ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಸಾಮ್ರಾಟ್ ಚೌಧರಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

April 15th, 02:41 pm

ಶ್ರೀ ಸಾಮ್ರಾಟ್ ಚೌಧರಿ ಅವರ ಶಕ್ತಿ, ಸಾರ್ವಜನಿಕ ಸೇವೆಗೆ ಬದ್ಧತೆ ಮತ್ತು ತಳಮಟ್ಟದ ಅನುಭವವು ರಾಜ್ಯಕ್ಕೆ ಅತ್ಯಂತ ಉಪಕಾರಿಯಾಗಲಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಚೌಧರಿ ಅವರ ಸಮರ್ಥ ನಾಯಕತ್ವದಲ್ಲಿ ಬಿಹಾರವು ಜನರ ಆಕಾಂಕ್ಷೆಗಳನ್ನು ಈಡೇರಿಸುವುದರೊಂದಿಗೆ ಸರ್ವತೋಮುಖ ಅಭಿವೃದ್ಧಿಯಲ್ಲಿ ಹೊಸ ಎತ್ತರವನ್ನು ತಲುಪುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮಣಿಪುರದ ಮುಖ್ಯಮಂತ್ರಿಯವರು, ಉಪ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು

February 24th, 10:02 pm

ಮಣಿಪುರದ ಮುಖ್ಯಮಂತ್ರಿ ಶ್ರೀ ಯುಮ್ನಾಮ್ ಖೇಮ್ಚಂದ್ ಸಿಂಗ್, ಉಪ ಮುಖ್ಯಮಂತ್ರಿಗಳಾದ ಶ್ರೀಮತಿ ನೆಮ್ಚಾ ಕಿಪ್ಗೆನ್ ಮತ್ತು ಶ್ರೀ ಲೋಸಿ ದಿಖೋ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಮಣಿಪುರದ ನೂತನ ಮುಖ್ಯಮಂತ್ರಿ ಮತ್ತು ಸಚಿವರಿಗೆ ಪ್ರಧಾನಮಂತ್ರಿ ಅಭಿನಂದನೆ

February 04th, 11:13 pm

ಮಣಿಪುರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಶ್ರೀ ಯುಮ್ನಾಮ್ ಖೇಮ್‌ ಚಂದ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದನೆ ಸಲ್ಲಿಸಿದ್ದಾರೆ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸುನೇತ್ರಾ ಪವಾರ್ ಅವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ

January 31st, 05:57 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮೊತ್ತ ಮೊದಲ ಮಹಿಳೆ ಸುನೇತ್ರಾ ಪವಾರ್ ಅವರಿಗೆ ಶುಭ ಕೋರಿದ್ದಾರೆ. ”ರಾಜ್ಯದ ಜನರ ಕಲ್ಯಾಣಕ್ಕಾಗಿ ಅವರು ಅವಿರತವಾಗಿ ಕೆಲಸ ಮಾಡುತ್ತಾರೆ ಮತ್ತು ದಿವಂಗತ ಅಜಿತದಾದ ಪವಾರ್ ಅವರ ಕನಸನ್ನು ಈಡೇರಿಸುತ್ತಾರೆಂಬ ವಿಶ್ವಾಸ ನನಗಿದೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಬಿಹಾರದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವರು

December 22nd, 03:33 pm

ಬಿಹಾರದ ಮುಖ್ಯಮಂತ್ರಿ ಶ್ರೀ ನಿತೀಶ್‌ ಕುಮಾರ್‌, ಬಿಹಾರದ ಉಪಮುಖ್ಯಮಂತ್ರಿ ಶ್ರೀ ಸಾಮ್ರಾಟ್‌ ಚೌಧರಿ ಮತ್ತು ಕೇಂದ್ರ ಸಚಿವರಾಧ ಶ್ರೀ ರಾಜೀವ್‌ ರಂಜನ್‌ ಸಿಂಗ್‌ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ತೆಲಂಗಾಣ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ

December 03rd, 02:25 pm

ತೆಲಂಗಾಣದ ಮುಖ್ಯಮಂತ್ರಿ ಶ್ರೀ ರೇವಂತ್ ರೆಡ್ಡಿ ಮತ್ತು ತೆಲಂಗಾಣದ ಉಪಮುಖ್ಯಮಂತ್ರಿ ಶ್ರೀ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ದೇವೇಂದ್ರ ಫಡ್ನವೀಸ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

December 05th, 08:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ದೇವೇಂದ್ರ ಫಡ್ನವೀಸ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಏಕನಾಥ್ ಶಿಂಧೆ ಮತ್ತು ಶ್ರೀ ಅಜಿತ್ ಪವಾರ್ ಅವರನ್ನು ಅವರು ಕೂಡಾ ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ. ಮಹಾರಾಷ್ಟ್ರದ ಅಭಿವೃದ್ಧಿಗಾಗಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವುದಾಗಿ ಶ್ರೀ ಮೋದಿಯವರು ಭರವಸೆ ನೀಡಿದ್ದಾರೆ.