ಕೇರಳದ ಆರ್ಯ ವೈದ್ಯ ಶಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
January 28th, 02:39 pm
ಇಂದು ಈ ಮಹತ್ವದ ಸಂದರ್ಭದಲ್ಲಿ, ನಿಮ್ಮೆಲ್ಲರೊಂದಿಗೆ ಸಂಪರ್ಕ ಸಾಧಿಸುವುದು ನನಗೆ ಸಂತೋಷದ ಸಂಗತಿಯಾಗಿದೆ. ಆರ್ಯ ವೈದ್ಯ ಶಾಲೆಯು ಆಯುರ್ವೇದವನ್ನು ಕಾಪಿಡುವಲ್ಲಿ, ರಕ್ಷಿಸುವಲ್ಲಿ ಮತ್ತು ಮುನ್ನಡೆಸುವಲ್ಲಿ ಮಹತ್ವದ ಕೊಡುಗೆಯನ್ನು ಹೊಂದಿದೆ. 125 ವರ್ಷಗಳ ತನ್ನ ಪ್ರಯಾಣದಲ್ಲಿ, ಈ ಸಂಸ್ಥೆಯು ಆಯುರ್ವೇದವನ್ನು ಪ್ರಬಲ ಚಿಕಿತ್ಸಾ ವ್ಯವಸ್ಥೆಯಾಗಿ ಸ್ಥಾಪಿಸಿದೆ. ಇಂದು ಈ ಸಂದರ್ಭದಲ್ಲಿ, ಆರ್ಯ ವೈದ್ಯ ಶಾಲೆಯ ಸ್ಥಾಪಕ ವೈದ್ಯರತ್ನಂ ಪಿ.ಎಸ್. ವಾರಿಯರ್ ಜೀ ಅವರ ಕೊಡುಗೆಗಳನ್ನು ನಾನು ಸ್ಮರಿಸುತ್ತೇನೆ. ಆಯುರ್ವೇದದ ಬಗ್ಗೆ ಅವರ ದೃಷ್ಟಿಕೋನ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಅವರ ಸಮರ್ಪಣೆ ಇಂದಿಗೂ ನಮಗೆ ಸ್ಫೂರ್ತಿ ನೀಡುತ್ತದೆ.ಕೇರಳದ ಆರ್ಯ ವೈದ್ಯ ಸಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
January 28th, 02:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಆರ್ಯ ವೈದ್ಯ ಸಾಲಾ ಚಾರಿಟೇಬಲ್ ಆಸ್ಪತ್ರೆಯ ಶತಮಾನೋತ್ಸವ ಸಮಾರಂಭವನ್ನು ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಮಾತನಾಡಿದರು. ಈ ಸಂದರ್ಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾಮಂತ್ರಿ, ಈ ಶುಭ ಸಂದರ್ಭದಲ್ಲಿ ಎಲ್ಲರೊಂದಿಗೂ ಸಂಪರ್ಕ ಸಾಧಿಸುತ್ತಿರುವುದು ಸಂತೋಷದ ವಿಷಯ ಎಂದು ಹೇಳಿದರು. ಆರ್ಯ ವೈದ್ಯಶಾಲೆ ಆಯುರ್ವೇದವನ್ನು ಸಂರಕ್ಷಿಸುವಲ್ಲಿ, ರಕ್ಷಣೆ ಮಾಡುವಲ್ಲಿ ಮತ್ತು ಮುನ್ನಡೆಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಅವರು ಪ್ರಮುಖವಾಗಿ ಪ್ರಸ್ತಾಪಿಸಿದರು. ತನ್ನ 125 ವರ್ಷಗಳ ಪಯಣದಲ್ಲಿ, ಸಂಸ್ಥೆಯು ಆಯುರ್ವೇದವನ್ನು ಪ್ರಬಲ ಚಿಕಿತ್ಸಾ ವ್ಯವಸ್ಥೆಯಾಗಿ ಸ್ಥಾಪಿಸಿದೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿಸಿದರು. ಆರ್ಯ ವೈದ್ಯಶಾಲೆಯ ಸಂಸ್ಥಾಪಕ ವೈದ್ಯರತ್ನಂ ಪಿ.ಎಸ್. ವೇರಿಯರ್ ಅವರ ಕೊಡುಗೆಗಳನ್ನು ಸ್ಮರಿಸಿದ ಪ್ರಧಾನಮಂತ್ರಿ, ಆಯುರ್ವೇದದ ಬಗೆಗಿನ ಅವರ ವಿಧಾನವು ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಅವರ ಬದ್ಧತೆಯು ಸದಾ ಸ್ಫೂರ್ತಿ ನೀಡುವುದು ಮುಂದುವರಿಯುತ್ತದೆ ಎಂದು ಒತ್ತಿ ಹೇಳಿದರು.ಒಡಿಶಾದ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 09th, 10:15 am
ಒಡಿಶಾದ ಗವರ್ನರ್ ಹರಿ ಬಾಬು ಜೀ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹ ಸದಸ್ಯ ಎಸ್. ಜೈಶಂಕರ್ ಜೀ, ಜುವಾಲ್ ಒರಾಮ್ ಜೀ, ಧರ್ಮೇಂದ್ರ ಪ್ರಧಾನ ಜೀ, ಅಶ್ವಿನಿ ವೈಷ್ಣವ್ ಜೀ, ಶೋಭಾ ಕರಂದ್ಲಾಜೆ ಜೀ, ಕೀರ್ತಿ ವರ್ಧನ್ ಸಿಂಗ್ ಜೀ, ಪಬಿತ್ರ ಮಾರ್ಗರೇಟಾ ಜೀ, ಒಡಿಶಾದ ಉಪ ಮುಖ್ಯಮಂತ್ರಿ ಕನಕ್ ವರ್ಧನ್ ಸಿಂಗ್ ದೇವ್ ಜೀ, ಪ್ರವತಿ ಪರಿದಾ ಜೀ, ಇತರ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಜಗತ್ತಿನ ಮೂಲೆ ಮೂಲೆಯಿಂದ ಇಲ್ಲಿಗೆ ಬಂದಿರುವ ಭಾರತ ಮಾತೆಯ ಎಲ್ಲಾ ಪುತ್ರರೇ ಮತ್ತು ಪುತ್ರಿಯರೇ!ಒಡಿಶಾದಲ್ಲಿ 18ನೇ ಪ್ರವಾಸಿ ಭಾರತೀಯ ದಿನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 09th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ರಿಕಿ ಕೇಜ್ ಮತ್ತು ಅವರ ತಂಡವನ್ನು ಶ್ಲಾಘಿಸಿದರು.The bond between India & Guyana is of soil, of sweat, of hard work: PM Modi
November 21st, 08:00 pm
Prime Minister Shri Narendra Modi addressed the National Assembly of the Parliament of Guyana today. He is the first Indian Prime Minister to do so. A special session of the Parliament was convened by Hon’ble Speaker Mr. Manzoor Nadir for the address.ಗಯಾನಾ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 21st, 07:50 pm
ಗಯಾನಾ ಸಂಸತ್ತಿನ ರಾಷ್ಟ್ರೀಯ ಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಭಾಷಣ ಮಾಡಿದರು. ಅಲ್ಲಿನ ಸಂಸತ್ ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಮಂತ್ರಿಗಳ ಭಾಷಣಕ್ಕಾಗಿ ಮಾನ್ಯ ಸ್ಪೀಕರ್ ಶ್ರೀ ಮಂಜೂರ್ ನಾದಿರ್ ಅವರು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದ್ದರು.