ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 25.05.2025 ರಂದು ಮಾಡಿದ ‘ಮನ್ ಕಿ ಬಾತ್’ – 122ನೇ ಸಂಚಿಕೆಯ ಕನ್ನಡ ಅವತರಣಿಕೆ

May 25th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ಸಂಪೂರ್ಣ ದೇಶ ಭಯೋತ್ಪಾದನೆಯ ವಿರುದ್ಧ ಒಗ್ಗೂಡಿ ನಿಂತಿದೆ. ಆಕ್ರೋಶದಿಂದ ಕೂಡಿದೆ ಮತ್ತು ದೃಢನಿಶ್ಚಯ ಹೊಂದಿದೆ. ಭಯೋತ್ಪಾದನೆಯನ್ನು ಕೊನೆಗೊಳಿಸಲೇಬೇಕು ಎಂಬುದು ಇಂದು ಪ್ರತಿಯೊಬ್ಬ ಭಾರತೀಯನ ಸಂಕಲ್ಪವಾಗಿದೆ. ಸ್ನೇಹಿತರೇ, 'ಆಪರೇಷನ್ ಸಿಂಧೂರ್' ಸಮಯದಲ್ಲಿ ನಮ್ಮ ಸೇನಾ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಹಿಂದೂಸ್ತಾನಿಯನ್ನೂ ಹೆಮ್ಮೆಪಡುವಂತೆ ಮಾಡಿದೆ. ಗಡಿಯಾಚೆಗಿನ ಭಯೋತ್ಪಾದಕ ಅಡಗುತಾಣಗಳನ್ನು ನಮ್ಮ ಪಡೆಗಳು ನಿಖರತೆಯಿಂದ ಕರಾರುವಾಕ್ಕಾಗಿ ನಾಶಪಡಿಸಿರುವುದು ಅದ್ಭುತವಾಗಿದೆ. 'ಆಪರೇಷನ್ ಸಿಂಧೂರ್' ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ಭರವಸೆ ನೀಡಿದೆ ಮತ್ತು ಉತ್ಸಾಹ ತುಂಬಿದೆ.

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

April 27th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ನಿಮ್ಮೊಂದಿಗೆ ನಾನು 'ಮನದ ಮಾತು' ಆಡುತ್ತಿರುವಾಗ, ನನ್ನ ಹೃದಯ ನೋವಿನಿಂದ ಭಾರವಾಗಿದೆ. ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ಘಟನೆ ದೇಶದ ಪ್ರತಿಯೊಬ್ಬ ನಾಗರಿಕನನ್ನು ದುಃಖದ ಮಡುವಿನಲ್ಲಿ ಮುಳುಗಿಸಿದೆ. ಸಂತ್ರಸ್ತ ಕುಟುಂಬಗಳ ಬಗ್ಗೆ ಪ್ರತಿ ಭಾರತೀಯನಲ್ಲೂ ಅಪಾರ ಸಹಾನುಭೂತಿಯಿದೆ. ರಾಜ್ಯ, ಭಾಷೆಯನ್ನು ಮೀರಿ ಎಲ್ಲ ಜನರು ಈ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವನ್ನು ಸ್ವತಃ ಅನುಭವಿಸುತ್ತಿದ್ದಾರೆ. ಭಯೋತ್ಪಾದಕ ದಾಳಿಯ ಚಿತ್ರಗಳನ್ನು ನೋಡಿದ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ನನಗೆ ಅನಿಸುತ್ತದೆ. ಪಹಲ್ಗಾಮ್‌ನಲ್ಲಿ ನಡೆದ ಈ ದಾಳಿಯು ಭಯೋತ್ಪಾದನೆಗೆ ಉತ್ತೇಜನ ನೀಡುವವರ ಹತಾಶೆಯನ್ನು ತೋರಿಸುತ್ತದೆ ಮತ್ತು ಅವರ ಹೇಡಿತನವನ್ನು ಪ್ರದರ್ಶಿಸುತ್ತದೆ. ಶಾಲಾ ಕಾಲೇಜುಗಳಲ್ಲಿ ಹುರುಪು ತುಂಬಿರುವಂತಹ ಕಾಲದಲ್ಲಿ, ನಿರ್ಮಾಣ ಕಾರ್ಯಗಳು ಅಭೂತಪೂರ್ವ ವೇಗವನ್ನು ಪಡೆದುಕೊಂಡಿರುವಾಗ, ಕಾಶ್ಮೀರದಲ್ಲಿ ಶಾಂತಿ ಮರುಕಳಿಸುತ್ತಿರುವ ಇಂತಹ ಸಮಯದಲ್ಲಿ, ಪ್ರಜಾಪ್ರಭುತ್ವ ಬಲಿಷ್ಠಗೊಳ್ಳುತ್ತಿರುವಾಗ, ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆಯ ಏರಿಕೆ ಕಂಡುಬರುತ್ತಿರುವಾಗ, ಜನರ ಆದಾಯ ಹೆಚ್ಚುತ್ತಿರುವಾಗ, ಯುವಕರಿಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿದ್ದಾಗ, ದೇಶದ ಶತ್ರುಗಳು, ಜಮ್ಮು ಮತ್ತು ಕಾಶ್ಮೀರದ ವೈರಿಗಳಿಗೆ ಇದನ್ನು ಸಹಿಸಲಾಗಲಿಲ್ಲ. ಭಯೋತ್ಪಾದಕರು ಮತ್ತಷ್ಟು ಭಯೋತ್ಪಾದನೆ ಹೆಚ್ಚಿಸಲು ಬಯಸುತ್ತಿದ್ದಾರೆ. ಕಾಶ್ಮೀರವನ್ನು ಮತ್ತೆ ನಾಶಮಾಡಲು ಹುನ್ನಾರದಿಂದ ಇಷ್ಟು ದೊಡ್ಡ ಘಟನೆ ನಡೆಯುವಂತೆ ಪಿತೂರಿ ನಡೆಸಿದರು. ದೇಶದ ಏಕತೆ, 140 ಕೋಟಿ ಭಾರತೀಯರ ಒಗ್ಗಟ್ಟು, ಭಯೋತ್ಪಾದನೆಯ ವಿರುದ್ಧದ ಈ ಯುದ್ಧದಲ್ಲಿ ನಮ್ಮ ದೊಡ್ಡ ಶಕ್ತಿಯಾಗಿದೆ. ಈ ಒಗ್ಗಟ್ಟೆ ಭಯೋತ್ಪಾದನೆಯ ವಿರುದ್ಧದ ನಮ್ಮ ಹೋರಾಟದಲ್ಲಿ ನಿರ್ಣಾಯಕ ಪಾತ್ರವಾಹಿಸಲಿದೆ. ದೇಶ ಎದುರಿಸುತ್ತಿರುವ ಈ ಸವಾಲನ್ನು ಎದುರಿಸಲು ನಾವು ನಮ್ಮ ಸಂಕಲ್ಪವನ್ನು ಬಲಪಡಿಸಿಕೊಳ್ಳಬೇಕು. ಒಂದು ರಾಷ್ಟ್ರ ರೂಪದಲ್ಲಿ ಬಲವಾದ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು. ಈ ಭಯೋತ್ಪಾದಕ ದಾಳಿಯ ನಂತರ ಸಂಪೂರ್ಣ ದೇಶ ಒಕ್ಕೊರಲಿನಿಂದ ಧ್ವನಿಯೆತ್ತಿರುವುದನ್ನು ಇಂದು ಜಗತ್ತೇ ನೋಡುತ್ತಿದೆ.

ದಾಂತೇವಾಡದಲ್ಲಿ ಛತ್ತೀಸ್ ಗಢ ಪೊಲೀಸರ ಮೇಲೆ ನಡೆದ ದಾಳಿಯನ್ನು ಪ್ರಧಾನಿ ಖಂಡಿಸಿದರು

April 26th, 05:03 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಛತ್ತೀಸ್ ಗಢದ ದಾಂತೇವಾಡ ಜಿಲ್ಲೆಯಲ್ಲಿ ಛತ್ತೀಸ್ ಗಢ ಪೊಲೀಸರ ಮೇಲೆ ನಡೆದ ದಾಳಿಯನ್ನು ಖಂಡಿಸಿದ್ದಾರೆ. ಶ್ರೀ ಮೋದಿ ಅವರು ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಧೈರ್ಯಶಾಲಿ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿದರು.

ನಾರಿ ಶಕ್ತಿ ಸಮಾಜದ ಅಡೆತಡೆಗಳನ್ನು ಮುರಿಯುತ್ತಿದೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಮಂತ್ರಿ

January 28th, 11:45 am

ಹೊಸ ವರ್ಷದ ಮೊದಲ 'ಮನ್ ಕಿ ಬಾತ್' ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಹಿಳಾ ಸಬಲೀಕರಣ, ಸ್ವಚ್ಛತಾ , ಜನ್ ಔಷಧಿ ಕೇಂದ್ರಗಳು ಮತ್ತು ಪದ್ಮ ಪ್ರಶಸ್ತಿಗಳ ಬಗ್ಗೆ ಮಾತನಾಡಿದರು. ಪ್ರಧಾನಮಂತ್ರಿ ಮಹಾತ್ಮಾ ಗಾಂಧಿಯನ್ನು ನೆನಪಿಸಿಕೊಂಡರು ಮತ್ತು ಅವರು ಶಾಂತಿ ಮತ್ತು ಅಹಿಂಸೆಯ ಮಂತ್ರಗಳಲ್ಲಿ ಮಾತ್ರ ನಂಬಿದ್ದರು ಎಂದು ಹೇಳಿದರು. ಅವರಿಂದ ತೋರಿಸಲ್ಪಟ್ಟ ಮಾರ್ಗವನ್ನು ನಾವು ಅನುಸರಿಸಿದರೆ, ಅದು ಮಹಾತ್ಮ ಗಾಂಧಿಯವರಿಗೆ ಸಮರ್ಪಕವಾಗಿ ಗೌರವ ಸಲ್ಲಿಸುವುದು ಎಂದು ಪ್ರಧಾನಿ ಹೇಳಿದರು.

Text of PM’s interaction with students at Education City, Dantewada

May 09th, 07:23 pm



Chhattisgarh has the ability to transform India's future: PM Modi in Bastar

May 09th, 07:10 pm



PM at Dantewada

May 09th, 03:38 pm



MoUs signed at Dantewada, in the presence of Prime Minister Shri Narendra Modi

May 09th, 12:45 pm



PM's visit and interaction with students at Education City, Jawanga, Dantewada

May 09th, 12:40 pm