ಕೇಂದ್ರ ಬಜೆಟ್ ಕುರಿತು ಪ್ರಧಾನಮಂತ್ರಿ ಅವರ ಭಾಷಣ
February 01st, 01:38 pm
ಇಂದಿನ ಬಜೆಟ್ ಐತಿಹಾಸಿಕವಾಗಿದೆ; ಇದು ದೇಶದ ನಾರಿ ಶಕ್ತಿ (ಮಹಿಳಾ ಶಕ್ತಿ) ಯ ಪ್ರಬಲ ಪ್ರತಿಬಿಂಬವಾಗಿದೆ. ಮಹಿಳಾ ಹಣಕಾಸು ಸಚಿವೆಯಾಗಿ, ನಿರ್ಮಲಾ ಅವರು ಸತತ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಾಗಿದೆ. ಈ ಬಜೆಟ್ ಪ್ರಸ್ತುತ ಕನಸುಗಳನ್ನು ಸಾಕಾರಗೊಳಿಸುತ್ತದೆ ಮತ್ತು ಭಾರತದ ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುತ್ತದೆ. 2047ರ ಹೊತ್ತಿಗೆ 'ವಿಕಸಿತ ಭಾರತ'ದ (ಅಭಿವೃದ್ಧಿ ಹೊಂದಿದ ಭಾರತ) ಕಡೆಗೆ ನಮ್ಮ ಉನ್ನತ ಹಾರಾಟಕ್ಕೆ ಈ ಬಜೆಟ್ ಬಲವಾದ ಅಡಿಪಾಯವಾಗಿದೆ.ಕೇಂದ್ರ ಬಜೆಟ್ 2026ರ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ
February 01st, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ 2026ರ ಕೇಂದ್ರ ಬಜೆಟ್ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಇಂದಿನ ಬಜೆಟ್ ಐತಿಹಾಸಿಕವಾಗಿದ್ದು, ದೇಶದ ಮಹಿಳೆಯರ ಸಬಲೀಕರಣದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದರು. ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಹಿಳಾ ಹಣಕಾಸು ಸಚಿವರಾಗಿ, ಸತತ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ ಎಂದು ಅವರು ಶ್ಲಾಘಿಸಿದರು. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಾಗಿದ್ದು, ವರ್ತಮಾನದ ಕನಸುಗಳನ್ನು ನನಸಾಗಿಸುವ ಮತ್ತು ಭಾರತದ ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುವ ಕೆಲಸ ಮಾಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. 2047ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಉನ್ನತ ಮಟ್ಟದ ಹಾರಾಟ ನಡೆಸಲು ಈ ಬಜೆಟ್ ಅಡಿಪಾಯವಾಗಿದೆ ಎಂದು ಅವರು ಒತ್ತಿ ಹೇಳಿದರು.NextGenGST ಸುಧಾರಣೆಗಳು ಡೈರಿ ರೈತರನ್ನು ಸಬಲೀಕರಣಗೊಳಿಸಿ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುತ್ತವೆ: ಪ್ರಧಾನಮಂತ್ರಿ
September 04th, 08:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಭಾರತದ ಡೈರಿ ರೈತರು ಮತ್ತು ಗ್ರಾಮೀಣ ಆರ್ಥಿಕತೆಯ ಸಬಲೀಕರಣಕ್ಕಾಗಿ ಸರ್ಕಾರದ ಅಚಲ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ, ಪೌಷ್ಠಿಕಾಂಶ ಸುರಕ್ಷತೆಯನ್ನು ಕಾಪಾಡಿಕೊಂಡು ಸಮಗ್ರ ಬೆಳವಣಿಗೆಯನ್ನು ಹೆಚ್ಚಿಸುವಲ್ಲಿ ಅವರ ಪ್ರಮುಖ ಪಾತ್ರವನ್ನು ಗುರ್ತಿಸಿದ್ದಾರೆ.ಭಾರತ-ನ್ಯೂಜಿಲೆಂಡ್ ಜಂಟಿ ಹೇಳಿಕೆ ಕುರಿತು ಪ್ರಧಾನಮಂತ್ರಿ ಪತ್ರಿಕಾ ಹೇಳಿಕೆ
March 17th, 01:05 pm
ನ್ಯೂಜಿಲೆಂಡ್ ಪ್ರಧಾನಮಂತ್ರಿ ಲಕ್ಸನ್ ಮತ್ತು ಅವರ ನಿಯೋಗವನ್ನು ಭಾರತಕ್ಕೆ ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಪ್ರಧಾನ ಮಂತ್ರಿ ಲಕ್ಸನ್ ಅವರು ಭಾರತದೊಂದಿಗೆ ದೀರ್ಘ ಸಂಬಂಧ ಹೊಂದಿದ್ದಾರೆ. ಕೆಲವು ದಿನಗಳ ಹಿಂದೆ ಅವರು ಆಕ್ಲೆಂಡ್‌ನಲ್ಲಿ ಹೋಳಿ ಹಬ್ಬವನ್ನು ಹೇಗೆ ಸಂಭ್ರಮದಿಂದ ಆಚರಿಸಿದರು ಎಂಬುದನ್ನು ನಾವೆಲ್ಲರೂ ನೋಡಿದ್ದೇವೆ! ಪ್ರಧಾನ ಮಂತ್ರಿ ಲಕ್ಸನ್ ಅವರು ನ್ಯೂಜಿಲೆಂಡ್‌ನಲ್ಲಿ ವಾಸಿಸುತ್ತಿರುವವ ಭಾರತೀಯ ಮೂಲದ ಜನರ ಮೇಲೆ ಇಟ್ಟಿರುವ ಪ್ರೀತಿಯನ್ನು ಅವರೊಂದಿಗೆ ಭಾರತಕ್ಕೆ ಬಂದಿರುವ ದೊಡ್ಡ ಸಮುದಾಯದ ನಿಯೋಗದಲ್ಲಿ ಕಾಣಬಹುದು. ಈ ವರ್ಷದ ರೈಸಿನಾ ಸಂವಾದದ ಮುಖ್ಯ ಅತಿಥಿಯಾಗಿ ಅವರಂತಹ ಯುವ, ಶಕ್ತಿಯುತ ಮತ್ತು ಪ್ರತಿಭಾನ್ವಿತ ನಾಯಕನನ್ನು ಹೊಂದಿರುವುದು ನಮಗೆ ಬಹಳ ಸಂತೋಷದ ವಿಷಯವಾಗಿದೆ.ಸಿಲ್ವಾಸ್ಸಾದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಭಾಷಣ
March 07th, 03:00 pm
ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು ಆಡಳಿತಾಧಿಕಾರಿ ಶ್ರೀ ಪ್ರಫುಲ್ಭಾಯಿ ಪಟೇಲ್, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಶ್ರೀಮತಿ ಕಲ್ಬೆನ್ ಡೆಲ್ಕರ್, ಎಲ್ಲಾ ಗಣ್ಯರೇ, ಸಹೋದರ ಸಹೋದರಿಯರೇ, ನಮಸ್ಕಾರ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಲ್ವಾಸ್ಸಾ, ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ ಮತ್ತು ದಮನ್ ಮತ್ತು ದಿಯುಗಳಲ್ಲಿ 2580 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು ಮತ್ತು ಚಾಲನೆ ನೀಡಿದರು
March 07th, 02:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಲ್ವಾಸ್ಸಾ, ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ ಮತ್ತು ದಮನ್ ಮತ್ತು ದಿಯುಗಳಲ್ಲಿ 2580 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮಕ್ಕೂ ಮುನ್ನ ಅವರು ಸಿಲ್ವಾಸ್ಸಾದಲ್ಲಿ ನಮೋ ಆಸ್ಪತ್ರೆಯನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಈ ಪ್ರದೇಶದೊಂದಿಗೆ ಸಂಪರ್ಕ ಸಾಧಿಸಲು ಮತ್ತು ತೊಡಗಿಸಿಕೊಳ್ಳಲು ಅವಕಾಶ ನೀಡಿದ ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯುಗಳ ಸಮರ್ಪಿತ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಜನರೊಂದಿಗೆ ತಾವು ಹೊಂದಿರುವ ಆತ್ಮೀಯತೆ ಮತ್ತು ದೀರ್ಘಕಾಲದ ಸಂಪರ್ಕವನ್ನು ಅವರು ನೆನಪಿಸಿಕೊಂಡರು, ಈ ಪ್ರದೇಶದೊಂದಿಗಿನ ತಮ್ಮ ಬಂಧವು ದಶಕಗಳಷ್ಟು ಹಳೆಯದು ಎಂಬುದನ್ನವರು ಹಂಚಿಕೊಂಡರು. 2014 ರಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈ ಪ್ರದೇಶವು ಸಾಧಿಸಿದ ಪ್ರಗತಿಯನ್ನು ಅವರು ಎತ್ತಿ ತೋರಿಸಿದರು, ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯುಗಳ ಸಾಮರ್ಥ್ಯವನ್ನು ಆಧುನಿಕತೆ ಮತ್ತು ಪ್ರಗತಿಯ ಗುರುತಾಗಿ ಪರಿವರ್ತಿಸಿರುವುದನ್ನು ಅವರು ಪ್ರಸ್ತಾಪಿಸಿದರು.ಬಜೆಟ್ ನಂತರದ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಕುರಿತ ವೆಬಿನಾರ್‌ನಲ್ಲಿ ಪ್ರಧಾನಮಂತ್ರಿಯವರ ಭಾಷಣ
March 01st, 01:00 pm
ಬಜೆಟ್ ನಂತರ, ಬಜೆಟ್-ಸಂಬಂಧಿತ ವೆಬಿನಾರ್ ನಲ್ಲಿ ನಿಮ್ಮೆಲ್ಲರ ಉಪಸ್ಥಿತಿ ಅತ್ಯಂತ ಮುಖ್ಯವಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಎಲ್ಲರಿಗೂ ಧನ್ಯವಾದಗಳು. ಈ ವರ್ಷದ ಆಯವ್ಯಯ ನಮ್ಮ ಸರ್ಕಾರದ ಮೂರನೇ ಅವಧಿಯ ಪ್ರಥಮ ಸಂಪೂರ್ಣ ಆಯವ್ಯಯವಾಗಿದೆ. ಈ ಆಯವ್ಯಯ ನಮ್ಮ ನೀತಿಗಳಲ್ಲಿನ ನಿರಂತರತೆಯನ್ನು ತೋರ್ಪಡಿಸುವುದಲ್ಲದೆ, ಅಭಿವೃದ್ಧಿ ಹೊಂದಿದ ಭಾರತದ ದೃಷ್ವಿಕೋನದಲ್ಲಿ ವಿನೂತನ ವಿಸ್ತರಣೆಯನ್ನು ಕೂಡಾ ತೋರಿಸುತ್ತದೆ. ಬಜೆಟ್ ಪೂರ್ವ ನಿಮ್ಮ ಎಲ್ಲ ಪಾಲುದಾರರು ನೀಡಿದ ಸಲಹೆ ಮತ್ತು ಸೂಚನೆಗಳು ಬಜೆಟ್ ಸಿದ್ಧಪಡಿಸುವಾಗ ತುಂಬಾ ಉಪಯುಕ್ತವಾದವು. ಈ ಆಯವ್ಯಯವನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ, ಅಲ್ಲದೆ ಅತ್ಯುತ್ತಮ ಮತ್ತು ಶೀಘ್ರಗತಿಯ ಫಲಿತಾಂಶ ಪಡೆಯುವಲ್ಲಿ, ಎಲ್ಲಾ ನಿರ್ಧಾರಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವಲ್ಲಿ ಮತ್ತು ನೀತಿಗಳನ್ನು ಜಾರಿತರುವಲ್ಲಿ ನಿಮ್ಮ ಪಾತ್ರ ಮತ್ತಷ್ಟು ಮಹತ್ವ ಪಡೆದಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃಷಿ ಮತ್ತು ಗ್ರಾಮೀಣ ಸಮೃದ್ಧಿ ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾತನಾಡಿದರು
March 01st, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಕೃಷಿ ಮತ್ತು ಗ್ರಾಮೀಣ ಸಮೃದ್ಧಿ ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಮಾತನಾಡಿದರು. ಬಜೆಟ್ ನಂತರದ ವೆಬಿನಾರ್ ನಲ್ಲಿ ಭಾಗವಹಿಸುವಿಕೆಯ ಪ್ರಾಮುಖ್ಯತೆಯನ್ನು ಒತ್ತಿಹೇಳಿದ ಪ್ರಧಾನಿಯವರು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು. ಈ ವರ್ಷದ ಬಜೆಟ್ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣ ಬಜೆಟ್ ಆಗಿದೆ, ಇದು ನೀತಿಗಳಲ್ಲಿ ನಿರಂತರತೆ ಮತ್ತು ವಿಕಸಿತ ಭಾರತದ ದೃಷ್ಟಿಯ ಹೊಸ ವಿಸ್ತರಣೆಯನ್ನು ಪ್ರತಿಬಿಂಬಿಸುತ್ತದೆ. ಬಜೆಟ್ ಗೆ ಮೊದಲು ಎಲ್ಲಾ ಭಾಗೀದಾರರಿಂದ ಪಡೆದ ಅಮೂಲ್ಯವಾದ ಒಳಹರಿವು ಮತ್ತು ಸಲಹೆಗಳನ್ನು ಅವರು ಶ್ಲಾಘಿಸಿದರು, ಅದು ತುಂಬಾ ಉಪಯುಕ್ತವಾಗಿದ್ದವು. ಈ ಬಜೆಟ್ ಅನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುವಲ್ಲಿ ಭಾಗೀದಾರರ ಪಾತ್ರವು ಹೆಚ್ಚು ಮಹತ್ವದ್ದಾಗಿದೆ ಎಂದು ಅವರು ಒತ್ತಿ ಹೇಳಿದರು.ಗುಜರಾತ್‌ನ ಅಮ್ರೇಲಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 28th, 04:00 pm
ವೇದಿಕೆಯಲ್ಲಿರುವ ಗುಜರಾತಿನ ಗೌರವಾನ್ವಿತ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್ ಜಿ, ಗುಜರಾತ್‌ನ ನನ್ನ ಸಹೋದರ ಸಹೋದರಿಯರೆ ಮತ್ತು ವಿಶೇಷವಾಗಿ ಅಮ್ರೇಲಿಯ ನನ್ನ ಸಹೋದರ ಸಹೋದರಿಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿ 4,900 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
October 28th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿಂದು 4,900 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲು, ರಸ್ತೆ, ಜಲ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳನ್ನು ಒಳಗೊಂಡಿವೆ. ರಾಜ್ಯದ ಅಮ್ರೇಲಿ, ಜಾಮ್‌ನಗರ, ಮೊರ್ಬಿ, ದೈವಭೂಮಿ ದ್ವಾರಕಾ, ಜುನಾಗಢ್, ಪೋರಬಂದರ್, ಕಚ್ ಮತ್ತು ಬೊಟಾಡ್ ಜಿಲ್ಲೆಗಳ ನಾಗರಿಕರಿಗೆ ಪ್ರಯೋಜನ ನೀಡುತ್ತವೆ.Modernization of agriculture systems is a must for Viksit Bharat: PM Modi
February 24th, 10:36 am
PM Modi inaugurated and laid the foundation stone of multiple key initiatives for the Cooperative sector at Bharat Mandapam, New Delhi. Recalling his experience as CM of Gujarat, the Prime Minister cited the success stories of Amul and Lijjat Papad as the power of cooperatives and also highlighted the central role of women in these enterprises.ಸಹಕಾರಿ ಕ್ಷೇತ್ರಕ್ಕಾಗಿ ಪ್ರಧಾನಮಂತ್ರಿಯವರಿಂದ ಅನೇಕ ಪ್ರಮುಖ ಉಪಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ
February 24th, 10:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಸಹಕಾರಿ ಕ್ಷೇತ್ರಕ್ಕೆ ಬಹುಮುಖ್ಯ ಉಪಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು. 11 ರಾಜ್ಯಗಳ 11 ಪ್ರಾಥಮಿಕ ಕೃಷಿ ಸಾಲ ಸಂಘಗಳಲ್ಲಿ (ಪಿಎಸಿಎಸ್) ಮಾಡಲಾಗುತ್ತಿರುವ 'ಸಹಕಾರಿ ವಲಯದಲ್ಲಿ ವಿಶ್ವದ ಅತಿದೊಡ್ಡ ಧಾನ್ಯ ಸಂಗ್ರಹ ಯೋಜನೆ'ಯ ಪ್ರಾಯೋಗಿಕ ಯೋಜನೆಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು. ಈ ಉಪಕ್ರಮದ ಅಡಿಯಲ್ಲಿ ಗೋದಾಮುಗಳು ಮತ್ತು ಇತರ ಕೃಷಿ ಮೂಲಸೌಕರ್ಯಗಳ ನಿರ್ಮಾಣಕ್ಕಾಗಿ ದೇಶಾದ್ಯಂತ ಹೆಚ್ಚುವರಿ 500 ಪಿಎಸಿಎಸ್ ಗಳಿಗೆ ಪ್ರಧಾನಮಂತ್ರಿಯವರು ಶಿಲಾನ್ಯಾಸ ನೆರವೇರಿಸಿದರು. ಈ ಉಪಕ್ರಮವು ಪಿಎಸಿಎಸ್ ಗೋದಾಮುಗಳನ್ನು ಆಹಾರ ಧಾನ್ಯ ಪೂರೈಕೆ ಸರಪಳಿಯೊಂದಿಗೆ ಅಗತ್ಯಕ್ಕೆ ತಕ್ಕಂತೆ ಸಂಯೋಜಿಸುವ ಗುರಿಯನ್ನು ಹೊಂದಿದೆ, ಆಹಾರ ಭದ್ರತೆಯನ್ನು ಬಲಪಡಿಸುವುದು ಮತ್ತು ನಬಾರ್ಡ್ನಿಂದ ಬೆಂಬಲಿತವಾದ ಮತ್ತು ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್ ಸಿಡಿಸಿ) ನೇತೃತ್ವದ ಸಹಯೋಗದ ಪ್ರಯತ್ನದೊಂದಿಗೆ ದೇಶದಲ್ಲಿ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುವುದು. ಈ ಉಪಕ್ರಮವು ಕೃಷಿ ಮೂಲಸೌಕರ್ಯ ನಿಧಿ (ಎಐಎಫ್), ಕೃಷಿ ಮಾರುಕಟ್ಟೆ ಮೂಲಸೌಕರ್ಯ (ಎಎಂಐ), ಇತ್ಯಾದಿಗಳಂತಹ ವಿವಿಧ ಅಸ್ತಿತ್ವದಲ್ಲಿರುವ ಯೋಜನೆಗಳನ್ನು ಕ್ರೋಢೀಕರಿಸುವ ಮೂಲಕ ಕಾರ್ಯಗತಗೊಳಿಸಲಾಗುತ್ತಿದೆ. ಸಹಕಾರಿ ಕ್ಷೇತ್ರವನ್ನು ಪುನರುಜ್ಜೀವನಗೊಳಿಸುವ ಮತ್ತು ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿರುವ ಸಹಕಾರದಿಂದ ಸಮೃದ್ಧಿ ಯ ಸರ್ಕಾರದ ಉದ್ದೇಶಕ್ಕೆ ಅನುಗುಣವಾಗಿ, ದೇಶಾದ್ಯಂತ 18,000 ಪಿಎಸಿಎಸ್ ಗಳಲ್ಲಿ ಗಣಕೀಕರಣದ ಯೋಜನೆಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು.ಅಮುಲ್ ಒಕ್ಕೂಟದ ಜಿಸಿಎಂಎಂಎಫ್ ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 22nd, 11:30 am
ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಜೀ; ಗುಜರಾತ್ ನ ಜನಪ್ರಿಯ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್; ನನ್ನ ಸಂಪುಟ ಸಹೋದ್ಯೋಗಿ ಪುರುಷೋತ್ತಮ್ ರೂಪಾಲಾ ಜೀ; ಸಂಸತ್ತಿನ ಗೌರವಾನ್ವಿತ ಸಹೋದ್ಯೋಗಿ ಸಿ.ಆರ್.ಪಾಟೀಲ್, ಅಮುಲ್ ಅಧ್ಯಕ್ಷ ಶ್ರೀ ಶಾಮಲ್ ಭಾಯ್ ಮತ್ತು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಇಲ್ಲಿ ನೆರೆದಿರುವ ನನ್ನ ಎಲ್ಲಾ ಸಹೋದರ ಸಹೋದರಿಯರೇ!ಗುಜರಾತ್ ನ ಅಹಮದಾಬಾದ್ ನಲ್ಲಿ ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು
February 22nd, 10:44 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹಮದಾಬಾದ್ ನ ಮೊಟೆರಾದಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ (ಜಿಸಿಎಂಎಂಎಫ್) ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದರು. ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನವನ್ನು ವೀಕ್ಷಿಸಿದರು ಮತ್ತು ಸುವರ್ಣ ಮಹೋತ್ಸವ ಕಾಫಿ ಟೇಬಲ್ ಪುಸ್ತಕವನ್ನು ಬಿಡಿಗಡೆ ಮಾಡಿದರು. ಜಿಸಿಎಂಎಂಎಫ್ ಸಹಕಾರಿ ಸಂಸ್ಥೆಗಳ ಸ್ಥಿತಿಸ್ಥಾಪಕತ್ವ, ಉದ್ಯಮಶೀಲತಾ ಮನೋಭಾವ ಮತ್ತು ರೈತರ ದೃಢ ಸಂಕಲ್ಪಕ್ಕೆ ಸಾಕ್ಷಿಯಾಗಿದೆ, ಇದು ಅಮುಲ್ ಅನ್ನು ವಿಶ್ವದ ಪ್ರಬಲ ಡೈರಿ ಬ್ರ್ಯಾಂಡ್ ಗಳಲ್ಲಿ ಒಂದನ್ನಾಗಿ ಮಾಡಿದೆ.ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸ್ವರ್ಣವೇದ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 18th, 12:00 pm
ಉತ್ತರ ಪ್ರದೇಶದ ಗೌರವಾನ್ವಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಮಹೇಂದ್ರ ನಾಥ್ ಪಾಂಡೆ ಜೀ, ಉತ್ತರ ಪ್ರದೇಶ ಸರ್ಕಾರದ ಸಚಿವ ಅನಿಲ್ ಜೀ, ಸದ್ಗುರು ಆಚಾರ್ಯ ಪೂಜ್ಯ ಶ್ರೀ ಸ್ವತಂತ್ರ ದೇವ್ ಜೀ ಮಹಾರಾಜ್, ಪೂಜ್ಯ ಶ್ರೀ ವಿಜ್ಞಾನ್ ದೇವ್ ಜೀ ಮಹಾರಾಜ್, ಇತರ ಗಣ್ಯ ವ್ಯಕ್ತಿಗಳು, ದೇಶಾದ್ಯಂತ ನೆರೆದಿರುವ ಎಲ್ಲಾ ಭಕ್ತರು ಮತ್ತು ನನ್ನ ಕುಟುಂಬ ಸದಸ್ಯರೇ!ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸ್ವರ್ವೇದ್ ಮಹಾಮಂದಿರ ಉದ್ಘಾಟಿಸಿದ ಪ್ರಧಾನ ಮಂತ್ರಿ
December 18th, 11:30 am
ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ, ಇಂದು ಕಾಶಿಗೆ ಭೇಟಿ ನೀಡುತ್ತಿರುವ ಎರಡನೇ ದಿನವಾಗಿದೆ. ಕಾಶಿಯಲ್ಲಿ ಕಳೆದ ಪ್ರತಿ ಕ್ಷಣವೂ ಅಭೂತಪೂರ್ವ ಅನುಭವಗಳಿಂದ ತುಂಬಿದೆ. 2 ವರ್ಷಗಳ ಹಿಂದೆ ಅಖಿಲ ಭಾರತೀಯ ವಿಹಂಗಮ ಯೋಗ ಸಂಸ್ಥಾನದ ವಾರ್ಷಿಕ ಆಚರಣೆ ನೆನಪಿಸಿಕೊಂಡ ಪ್ರಧಾನಿ, ಈ ವರ್ಷದ ಶತಮಾನೋತ್ಸವ ಆಚರಣೆಯ ಭಾಗವಾಗಲು ಅವಕಾಶ ಸಿಕ್ಕಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು. ವಿಹಂಗಮ ಯೋಗ ಸಾಧನವು 100 ವರ್ಷಗಳ ಅವಿಸ್ಮರಣೀಯ ಪ್ರಯಾಣ ಸಾಧಿಸಿದೆ. ಹಿಂದಿನ ಶತಮಾನದಲ್ಲಿ ಜ್ಞಾನ ಮತ್ತು ಯೋಗದ ಕಡೆಗೆ ಮಹರ್ಷಿ ಸದಾಫಲ್ ದೇವ್ ಜೀ ಅವರ ಕೊಡುಗೆಗಳನ್ನು ಸ್ಮರಿಸಿದರು. ದೈವಿಕ ಬೆಳಕು ವಿಶ್ವಾದ್ಯಂತ ಲಕ್ಷಾಂತರ ಜನರ ಜೀವನವನ್ನು ಪರಿವರ್ತಿಸಿದೆ. ಈ ಸುಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರು 25,000 ಕುಂಡಿಯ ಸ್ವರ್ವೇದ್ ಜ್ಞಾನ ಮಹಾಯಜ್ಞದ ಸಂಘಟನೆ ಗಮನಿಸಿ, ಮಹಾಯಜ್ಞದ ಪ್ರತಿ ಅರ್ಪಣೆಯೂ ವಿಕ್ಷಿತ್ ಭಾರತ್ ಸಂಕಲ್ಪವನ್ನು ಬಲಪಡಿಸುತ್ತದೆ. ಮಹರ್ಷಿ ಸದಾಫಲ್ ದೇವ್ ಜೀ ಅವರ ಮುಂದೆ ತಲೆಬಾಗಿ ತಮ್ಮ ದರ್ಶನ ಪಡೆದ ಎಲ್ಲಾ ಸಂತರಿಗೆ ನಮನ ಸಲ್ಲಿಸಿದರು.Gujarat has given the nation the practice of elections based on development: PM Modi in Jambusar
November 21st, 12:31 pm
In his second rally for the day at Jambusar, PM Modi enlightened people on how Gujarat has given the nation the practice of elections based on development and doing away with elections that only talked about corruption and scams. PM Modi further highlighted that Gujarat is able to give true benefits of schemes to the correct beneficiaries because of the double-engine government.There was a time when Gujarat didn't even manufacture cycles, today the state make planes: PM Modi in Surendranagar
November 21st, 12:10 pm
Continuing his election campaigning spree, Prime Minister Narendra Modi today addressed a public meeting in Gujarat’s Surendranagar. Highlighting the ongoing wave of pro-incumbency in the state, PM Modi said, “Gujarat has given a new culture to the country's democracy. In the decades after independence, whenever elections were held, there was a lot of discussion about anti-incumbency. But Gujarat changed this tradition to pro-incumbency.”ಪ್ರಧಾನಿ ಮೋದಿ ಗುಜರಾತ್‌ನ ಸುರೇಂದ್ರನಗರ, ಜಂಬೂಸರ್ ಮತ್ತು ನವಸಾರಿಯಲ್ಲಿ ಪ್ರಚಾರ ನಡೆಸಿದರು
November 21st, 12:00 pm
ತಮ್ಮ ಚುನಾವಣಾ ಪ್ರಚಾರವನ್ನು ಮುಂದುವರೆಸಿದ ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್‌ನ ಸುರೇಂದ್ರನಗರ, ಜಂಬೂಸರ್ ಮತ್ತು ನವಸಾರಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿ ನಡೆಯುತ್ತಿರುವ ಆಡಳಿತ ಪರ ಅಲೆಯನ್ನು ಎತ್ತಿ ಹಿಡಿದ ಪ್ರಧಾನಿ ಮೋದಿ, “ಗುಜರಾತ್ ದೇಶದ ಪ್ರಜಾಪ್ರಭುತ್ವಕ್ಕೆ ಹೊಸ ಸಂಸ್ಕೃತಿಯನ್ನು ನೀಡಿದೆ. ಸ್ವಾತಂತ್ರ್ಯಾ ನಂತರದ ದಶಕಗಳಲ್ಲಿ ಚುನಾವಣೆಗಳು ನಡೆದಾಗಲೆಲ್ಲ ಆಡಳಿತ ವಿರೋಧಿಗಳ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿತ್ತು. ಆದರೆ ಗುಜರಾತ್ ಈ ಸಂಪ್ರದಾಯವನ್ನು ಅಧಿಕಾರದ ಪರ ಎಂದು ಬದಲಾಯಿಸಿತು.ರಾಷ್ಟ್ರಪತಿಯವರ ರಾಜ್ಯಸಭೆಯ ಭಾಷಣದ ವಂದನಾ ನಿರ್ಣಯಕ್ಕೆ ಪ್ರಧಾನ ಮಂತ್ರಿ ಅವರ ಉತ್ತರ
February 08th, 08:30 pm
ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ನೀಡಿದರು. ಮೇಲ್ಮನೆಯಲ್ಲಿ ಚರ್ಚೆಯಲ್ಲಿ ಪಾಲ್ಗೊಂಡು ಮತ್ತು ಕೊಡುಗೆ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ಅವರು ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಕಠಿಣ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ರಾಷ್ಟ್ರಪತಿ ಅವರ ಭಾಷಣ ಭರವಸೆ ಮತ್ತು ವಿಶ್ವಾಸ ತುಂಬಿದೆ ಎಂದು ಹೇಳಿದರು.