ಜೋಹಾನ್ಸ್‌ಬರ್ಗ್ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷರನ್ನು ಪ್ರಧಾನಮಂತ್ರಿ ಅವರು ಭೇಟಿ ಮಾಡಿದರು
November 23rd, 02:18 pm
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋಹಾನ್ಸ್‌ಬರ್ಗ್ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಸಿರಿಲ್ ರಾಮಫೋಸಾ ಅವರನ್ನು ಇಂದು ಭೇಟಿ ಮಾಡಿದರು. ಶೃಂಗಸಭೆಯ ಆತ್ಮೀಯ ಆತಿಥ್ಯ ಮತ್ತು ಯಶಸ್ವಿ ನಡವಳಿಕೆಗಳಿಗಾಗಿ ಅಧ್ಯಕ್ಷ ಶ್ರೀ ರಾಮಫೋಸಾ ಅವರಿಗೆ ಪ್ರಧಾನಮಂತ್ರಿ ಅವರು ಧನ್ಯವಾದ ಅರ್ಪಿಸಿದರು. ನವದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳನ್ನು ಮುಂದಕ್ಕೆ ತೆಗೆದುಕೊಂಡು ಹೋಗಲು ಮತ್ತು ನೂತನ ಹಂತ ನಿರ್ಮಿಸಲು ದಕ್ಷಿಣ ಆಫ್ರಿಕಾದ ಜಿ20 ಮಾಡಿರುವ ಪ್ರಯತ್ನಗಳನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದರು.ಐ.ಬಿ.ಎಸ್.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
November 23rd, 12:45 pm
ಐಬಿಎಸ್‌ಎ ಕೇವಲ ಮೂರು ದೇಶಗಳ ವೇದಿಕೆಯಲ್ಲ; ಇದು ಮೂರು ಖಂಡಗಳು, ಮೂರು ಪ್ರಮುಖ ಪ್ರಜಾಪ್ರಭುತ್ವ ಶಕ್ತಿಗಳು ಮತ್ತು ಮೂರು ಮಹತ್ವದ ಆರ್ಥಿಕತೆಗಳನ್ನು ಜೋಡಿಸುವ ಪ್ರಮುಖ ವೇದಿಕೆಯಾಗಿದೆ. ಇದು ನಮ್ಮ ವೈವಿಧ್ಯತೆ, ಹಂಚಿಕೆಯ ಮೌಲ್ಯಗಳು ಮತ್ತು ಹಂಚಿಕೆಯ ಆಕಾಂಕ್ಷೆಗಳಲ್ಲಿ ಬೇರೂರಿರುವ ಆಳವಾದ ಮತ್ತು ನಿರಂತರ ಪಾಲುದಾರಿಕೆಯಾಗಿದೆ.ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಐ.ಬಿ.ಎಸ್.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಭಾಗಿ
November 23rd, 12:30 pm
ಸಭೆಯನ್ನು ಸಕಾಲಿಕ ಎಂದು ಬಣ್ಣಿಸಿದ ಪ್ರಧಾನಮಂತ್ರಿ, ಕಾಕತಾಳೀಯವೆಂದರೆ ಇದು ಆಫ್ರಿಕಾದ ನೆಲದಲ್ಲಿ ನಡೆದ ಮೊದಲ ಜಿ20 ಶೃಂಗಸಭೆಯಾಗಿದೆ ಮತ್ತು ಜಾಗತಿಕ ದಕ್ಷಿಣ ದೇಶಗಳು ಸತತ ನಾಲ್ಕು ಜಿ20 ಸಭೆಗಳ ಅಧ್ಯಕ್ಷತೆಗಳನ್ನು ವಹಿಸಿಕೊಂಡವು, ಅವುಗಳಲ್ಲಿ ಕೊನೆಯ ಮೂರು ಐ.ಬಿ.ಎಸ್.ಎ ಸದಸ್ಯ ರಾಷ್ಟ್ರಗಳದ್ದಾಗಿದ್ದವು ಎಂದು ಉಲ್ಲೇಖಿಸಿದರು. ಇದು ಮಾನವ ಕೇಂದ್ರಿತ ಅಭಿವೃದ್ಧಿ, ಬಹುಪಕ್ಷೀಯ ಸುಧಾರಣೆ ಮತ್ತು ಸುಸ್ಥಿರ ಬೆಳವಣಿಗೆಯ ಮೇಲೆ ಕೇಂದ್ರೀಕರಿಸಿದ ಹಲವಾರು ಪ್ರಮುಖ ಉಪಕ್ರಮಗಳಿಗೆ ಕಾರಣವಾಗಿದೆ ಎಂದು ಅವರು ಉಲ್ಲೇಖಿಸಿದರು.ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು
November 22nd, 09:35 pm
ಯಾರನ್ನೂ ಹಿಂದೆ ಬಿಡದ ಸಮಗ್ರ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆ ಕುರಿತು ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕೌಶಲ್ಯಪೂರ್ಣ ವಲಸೆ, ಪ್ರವಾಸೋದ್ಯಮ, ಆಹಾರ ಭದ್ರತೆ, ಕೃತಕ ಬುದ್ಧಿಮತ್ತೆ, ಡಿಜಿಟಲ್ ಆರ್ಥಿಕತೆ, ನಾವೀನ್ಯತೆ ಮತ್ತು ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯ ಅಡಿಯಲ್ಲಿ ಗುಂಪು ಕಾರ್ಯಚಟುವಟಿಕೆ ಮೂಲಕ ಮಾಡಿದ ಕಾರ್ಯವನ್ನು ಶ್ಲಾಘಿಸಿದರು. ಈ ಪ್ರಕ್ರಿಯೆಯಲ್ಲಿ, ನವದೆಹಲಿ ಶೃಂಗಸಭೆಯ ಸಮಯದಲ್ಲಿ ತೆಗೆದುಕೊಂಡ ಕೆಲವು ಐತಿಹಾಸಿಕ ನಿರ್ಧಾರಗಳನ್ನು ಮುಂದುವರಿಸಲಾಗಿದೆ ಅಭಿವೃದ್ಧಿಯ ಹೊಸ ನಿಯತಾಂಕಗಳನ್ನು ನೋಡುವ ಸಮಯ ಬಂದಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು, ವಿಶೇಷವಾಗಿ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಜಿ20 ಶೃಂಗಸಭೆ ನಡೆದಾಗ, ಬೆಳವಣಿಗೆಯ ಅಸಮತೋಲನ ಮತ್ತು ಪ್ರಕೃತಿಯ ಅತಿಯಾದ ಶೋಷಣೆಯನ್ನು ಪರಿಹರಿಸುವ ಒಂದು ಮಾನದಂಡ ಇದು. ಈ ಸಂದರ್ಭದಲ್ಲಿ, ಭಾರತದ ನಾಗರಿಕತೆಯ ಬುದ್ಧಿವಂತಿಕೆಯ ಆಧಾರದ ಮೇಲೆ ಸಮಗ್ರ ಮಾನವತಾವಾದದ ಕಲ್ಪನೆಯನ್ನು ಅನ್ವೇಷಿಸಬೇಕು ಎಂದು ಅವರು ತಿಳಿಸಿದರು. ಸಮಗ್ರ ಮಾನವತಾವಾದವನ್ನು ಅವರು ವಿಸ್ತರಿಸಿ, ಮಾನವರು, ಸಮಾಜ ಮತ್ತು ಪ್ರಕೃತಿಯ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಳ್ಳುತ್ತಾರೆ ಮತ್ತು ಪ್ರಗತಿ ಮತ್ತು ಗ್ರಹದ ನಡುವಿನ ಸಾಮರಸ್ಯವನ್ನು ಹೇಗೆ ಸಾಧಿಸಬಹುದು ಎಂದು ಹೇಳಿದರು.ದಕ್ಷಿಣ ಆಫ್ರಿಕಾ ಗಣರಾಜ್ಯಕ್ಕೆ ಭೇಟಿ ನೀಡುವ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ
November 21st, 06:45 am
ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯಲ್ಲಿ ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ 20ನೇ ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲು ಘನತೆವೆತ್ತ ಶ್ರೀ ಹೆಚ್.ಇ. ಸಿರಿಲ್ ರಾಮಫೋಸಾ ಅವರ ಆಹ್ವಾನದ ಮೇರೆಗೆ ನಾನು 2025ರ ನವೆಂಬರ್ 21-23 ರವರೆಗೆ ದಕ್ಷಿಣ ಆಫ್ರಿಕಾ ಗಣರಾಜ್ಯಕ್ಕೆ ಭೇಟಿ ನೀಡುತ್ತಿದ್ದೇನೆ.PM Modi expresses gratitude to world leaders for birthday wishes
September 17th, 03:03 pm
The Prime Minister Shri Narendra Modi expressed his gratitude to the world leaders for greetings on his 75th birthday, today.ಜಿ7 ಶೃಂಗಸಭೆಯಲ್ಲಿ ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಸಂವಾದ
June 18th, 03:05 pm
2025ರ ಜೂನ್ 17 ರಂದು ಕೆನಡಾದ ಕನನಾಸ್ಕಿಸ್ನಲ್ಲಿ ನಡೆದ ಜಿ 7 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಸಿರಿಲ್ ರಾಮಫೋಸಾ ಮತ್ತು ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ವಿಸ್ತಾರವಾದ ಮತ್ತು ಹೃತ್ಪೂರ್ವಕ ಸಂಭಾಷಣೆಗಳನ್ನು ನಡೆಸಿದರು. ಜಾಗತಿಕ ದಕ್ಷಿಣದ ಉದ್ದೇಶವನ್ನು ಸಮರ್ಥಿಸುವ ಭಾರತದ ಅಚಲ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.ಜಿ7 ಶೃಂಗಸಭೆಯ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ
June 18th, 02:51 pm
ಜೂನ್ 17, 2025 ರಂದು ಕೆನಡಾದ ಕನನಾಸ್ಕಿಸ್ನಲ್ಲಿ ನಡೆದ 51 ನೇ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ಸಿರಿಲ್ ರಾಮಫೋಸಾ ಅವರೊಂದಿಗೆ ಮಾತುಕತೆ ನಡೆಸಿದರು.ದಕ್ಷಿಣ ಆಫ್ರಿಕಾ ಗಣರಾಜ್ಯದ ಅಧ್ಯಕ್ಷರಾಗಿ ಮರು ಆಯ್ಕೆಯಾದ ಗೌರವಾನ್ವಿತ ಸಿರಿಲ್ ರಮಾಫೋಸಾ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ
June 17th, 05:11 pm
ದಕ್ಷಿಣ ಆಫ್ರಿಕಾ ಗಣರಾಜ್ಯದ ಅಧ್ಯಕ್ಷರಾಗಿ ಮರು ಆಯ್ಕೆಯಾದ ಗೌರವಾನ್ವಿತ ಸಿರಿಲ್ ರಾಮಾಫೋಸಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲುದಕ್ಷಿಣ ಆಫ್ರಿಕಾದ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿಯವರ ಭೇಟಿ
August 23rd, 03:05 pm
ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳ ಪ್ರಗತಿಯನ್ನು ಇಬ್ಬರೂ ನಾಯಕರು ಪರಿಶೀಲಿಸಿದರು. ಈ ಇಬ್ಬರೂ ನಾಯಕರು ರಕ್ಷಣೆ, ಕೃಷಿ, ವ್ಯಾಪಾರ ಮತ್ತು ಹೂಡಿಕೆ, ಆರೋಗ್ಯ, ಸಂರಕ್ಷಣೆ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ಉಭಯ ದೇಶಗಳು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿದ ಪ್ರಗತಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.ಬ್ರಿಕ್ಸ್ ನಾಯಕರ ಬೀಳ್ಕೊಡುಗೆ ಸಭೆಯಲ್ಲಿ ಪ್ರಧಾನಿ ಭಾಗಿ
August 22nd, 11:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಆಗಸ್ಟ್ 22ರಂದು ಜೋಹಾನ್ಸ್ ಬರ್ಗ್ ನ ಸಮ್ಮರ್ ಪ್ಲೇಸ್ ನಲ್ಲಿ ನಡೆದ ಬ್ರಿಕ್ಸ್ ನಾಯಕರ ಬೀಳ್ಕೊಡುಗೆಯಲ್ಲಿ ಭಾಗವಹಿಸಿದ್ದರು.ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್ ಗೆ ಭೇಟಿ ನೀಡುವ ಮುನ್ನ ಪ್ರಧಾನಮಂತ್ರಿಯವರ ನಿರ್ಗಮನ ಪೂರ್ವ ಹೇಳಿಕೆ
August 22nd, 06:17 am
ಬ್ರಿಕ್ಸ್ ವಿವಿಧ ವಲಯಗಳಲ್ಲಿ ಬಲವಾದ ಸಹಕಾರ ಕಾರ್ಯಸೂಚಿಯನ್ನು ಅನುಸರಿಸುತ್ತಿದೆ. ಅಭಿವೃದ್ಧಿಯ ಅಗತ್ಯತೆಗಳು ಮತ್ತು ಬಹುಪಕ್ಷೀಯ ವ್ಯವಸ್ಥೆಯ ಸುಧಾರಣೆ ಸೇರಿದಂತೆ ಇಡೀ ಜಾಗತಿಕ ದಕ್ಷಿಣ ಭಾಗದ ಭೂಗೋಳಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲು ಮತ್ತು ಸಂಧಾನ ಮಾಡಲು ಬ್ರಿಕ್ಸ್ ವೇದಿಕೆಯಾಗಿದೆ ಎಂದು ನಾವು ಹೆಮ್ಮೆ ಪೂರ್ವಕ ಗೌರವಿಸುತ್ತೇವೆ. ಈ ಶೃಂಗಸಭೆಯು ಬ್ರಿಕ್ಸ್ ಗೆ ಭವಿಷ್ಯದ ಸಹಕಾರ ಕ್ಷೇತ್ರಗಳನ್ನು ಗುರುತಿಸಲು ಮತ್ತು ಸಾಂಸ್ಥಿಕ ಅಭಿವೃದ್ಧಿಯನ್ನು ಪರಿಶೀಲಿಸಲು ಉಪಯುಕ್ತ ಅವಕಾಶವನ್ನು ಒದಗಿಸುತ್ತದೆ.ದಕ್ಷಿಣ ಆಫ್ರಿಕಾ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತುಕತೆ
August 03rd, 08:26 pm
2023 ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ರಾಜತಾಂತ್ರಿಕ ಬಾಂಧವ್ಯದ 30ನೇ ವರ್ಷವಾಗಿದ್ದು, ಉಭಯ ನಾಯಕರು ದ್ವಿಪಕ್ಷೀಯ ಸಹಕಾರದ ಪ್ರಗತಿ ಪರಾಮರ್ಶೆ ನಡೆಸಿದರು.ದಕ್ಷಿಣ ಆಫ್ರಿಕಾ ಅಧ್ಯಕ್ಷರೊಂದಿಗೆ ಸಮಾಲೋಚನೆ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ.
June 10th, 10:13 pm
ದಕ್ಷಿಣ ಆಫ್ರಿಕಾ ಗಣರಾಜ್ಯದ ಅಧ್ಯಕ್ಷ, ಗೌರವಾನ್ವಿತ ಶ್ರೀ ಮಾಟೆಮೆಲ ಸಿರಿಲ್ ರಾಮಪೋಸ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷರೊಂದಿಗೆ ಸಭೆ ನಡೆಸಿದ ಪ್ರಧಾನ ಮಂತ್ರಿ.
June 27th, 09:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಸಿರಿಲ್ ರಾಮಾಫೋಸಾ ಅವರನ್ನು ಜರ್ಮನಿಯ ಸ್ಕ್ಲೋಸ್ ಎಲ್ಮಾವ್‌ನಲ್ಲಿ ಜಿ-7 ಶೃಂಗಸಭೆಯ ನೇಪಥ್ಯದಲ್ಲಿ 2022ರ ಜೂನ್ 27ರಂದು ಭೇಟಿಯಾಗಿ ಮಾತುಕತೆ ನಡೆಸಿದರು.ದಕ್ಷಿಣ ಆಫ್ರಿಕಾದ ಗೌರವಾನ್ವಿತ ಅಧ್ಯಕ್ಷ ಶ್ರೀ ಮಟೆಮೆಲಾ ಸಿರಿಲ್ ರಾಮಾಫೋಸಾ ಅವರೊಂದಿಗೆ ಪ್ರಧಾನಿ ಮಾತುಕತೆ
February 04th, 09:02 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾದ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಮಟೆಮೆಲಾ ಸಿರಿಲ್ ರಾಮಾಫೋಸಾ ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿದರು.12ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾರತದ ಭಾಗವಹಿಸುವಿಕೆಯನ್ನು ಮುನ್ನಡೆಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
November 17th, 04:00 pm
ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಅಧ್ಯಕ್ಷತೆಯಲ್ಲಿ 2020ರ ನವೆಂಬರ್ 17ರಂದು ವರ್ಚುವಲ್ ರೂಪದಲ್ಲಿ ನಡೆದ 12ನೇ ಬ್ರಿಕ್ಸ್ ಶೃಂಗಸಭೆಯ ಭಾರತದ ಪಾಲ್ಗೊಳ್ಳುವಿಕೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುನ್ನಡೆಸಿದರು. ಈ ಶೃಂಗಸಭೆಯ ಘೋಷ ವಾಕ್ಯ “ಜಾಗತಿಕ ಸ್ಥಿರತೆ, ಹಂಚಿಕೆಯ ಭದ್ರತೆ ಮತ್ತು ನಾವಿನ್ಯ ಬೆಳವಣಿಗೆ’’ ಎಂಬುದಾಗಿತ್ತು. ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೋನಾರೋ, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಮತ್ತು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸೈರಿಲ್ ರಾಮಫೋಸ ಮತ್ತಿತರರು ಶೃಂಗಸಭೆಯಲ್ಲಿ ಭಾಗವಹಿಸಿದ್ದರು.Telephone Conversation between PM and President of the Republic of South Africa
April 17th, 08:58 pm
Prime Minister Shri Narendra Modi had a telephone conversation today with H.E. Cyril Ramaphosa, President of the Republic of South Africa.PM Modi's remarks at BRICS Dialogue with Business Council and New Development Bank
November 14th, 09:40 pm
PM Modi addressed the Dialogue with BRICS Business Council and New Development Bank. The PM said the BRICS Business Council should make a roadmap of achieving the target of $500 billion Intra-BRICS trade. He also urged BRICS nations and New Development Bank to join coalition for disaster resilient infrastructure.ಭಾರತದಲ್ಲಿ ಬ್ರಿಕ್ಸ್ ಜಲ ಸಚಿವರುಗಳ ಪ್ರಥಮ ಸಭೆ ಆಯೋಜಿಸಲು ಪ್ರಧಾನಮಂತ್ರಿ ಪ್ರಸ್ತಾಪ
November 14th, 08:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರಿಜಿಲ್ ನಲ್ಲಿಂದು 11ನೇ ಬ್ರಿಕ್ಸ್ ಶೃಂಗಸಭೆಯ ಮಹಾಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು. ಬ್ರಿಕ್ಸ್ ಇತರ ರಾಷ್ಟ್ರಗಳ ಮುಖ್ಯಸ್ಥರುಗಳು ಕೂಡ ಈ ಮಹಾಧಿವೇಶನದಲ್ಲಿ ಮಾತನಾಡಿದರು.