ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ನವೆಂಬರ್ 15ರಂದು ಗುಜರಾತ್ ನ ನರ್ಮದಾ ಜಿಲ್ಲೆಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

November 14th, 11:41 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 15ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12:45ರ ಸುಮಾರಿಗೆ ಅವರು ನರ್ಮದಾ ಜಿಲ್ಲೆಯ ದೇವಮೊಗ್ರಾ ದೇವಾಲಯದಲ್ಲಿ ಪೂಜೆ ಮತ್ತು ದರ್ಶನ ನೆರವೇರಿಸಲಿದ್ದಾರೆ. ನಂತರ, ಮಧ್ಯಾಹ್ನ 2:45ರ ಸುಮಾರಿಗೆ, ಪ್ರಧಾನಮಂತ್ರಿ ಅವರು ನರ್ಮದಾ ಜಿಲ್ಲೆಯ ದೇಡಿಯಾಪಾಡಾಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವದ ಆಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು 9,700 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.