ನಾಲ್ಕು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ವಾರಣಾಸಿಯಿಂದ ಚಾಲನೆ ನೀಡುವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 08th, 08:39 am
ಉತ್ತರ ಪ್ರದೇಶದ ಉತ್ಸಾಹಭರಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ; ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಮತ್ತು ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ದ ಬಲವಾದ ಅಡಿಪಾಯವನ್ನು ಹಾಕುತ್ತಿರುವ ಗಮನಾರ್ಹ ತಾಂತ್ರಿಕ ಪ್ರಗತಿಗೆ ಕಾರಣರಾದ ಶ್ರೀ ಅಶ್ವಿನಿ ವೈಷ್ಣವ್ ಜಿ; ಎರ್ನಾಕುಲಂನಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರುತ್ತಿರುವ ಕೇರಳ ರಾಜ್ಯಪಾಲ ಶ್ರೀ ರಾಜೇಂದ್ರ ಅರ್ಲೇಕರ್ ಜಿ; ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳಾದ ಶ್ರೀ ಸುರೇಶ್ ಗೋಪಿ ಜಿ ಮತ್ತು ಶ್ರೀ ಜಾರ್ಜ್ ಕುರಿಯನ್ ಜಿ; ಕೇರಳದಲ್ಲಿ ಈ ಕಾರ್ಯಕ್ರಮದಲ್ಲಿ ಹಾಜರಿರುವ ಎಲ್ಲಾ ಇತರ ಸಚಿವರು ಮತ್ತು ಸಾರ್ವಜನಿಕ ಪ್ರತಿನಿಧಿಗಳು; ಫಿರೋಜ್ ಪುರದಿಂದ ಸಂಪರ್ಕ ಹೊಂದಿದ ಕೇಂದ್ರದ ನನ್ನ ಸಹೋದ್ಯೋಗಿ ಮತ್ತು ಪಂಜಾಬ್ ನಾಯಕ ಶ್ರೀ ರವನೀತ್ ಸಿಂಗ್ ಬಿಟ್ಟು ಜಿ; ಅಲ್ಲಿನ ಎಲ್ಲಾ ಸಾರ್ವಜನಿಕ ಪ್ರತಿನಿಧಿಗಳು; ಲಕ್ನೋದಿಂದ ಸಂಪರ್ಕ ಹೊಂದಿದ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಬ್ರಜೇಶ್ ಪಾಠಕ್ ಜಿ; ಇತರ ಗಣ್ಯ ಅತಿಥಿಗಳೇ; ಮತ್ತು ಕಾಶಿಯಲ್ಲಿರುವ ನನ್ನ ಕುಟುಂಬ ಸದಸ್ಯರುಗಳೇ!ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 08th, 08:15 am
ಭಾರತದ ಆಧುನಿಕ ರೈಲ್ವೆ ಮೂಲಸೌಕರ್ಯವನ್ನು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ, ಉತ್ತರ ಪ್ರದೇಶದ ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ, ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಬಾಬಾ ವಿಶ್ವನಾಥನ ಪವಿತ್ರ ನಗರವಾದ ವಾರಣಾಸಿಯ ಎಲ್ಲಾ ಕುಟುಂಬಗಳಿಗೆ ತಮ್ಮ ಗೌರವಯುತ ಶುಭಾಶಯಗಳನ್ನು ಕೋರಿದರು. ದೇವ ದೀಪಾವಳಿಯ ಸಮಯದ ಅದ್ಭುತ ಆಚರಣೆಗಳ ಬಗ್ಗೆ ಅವರು ಮಾತನಾಡಿದರು ಮತ್ತು ಇಂದು ಕೂಡ ಒಂದು ಶುಭ ಸಂದರ್ಭವಾಗಿದೆ ಮತ್ತು ಈ ಅಭಿವೃದ್ಧಿಯ ಹಬ್ಬಕ್ಕೆ ಎಲ್ಲರಿಗೂ ಅವರು ಶುಭಾಶಯಗಳನ್ನು ತಿಳಿಸಿದರು.ದೇವ್ ದೀಪಾವಳಿಗೆ ಪ್ರಧಾನಮಂತ್ರಿ ಅವರಿಂದ ಶುಭಾಶಯ
November 05th, 10:44 pm
ಬಾಬಾ ವಿಶ್ವನಾಥನ ಪವಿತ್ರ ನಗರವು ಇಂದು ದೇವ್ ದೀಪಾವಳಿಯ ಅಪ್ರತಿಮ ಪ್ರಕಾಶದಿಂದ ಬೆಳಗುತ್ತಿದೆ. ಗಂಗಾ ಮಾತೆಯ ದಡದಲ್ಲಿ, ಕಾಶಿ ವಿಶ್ವನಾಥನ ಸನ್ನಿಧಿಯ ಸುತ್ತಮುತ್ತಲ ಘಾಟ್ ಗಳಲ್ಲಿ ಬೆಳಗಿದ ಲಕ್ಷಾಂತರ ದೀಪಗಳು ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯ ಶುಭಾಶಯಗಳನ್ನು ಹೊತ್ತಿವೆ ಎಂದು ಪ್ರಧಾನಿಗಳು ಸಂತಸ ಹಂಚಿಕೊಂಡಿದ್ದಾರೆ.ವಾರಣಾಸಿಯಲ್ಲಿ ದೇವ್ ದೀಪಾವಳಿಯನ್ನು ಆಚರಿಸುತ್ತಿರುವುದಕ್ಕೆ ಪ್ರಧಾನಮಂತ್ರಿಯವರು ಸಂತಸ ವ್ಯಕ್ತಪಡಿಸಿದ್ದಾರೆ
November 15th, 11:13 pm
ಇಂದು ದೇವ್ ದೀಪಾವಳಿ ದಿನ ಲಕ್ಷಾಂತರ ದೀವಟಿಗೆಗಳೊಂದಿಗೆ ವಾರಣಾಸಿಯ ಕಾಶಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ.ಕಾರ್ತಿಕ ಹುಣ್ಣಿಮೆ ಮತ್ತು ದೇವ್ ದೀಪಾವಳಿ ಪ್ರಯುಕ್ತ ಪ್ರಧಾನಮಂತ್ರಿ ಶುಭ ಹಾರೈಕೆ
November 15th, 04:55 pm
ಕಾರ್ತಿಕ ಹುಣ್ಣಿಮೆ ಮತ್ತು ದೇವ್ ದೀಪಾವಳಿಯ ಅಂಗವಾಗಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರದ ಜನತೆಗೆ ಶುಭ ಕೋರಿದ್ದಾರೆ.ಕಾರ್ತಿಕ ಪೂರ್ಣಿಮೆ ಮತ್ತು ದೇವ ದೀಪಾವಳಿಯ ಶುಭಾಶಯ ಕೋರಿದ ಪ್ರಧಾನಮಂತ್ರಿ
November 27th, 07:57 am
ಕಾರ್ತಿಕ ಪೂರ್ಣಿಮೆ ಮತ್ತು ದೇವ ದೀಪಾವಳಿಯ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರಕ್ಕೆ ಶುಭಾಶಯ ಕೋರಿದ್ದಾರೆ.