ದಂಡಿ ಸತ್ಯಾಗ್ರಹದಲ್ಲಿ ಭಾಗವಹಿಸಿದ ಎಲ್ಲರಿಗೂ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

March 12th, 10:34 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 1930ರಲ್ಲಿ ಇದೇ ದಿನ ಪ್ರಾರಂಭವಾದ ದಂಡಿ ಯಾತ್ರೆಯಲ್ಲಿ ಭಾಗವಹಿಸಿದ ಎಲ್ಲ ಮಹಾನ್ ವ್ಯಕ್ತಿಗಳಿಗೆ ಗೌರವ ನಮನ ಸಲ್ಲಿಸಿದರು.

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

April 27th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ನಿಮ್ಮೊಂದಿಗೆ ನಾನು 'ಮನದ ಮಾತು' ಆಡುತ್ತಿರುವಾಗ, ನನ್ನ ಹೃದಯ ನೋವಿನಿಂದ ಭಾರವಾಗಿದೆ. ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ಘಟನೆ ದೇಶದ ಪ್ರತಿಯೊಬ್ಬ ನಾಗರಿಕನನ್ನು ದುಃಖದ ಮಡುವಿನಲ್ಲಿ ಮುಳುಗಿಸಿದೆ. ಸಂತ್ರಸ್ತ ಕುಟುಂಬಗಳ ಬಗ್ಗೆ ಪ್ರತಿ ಭಾರತೀಯನಲ್ಲೂ ಅಪಾರ ಸಹಾನುಭೂತಿಯಿದೆ. ರಾಜ್ಯ, ಭಾಷೆಯನ್ನು ಮೀರಿ ಎಲ್ಲ ಜನರು ಈ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವನ್ನು ಸ್ವತಃ ಅನುಭವಿಸುತ್ತಿದ್ದಾರೆ. ಭಯೋತ್ಪಾದಕ ದಾಳಿಯ ಚಿತ್ರಗಳನ್ನು ನೋಡಿದ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ನನಗೆ ಅನಿಸುತ್ತದೆ. ಪಹಲ್ಗಾಮ್‌ನಲ್ಲಿ ನಡೆದ ಈ ದಾಳಿಯು ಭಯೋತ್ಪಾದನೆಗೆ ಉತ್ತೇಜನ ನೀಡುವವರ ಹತಾಶೆಯನ್ನು ತೋರಿಸುತ್ತದೆ ಮತ್ತು ಅವರ ಹೇಡಿತನವನ್ನು ಪ್ರದರ್ಶಿಸುತ್ತದೆ. ಶಾಲಾ ಕಾಲೇಜುಗಳಲ್ಲಿ ಹುರುಪು ತುಂಬಿರುವಂತಹ ಕಾಲದಲ್ಲಿ, ನಿರ್ಮಾಣ ಕಾರ್ಯಗಳು ಅಭೂತಪೂರ್ವ ವೇಗವನ್ನು ಪಡೆದುಕೊಂಡಿರುವಾಗ, ಕಾಶ್ಮೀರದಲ್ಲಿ ಶಾಂತಿ ಮರುಕಳಿಸುತ್ತಿರುವ ಇಂತಹ ಸಮಯದಲ್ಲಿ, ಪ್ರಜಾಪ್ರಭುತ್ವ ಬಲಿಷ್ಠಗೊಳ್ಳುತ್ತಿರುವಾಗ, ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆಯ ಏರಿಕೆ ಕಂಡುಬರುತ್ತಿರುವಾಗ, ಜನರ ಆದಾಯ ಹೆಚ್ಚುತ್ತಿರುವಾಗ, ಯುವಕರಿಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿದ್ದಾಗ, ದೇಶದ ಶತ್ರುಗಳು, ಜಮ್ಮು ಮತ್ತು ಕಾಶ್ಮೀರದ ವೈರಿಗಳಿಗೆ ಇದನ್ನು ಸಹಿಸಲಾಗಲಿಲ್ಲ. ಭಯೋತ್ಪಾದಕರು ಮತ್ತಷ್ಟು ಭಯೋತ್ಪಾದನೆ ಹೆಚ್ಚಿಸಲು ಬಯಸುತ್ತಿದ್ದಾರೆ. ಕಾಶ್ಮೀರವನ್ನು ಮತ್ತೆ ನಾಶಮಾಡಲು ಹುನ್ನಾರದಿಂದ ಇಷ್ಟು ದೊಡ್ಡ ಘಟನೆ ನಡೆಯುವಂತೆ ಪಿತೂರಿ ನಡೆಸಿದರು. ದೇಶದ ಏಕತೆ, 140 ಕೋಟಿ ಭಾರತೀಯರ ಒಗ್ಗಟ್ಟು, ಭಯೋತ್ಪಾದನೆಯ ವಿರುದ್ಧದ ಈ ಯುದ್ಧದಲ್ಲಿ ನಮ್ಮ ದೊಡ್ಡ ಶಕ್ತಿಯಾಗಿದೆ. ಈ ಒಗ್ಗಟ್ಟೆ ಭಯೋತ್ಪಾದನೆಯ ವಿರುದ್ಧದ ನಮ್ಮ ಹೋರಾಟದಲ್ಲಿ ನಿರ್ಣಾಯಕ ಪಾತ್ರವಾಹಿಸಲಿದೆ. ದೇಶ ಎದುರಿಸುತ್ತಿರುವ ಈ ಸವಾಲನ್ನು ಎದುರಿಸಲು ನಾವು ನಮ್ಮ ಸಂಕಲ್ಪವನ್ನು ಬಲಪಡಿಸಿಕೊಳ್ಳಬೇಕು. ಒಂದು ರಾಷ್ಟ್ರ ರೂಪದಲ್ಲಿ ಬಲವಾದ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು. ಈ ಭಯೋತ್ಪಾದಕ ದಾಳಿಯ ನಂತರ ಸಂಪೂರ್ಣ ದೇಶ ಒಕ್ಕೊರಲಿನಿಂದ ಧ್ವನಿಯೆತ್ತಿರುವುದನ್ನು ಇಂದು ಜಗತ್ತೇ ನೋಡುತ್ತಿದೆ.

ಮಹಾಕುಂಭ ಕುರಿತು ಲೋಕಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ

March 18th, 01:05 pm

ಪ್ರಯಾಗ್ರಾಜ್ ನಲ್ಲಿ ನಡೆದ ಭವ್ಯ ಮಹಾಕುಂಭದ ಬಗ್ಗೆ ಹೇಳಿಕೆ ನೀಡಲು ನಾನು ಇಲ್ಲಿದ್ದೇನೆ. ಈ ಗೌರವಾನ್ವಿತ ಸದನದ ಮೂಲಕ, ಮಹಾಕುಂಭವನ್ನು ಯಶಸ್ವಿಗೊಳಿಸಿದ ಲಕ್ಷಾಂತರ ದೇಶವಾಸಿಗಳಿಗೆ ನನ್ನ ವಂದನೆಗಳನ್ನು ಸಲ್ಲಿಸುತ್ತೇನೆ. ಮಹಾಕುಂಭದ ಯಶಸ್ಸನ್ನು ಖಚಿತಪಡಿಸಿಕೊಳ್ಳುವಲ್ಲಿ ಅನೇಕ ವ್ಯಕ್ತಿಗಳು ನಿರ್ಣಾಯಕ ಪಾತ್ರ ವಹಿಸಿದ್ದಾರೆ. ನಾನು ಸರ್ಕಾರ, ಸಮಾಜ ಮತ್ತು ಎಲ್ಲಾ ಸಮರ್ಪಿತ ಕಾರ್ಮಿಕರನ್ನು ಅಭಿನಂದಿಸುತ್ತೇನೆ. ದೇಶದಾದ್ಯಂತದ ಭಕ್ತರಿಗೆ, ಉತ್ತರ ಪ್ರದೇಶದ ಜನರಿಗೆ ಮತ್ತು ವಿಶೇಷವಾಗಿ ಪ್ರಯಾಗ್ ರಾಜ್ ನಾಗರಿಕರಿಗೆ ನನ್ನ ಕೃತಜ್ಞತೆಯನ್ನು ಅರ್ಪಿಸುತ್ತೇನೆ.

ಮಹಾ ಕುಂಭ ಮೇಳ ಯಶಸ್ವಿಯಾಗಿ ಸಂಪನ್ನಗೊಂಡ ಹಿನ್ನೆಲೆಯಲ್ಲಿ ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

March 18th, 12:10 pm

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಯಶಸ್ವಿಯಾಗಿ ಸಮಾರೋಪಗೊಂಡ ಹಿನ್ನೆಲೆಯಲ್ಲಿ ಇಂದು ಲೋಕಸಭೆಯನ್ನುದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಮಹಾಕುಂಭದ ಅದ್ಧೂರಿ ಯಶಸ್ಸಿಗೆ ಕಾರಣರಾದ ದೇಶದ ಅಸಂಖ್ಯಾತ ನಾಗರಿಕರಿಗೆ ಪ್ರಧಾನಿ ತಮ್ಮ ಹೃತ್ಪೂರ್ವಕ ವಂದನೆಗಳನ್ನು ಸಲ್ಲಿಸಿದರು. ಮಹಾಕುಂಭವನ್ನು ಯಶಸ್ವಿಗೊಳಿಸುವಲ್ಲಿ ವಿವಿಧ ವ್ಯಕ್ತಿಗಳು ಮತ್ತು ಗುಂಪುಗಳ ಸಾಮೂಹಿಕ ಕೊಡುಗೆಗಳು ಮಹತ್ತರವಾಗಿವೆ. ಸರ್ಕಾರ, ಸಮಾಜ ಮತ್ತು ಎಲ್ಲಾ ಸಮರ್ಪಿತ ಕಾರ್ಮಿಕರ ಪ್ರಯತ್ನಗಳನ್ನು ಅವರು ಗುರುತಿಸಿದರು ಮತ್ತು ಶ್ಲಾಘಿಸಿದರು. ದೇಶಾದ್ಯಂತದ ಭಕ್ತರಿಗೆ, ಉತ್ತರ ಪ್ರದೇಶದ ಜನರು ಮತ್ತು ವಿಶೇಷವಾಗಿ ಪ್ರಯಾಗ್‌ರಾಜ್ ನಾಗರಿಕರ ಅಮೂಲ್ಯ ಬೆಂಬಲ ಮತ್ತು ಪರಿಶ್ರಮಕ್ಕಾಗಿ ಶ್ರೀ ಮೋದಿ ಅವರು ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.

ಐತಿಹಾಸಿಕ ದಂಡಿ ಯಾತ್ರೆಯಲ್ಲಿ ಪಾಲ್ಗೊಂಡ ಮಹಾತ್ಮಾ ಗಾಂಧಿ ಮತ್ತು ಎಲ್ಲರಿಗೂ ಪ್ರಧಾನಮಂತ್ರಿ ಅವರಿಂದ ಗೌರವ ನಮನ

March 12th, 09:01 am

ಐತಿಹಾಸಿಕ ದಂಡಿ ಯಾತ್ರೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೌರವ ನಮನ ಸಲ್ಲಿಸಿ, ಅದು ಭಾರತದ ಸ್ವಾತಂತ್ರ್ಯ ಸಂಗ್ರಾಮದ ನಿರ್ಣಾಯಕ ಘಟ್ಟ ಎಂದು ವ್ಯಾಖ್ಯಾನಿಸಿದರು. ಮಹಾತ್ಮಾ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಈ ಸತ್ಯಾಗ್ರಹವು ಸ್ವಾವಲಂಬನೆ ಮತ್ತು ಸ್ವಾತಂತ್ರ್ಯಕ್ಕಾಗಿ ರಾಷ್ಟ್ರವ್ಯಾಪಿ ಆಂದೋಲನದ ಕಿಚ್ಚು ಹೊತ್ತಿಸಿತ್ತು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ದಂಡಿ ಯಾತ್ರೆಯಲ್ಲಿ ಭಾಗವಹಿಸಿದ ಎಲ್ಲರ ಶೌರ್ಯ, ತ್ಯಾಗ ಹಾಗೂ ಸತ್ಯ ಮತ್ತು ಅಹಿಂಸೆಗಾಗಿ ಅವರ ಅಚಲ ಬದ್ಧತೆಯು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.