India’s direction and vision for AI are clear, AI is a shared resource for the welfare of humanity: PM Modi
February 19th, 01:00 pm
In his remarks at the Leaders’ Plenary Session during the India AI Impact Summit, PM Modi noted how India has seen technology serve humanity, citing the digital vaccination platform that helped vaccinate millions on time. Highlighting that for India technology is not a medium of power but of service, he underlined that AI too must follow this path to ensure the welfare of humanity. For the ethical use of AI, the PM offered three valuable suggestions.PM Modi’s remarks in Leaders’ Plenary Session during the India AI Impact Summit 2026
February 19th, 12:39 pm
In his remarks at the Leaders’ Plenary Session during the India AI Impact Summit, PM Modi noted how India has seen technology serve humanity, citing the digital vaccination platform that helped vaccinate millions on time. Highlighting that for India technology is not a medium of power but of service, he underlined that AI too must follow this path to ensure the welfare of humanity. For the ethical use of AI, the PM offered three valuable suggestions.PM Modi outlines the M.A.N.A.V. vision for AI at India AI Impact Summit 2026
February 19th, 10:00 am
PM Modi inaugurated the AI Impact Summit 2026 and remarked that the world’s largest AI Impact Summit is being held in India, a nation representing one-sixth of humanity. He highlighted that the core purpose of the summit is to deliberate on how AI can be made human-centric. He also presented India’s M.A.N.A.V. Vision for AI and extended an invitation to the world with the call: ‘Design and Develop in India. Deliver to the World. Deliver to Humanity’.PM Modi inaugurates India AI Impact Summit 2026
February 19th, 09:40 am
PM Modi inaugurated the AI Impact Summit 2026 and remarked that the world’s largest AI Impact Summit is being held in India, a nation representing one-sixth of humanity. He highlighted that the core purpose of the summit is to deliberate on how AI can be made human-centric. He also presented India’s M.A.N.A.V. Vision for AI and extended an invitation to the world with the call: ‘Design and Develop in India. Deliver to the World. Deliver to Humanity’.ಕಚ್ ಮತ್ತು ಸೌರಾಷ್ಟ್ರ ಪ್ರಾಂತ್ಯದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
January 11th, 02:45 pm
2026ರ ಆರಂಭದ ನಂತರ ಗುಜರಾತ್ ಗೆ ಇದು ನನ್ನ ಮೊದಲ ಭೇಟಿಯಾಗಿದೆ. ಈ ವರ್ಷದ ನನ್ನ ಪ್ರಯಾಣವು ಸೋಮನಾಥ ದಾದಾ ಅವರ ಪಾದಗಳಿಗೆ ತಲೆಬಾಗುವ ಮೂಲಕ ಪ್ರಾರಂಭವಾಗಿರುವುದು ಅತ್ಯಂತ ಮಂಗಳಕರ ಸಂಗತಿಯಾಗಿದೆ. ಈಗ ನಾನು ಈ ಭವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜಕೋಟ್ ನಲ್ಲಿದ್ದೇನೆ. 'ಅಭಿವೃದ್ಧಿ ಮತ್ತು ಪರಂಪರೆ' ಎಂಬ ಮಂತ್ರವು ಇಂದು ಎಲ್ಲೆಡೆ ಪ್ರತಿಧ್ವನಿಸುತ್ತಿದೆ. ದೇಶದ ಮೂಲೆ ಮೂಲೆಗಳಿಂದ ಮತ್ತು ವಿಶ್ವದಾದ್ಯಂತ ಈ 'ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆ'ಗೆ ಆಗಮಿಸಿರುವ ನಿಮ್ಮೆಲ್ಲರಿಗೂ ನಾನು ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ.ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು
January 11th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, 2026ರಲ್ಲಿ ಇದು ಗುಜರಾತ್‌ಗೆ ಅವರ ಮೊದಲ ಭೇಟಿ ಎಂದು ಹೇಳಿದರು. ಬೆಳಿಗ್ಗೆ ತಾವು ಭಗವಾನ್ ಸೋಮನಾಥನ ದಿವ್ಯ ದರ್ಶನ ಪಡೆದು, ಈಗ ರಾಜ್‌ಕೋಟ್‌ನಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆ ಎನಿಸಿದೆ ಎಂದು ಹೇಳಿದರು. ವಿಕಾಸ್ ಭಿ, ವಿರಾಸತ್ ಭಿ ಎಂಬ ಮಂತ್ರ ಎಲ್ಲೆಡೆ ಪ್ರತಿಧ್ವನಿಸುತ್ತಿದೆ ಎಂದರು. ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತದಿಂದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಭಾಗವಹಿಸಲು ಬಂದಿದ್ದ ಎಲ್ಲಾ ಸಹೋದ್ಯೋಗಿಗಳನ್ನು ಪ್ರಧಾನಮಂತ್ರಿ ಸ್ವಾಗತಿಸಿದರು ಮತ್ತು ಶುಭಾಶಯಗಳನ್ನು ತಿಳಿಸಿದರು.ಭಾರತೀಯ ಕೃತಕ ಬುದ್ಧಿಮತ್ತೆ (ಎಐ) ಸ್ಟಾರ್ಟ್-ಅಪ್‌ಗಳೊಂದಿಗೆ ದುಂಡುಮೇಜಿನ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
January 08th, 02:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಭಾರತೀಯ ಕೃತಕ ಬುದ್ಧಿಮತ್ತೆ (ಎಐ) ನವೋದ್ಯಮಗಳೊಂದಿಗೆ (ಸ್ಟಾರ್ಟ್-ಅಪ್‌ಗಳೊಂದಿಗೆ) ನಡೆದ ದುಂಡುಮೇಜಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಫಿಜಿ ಪ್ರಧಾನಮಂತ್ರಿ ಅವರ ಜತೆಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ
August 25th, 12:30 pm
ಆ ಸಮಯದಲ್ಲಿ, ನಾವು ಭಾರತ-ಪೆಸಿಫಿಕ್ ದ್ವೀಪಗಳ ಸಹಕಾರ ವೇದಿಕೆಯನ್ನು (ಎಫ್‌ಐಪಿಐಸಿ) ಪ್ರಾರಂಭಿಸಿದ್ದೇವೆ. ಈ ಉಪಕ್ರಮವು ಭಾರತ-ಫಿಜಿ ಸಂಬಂಧಗಳನ್ನು ಬಲಪಡಿಸುವುದಲ್ಲದೆ, ಇಡೀ ಪೆಸಿಫಿಕ್ ಪ್ರದೇಶದೊಂದಿಗಿನ ನಮ್ಮ ಸಂಬಂಧಗಳನ್ನು ಬಲಪಡಿಸಿದೆ. ಇಂದು, ಪ್ರಧಾನಮಂತ್ರಿ ರಬೂಕಾ ಅವರ ಭೇಟಿಯೊಂದಿಗೆ, ನಾವು ನಮ್ಮ ಪಾಲುದಾರಿಕೆಯಲ್ಲಿ ಹೊಸ ಅಧ್ಯಾಯವನ್ನು ಬರೆಯುತ್ತಿದ್ದೇವೆ.ನವದೆಹಲಿಯಲ್ಲಿ ಆಯೋಜಿತವಾಗಿದ್ದ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 07th, 09:20 am
ನನ್ನ ಸಂಪುಟ ಸಹೋದ್ಯೋಗಿ ಶ್ರೀ ಶಿವರಾಜ್ ಸಿಂಗ್ ಚೌಹಾಣ್, ಎಂ.ಎಸ್. ಸ್ವಾಮಿನಾಥನ್ ಸಂಶೋಧನಾ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸೌಮ್ಯ ಸ್ವಾಮಿನಾಥನ್, ನೀತಿ ಆಯೋಗದ ಸದಸ್ಯ ಡಾ. ರಮೇಶ್ ಚಂದ್, ಸ್ವಾಮಿನಾಥನ್ ಕುಟುಂಬದ ಅನೇಕ ಸದಸ್ಯರು ಇಲ್ಲಿ ಉಪಸ್ಥಿತರಿರುವುದನ್ನು ನಾನು ನೋಡಿದ್ದೇನೆ - ನಾನು ಅವರಿಗೂ ನನ್ನ ಗೌರವಯುತ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇಲ್ಲಿ ನೆರೆದಿರುವ ಎಲ್ಲಾ ವಿಜ್ಞಾನಿಗಳೆ, ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 07th, 09:00 am
ನಿತ್ಯಹರಿದ್ವರ್ಣ ಕ್ರಾಂತಿ, ಜೈವಿಕ ಸಂತೋಷಕ್ಕೆ ಹಾದಿ ಎಂಬ ಸಮ್ಮೇಳನದ ವಿಷಯವು ಸರ್ವರಿಗೂ ಆಹಾರವನ್ನು ಖಾತ್ರಿಪಡಿಸುವಲ್ಲಿ ಪ್ರೊ. ಸ್ವಾಮಿನಾಥನ್ ಅವರ ಜೀವಮಾನದ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ. ಈ ಸಮ್ಮೇಳನವು ವಿಜ್ಞಾನಿಗಳು, ನೀತಿ ನಿರೂಪಕರು, ಅಭಿವೃದ್ಧಿ ವೃತ್ತಿಪರರು ಮತ್ತು ಇತರ ಮಧ್ಯಸ್ಥಗಾರರಿಗೆ 'ನಿತ್ಯಹರಿದ್ವರ್ಣ ಕ್ರಾಂತಿ'ಯ ತತ್ವಗಳನ್ನು ಮುಂದುವರಿಸುವ ಬಗ್ಗೆ ಚರ್ಚಿಸಲು ಮತ್ತು ಸಮಾಲೋಚಿಸಲು ಅವಕಾಶ ಒದಗಿಸುತ್ತದೆ. ಸಮ್ಮೇಳನದ ಪ್ರಮುಖ ವಿಷಯಗಳಲ್ಲಿ - ಜೀವವೈವಿಧ್ಯತೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆ; ಆಹಾರ ಮತ್ತು ಪೌಷ್ಠಿಕಾಂಶದ ಭದ್ರತೆಗಾಗಿ ಸುಸ್ಥಿರ ಕೃಷಿ; ಹವಾಮಾನ ಬದಲಾವಣೆಗೆ ಹೊಂದಿಕೊಳ್ಳುವ ಮೂಲಕ ಹವಾಮಾನ ಸ್ಥಿತಿಸ್ಥಾಪಕತ್ವವನ್ನು ಬಲಪಡಿಸುವುದು; ಸುಸ್ಥಿರ ಮತ್ತು ಸಮಾನ ಜೀವನೋಪಾಯಕ್ಕಾಗಿ ಸೂಕ್ತ ತಂತ್ರಜ್ಞಾನಗಳನ್ನು ಬಳಸುವುದು; ಮತ್ತು ಅಭಿವೃದ್ಧಿಯ ಚರ್ಚೆಗಳಲ್ಲಿ ಯುವಕರು, ಮಹಿಳೆಯರು ಮತ್ತು ಸಮಾಜದ ಅಂಚಿನಲ್ಲಿರುವ ಸಮುದಾಯಗಳನ್ನು ತೊಡಗಿಸಿಕೊಳ್ಳುವುದು ಮುಂತಾದವು ಸೇರಿವೆ.ಫಿಲಿಪ್ಪೀನ್ಸ್ ಅಧ್ಯಕ್ಷರೊಂದಿಗೆ ಜಂಟಿ ಮಾಧ್ಯಮ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಮಾಧ್ಯಮ ಹೇಳಿಕೆಯ ಕನ್ನಡ ಅನುವಾದ
August 05th, 11:06 am
ಮೊದಲನೆಯದಾಗಿ, ನಾನು ಅಧ್ಯಕ್ಷರನ್ನು ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಈ ವರ್ಷ, ಭಾರತ ಮತ್ತು ಫಿಲಿಪ್ಪೀನ್ಸ್ ರಾಜತಾಂತ್ರಿಕ ಸಂಬಂಧಗಳ 75ನೇ ವರ್ಷವನ್ನು ಆಚರಿಸುತ್ತಿವೆ. ಮತ್ತು ಈ ಸಂದರ್ಭದಲ್ಲಿ, ಈ ಭೇಟಿಯು ವಿಶೇಷ ಮಹತ್ವವನ್ನು ಪಡೆದಿದೆ. ನಮ್ಮ ರಾಜತಾಂತ್ರಿಕ ಸಂಬಂಧಗಳು ಇತ್ತೀಚಿನವಾದರೂ, ನಮ್ಮ ನಾಗರಿಕ ಸಂಪರ್ಕವು ಪ್ರಾಚೀನ ಕಾಲದಿಂದಲೂ ಇದೆ. ರಾಮಾಯಣದ ಫಿಲಿಪ್ಪೀನ್ಸ್ ಆವೃತ್ತಿ - ಮಹಾರಾಡಿಯಾ ಲಾವಾನಾ ನಮ್ಮ ಆಳವಾಗಿ ಬೇರೂರಿರುವ ಸಾಂಸ್ಕೃತಿಕ ಬಂಧಕ್ಕೆ ಜೀವಂತ ಪುರಾವೆಯಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಅಂಚೆ ಚೀಟಿಗಳು, ಎರಡೂ ದೇಶಗಳ ರಾಷ್ಟ್ರೀಯ ಹೂವುಗಳನ್ನು ಒಳಗೊಂಡಿದ್ದು, ನಮ್ಮ ಸ್ನೇಹದ ಪರಿಮಳವನ್ನು ಸುಂದರವಾಗಿ ಸಂಕೇತಿಸುತ್ತವೆ.ರೋಜ್‌ಗಾರ್ ಮೇಳದಡಿ 51,000ಕ್ಕಿಂತ ಹೆಚ್ಚಿನ ನೇಮಕಾತಿ ಪತ್ರಗಳ ವಿತರಣೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 26th, 11:23 am
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 51,000ಕ್ಕಿಂತ ಹೆಚ್ಚಿನ ಯುವಕರಿಗೆ ಸರ್ಕಾರಿ ಕಾಯಂ ಹುದ್ದೆಗಳಿಗೆ ಇಂದು ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಯುವಕರೇ, ಕೇಂದ್ರ ಸರ್ಕಾರದ ಹಲವಾರು ಇಲಾಖೆಗಳಲ್ಲಿ ನಿಮಗೆ ಜವಾಬ್ದಾರಿಗಳ ಹೊಸ ಅಧ್ಯಾಯ ಪ್ರಾರಂಭವಾಗಿದೆ. ದೇಶದ ಆರ್ಥಿಕತೆ ಬಲಪಡಿಸುವುದು ಈಗ ನಿಮ್ಮ ಕರ್ತವ್ಯವಾಗಿದೆ, ದೇಶದ ಆಂತರಿಕ ಭದ್ರತೆ ಬಲಪಡಿಸುವುದು ನಿಮ್ಮ ಕರ್ತವ್ಯವಾಗಿದೆ, ರಾಷ್ಟ್ರದೊಳಗೆ ಆಧುನಿಕ ಮೂಲಸೌಕರ್ಯ ಅಭಿವೃದ್ಧಿಪಡಿಸುವುದು ನಿಮ್ಮ ಕರ್ತವ್ಯವಾಗಿದೆ. ಕಾರ್ಮಿಕರ ಜೀವನದಲ್ಲಿ ಮೂಲಭೂತ ಸುಧಾರಣೆಗಳನ್ನು ತರುವುದು ಸಹ ನಿಮ್ಮ ಕರ್ತವ್ಯವಾಗಿದೆ. ನೀವು ನಿಮ್ಮ ಕಾರ್ಯಗಳನ್ನು ಹೆಚ್ಚು ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ನಿರ್ವಹಿಸಿದಷ್ಟೂ, ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಭಾರತವು ಸಾಗುವ ಸುದೀರ್ಘ ಪ್ರಯಾಣದ ಮೇಲೆ ಹೆಚ್ಚು ಮಹತ್ವಪೂರ್ಣ ಮತ್ತು ಸಕಾರಾತ್ಮಕ ಪರಿಣಾಮ ಬೀರುತ್ತದೆ. ನೀವು ನಿಮ್ಮ ಜವಾಬ್ದಾರಿಗಳನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸುತ್ತೀರಿ ಎಂಬ ವಿಶ್ವಾಸ ನನಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು
April 26th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭವಾಗಿದೆ ಎಂದು ಒತ್ತಿ ಹೇಳಿದರು. ದೇಶದ ಆರ್ಥಿಕ ರಚನೆಯನ್ನು ಬಲಪಡಿಸುವುದು, ಆಂತರಿಕ ಭದ್ರತೆಯನ್ನು ಬಲಪಡಿಸುವುದು, ಆಧುನಿಕ ಮೂಲಸೌಕರ್ಯಗಳ ನಿರ್ಮಾಣಕ್ಕೆ ಕೊಡುಗೆ ನೀಡುವುದು ಮತ್ತು ಕಾರ್ಮಿಕರ ಜೀವನದಲ್ಲಿ ಪರಿವರ್ತನೆಯ ಬದಲಾವಣೆಗಳನ್ನು ತರುವುದು ಅವರ ಕರ್ತವ್ಯಗಳಲ್ಲಿ ಸೇರಿವೆ ಎಂದು ಅವರು ಹೇಳಿದರು. ಅವರು ತಮ್ಮ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುವುದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಪ್ರಯಾಣದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಈ ಯುವಜನರು ತಮ್ಮ ಕರ್ತವ್ಯಗಳನ್ನು ಸಂಪೂರ್ಣ ಸಮರ್ಪಣಾಭಾದಿಂದ ನಿರ್ವಹಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.17ನೇ ನಾಗರಿಕ ಸೇವಾ ದಿನದಂದು ಪ್ರಧಾನಮಂತ್ರಿಯವರ ಭಾಷಣ
April 21st, 11:30 am
ನನ್ನ ಸಂಪುಟ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜಿ, ಶ್ರೀ ಶಕ್ತಿಕಾಂತ ದಾಸ್ ಜಿ, ಡಾ. ಸೋಮನಾಥನ್ ಜಿ, ಇತರ ಹಿರಿಯ ಅಧಿಕಾರಿಗಳು, ದೇಶಾದ್ಯಂತ ನಾಗರಿಕ ಸೇವೆಗಳ ಎಲ್ಲಾ ಸಹೋದ್ಯೋಗಿಗಳು, ಮಹಿಳೆಯರೇ ಮತ್ತು ಮಹನೀಯರೇ!17ನೇ ನಾಗರಿಕ ಸೇವಾ ದಿನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
April 21st, 11:00 am
ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನಡೆದ 17ನೇ ನಾಗರಿಕ ಸೇವಾ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಗರಿಕ ಸೇವೆಗಳ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಗಾಗಿ ಪ್ರಧಾನಮಂತ್ರಿಯವರ ಪ್ರಶಸ್ತಿಗಳನ್ನು ಸಹ ಅವರು ಪ್ರದಾನ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ನಾಗರಿಕ ಸೇವಾ ದಿನದ ಸಂದರ್ಭದಲ್ಲಿ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು ಮತ್ತು ಸಂವಿಧಾನದ 75ನೇ ವರ್ಷ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿಯಾದ ಈ ವರ್ಷದ ಆಚರಣೆಯ ಮಹತ್ವವನ್ನು ಎತ್ತಿ ತೋರಿಸಿದರು. ಏಪ್ರಿಲ್ 21, 1947 ರಂದು ಸರ್ದಾರ್ ಪಟೇಲ್ ಅವರು 'ಭಾರತದ ಉಕ್ಕಿನ ಚೌಕಟ್ಟು' ಎಂದು ನಾಗರಿಕ ಸೇವಕರನ್ನು ಬಣ್ಣಿಸಿದ ಐತಿಹಾಸಿಕ ಹೇಳಿಕೆಯನ್ನು ಸ್ಮರಿಸಿದ ಶ್ರೀ ಮೋದಿ, ಶಿಸ್ತು, ಪ್ರಾಮಾಣಿಕತೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿಹಿಡಿಯುವ, ಅತ್ಯಂತ ಸಮರ್ಪಣಾಬಾವದಿಂದ ರಾಷ್ಟ್ರಕ್ಕೆ ಸೇವೆ ಸಲ್ಲಿಸುವ ಅಧಿಕಾರಶಾಹಿಯನ್ನು ಕುರಿತ ಪಟೇಲ್ ಅವರ ದೃಷ್ಟಿಕೋನವನ್ನು ಒತ್ತಿ ಹೇಳಿದರು. ಭಾರತವು ವಿಕಸಿತ ಭಾರತವಾಗುವ ಸಂಕಲ್ಪದ ಸಂದರ್ಭದಲ್ಲಿ ಸರ್ದಾರ್ ಪಟೇಲ್ ಅವರ ಆದರ್ಶಗಳ ಪ್ರಸ್ತುತತೆಯನ್ನು ಅವರು ಒತ್ತಿ ಹೇಳಿದರು ಮತ್ತು ಸರ್ದಾರ್ ಪಟೇಲ್ ಅವರ ದೃಷ್ಟಿಕೋನ ಮತ್ತು ಪರಂಪರೆಗೆ ಹೃತ್ಪೂರ್ವಕ ಗೌರವ ಸಲ್ಲಿಸಿದರು.ಎನ್ಎಕ್ಸ್ ಟಿ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 01st, 11:00 am
ನ್ಯೂಸ್ಎಕ್ಸ್ ವರ್ಲ್ಡ್‌ನ ಶುಭಾರಂಭಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳು. ಇಂದು ಹಿಂದಿ ಮತ್ತು ಇಂಗ್ಲಿಷ್ ಸೇರಿದಂತೆ ನಿಮ್ಮ ನೆಟ್‌ವರ್ಕ್‌ನ ಎಲ್ಲಾ ಪ್ರಾದೇಶಿಕ ವಾಹಿನಿಗಳು ಜಾಗತಿಕವಾಗಿ ಬೆಳೆಯುತ್ತಿವೆ, ಇಂದು ಅನೇಕ ಫೆಲೋಶಿಪ್‌ಗಳು ಮತ್ತು ವಿದ್ಯಾರ್ಥಿವೇತನಗಳನ್ನು ಸಹ ಪ್ರಾರಂಭಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಿಗಾಗಿ ನಿಮ್ಮೆಲ್ಲರಿಗೂ ನಾನು ಶುಭ ಹಾರೈಸುತ್ತೇನೆ.ಎನ್ ಎಕ್ಸ್ ಟಿ ಕಾನ್‌ಕ್ಲೇವ್‌ನಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 01st, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ NXT ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನ್ಯೂಸ್ ಎಕ್ಸ್ ವರ್ಲ್ಡ್ ಶುಭಾರಂಭಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ನೆಟ್‌ವರ್ಕ್ ಹಿಂದಿ, ಇಂಗ್ಲಿಷ್ ಮತ್ತು ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಚಾನೆಲ್‌ಗಳನ್ನು ಒಳಗೊಂಡಿದೆ ಮತ್ತು ಇಂದು ಅದು ಜಾಗತಿಕ ಮಟ್ಟದಲ್ಲಿದೆ ಎಂದು ಅವರು ಗಮನ ಸೆಳೆದರು. ಅವರು ಹಲವಾರು ಫೆಲೋಶಿಪ್‌ಗಳು ಮತ್ತು ಸ್ಕಾಲರ್‌ಶಿಪ್‌ಗಳ ಪ್ರಾರಂಭದ ಬಗ್ಗೆಯೂ ಹೇಳಿದರು, ಈ ಕಾರ್ಯಕ್ರಮಗಳಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.ರಾಜಸ್ಥಾನದ ಜೈಪುರದಲ್ಲಿ “ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಸಮ್ಮಿಟ್ 2024”ರ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 09th, 11:00 am
ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಜಿ ಶರ್ಮಾ, ರಾಜಸ್ಥಾನ ಸರ್ಕಾರದ ಸಚಿವರೆ, ಸಂಸದರೆ, ವಿಧಾನಸಭೆ ಸದಸ್ಯರೆ, ಉದ್ಯಮ ಸಹೋದ್ಯೋಗಿಗಳೆ, ವಿವಿಧ ರಾಯಭಾರಿಗಳೆ, ರಾಯಭಾರಿ ಪ್ರತಿನಿಧಿಗಳೆ, ಇತರೆ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ,ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 09th, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೈಪುರದ ಜೈಪುರ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ (ಜೆಇಸಿಸಿ) ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ 2024 ಮತ್ತು ರಾಜಸ್ಥಾನ ಗ್ಲೋಬಲ್ ಬಿಸಿನೆಸ್ ಎಕ್ಸ್ ಪೋವನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನದ ಯಶಸ್ಸಿನ ಪಯಣದಲ್ಲಿ ಇಂದು ಮತ್ತೊಂದು ವಿಶೇಷ ದಿನವಾಗಿದೆ ಎಂದರು. ಪಿಂಕ್ ಸಿಟಿ ಜೈಪುರದಲ್ಲಿ ನಡೆಯುತ್ತಿರುವ ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ಮೆಂಟ್ ಶೃಂಗಸಭೆ 2024ಕ್ಕೆ ಆಗಮಿಸಿರುವ ಎಲ್ಲ ಉದ್ಯಮ ಮತ್ತು ವಾಣಿಜ್ಯ ಮುಖಂಡರು, ಹೂಡಿಕೆದಾರರು, ಪ್ರತಿನಿಧಿಗಳನ್ನು ಅವರು ಅಭಿನಂದಿಸಿದರು. ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ರಾಜಸ್ಥಾನ ಸರ್ಕಾರವನ್ನೂ ಅಭಿನಂದಿಸಿದರು.ಡಿಜಿಟಲ್ ಮೂಲಸೌಕರ್ಯ AI ಮತ್ತು ಆಡಳಿತಕ್ಕಾಗಿ ದತ್ತಾಂಶದ ಕುರಿತು ಜಂಟಿ G20 ಘೋಷಣೆ
November 20th, 07:52 am
G20 ಜಂಟಿ ಘೋಷಣೆಯು ಸುಸ್ಥಿರ ಅಭಿವೃದ್ಧಿ ಗುರಿಗಳನ್ನು (SDGs) ಸಾಧಿಸುವಲ್ಲಿ ಅಂತರ್ಗತ ಡಿಜಿಟಲ್ ರೂಪಾಂತರದ ಪ್ರಮುಖ ಪಾತ್ರವನ್ನು ಒತ್ತಿಹೇಳುತ್ತದೆ. ಡಿಜಿಟಲ್ ಪಬ್ಲಿಕ್ ಇನ್ಫ್ರಾಸ್ಟ್ರಕ್ಚರ್ (DPI), AI, ಮತ್ತು ಸಮಾನ ಡೇಟಾ ಬಳಕೆಯನ್ನು ನಿಯಂತ್ರಿಸುವುದು ಬೆಳವಣಿಗೆಯನ್ನು ಹೆಚ್ಚಿಸುತ್ತದೆ, ಉದ್ಯೋಗಗಳನ್ನು ಸೃಷ್ಟಿಸುತ್ತದೆ ಮತ್ತು ಆರೋಗ್ಯ ಮತ್ತು ಶಿಕ್ಷಣದ ಫಲಿತಾಂಶಗಳನ್ನು ಸುಧಾರಿಸುತ್ತದೆ. ಈ ತಂತ್ರಜ್ಞಾನಗಳು ಗೌಪ್ಯತೆಯನ್ನು ಗೌರವಿಸಲು, ನಾವೀನ್ಯತೆಯನ್ನು ಉತ್ತೇಜಿಸಲು ಮತ್ತು ಜಾಗತಿಕವಾಗಿ ವೈವಿಧ್ಯಮಯ ಸಮಾಜಗಳಿಗೆ ಪ್ರಯೋಜನವನ್ನು ನೀಡುವುದನ್ನು ಖಚಿತಪಡಿಸಿಕೊಳ್ಳಲು ನ್ಯಾಯೋಚಿತ ಆಡಳಿತ, ಪಾರದರ್ಶಕತೆ ಮತ್ತು ನಂಬಿಕೆ ಅತ್ಯಗತ್ಯ.