ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಶ್ರೀರಾಮ್ ವಾಣಿಜ್ಯ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು

April 25th, 10:50 pm

ಶ್ರೀರಾಮ್ ಕಾಲೇಜ್ ಆಫ್ ಕಾಮರ್ಸ್ ನ ಆಡಳಿತ ಮಂಡಳಿಯ ಸದಸ್ಯರನ್ನೊಳಗೊಂಡ ನಿಯೋಗವು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತು. ಈ ವರ್ಷ ಸಂಸ್ಥೆಯ ಶತಮಾನೋತ್ಸವವನ್ನು ಸೂಚಿಸುತ್ತದೆ. ಇದು ಶೈಕ್ಷಣಿಕ ಉತ್ಕೃಷ್ಟತೆ ಮತ್ತು ರಾಷ್ಟ್ರ ನಿರ್ಮಾಣದ ಪ್ರಖ್ಯಾತ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಉನ್ನತ ಶಿಕ್ಷಣಕ್ಕೆ ಕಾಲೇಜಿನ ದೀರ್ಘಕಾಲದ ಕೊಡುಗೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ತಲೆಮಾರುಗಳ ನಾಯಕರನ್ನು ಪೋಷಿಸುವಲ್ಲಿ ಅದರ ಪಾತ್ರವನ್ನು ಅವರು ಶ್ಲಾಘಿಸಿದರು.

ಆಸ್ಟ್ರಿಯಾದ ಚಾನ್ಸಲರ್‌ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

April 16th, 11:55 am

40 ವರ್ಷಗಳ ನಂತರ ಆಸ್ಟ್ರಿಯಾದ ಚಾನ್ಸಲರ್‌ ಭಾರತಕ್ಕೆ ಭೇಟಿ ನೀಡಿರುವುದು ಬಹಳ ಮುಖ್ಯ. 2026ರಲ್ಲಿ ಭಾರತ-ಯುರೋಪಿಯನ್‌ ಯೂನಿಯನ್‌ ಮುಕ್ತ ವ್ಯಾಪಾರ ಒಪ್ಪಂದದ ನಂತರ, ಭಾರತ-ಐರೋಪ್ಯ ಒಕ್ಕೂಟ ಸಂಬಂಧಗಳಲ್ಲಿ ಹೊಸ ಹಂತ ಪ್ರಾರಂಭವಾಗಿದೆ. ಚಾನ್ಸಲರ್‌ ಸ್ಟಾಕರ್‌ ಅವರ ಭೇಟಿಯ ಮೂಲಕ ನಾವು ಭಾರತ-ಆಸ್ಟ್ರಿಯಾ ಬಾಂಧವ್ಯವನ್ನು ಹೊಸ ಯುಗಕ್ಕೆ ಕೊಂಡೊಯ್ಯುತ್ತಿದ್ದೇವೆ.

ಫಿನ್ಲೆಂಡ್‌ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

March 05th, 11:55 am

ಫಿನ್ಲೆಂಡ್‌ ಅಧ್ಯಕ್ಷರಾಗಿ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿರುವ ಅಧ್ಯಕ್ಷ ಸ್ಟಬ್‌ ಅವರಿಗೆ ನಾನು ಆತ್ಮೀಯ ಸ್ವಾಗತವನ್ನು ಕೋರುತ್ತೇನೆ. ಅಧ್ಯಕ್ಷ ಸ್ಟಬ್‌ ಅವರು ಪ್ರಸಿದ್ಧ ಜಾಗತಿಕ ನಾಯಕ ಮಾತ್ರವಲ್ಲ, ಗೌರವಾನ್ವಿತ ಚಿಂತಕ ಮತ್ತು ಲೇಖಕರೂ ಆಗಿದ್ದಾರೆ.

ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿ

February 26th, 10:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಕೆನಡಾ ಪ್ರಧಾನಮಂತ್ರಿ ಮಾನ್ಯ ಮಾರ್ಕ್ ಕಾರ್ನಿ ಅವರು 2026ರ ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. ಇದು ಪ್ರಧಾನಮಂತ್ರಿ ಕಾರ್ನಿ ಅವರ ಮೊದಲ ಅಧಿಕೃತ ಭಾರತ ಭೇಟಿಯಾಗಲಿದೆ.

ಮಲೇಷ್ಯಾದ ಪ್ರಧಾನಮಂತ್ರಿ ಅವರೊಂದಿಗೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ ಮೋದಿ

February 08th, 11:19 am

ನಾಯಕರು ವ್ಯಾಪಕ ಚರ್ಚೆಗಳನ್ನು ನಡೆಸಿದರು ಮತ್ತು 2024ರಲ್ಲಿ ಉಭಯ ದೇಶಗಳ ನಡುವೆ ಸ್ಥಾಪಿಸಲಾದ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಸಹಮತ ವ್ಯಕ್ತಪಡಿಸಿದರು. ಪಾಲುದಾರಿಕೆ ಮತ್ತು ಜನರ ನಡುವಿನ ನಿಕಟ ಸಂಬಂಧದಲ್ಲಿ ನೆಲೆಯೂರಿರುವ ಭಾರತ-ಮಲೇಷ್ಯಾ ಹಳೆಯ ಬಾಂಧವ್ಯವನ್ನು ಅವರು ಸ್ಮರಿಸಿದರು. ವ್ಯಾಪಾರ, ಹೂಡಿಕೆ, ರಕ್ಷಣೆ, ಭದ್ರತೆ, ಸಮುದ್ರ, ಶುದ್ಧ ಇಂಧನ, ಮೂಲಸೌಕರ್ಯ, ನವೋದ್ಯಮಗಳು, ಕೃಷಿ, ಶಿಕ್ಷಣ, ಆರೋಗ್ಯ, ಆಯುರ್ವೇದ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಂಪರ್ಕಗಳಂತಹ ಆದ್ಯತೆಯ ಕ್ಷೇತ್ರಗಳು ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳ ಸಂಪೂರ್ಣ ಆಯಾಮವನ್ನು ನಾಯಕರು ಪರಿಶೀಲಿಸಿದರು. ಸೆಮಿಕಂಡಕ್ಟರ್‌ಗಳು ಮತ್ತು ಕೃತಕ ಬುದ್ಧಿಮತ್ತೆಯಂತಹ ಉದಯೋನ್ಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಬಗ್ಗೆಯೂ ಅವರು ಚರ್ಚಿಸಿದರು. 'ದ್ವಿಪಕ್ಷೀಯ ಡಿಜಿಟಲ್ ಮಂಡಳಿ' ಮೂಲಕ ಉಭಯ ದೇಶಗಳ ನಡುವಿನ ಡಿಜಿಟಲ್ ಸಹಕಾರದ ಸ್ಥಿರ ಪ್ರಗತಿಯನ್ನು ನಾಯಕರು ಶ್ಲಾಘಿಸಿದರು. ಇದೇವೇಳೆ 'ಫಿನ್‌ಟೆಕ್‌' ಕ್ಷೇತ್ರದಲ್ಲಿ ಸಹಯೋಗವನ್ನು ಹೆಚ್ಚಿಸಲು 'ಯುಪಿಐ' ಮತ್ತು 'ಪೇ-ನೆಟ್' ನಡುವಿನ ಒಪ್ಪಂದವನ್ನು ಅವರು ಸ್ವಾಗತಿಸಿದರು.

ಮಲೇಷ್ಯಾ ಪ್ರಧಾನಮಂತ್ರಿ ಅವರ ಜೊತೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

February 08th, 08:35 am

ಮೊದಲನೆಯದಾಗಿ, ಆತ್ಮೀಯ ಸ್ವಾಗತಕ್ಕಾಗಿ ನನ್ನ ಆಪ್ತ ಮಿತ್ರರಾದ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಕಳೆದ ವರ್ಷ, ಆಸಿಯಾನ್ (ASEAN) ಶೃಂಗಸಭೆಯ ಸಂದರ್ಭದಲ್ಲಿ ನನಗೆ ಮಲೇಷ್ಯಾಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಆದರೆ ಶೀಘ್ರದಲ್ಲೇ ಮಲೇಷ್ಯಾಕ್ಕೆ ಬರುತ್ತೇನೆ ಎಂದು ನಾನು ನನ್ನ ಪ್ರಿಯ ಮಿತ್ರರಿಗೆ ಮಾತು ಕೊಟ್ಟಿದ್ದೆ. ಅದರಂತೆ ಇಂದು, 2026ರ ಸಾಲಿನ ನನ್ನ ಮೊದಲ ವಿದೇಶಿ ಪ್ರವಾಸದ ಅಂಗವಾಗಿ ನಾನು ಮಲೇಷ್ಯಾದಲ್ಲಿದ್ದೇನೆ.

ಭಾರತದ ಪ್ರಧಾನಮಂತ್ರಿ ಅವರು ಮಲೇಷ್ಯಾಕ್ಕೆ ನೀಡಿದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ - ಮಲೇಷ್ಯಾ ಜಂಟಿ ಹೇಳಿಕೆ

February 08th, 08:30 am

ಮಲೇಷ್ಯಾ ಪ್ರಧಾನಮಂತ್ರಿ ಗೌರವಾನ್ವಿತ ಡಾಟೋ ಸೆರಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 7 ರಿಂದ 8 ರವರೆಗೆ ಮಲೇಷ್ಯಾಕ್ಕೆ ಅಧಿಕೃತ ಭೇಟಿ ನೀಡಿದರು. ಈ ಭೇಟಿಯು ಉಭಯ ದೇಶಗಳ ನಡುವಿನ ನಾಗರಿಕ ಸಂಬಂಧಗಳ ಆಧಾರದ ಮೇಲೆ ಆಳವಾಗಿ ಬೇರೂರಿರುವ ಸ್ನೇಹ ಮತ್ತು ಜನರ ನಡುವಿನ ಸುದೀರ್ಘ ಬಾಂಧವ್ಯವನ್ನು ಪ್ರತಿಫಲಿಸುತ್ತದೆ. ಭಾರತ-ಮಲೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ವಿಸ್ತರಿಸಲು ಉಭಯ ನಾಯಕರ ಹಂಚಿಕೆಯ ಬದ್ಧತೆಯನ್ನು ಇದು ಪುನರುಚ್ಚರಿಸಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅರಬ್ ವಿದೇಶಾಂಗ ಸಚಿವರ ನಿಯೋಗವನ್ನು ಬರಮಾಡಿಕೊಂಡರು

January 31st, 02:39 pm

ಭಾರತ-ಅರಬ್ ದೇಶಗಳ ವಿದೇಶಾಂಗ ಸಚಿವರ ಎರಡನೇ ಸಭೆಗಾಗಿ ಭಾರತಕ್ಕೆ ಆಗಮಿಸಿರುವ ಅರಬ್ ರಾಷ್ಟ್ರಗಳ ವಿದೇಶಾಂಗ ಸಚಿವರು, ಅರಬ್ ರಾಷ್ಟ್ರಗಳ ಲೀಗ್ ನ ಪ್ರಧಾನ ಕಾರ್ಯದರ್ಶಿ ಮತ್ತು ಅರಬ್ ನಿಯೋಗಗಳ ಮುಖ್ಯಸ್ಥರ ನಿಯೋಗವನ್ನು ಪ್ರಧಾನಮಂತ್ರಿ ಅವರು ಸ್ವಾಗತಿಸಿ ಬರಮಾಡಿಕೊಂಡರು.

India and Ethiopia have shared continuous contact, dialogue and exchanges for thousands of years: PM Modi during meeting with Ethiopian PM Abiy Ahmed Ali

December 17th, 09:12 am

During his remarks at the meeting with Ethiopian PM Abiy Ahmed Ali, PM Modi announced that India–Ethiopia relations have been elevated to the level of a Strategic Partnership. The PM noted that both countries are democratic forces committed to peace and the welfare of humanity. He also expressed satisfaction over the decision to double the number of student scholarships for Ethiopia in India.

List of Outcomes Visit of Prime Minister to Jordan

December 15th, 11:52 pm

During the meeting between PM Modi and HM King Abdullah II of Jordan, several MoUs were signed. These include agreements on New and Renewable Energy, Water Resources Management & Development, Cultural Exchange and Digital Technology.

ಜೋರ್ಡಾನ್‌ನ ಗೌರವಾನ್ವಿತ ದೊರೆ ಎರಡನೇ ಅಬ್ದುಲ್ಲಾ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ

December 15th, 11:00 pm

140 ಕೋಟಿ ಭಾರತೀಯರ ಪರವಾಗಿ ನನಗೆ ಮತ್ತು ನನ್ನ ನಿಯೋಗಕ್ಕೆ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ನಾನು ನಿಮಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಭಾರತ ಮತ್ತು ಜೋರ್ಡಾನ್ ನಡುವಿನ ಸಂಬಂಧವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ನೀವು ತುಂಬಾ ಸಕಾರಾತ್ಮಕ ಚಿಂತನೆಗಳನ್ನು ಮುಂದಿಟ್ಟಿದ್ದೀರಿ. ನಿಮ್ಮ ಸ್ನೇಹ ಮತ್ತು ಭಾರತಕ್ಕೆ ನಿಮ್ಮ ಆಳವಾದ ಬದ್ಧತೆಗಾಗಿ ನಾನು ನಿಮಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ,

ಡಾ. ಅರವಿಂದ್ ಪನಗಾರಿಯಾ ಅವರ ಅಧ್ಯಕ್ಷತೆಯ ನೇತೃತ್ವದ 16ನೇ ಹಣಕಾಸು ಆಯೋಗದ ನಿಯೋಗವನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

November 17th, 08:11 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಧ್ಯಕ್ಷರಾದ ಡಾ. ಅರವಿಂದ್ ಪನಗಾರಿಯಾ ಅವರ ನೇತೃತ್ವದ 16ನೇ ಹಣಕಾಸು ಆಯೋಗದ ಸದಸ್ಯರ ನಿಯೋಗವನ್ನು ಭೇಟಿ ಮಾಡಿದರು.

ಭಾರತ ಮತ್ತು ಫಿಲಿಪ್ಪೀನ್ಸ್ ಸರ್ಕಾರಗಳ ನಡುವೆ ಕಾರ್ಯತಂತ್ರದ ಪಾಲುದಾರಿಕೆಯನ್ನು ಸ್ಥಾಪಿಸುವ ಘೋಷಣೆ

August 05th, 05:23 pm

ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫಿಲಿಪ್ಪೀನ್ಸ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಫರ್ಡಿನಾಂಡ್ ಆರ್ ಮಾರ್ಕೋಸ್ ಜೂನಿಯರ್ ಅವರು 2025ರ ಆಗಸ್ಟ್ 4 ರಿಂದ 8 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದಾರೆ. ಅಧ್ಯಕ್ಷರಾದ ಮಾರ್ಕೋಸ್ ಅವರೊಂದಿಗೆ ಪ್ರಥಮ ಮಹಿಳೆ ಮೇಡಂ ಲೂಯಿಸ್ ಅರಾನೆಟಾ ಮಾರ್ಕೋಸ್ ಮತ್ತು ಫಿಲಿಪ್ಪೀನ್ಸ್ ನ ಹಲವಾರು ಸಂಪುಟ ಸಚಿವರು ಮತ್ತು ವ್ಯಾಪಾರ ನಿಯೋಗ ಸೇರಿದಂತೆ ಉನ್ನತ ಮಟ್ಟದ ಅಧಿಕೃತ ನಿಯೋಗ ಆಗಮಿಸಿದೆ.

ಫಿಲಿಪೈನ್ಸ್ ಗಣರಾಜ್ಯದ ಅಧ್ಯಕ್ಷರ ಭಾರತ ಭೇಟಿ: ಫಲಪ್ರದತೆಯ ವಿವರ

August 05th, 04:31 pm

ಭಾರತ ಗಣರಾಜ್ಯ ಮತ್ತು ಫಿಲಿಪೈನ್ಸ್ ಗಣರಾಜ್ಯದ ನಡುವೆ ಕಾರ್ಯತಂತ್ರದ ಸಹಭಾಗಿತ್ವದ ಸ್ಥಾಪಿಸುವ ಘೋಷಣೆ

ಪಿಲಿಪೀನ್ಸ್ ಅಧ್ಯಕ್ಷರೊಂದಿಗಿನ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅನುವಾದ

August 05th, 03:45 pm

ನಾನು ಭಾರತಕ್ಕೆ ನಿಮ್ಮನ್ನು ಮತ್ತು ನಿಮ್ಮ ನಿಯೋಗವನ್ನು ಆತ್ಮೀಯವಾಗಿ ಸ್ವಾಗತಿಸುತ್ತೇನೆ. ಇಂದು ನಮ್ಮ ದ್ವಿಪಕ್ಷೀಯ ಸಂಬಂಧಗಳಿಗೆ ಐತಿಹಾಸಿಕ ದಿನವಾಗಿದೆ. ನಾವು ಭಾರತ- ಪಿಲಿಪೀನ್ಸ್ ಸಂಬಂಧವನ್ನು ಕಾರ್ಯತಂತ್ರದ ಪಾಲುದಾರಿಕೆಯ ಮಟ್ಟಕ್ಕೆ ಎತ್ತರಿಸುತ್ತಿದ್ದೇವೆ. ಇದು ನಮ್ಮ ಸಂಬಂಧಗಳಿಗೆ ಹೊಸ ವೇಗ ಮತ್ತು ತೀವ್ರತೆಯನ್ನು ತಂದುಕೊಡುತ್ತದೆ ಮತ್ತು ರಕ್ಷಣೆ ಮತ್ತು ಭದ್ರತೆಯ ಕ್ಷೇತ್ರಗಳಲ್ಲಿ ನಮ್ಮ ಸಹಕಾರ ಮತ್ತಷ್ಟು ಬಲವರ್ಧನೆಗೊಳ್ಳಲಿದೆ. ಕಳೆದ ಕೆಲವು ವರ್ಷಗಳಿಂದ, ವ್ಯಾಪಾರ, ರಕ್ಷಣೆ, ಸಾಗರ ಸಹಕಾರ, ಆರೋಗ್ಯ ರಕ್ಷಣೆ, ಭದ್ರತೆ, ಆಹಾರ ಭದ್ರತೆ, ಅಭಿವೃದ್ಧಿ ಪಾಲುದಾರಿಕೆ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ನಮ್ಮ ಸಂಬಂಧಗಳು ಪ್ರಗತಿಯನ್ನು ಸಾಧಿಸಿವೆ. ಮುಂದಿನ ಐದು ವರ್ಷಗಳಿಗಾಗಿ ನಾವು ಇಂದು ಕ್ರಿಯಾ ಯೋಜನೆಯನ್ನು ರೂಪಿಸುತ್ತಿರುವುದೂ ಸಹ ನಿಜಕ್ಕೂ ತೃಪ್ತಿಯ ವಿಷಯವಾಗಿದೆ.

ಕೊರಿಯಾ ಗಣರಾಜ್ಯದ ಅಧ್ಯಕ್ಷರ ವಿಶೇಷ ರಾಯಭಾರಿಗಳ ನಿಯೋಗ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತು

July 17th, 06:40 pm

ಕೊರಿಯಾ ಗಣರಾಜ್ಯದ ಅಧ್ಯಕ್ಷ ಶ್ರೀ ಲೀ ಜೇ ಮ್ಯುಂಗ್ ಅವರ ವಿಶೇಷ ರಾಯಭಾರಿ ಶ್ರೀ ಕಿಮ್ ಬೂ ಕ್ಯೂಮ್ ನೇತೃತ್ವದ ನಿಯೋಗ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತು.

ಬ್ರೆಜಿಲ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

July 09th, 06:02 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದ್ದಾರೆ. ಅವರು ಇಂದು ಬ್ರೆಜಿಲ್ ನ ಅಧ್ಯಕ್ಷ ಘನತೆವೆತ್ತ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರನ್ನು ಬ್ರೆಜಿಲ್ ನ ಅಲ್ವೊರಾಡಾ ಅರಮನೆಯಲ್ಲಿ ಭೇಟಿಯಾದರು. ಪ್ರಧಾನಿಯವರನ್ನು ಅಧ್ಯಕ್ಷ ಲುಲಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ಭವ್ಯ ಮತ್ತು ವರ್ಣರಂಜಿತ ವಿಧ್ಯುಕ್ತ ಸ್ವಾಗತವನ್ನು ನೀಡಿದರು.

ಪರಾಗ್ವೆ ಅಧ್ಯಕ್ಷ ರೊಂದಿಗಿನ ನಿಯೋಗ ಮಟ್ಟದ ಮಾತುಕತೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಆರಂಭಿಕ ಹೇಳಿಕೆಯ ಕನ್ನಡ ಅನುವಾದ

June 02nd, 03:00 pm

ನಾವು ನಿಮಗೆ ಮತ್ತು ನಿಮ್ಮ ನಿಯೋಗಕ್ಕೆ ಭಾರತಕ್ಕೆ ಆತ್ಮೀಯ ಸ್ವಾಗತವನ್ನು ನೀಡುತ್ತೇವೆ. ಪರಾಗ್ವೆ ದಕ್ಷಿಣ ಅಮೆರಿಕಾದಲ್ಲಿ ಪ್ರಮುಖ ಪಾಲುದಾರ. ನಮ್ಮ ಭೌಗೋಳಿಕತೆಗಳು ವಿಭಿನ್ನವಾಗಿರಬಹುದು, ಆದರೆ ನಾವು ಒಂದೇ ಪ್ರಜಾಪ್ರಭುತ್ವ ಮೌಲ್ಯಗಳನ್ನು ಹಂಚಿಕೊಳ್ಳುತ್ತೇವೆ ಮತ್ತು ಜನರ ಯೋಗಕ್ಷೇಮದ ಬಗ್ಗೆ ಕಾಳಜಿ ವಹಿಸುತ್ತೇವೆ.

ವಿದ್ಯುತ್ ವಲಯಕ್ಕೆ ಕಲ್ಲಿದ್ದಲು ಹಂಚಿಕೆಗಾಗಿ ಪರಿಷ್ಕೃತ ಶಕ್ತಿ (ಭಾರತದಲ್ಲಿ ಕಲ್ಲಿದ್ದಲನ್ನು ಪಾರದರ್ಶಕವಾಗಿ ಬಳಸಿಕೊಳ್ಳುವ ಮತ್ತು ಹಂಚಿಕೆ ಮಾಡುವ ಯೋಜನೆ) ನೀತಿಗೆ ಸಂಪುಟದ ಅನುಮೋದನೆ

May 07th, 12:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಕೇಂದ್ರ ವಲಯ/ರಾಜ್ಯ ವಲಯ/ಸ್ವತಂತ್ರ ವಿದ್ಯುತ್ ಉತ್ಪಾದಕರ (ಐಪಿಪಿ) ಉಷ್ಣ ವಿದ್ಯುತ್ ಸ್ಥಾವರಗಳಿಗೆ ಹೊಸ ಕಲ್ಲಿದ್ದಲು ಸಂಪರ್ಕಕ್ಕೆ ಅನುಮೋದನೆ ನೀಡಿದೆ. ಪರಿಷ್ಕೃತ ಶಕ್ತಿ ನೀತಿಯಡಿಯಲ್ಲಿ ಈ ಕೆಳಗಿನ ಎರಡು ವಿಂಡೋಗಳನ್ನು ಪ್ರಸ್ತಾಪಿಸಲಾಗಿದೆ:

ಅಂಗೋಲಾ ರಾಷ್ಟ್ರಪತಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರು ನೀಡಿದ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ (ಮೇ 03, 2025)

May 03rd, 01:00 pm

ನಾನು ರಾಷ್ಟ್ರಪತಿ ಲೊರೆನ್ಸು ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೊಂದು ಐತಿಹಾಸಿಕ ಕ್ಷಣವಾಗಿದೆ. 38 ವರ್ಷಗಳ ನಂತರ, ಅಂಗೋಲಾ ರಾಷ್ಟ್ರಪತಿ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಅವರ ಇ ಭೇಟಿ ಭಾರತ-ಅಂಗೋಲಾ ಸಂಬಂಧಗಳಿಗೆ ಹೊಸ ದಿಕ್ಕನ್ನು ಮತ್ತು ಆವೇಗವನ್ನು ನೀಡುತ್ತಿದೆ ಅಲ್ಲದೆ, ಭಾರತ-ಆಫ್ರಿಕಾ ಪಾಲುದಾರಿಕೆಗೂ ಶಕ್ತಿ ತುಂಬುತ್ತಿದೆ.