ್ಟಿ, ಪರಸ್ಪರ ನಂಬಿಕೆ ಮತ್ತು ಗೌರವದ ತಳಹದಿಯ ಮೇಲೆ ನಿಂತಿರುವ ಭವಿಷ್ಯದ ಪಾಲುದಾರಿಕೆಯ ಸಂಕೇತವಾಗಿದೆ.ಸೈಪ್ರಸ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
June 16th, 03:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೈಪ್ರಸ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರೊಂದಿಗೆ ಅಧಿಕೃತ ಮಾತುಕತೆ ನಡೆಸಿದರು. ಅಧ್ಯಕ್ಷರ ಅರಮನೆಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ಅಧ್ಯಕ್ಷ ಕ್ರಿಸ್ಟೋಡೌಲೈಡ್ಸ್ ಅವರು ಬರಮಾಡಿಕೊಂಡು, ಸಾಂಪ್ರದಾಯಿಕ ಸ್ವಾಗತವನ್ನು ನೀಡಿದರು. ನಿನ್ನೆ, ವಿಶೇಷ ಸೌಹಾರ್ದದ ಸಂಕೇತವಾಗಿ ಅಧ್ಯಕ್ಷ ಕ್ರಿಸ್ಟೋಡೌಲಿಡೀಸ್ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದು, ಇದು ಎರಡೂ ರಾಷ್ಟ್ರಗಳ ನಡುವಿನ ಪರಸ್ಪರ ವಿಶ್ವಾಸ ಮತ್ತು ಶಾಶ್ವತ ಸ್ನೇಹವನ್ನು ಪ್ರತಿಬಿಂಬಿಸುತ್ತದೆ.ಸೈಪ್ರಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಪತ್ರಿಕಾ ಹೇಳಿಕೆ
June 16th, 01:45 pm
ಮೊದಲನೆಯದಾಗಿ, ಗೌರವಾನ್ವಿತ ಅಧ್ಯಕ್ಷರ ಆತ್ಮೀಯ ಸ್ವಾಗತ ಮತ್ತು ಔದಾರ್ಯಯುತ ಆತಿಥ್ಯಕ್ಕಾಗಿ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ನಿನ್ನೆ ನಾನು ಸೈಪ್ರಸ್ ನೆಲಕ್ಕೆ ಕಾಲಿಟ್ಟ ಕ್ಷಣದಿಂದ, ಅಧ್ಯಕ್ಷರು ಮತ್ತು ಈ ದೇಶದ ಜನರು ತೋರಿಸಿದ ಆತ್ಮೀಯತೆ ಮತ್ತು ವಾತ್ಸಲ್ಯವು ನಿಜವಾಗಿಯೂ ನನ್ನ ಹೃದಯವನ್ನು ಮುಟ್ಟಿದೆ.ಸೈಪ್ರಸ್‌ನ ಪ್ರತಿಷ್ಠಿತ 'ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III' ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಸ್ವೀಕಾರ ಭಾಷಣ
June 16th, 01:35 pm
ನನಗೆ 'ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III' ಪುರಸ್ಕಾರ ನೀಡಿದ್ದಕ್ಕಾಗಿ ನಾನು ನಿಮಗೆ, ನಿಮ್ಮ ಸರ್ಕಾರಕ್ಕೆ ಮತ್ತು ಸೈಪ್ರಸ್ ಜನತೆಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇನೆ.ಪ್ರಧಾನಮಂತ್ರಿ ಅವರಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ - III ಗೌರವ ಪ್ರದಾನ
June 16th, 01:33 pm
ಸೈಪ್ರಸ್ ಅಧ್ಯಕ್ಷರಾದ ಮಾನ್ಯ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಸೈಪ್ರಸ್ ಗೌರವವಾದ - ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಅನ್ನು ಪ್ರದಾನ ಮಾಡಿದರು.ಪ್ರಧಾನಮಂತ್ರಿ ಮತ್ತು ಸೈಪ್ರಸ್ ನ ಅಧ್ಯಕ್ಷರು, ಭಾರತ ಮತ್ತು ಸೈಪ್ರಸ್ ವಾಣಿಜ್ಯ ನಾಯಕರೊಂದಿಗೆ ಸಂವಾದ ನಡೆಸಿದರು
June 16th, 02:17 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೈಪ್ರಸ್ ಅಧ್ಯಕ್ಷ ಘನತೆವೆತ್ತ ನಿಕೋಸ್ ಕ್ರಿಸ್ಟೋಡೌಲಿಡೆಸ್ ಅವರೊಂದಿಗೆ ಇಂದು ಲಿಮಾಸೋಲ್ ನಲ್ಲಿ ಸೈಪ್ರಸ್ ಮತ್ತು ಭಾರತದ ವಾಣಿಜ್ಯ ನಾಯಕರೊಂದಿಗೆ ದುಂಡುಮೇಜಿನ ಸಂವಾದ ನಡೆಸಿದರು. ಬ್ಯಾಂಕಿಂಗ್, ಹಣಕಾಸು ಸಂಸ್ಥೆಗಳು, ಉತ್ಪಾದನೆ, ರಕ್ಷಣೆ, ಲಾಜಿಸ್ಟಿಕ್ಸ್, ಕಡಲ, ಹಡಗು, ತಂತ್ರಜ್ಞಾನ, ನಾವೀನ್ಯತೆ, ಡಿಜಿಟಲ್ ತಂತ್ರಜ್ಞಾನಗಳು, ಎಐ, ಐಟಿ ಸೇವೆಗಳು, ಪ್ರವಾಸೋದ್ಯಮ ಮತ್ತು ಚಲನಶೀಲತೆಯಂತಹ ವೈವಿಧ್ಯಮಯ ಕ್ಷೇತ್ರಗಳನ್ನು ಪ್ರತಿನಿಧಿಸುವವರು ಭಾಗವಹಿಸಿದರು.ಸೈಪ್ರಸ್‌ನಲ್ಲಿ ನಡೆದ ಭಾರತ-ಸೈಪ್ರಸ್ ಉದ್ಯಮ ವ್ಯವಹಾರದ ದುಂಡು ಮೇಜಿನ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 15th, 11:10 pm
ಮೊದಲನೆಯದಾಗಿ, ಇಂದು ನನ್ನನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಸೈಪ್ರಸ್ ಅಧ್ಯಕ್ಷರಿಗೆ ನನ್ನ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ. ಉದ್ಯಮ ವ್ಯವಹಾರ ನಾಯಕರೊಂದಿಗೆ ಇಷ್ಟು ದೊಡ್ಡ ದುಂಡುಮೇಜಿನ ಸಭೆ ಆಯೋಜಿಸಿದ್ದಕ್ಕಾಗಿ ನಾನು ಅವರಿಗೆ ತುಂಬಾ ಕೃತಜ್ಞನಾಗಿದ್ದೇನೆ. ನನ್ನ ಬಗ್ಗೆ ಮತ್ತು ನಮ್ಮ ಪಾಲುದಾರಿಕೆಯ ಬಗ್ಗೆ ಅವರು ಹಂಚಿಕೊಂಡ ಸಕಾರಾತ್ಮಕ ಆಲೋಚನೆಗಳಿಗಾಗಿ ನಾನು ಅವರಿಗೆ ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ.ಪ್ರಧಾನ ಮಂತ್ರಿ ಮೋದಿ ಸೈಪ್ರಸ್‌ಗೆ ಆಗಮಿಸಿದರು
June 15th, 06:06 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸ್ವಲ್ಪ ಸಮಯದ ಹಿಂದೆ ಸೈಪ್ರಸ್‌ಗೆ ಆಗಮಿಸಿದರು. ಅವರನ್ನು ಸೈಪ್ರಸ್ ಅಧ್ಯಕ್ಷ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡರು.ಸೈಪ್ರಸ್, ಕೆನಡಾ ಮತ್ತು ಕ್ರೊಯೇಷಿಯಾ ಸೇರಿ ಮೂರು ರಾಷ್ಟ್ರಗಳ ಪ್ರವಾಸಕ್ಕೆ ಮುನ್ನು ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ
June 15th, 07:00 am
ಜೂನ್ 15-16ರಂದು ನಾನು ಅಧ್ಯಕ್ಷ ಘನತೆವೆತ್ತ ನಿಕೋಸ್ ಕ್ರಿಸ್ಟೋಡೌಲಿಡೆಸ್ ಅವರ ಆಹ್ವಾನದ ಮೇರೆಗೆ ಸೈಪ್ರಸ್ ಗಣರಾಜ್ಯಕ್ಕೆ ಭೇಟಿ ನೀಡಲಿದ್ದೇನೆ. ಸೈಪ್ರಸ್ ಮೆಡಿಟರೇನಿಯನ್ ಪ್ರದೇಶ ಮತ್ತು ಇಯುನಲ್ಲಿ ಆಪ್ತ ಸ್ನೇಹಿತ ಮತ್ತು ಪ್ರಮುಖ ಪಾಲುದಾರ. ಈ ಭೇಟಿಯು ಐತಿಹಾಸಿಕ ಬಂಧಗಳನ್ನು ನಿರ್ಮಿಸಲು ಮತ್ತು ವ್ಯಾಪಾರ, ಹೂಡಿಕೆ, ಭದ್ರತೆ, ತಂತ್ರಜ್ಞಾನ ಕ್ಷೇತ್ರಗಳಲ್ಲಿ ನಮ್ಮ ಸಂಬಂಧಗಳನ್ನು ವಿಸ್ತರಿಸಲು ಮತ್ತು ಜನರ ನಡುವಿನ ವಿನಿಮಯವನ್ನು ಉತ್ತೇಜಿಸಲು ಅವಕಾಶವನ್ನು ಒದಗಿಸುತ್ತದೆ.ಜೂನ್ 15 ರಿಂದ 19 ರವರೆಗೆ ಪ್ರಧಾನಿ ಮೋದಿ ಸೈಪ್ರಸ್ ಗಣರಾಜ್ಯ, ಕೆನಡಾ ಮತ್ತು ಕ್ರೊಯೇಷಿಯಾಕ್ಕೆ ಭೇಟಿ ನೀಡಲಿದ್ದಾರೆ
June 14th, 11:58 am
ಪ್ರಧಾನಿ ಮೋದಿ ಜೂನ್ 15-16 ರಂದು ಸೈಪ್ರಸ್‌ಗೆ ಭೇಟಿ ನೀಡಲಿದ್ದಾರೆ, ಜೂನ್ 16-17 ರಂದು ಜಿ-7 ಶೃಂಗಸಭೆಗಾಗಿ ಕೆನಡಾಕ್ಕೆ ಮತ್ತು ಜೂನ್ 18 ರಂದು ಕ್ರೊಯೇಷಿಯಾಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಮೋದಿ ಸೈಪ್ರಸ್ ಅಧ್ಯಕ್ಷ ಕ್ರಿಸ್ಟೋಡೌಲೈಡ್ಸ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಮತ್ತು ಲಿಮಾಸೋಲ್‌ನಲ್ಲಿ ವ್ಯಾಪಾರ ನಾಯಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಕೆನಡಾದಲ್ಲಿ, ಜಿ-7 ಶೃಂಗಸಭೆಯಲ್ಲಿ, ಪ್ರಧಾನಿ ಮೋದಿ ಜಿ-7 ದೇಶಗಳ ನಾಯಕರೊಂದಿಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ಕ್ರೊಯೇಷಿಯಾದಲ್ಲಿ, ಪ್ರಧಾನಿ ಮೋದಿ ಪ್ರಧಾನಿ ಪ್ಲೆಂಕೋವಿಕ್ ಅವರೊಂದಿಗೆ ದ್ವಿಪಕ್ಷೀಯ ಚರ್ಚೆ ನಡೆಸಲಿದ್ದಾರೆ ಮತ್ತು ಕ್ರೊಯೇಷಿಯಾದ ಅಧ್ಯಕ್ಷ ಜೊರಾನ್ ಮಿಲನೋವಿಕ್ ಅವರನ್ನು ಭೇಟಿ ಮಾಡಲಿದ್ದಾರೆ.ಸೈಪ್ರಸ್ ಅಧ್ಯಕ್ಷರಾಗಿ ಆಯ್ಕೆಯಾದ ಘನತೆವೆತ್ತ ನಿಕೋಸ್ ಕ್ರಿಸ್ಟೋಡೌಲಿಡೆಸ್ ಅವರಿಗೆ ಪ್ರಧಾನ ಮಂತ್ರಿ ಅಭಿನಂದನೆ
February 13th, 10:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೈಪ್ರಸ್ ಅಧ್ಯಕ್ಷರಾಗಿ ಆಯ್ಕೆಯಾದ ಘನತೆವೆತ್ತ ನಿಕೋಸ್ ಕ್ರಿಸ್ಟೋಡೌಲಿಡೆಸ್ ಅವರನ್ನು ಅಭಿನಂದಿಸಿದ್ದಾರೆ.PM Modi's bilateral meetings on the margins of UNGA in New York
September 26th, 11:27 pm
PM Modi held bilateral talks with leaders from several countries in the sidelines of the UNGA in New York.ಸೋಶಿಯಲ್ ಮೀಡಿಯಾ ಕಾರ್ನರ್ - ಏಪ್ರಿಲ್ 28
April 28th, 08:13 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !"ಸೈಪ್ರಸ್ ಗಣರಾಜ್ಯದ ಅಧ್ಯಕ್ಷ ಶ್ರೀ. ನಿಕೋಸ್ ಅನಸ್ತಸಿಯಾಡೆಸ್ ಜೊತೆ ಒಪ್ಪಂದಗಳ ವಿನಿಮಯ ಮತ್ತು ಪ್ರೆಸ್ ಹೇಳಿಕೆಯಲ್ಲಿ ಪ್ರಧಾನಿ"
April 28th, 02:05 pm
ಸೈಪ್ರಸ್ ಗಣರಾಜ್ಯದ ಅಧ್ಯಕ್ಷ ಶ್ರೀ. ನಿಕೋಸ್ ಅನಸ್ತಸಿಯಾಡೆಸ್ ಜೊತೆ ಪ್ರಧಾನಿ ನರೇಂದ್ರ ಮೋದಿ ಇಂದು ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಮಾಡಿದರು . ಸೈಪ್ರಸ್ ಮತ್ತು ಭಾರತ ಎರಡೂ ದೇಶಗಳ ಪ್ರಾಚೀನ ನಾಗರಿಕತೆಗಳು ಮತ್ತು ನಾಗರೀಕತೆಗಳ ಶ್ರೀಮಂತ ಪರಂಪರೆಗಳನ್ನು ಸಹಸ್ರಮಾನಗಳ ಮೂಲಕ ಪರಸ್ಪರ ಪ್ರಭಾವ ಬೀರಿದೆ ಎಂದು ಪ್ರಧಾನಿ ಮೋದಿ ಹೇಳಿದರು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕೆ ಭಾರತ ಹಕ್ಕು ನೀಡುವ ಸೈಪ್ರಸ್ ಬೆಂಬಲವನ್ನು ಮೋದಿ ಶ್ಲಾಘಿಸಿದ್ದಾರೆ.PM’s engagements in New York City – September 25th, 2015
September 25th, 11:27 pm