ಉತ್ತರ ಪ್ರದೇಶದ ವಾರಾಣಸಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 28th, 05:30 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳೆ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ನಿತಿನ್ ನಬಿನ್ ಜಿ, ಉತ್ತರ ಪ್ರದೇಶದ ಸಂಸದ ಮತ್ತು ಯುಪಿ ಬಿಜೆಪಿ ಅಧ್ಯಕ್ಷರಾದ ಶ್ರೀ ಪಂಕಜ್ ಚೌಧರಿ ಜಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಸಹೋದರಿ ಪೂನಂ ಮೌರ್ಯ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಕಾಶಿಯ ಮಹಿಳಾ ಕೌನ್ಸಿಲರ್‌ಗಳು ಮತ್ತು ಗ್ರಾಮ ಮುಖ್ಯಸ್ಥರೆ, ಇತರೆ ಜನಪ್ರತಿನಿಧಿಗಳೆ ಮತ್ತು ಇಲ್ಲಿಗೆ ಬಂದಿರುವ ನನ್ನ ತಾಯಂದಿರು, ಸಹೋದರಿಯರು ಮತ್ತು ಹೆಣ್ಣು ಮಕ್ಕಳೆ ನಿಮ್ಮೆಲ್ಲರಿಗೂ ನಮಸ್ಕಾರ.ವಾರಣಾಸಿಯಲ್ಲಿ ಮಹಿಳಾ ಸಮ್ಮೇಳನದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಸುಮಾರು 6,350 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ
April 28th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾರಣಾಸಿಯಲ್ಲಿ ನಡೆದ ಸಮಾವೇಶದಲ್ಲಿ ಬೃಹತ್ ಮಹಿಳಾ ಸಭೆಯನ್ನುದ್ದೇಶಿಸಿ ಮಾತನಾಡಿದರು, ಅಲ್ಲಿ ಅವರು ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಿಲಾನ್ಯಾಸ ಮಾಡಿದರು.2026ರ ಬ್ರೆಜಿಲ್ ಚೀಸ್ ವಿಶ್ವಕಪ್‌ನಲ್ಲಿ ಭಾರತೀಯ ಚೀಸ್ ಮೇಕರ್ ಗಳ ಗಮನಾರ್ಹ ಸಾಧನೆಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ
April 22nd, 09:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಚೀಸ್ ಹಾಗೂ ಡೈರಿ ಉತ್ಪನ್ನಗಳ ತಯಾರಕರಿಗಾಗಿ ನಡೆಸುವ ಅಂತಾರಾಷ್ಟ್ರೀಯ ಸ್ವರ್ಧೆ, 2026ರ ಬ್ರೆಜಿಲ್ ವಿಶ್ವ ಚೀಸ್ ಚಾಂಪಿಯನ್‌ಶಿಪ್‌ನಲ್ಲಿ ಗಮನಾರ್ಹ ಸಾಧನೆ ಮಾಡಿದ ಭಾರತೀಯ ಚೀಸ್ ಮೇಕರ್ ಗಳನ್ನು ಅಭಿನಂದಿಸಿದ್ದಾರೆ. ನಾಲ್ಕು ಭಾರತೀಯ ಉತ್ಪನ್ನಗಳು 1 ಸೂಪರ್ ಚಿನ್ನ, 2 ಚಿನ್ನ ಮತ್ತು 1 ಬೆಳ್ಳಿ ಸೇರಿದಂತೆ ನಾಲ್ಕು ಪದಕಗಳನ್ನು ಗೆದ್ದಿವೆ.ಮಾರ್ಚ್ 6, 2026 ರಂದು “ಕೃಷಿ ಮತ್ತು ಗ್ರಾಮೀಣ ಪರಿವರ್ತನೆ” ಕುರಿತು ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಭಾಷಣ ಮಾಡಲಿದ್ದಾರೆ
March 05th, 06:04 pm
ಮಾರ್ಚ್ 6, 2026 ರಂದು ಬೆಳಿಗ್ಗೆ 11:15ಕ್ಕೆ “ಕೃಷಿ ಮತ್ತು ಗ್ರಾಮೀಣ ಪರಿವರ್ತನೆ” ಎಂಬ ವಿಷಯದ ಕುರಿತು ಬಜೆಟ್ ನಂತರದ ಮೌಲ್ಯವರ್ಧಿತ ವಿಶ್ಲೇಷಣೆ ಸಂವಾದಗಳ ವಿಶೇಷ ವೆಬಿನಾರ್ ಸರಣಿಕೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ ಮೂಲಕ ಭಾಷಣ ಮಾಡಲಿದ್ದಾರೆ.ಎಐ ಪ್ರಗತಿಯಿಂದ ಟಿ20 ವಿಶ್ವಕಪ್ ವರೆಗೆ, ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ ಭಾರತದ ಏರಿಕೆಯನ್ನು ಪ್ರದರ್ಶಿಸುತ್ತಾರೆ
February 22nd, 11:30 am
ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ದೆಹಲಿಯಲ್ಲಿ ನಡೆದ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ತಮ್ಮ ಅನುಭವಗಳ ಬಗ್ಗೆ ಮಾತನಾಡಿದರು. ಭಾರತೀಯ ಮೂಲದ ಕ್ರಿಕೆಟಿಗರು, ಅಂಗಾಂಗ ದಾನ, ನದಿ ಉತ್ಸವಗಳು, ಡಿಜಿಟಲ್ ಸುರಕ್ಷತೆ, ಪರೀಕ್ಷಾ ಪೆ ಚರ್ಚಾ ಮತ್ತು ಇನ್ನೂ ಅನೇಕ ಪ್ರಮುಖ ವಿಷಯಗಳನ್ನು ಅವರು ಸ್ಪರ್ಶಿಸಿದರು. ಫೆಬ್ರವರಿ 23 ರಂದು ರಾಷ್ಟ್ರಪತಿ ಭವನದಲ್ಲಿ 'ರಾಜಾಜಿ ಉತ್ಸವ' ಆಚರಿಸಲಾಗುವುದು ಎಂದು ಅವರು ಹೈಲೈಟ್ ಮಾಡಿದರು. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಿ ಅವರಿಗೆ ಪ್ರಧಾನಿ ಗೌರವ ಸಲ್ಲಿಸಿದರು, ನಾರಿ ಶಕ್ತಿಯೊಂದಿಗಿನ ಅವರ ಆಳವಾದ ಸಂಪರ್ಕವನ್ನು ಗಮನಿಸಿದರು.ಕಚ್ ಮತ್ತು ಸೌರಾಷ್ಟ್ರ ಪ್ರಾಂತ್ಯದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
January 11th, 02:45 pm
2026ರ ಆರಂಭದ ನಂತರ ಗುಜರಾತ್ ಗೆ ಇದು ನನ್ನ ಮೊದಲ ಭೇಟಿಯಾಗಿದೆ. ಈ ವರ್ಷದ ನನ್ನ ಪ್ರಯಾಣವು ಸೋಮನಾಥ ದಾದಾ ಅವರ ಪಾದಗಳಿಗೆ ತಲೆಬಾಗುವ ಮೂಲಕ ಪ್ರಾರಂಭವಾಗಿರುವುದು ಅತ್ಯಂತ ಮಂಗಳಕರ ಸಂಗತಿಯಾಗಿದೆ. ಈಗ ನಾನು ಈ ಭವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜಕೋಟ್ ನಲ್ಲಿದ್ದೇನೆ. 'ಅಭಿವೃದ್ಧಿ ಮತ್ತು ಪರಂಪರೆ' ಎಂಬ ಮಂತ್ರವು ಇಂದು ಎಲ್ಲೆಡೆ ಪ್ರತಿಧ್ವನಿಸುತ್ತಿದೆ. ದೇಶದ ಮೂಲೆ ಮೂಲೆಗಳಿಂದ ಮತ್ತು ವಿಶ್ವದಾದ್ಯಂತ ಈ 'ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆ'ಗೆ ಆಗಮಿಸಿರುವ ನಿಮ್ಮೆಲ್ಲರಿಗೂ ನಾನು ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ.ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು
January 11th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, 2026ರಲ್ಲಿ ಇದು ಗುಜರಾತ್‌ಗೆ ಅವರ ಮೊದಲ ಭೇಟಿ ಎಂದು ಹೇಳಿದರು. ಬೆಳಿಗ್ಗೆ ತಾವು ಭಗವಾನ್ ಸೋಮನಾಥನ ದಿವ್ಯ ದರ್ಶನ ಪಡೆದು, ಈಗ ರಾಜ್‌ಕೋಟ್‌ನಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆ ಎನಿಸಿದೆ ಎಂದು ಹೇಳಿದರು. ವಿಕಾಸ್ ಭಿ, ವಿರಾಸತ್ ಭಿ ಎಂಬ ಮಂತ್ರ ಎಲ್ಲೆಡೆ ಪ್ರತಿಧ್ವನಿಸುತ್ತಿದೆ ಎಂದರು. ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತದಿಂದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಭಾಗವಹಿಸಲು ಬಂದಿದ್ದ ಎಲ್ಲಾ ಸಹೋದ್ಯೋಗಿಗಳನ್ನು ಪ್ರಧಾನಮಂತ್ರಿ ಸ್ವಾಗತಿಸಿದರು ಮತ್ತು ಶುಭಾಶಯಗಳನ್ನು ತಿಳಿಸಿದರು.ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ನಡೆದ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ
November 19th, 11:00 am
ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳು, ರಾಮಮೋಹನ್ ನಾಯ್ಡು ಜಿ, ಜಿ. ಕಿಶನ್ ರೆಡ್ಡಿ ಜಿ, ಭೂಪತಿ ರಾಜು ಶ್ರೀನಿವಾಸ ವರ್ಮಾ ಜಿ, ಸಚಿನ್ ತೆಂಡೂಲ್ಕರ್ ಜಿ, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಜಿ, ರಾಜ್ಯ ಸರ್ಕಾರದ ಸಚಿವ ನಾರಾ ಲೋಕೇಶ್ ಜಿ, ಶ್ರೀ ಸತ್ಯಸಾಯಿ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಆರ್. ಜೆ. ರತ್ನಾಕರ್ ಜಿ, ಉಪಕುಲಪತಿ ಕೆ. ಚಕ್ರವರ್ತಿ ಜಿ, ಐಶ್ವರ್ಯ ಜಿ, ಇತರ ಎಲ್ಲಾ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ, ಎಲ್ಲರಿಗೂ ಸಾಯಿ ರಾಮ್!ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 19th, 10:30 am
ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಇಂದು ನಡೆದ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಅವರು ತಮ್ಮ ಮಾತುಗಳನ್ನು ಸಾಯಿ ರಾಮ್ ನೊಂದಿಗೆ ಪ್ರಾರಂಭಿಸಿದರು ಮತ್ತು ಪುಟ್ಟಪರ್ತಿಯ ಪವಿತ್ರ ಭೂಮಿಯಲ್ಲಿ ಎಲ್ಲರೊಂದಿಗೆ ಇರುವುದು ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಅನುಭವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಲ್ಪ ಸಮಯದ ಹಿಂದೆ, ಬಾಬಾ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸುವ ಅವಕಾಶ ತಮಗೆ ಸಿಕ್ಕಿತು ಎಂಬುದನ್ನೂ ಅವರು ಹಂಚಿಕೊಂಡರು. ಬಾಬಾ ಅವರ ಪಾದಗಳಿಗೆ ನಮಸ್ಕರಿಸಿ ಅವರ ಆಶೀರ್ವಾದ ಪಡೆಯುವುದು ಸದಾ ಹೃದಯವನ್ನು ತುಂಬುವ ಆಳವಾದ ಭಾವನಾತ್ಮಕ ಕ್ಷಣ ಎಂದವರು ಬಣ್ಣಿಸಿದರು.ಮಂಗೋಲಿಯಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಪ್ರಕಟಣೆಯ ಕನ್ನಡ ಅನುವಾದ
October 14th, 01:15 pm
ಮಂಗೋಲಿಯಾ ಅಧ್ಯಕ್ಷರು ಆರು ವರ್ಷಗಳ ನಂತರ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ, ಇದು ಬಹಳ ವಿಶೇಷ ಸಂದರ್ಭವಾಗಿದೆ. ಭಾರತ ಮತ್ತು ಮಂಗೋಲಿಯಾ 70 ವರ್ಷಗಳ ರಾಜತಾಂತ್ರಿಕ ಸಂಬಂಧಗಳು ಮತ್ತು 10 ವರ್ಷಗಳ ಕಾರ್ಯತಂತ್ರದ ಪಾಲುದಾರಿಕೆಯನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಈ ಭೇಟಿ ಬಂದಿದೆ. ಇದನ್ನು ಗುರುತಿಸಲು, ನಾವು ನಮ್ಮ ಹಂಚಿಕೆಯ ಪರಂಪರೆ, ವೈವಿಧ್ಯತೆ ಮತ್ತು ಬಲವಾದ ನಾಗರಿಕತೆಯ ಬಾಂಧವ್ಯಗಳನ್ನು ಎತ್ತಿ ತೋರಿಸುವ ಜಂಟಿ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದೇವೆ.ಗುಜರಾತ್‌ನ ಅಹಮದಾಬಾದ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 25th, 06:42 pm
ಇಂದು, ನೀವೆಲ್ಲರೂ ನಿಜವಾಗಿಯೂ ಉತ್ತಮ ವಾತಾವರಣ ಸೃಷ್ಟಿಸಿದ್ದೀರಿ. ಈ ಲಕ್ಷಾಂತರ ಜನರ ಪ್ರೀತಿ ಮತ್ತು ಆಶೀರ್ವಾದ ಪಡೆಯಲು ನಾನು ಎಷ್ಟು ಅದೃಷ್ಟಶಾಲಿ ಎಂದು ನಾನು ಅನೇಕ ಬಾರಿ ಭಾವಿಸಿದ್ದೇನೆ. ನಾನು ನಿಮಗೆ ಎಷ್ಟೇ ಧನ್ಯವಾದ ಹೇಳಿದರೂ ಅದು ಎಂದಿಗೂ ಮುಗಿಯುವುದಿಲ್ಲ. ನೋಡಿ, ಅಲ್ಲಿ ಸ್ವಲ್ಪ ನರೇಂದ್ರ ನಿಂತಿದ್ದಾನೆ!ಗುಜರಾತಿನ ಅಹಮದಾಬಾದ್ ನಲ್ಲಿ 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ, ಶಿಲಾನ್ಯಾಸ ಮತ್ತು ಲೋಕಾರ್ಪಣೆ ನೆರವೇರಿಸಿದರು
August 25th, 06:15 pm
ಗುಜರಾತಿನ ಅಹಮದಾಬಾದ್ ನಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ, ಲೋಕಾರ್ಪಣೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಡೀ ರಾಷ್ಟ್ರವು ಪ್ರಸ್ತುತ ಗಣೇಶೋತ್ಸವದ ಉತ್ಸಾಹದಲ್ಲಿ ಮುಳುಗಿದೆ ಎಂದು ಹೇಳಿದರು. ಗಣಪತಿ ಬಪ್ಪಾ ಆಶೀರ್ವಾದದೊಂದಿಗೆ, ಇಂದು ಗುಜರಾತಿನ ಪ್ರಗತಿಗೆ ಸಂಬಂಧಿಸಿದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಶುಭಾರಂಭ ಮಾಡಲಾಗಿದೆ. ಜನರ ಪಾದಾರವಿಂದಗಳಿಗೆ ಹಲವಾರು ಯೋಜನೆಗಳನ್ನು ಅರ್ಪಿಸುವ ಸೌಭಾಗ್ಯ ತಮಗೆ ದೊರೆತಿದೆ ಎಂದು ಅವರು ಹೇಳಿದರು ಮತ್ತು ಈ ಅಭಿವೃದ್ಧಿ ಉಪಕ್ರಮಗಳಿಗಾಗಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.2000 ಕೋಟಿ ರೂ. ವೆಚ್ಚದ "ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್ ಸಿ ಡಿ ಸಿ) ಕ್ಕೆ ಸಹಾಯಧನ" ಕೇಂದ್ರ ವಲಯ ಯೋಜನೆಗೆ ಸಂಪುಟದ ಅನುಮೋದನೆ
July 31st, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು 2025-26 ರಿಂದ 2028-29 ರವರೆಗೆ ನಾಲ್ಕು ವರ್ಷಗಳ ಅವಧಿಗೆ (2025-26 ರ ಹಣಕಾಸು ವರ್ಷದಿಂದ ಪ್ರತಿ ವರ್ಷ 500 ಕೋಟಿ ರೂ.) 2000 ಕೋಟಿ ರೂ. ವೆಚ್ಚದ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್ ಸಿ ಡಿ ಸಿ) ಕ್ಕೆ ಅನುದಾನ ಎಂಬ ಕೇಂದ್ರ ವಲಯ ಯೋಜನೆಗೆ ಅನುಮೋದನೆ ನೀಡಿದೆ.ವಾರಣಾಸಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ/ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯ ಅವರ ಭಾಷಣ
April 11th, 11:00 am
ವೇದಿಕೆಯಲ್ಲಿ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್; ಮುಖ್ಯಮಂತ್ರಿ, ಗೌರವಾನ್ವಿತ ಶ್ರೀ ಯೋಗಿ ಆದಿತ್ಯನಾಥ್; ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್; ಹಾಜರಿದ್ದ ಗೌರವಾನ್ವಿತ ಮಂತ್ರಿಗಳು; ಇತರ ಸಾರ್ವಜನಿಕ ಪ್ರತಿನಿಧಿಗಳು; ಬನಾಸ್ ಡೈರಿಯ ಅಧ್ಯಕ್ಷ ಶಂಕರ್ ಭಾಯ್ ಚೌಧರಿ; ಮತ್ತು ತಮ್ಮ ಆಶೀರ್ವಾದವನ್ನು ಅರ್ಪಿಸಲು ಇಷ್ಟು ದೊಡ್ಡ ಸಂಖ್ಯೆಯಲ್ಲಿಇಲ್ಲಿ ನೆರೆದಿರುವ ನನ್ನ ಪ್ರೀತಿಯ ಕುಟುಂಬ ಸದಸ್ಯರೆಲ್ಲರೂ- ನಮ್ಮ ಕಾಶಿ ಕುಟುಂಬದ ಪ್ರೀತಿಯ ಜನರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು. ಈ ಸಂದರ್ಭದಲ್ಲಿ ನಾನು ವಿನಮ್ರತೆಯಿಂದ ನಿಮ್ಮ ಆಶೀರ್ವಾದವನ್ನು ಕೋರುತ್ತೇನೆ. ಈ ಅಗಾಧ ಪ್ರೀತಿಗೆ ನಾನು ನಿಜವಾಗಿಯೂ ಋುಣಿಯಾಗಿದ್ದೇನೆ. ಕಾಶಿ ನನ್ನದು, ನಾನು ಕಾಶಿಗೆ ಸೇರಿದವನು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ 3,880 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
April 11th, 10:49 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ 3,880 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಶಿಯೊಂದಿಗಿನ ತಮ್ಮ ಆಳವಾದ ಸಂಬಂಧವನ್ನು ಎತ್ತಿ ತೋರಿಸಿದರು, ತಮಗೆ ಕುಟುಂಬದವರು ಮತ್ತು ಈ ಪ್ರದೇಶದ ಜನರು ನೀಡಿದ ಆಶೀರ್ವಾದಕ್ಕಾಗಿ ಅವರಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ತಮಗೆ ನೀಡಿರುವ ಪ್ರೀತಿ ಮತ್ತು ಬೆಂಬಲವನ್ನು ಶ್ಲಾಘಿಸಿದರು. ಈ ಪ್ರೀತಿಗೆ ತಾವು ಋಣಿಯಾಗಿರುವುದಾಗಿ ಅವರು ಒತ್ತಿ ಹೇಳಿದರು, ಕಾಶಿ ತಮ್ಮದು ಮತ್ತು ತಾವು ಕಾಶಿಗೆ ಸೇರಿದವರು ಎಂದು ಹೇಳಿದರು. ನಾಳೆ ಹನುಮಾನ್ ಜಯಂತಿಯ ಶುಭ ಸಂದರ್ಭ ಎಂದು ಹೇಳಿದ ಶ್ರೀ ಮೋದಿ, ಕಾಶಿಯಲ್ಲಿ ಸಂಕಟ ಮೋಚನ ಮಹಾರಾಜರ ಸನ್ನಿಧಿಗೆ ಭೇಟಿ ನೀಡುವ ಅವಕಾಶ ಸಿಕ್ಕಿದ್ದು ತಮಗೆ ದೊರೆತ ಗೌರವ ಎಂದರು. ಹನುಮಾನ್ ಜಯಂತಿಗೂ ಮುನ್ನ, ಕಾಶಿಯ ಜನರು ಅಭಿವೃದ್ಧಿಯ ಹಬ್ಬವನ್ನು ಆಚರಿಸಲು ಹೇಗೆ ಒಗ್ಗೂಡಿದ್ದಾರೆ ಎಂಬುದನ್ನು ಅವರು ಎತ್ತಿ ತೋರಿಸಿದರು.ಪರಿಷ್ಕೃತ ರಾಷ್ಟ್ರೀಯ ಡೇರಿ ಅಭಿವೃದ್ಧಿ ಕಾರ್ಯಕ್ರಮ(ಎನ್‌ಪಿಡಿಡಿ)ಕ್ಕೆ ಕೇಂದ್ರ ಸಂಪುಟದ ಅನುಮೋದನೆ
March 19th, 04:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪರಿಷ್ಕೃತ ರಾಷ್ಟ್ರೀಯ ಡೇರಿ ಅಭಿವೃದ್ಧಿ ಕಾರ್ಯಕ್ರಮ (ಎನ್‌ಪಿಡಿಡಿ)ಕ್ಕೆ ಅನುಮೋದನೆ ನೀಡಿದೆ.ಬಿಹಾರದ ಭಾಗಲ್ಪುರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 24th, 02:35 pm
ವೇದಿಕೆಯಲ್ಲಿರುವ ನಮ್ಮ ಪ್ರೀತಿಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಿ ಅವರೊಂದಿಗೆ ಗೌರವಾನ್ವಿತ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಜಿ ಇದ್ದಾರೆ, ಅವರು ಬಿಹಾರದ ಅಭಿವೃದ್ಧಿಗೆ ತಮ್ಮ ಸಮರ್ಪಣೆ ಮೂಲಕ ವ್ಯಾಪಕ ಮೆಚ್ಚುಗೆ ಪಡೆದಿದ್ದಾರೆ. ನನ್ನ ಗೌರವಾನ್ವಿತ ಸಂಪುಟ ಸಹೋದ್ಯೋಗಿಗಳಾದ ಶಿವರಾಜ್ ಸಿಂಗ್ ಚೌಹಾಣ್ ಜಿ, ಜಿತನ್ ರಾಮ್ ಮಾಂಝಿ ಜಿ, ಲಲ್ಲನ್ ಸಿಂಗ್ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ - ರಾಜ್ಯ ಸಚಿವರಾದ ಶ್ರೀ ರಾಮನಾಥ್ ಠಾಕೂರ್ ಜಿ, ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಜಿ, ವಿಜಯ್ ಸಿನ್ಹಾ ಜಿ, ರಾಜ್ಯದ ಇತರೆ ಸಚಿವರೆ, ಸಾರ್ವಜನಿಕ ಪ್ರತಿನಿಧಿಗಳೆ, ಗಣ್ಯರೆ ಮತ್ತು ಬಿಹಾರದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,ಪಿಎಂ ಕಿಸಾನ್ ನ 19ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಬಿಹಾರದ ಭಾಗಲ್ ಪುರದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
February 24th, 02:30 pm
ರೈತರ ಕಲ್ಯಾಣವನ್ನು ಖಾತ್ರಿಪಡಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಭಾಗಲ್ ಪುರದಲ್ಲಿ ಪಿಎಂ ಕಿಸಾನ್ ನ 19ನೇ ಕಂತನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ವರ್ಚುವಲ್ ಮೂಲಕ ಭಾಗವಹಿಸಿದ ಎಲ್ಲ ಗಣ್ಯರು ಮತ್ತು ಜನರನ್ನು ಶ್ರೀ ಮೋದಿ ಸ್ವಾಗತಿಸಿದರು. ಮಹಾಕುಂಭದ ಪವಿತ್ರ ಅವಧಿಯಲ್ಲಿ ಮಂದಾರಾಚಲದ ಭೂಮಿಯಲ್ಲಿ ಹೆಜ್ಜೆ ಹಾಕುವುದು ಒಂದು ದೊಡ್ಡ ಸೌಭಾಗ್ಯ ಎಂದು ಅವರು ಹೇಳಿದರು. ಈ ಸ್ಥಳವು ಆಧ್ಯಾತ್ಮಿಕತೆ, ಪರಂಪರೆ ಮತ್ತು ವಿಕ್ಷಿತ್ ಭಾರತದ ಸಾಮರ್ಥ್ಯವನ್ನು ಹೊಂದಿದೆ ಎಂದು ಅವರು ಹೇಳಿದರು. ಇದು ಹುತಾತ್ಮ ತಿಲ್ಕಾ ಮಾಂಝಿ ಅವರ ಭೂಮಿ ಮತ್ತು ಸಿಲ್ಕ್ ಸಿಟಿ ಎಂದು ಕೂಡಾ ಪ್ರಸಿದ್ಧವಾಗಿದೆ ಎಂದು ಶ್ರೀ ಮೋದಿ ಹೇಳಿದರು. ಬಾಬಾ ಅಜ್ಜೈಬಿನಾಥ್ ಅವರ ಪವಿತ್ರ ಭೂಮಿಯಲ್ಲಿ ಮುಂಬರುವ ಮಹಾ ಶಿವರಾತ್ರಿಗೆ ಸಿದ್ಧತೆಗಳು ನಡೆದಿವೆ ಎಂದು ಅವರು ಉಲ್ಲೇಖಿಸಿದರು. ಇಂತಹ ಪವಿತ್ರ ಸಮಯದಲ್ಲಿ ಪಿಎಂ ಕಿಸಾನ್ ನ 19 ನೇ ಕಂತನ್ನು ಬಿಡುಗಡೆ ಮಾಡುವ ಅದೃಷ್ಟ ನನ್ನದಾಗಿದೆ ಮತ್ತು ಸುಮಾರು 22,000 ಕೋಟಿ ರೂ.ಗಳನ್ನು ನೇರ ಲಾಭ/ನಗದು ವರ್ಗಾವಣೆಯ ಮೂಲಕ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಅವರು ಹೇಳಿದರು.ಶ್ರೀಲಂಕಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ
December 16th, 01:00 pm
ನಾನು ಅಧ್ಯಕ್ಷ ದಿಸನಾಯಕ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಅಧ್ಯಕ್ಷರಾದ ನಂತರ ನೀವು ನಿಮ್ಮ ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನು ಆಯ್ಕೆ ಮಾಡಿರುವುದಕ್ಕೆ ನನಗೆ ಸಂತೋಷವಾಗಿದೆ. ಅಧ್ಯಕ್ಷ ದಿಸನಾಯಕ ಅವರ ಭೇಟಿ ನಮ್ಮ ಸಂಬಂಧದಲ್ಲಿ ಹೊಸ ಚೈತನ್ಯ ಮತ್ತು ಶಕ್ತಿಯನ್ನು ತುಂಬಿದೆ. ನಮ್ಮ ಪಾಲುದಾರಿಕೆಗಾಗಿ ನಾವು ಭವಿಷ್ಯದ ದೃಷ್ಟಿಕೋನವನ್ನು ಅಳವಡಿಸಿಕೊಂಡಿದ್ದೇವೆ. ನಾವು ನಮ್ಮ ಆರ್ಥಿಕ ಪಾಲುದಾರಿಕೆಯಲ್ಲಿ ಹೂಡಿಕೆ ಆಧಾರಿತ ಬೆಳವಣಿಗೆ ಮತ್ತು ಸಂಪರ್ಕಕ್ಕೆ ಒತ್ತು ನೀಡಿದ್ದೇವೆ. ಮತ್ತು ಭೌತಿಕ, ಡಿಜಿಟಲ್ ಹಾಗು ಇಂಧನ ಸಂಪರ್ಕವು ನಮ್ಮ ಪಾಲುದಾರಿಕೆಯ ಪ್ರಮುಖ ಆಧಾರಸ್ತಂಭಗಳಾಗಿರಬೇಕು ಎಂದು ನಿರ್ಧರಿಸಿದ್ದೇವೆ. ಎರಡೂ ರಾಷ್ಟ್ರಗಳ ನಡುವೆ ವಿದ್ಯುತ್-ಗ್ರಿಡ್ ಸಂಪರ್ಕ ಮತ್ತು ಬಹು ಉತ್ಪನ್ನ ಪೆಟ್ರೋಲಿಯಂ ಪೈಪ್ ಲೈನ್ ಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ಸಂಪೂರ್ ಸೌರ ವಿದ್ಯುತ್ ಯೋಜನೆಯನ್ನು ತ್ವರಿತಗೊಳಿಸಲಾಗುವುದು. ಹೆಚ್ಚುವರಿಯಾಗಿ, ಶ್ರೀಲಂಕಾದ ವಿದ್ಯುತ್ ಸ್ಥಾವರಗಳಿಗೆ ಎಲ್ ಎನ್ ಜಿ ಪೂರೈಸಲಾಗುವುದು. ದ್ವಿಪಕ್ಷೀಯ ವ್ಯಾಪಾರವನ್ನು ಉತ್ತೇಜಿಸಲು ಇಟಿಸಿಎ ಅನ್ನು ಶೀಘ್ರದಲ್ಲೇ ಸಾಧಿಸಲು ಎರಡೂ ಕಡೆಯವರು ಪ್ರಯತ್ನಿಸುತ್ತಾರೆ.ಉತ್ತರ ಪ್ರದೇಶದ ವಾರಣಾಸಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 23rd, 02:45 pm
ವೇದಿಕೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಮಹೇಂದ್ರ ನಾಥ್ ಪಾಂಡೆ ಜೀ, ಉಪ ಮುಖ್ಯಮಂತ್ರಿ ಶ್ರೀ ಬ್ರಜೇಶ್ ಪಾಠಕ್ ಜೀ, ಬನಾಸ್ ಡೈರಿ ಅಧ್ಯಕ್ಷ ಶಂಕರ್ ಭಾಯ್ ಚೌಧರಿ, ಭಾರತೀಯ ಜನತಾ ಪಕ್ಷದ ರಾಜ್ಯ ಅಧ್ಯಕ್ಷ ಶ್ರೀ ಭೂಪೇಂದ್ರ ಚೌಧರಿ ಜೀ, ರಾಜ್ಯದ ಇತರ ಸಚಿವರು, ಪ್ರತಿನಿಧಿಗಳು, ಮತ್ತು ಕಾಶಿಯ ನನ್ನ ಸಹೋದರ ಸಹೋದರಿಯರೇ.