A bunch of moments from PM Modi’s Assam visit that stood out

April 01st, 05:39 pm

Prime Minister Narendra Modi visited a tea garden in Assam’s Dibrugarh and interacted with the women working there. Walking through the plantation, he briefly joined them in plucking tea leaves and observed their work up close.

ಅಸ್ಸಾಂನ ದಿಬ್ರುಗಢದಲ್ಲಿ ಈಶಾನ್ಯ ಭಾರತದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ (ELF) ಉದ್ಘಾಟಿಸಿದ ಪ್ರಧಾನಮಂತ್ರಿ

February 14th, 07:29 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ದಿಬ್ರುಗಢದಲ್ಲಿ ಈಶಾನ್ಯ ಭಾರತದ ಮೊಟ್ಟಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ (Emergency Landing Facility - ELF) ವನ್ನು ಉದ್ಘಾಟಿಸಿದರು. ಈಶಾನ್ಯ ಭಾರತ ಪ್ರದೇಶಕ್ಕೆ ತುರ್ತು ಲ್ಯಾಂಡಿಂಗ್ ಸೌಲಭ್ಯ ದೊರೆತಿರುವುದು ಅಪಾರ ಹೆಮ್ಮೆಯ ವಿಷಯವಾಗಿದ್ದು, ತಂತ್ರಾತ್ಮಕ ದೃಷ್ಟಿಯಿಂದ ಹಾಗೂ ಪ್ರಕೃತಿ ವಿಕೋಪಗಳ ಸಂದರ್ಭಗಳಲ್ಲಿ ಈ ಸೌಲಭ್ಯ ಅತ್ಯಂತ ಮಹತ್ವದ್ದಾಗಿದೆ ಎಂದು ಪ್ರಧಾನ ಮಂತ್ರಿ ಶ್ರೀ ಮೋದಿ ತಿಳಿಸಿದ್ದಾರೆ.

ಫೆಬ್ರವರಿ 14 ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ ಪ್ರಧಾನಮಂತ್ರಿ

February 13th, 11:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 14 ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 10:30ರ ಸುಮಾರಿಗೆ, ಪ್ರಧಾನಮಂತ್ರಿ ಅವರು ದಿಬ್ರುಗಢದ ಮೋರನ್ ಬೈಪಾಸ್‌ನಲ್ಲಿರುವ ತುರ್ತು ಲ್ಯಾಂಡಿಂಗ್ ಸೌಲಭ್ಯ (ELF)ದಲ್ಲಿ ಇಳಿಯಲಿದ್ದಾರೆ, ಅಲ್ಲಿ ಅವರು ಯುದ್ದ ವಿಮಾನಗಳು, ಸಾರಿಗೆ ಮತ್ತು ಹೆಲಿಕಾಪ್ಟರ್‌ಗಳ ವೈಮಾನಿಕ ಪ್ರದರ್ಶನವನ್ನು ವೀಕ್ಷಿಸಲಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ, ಪ್ರಧಾನ ಮಂತ್ರಿ ಅವರು ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನಿರ್ಮಾಣವಾಗಿರುವ ಕುಮಾರ್ ಭಾಸ್ಕರ್ ವರ್ಮಾ ಸೇತುಗೆ ಭೇಟಿ ನೀಡಲಿದ್ದಾರೆ. ನಂತರ, ಮಧ್ಯಾಹ್ನ 1:30 ರ ಸುಮಾರಿಗೆ, ಪ್ರಧಾನ ಮಂತ್ರಿ ಅವರು ಗುವಾಹಟಿಯ ಲಚಿತ್ ಘಾಟ್‌ನಲ್ಲಿ 5,450 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಚಾಲನೆ ನೀಡಲಿದ್ದಾರೆ.

ಪ್ರಧಾನಮಂತ್ರಿ ಅವರು ಡಿಸೆಂಬರ್ 20-21ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ

December 19th, 02:29 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 20-21ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಡಿಸೆಂಬರ್ 20ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಪ್ರಧಾನಮಂತ್ರಿ ಅವರು ಗುವಾಹಟಿಯನ್ನು ತಲುಪಲಿದ್ದು, ಅಲ್ಲಿ ಲೋಕಪ್ರಿಯ ಗೋಪಿನಾಥ್ ಬೊರ್ಡೊಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ವೀಕ್ಷಿಸಿ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಗಂಗಾ ವಿಲಾಸ್ ಕ್ರೂಸ್ ತನ್ನ ಮೊದಲ ಪ್ರಯಾಣವನ್ನು ದಿಬ್ರುಗಢದಲ್ಲಿ ಪೂರ್ಣಗೊಳಿಸಿದಕ್ಕಾಗಿ ಪ್ರಧಾನಮಂತ್ರಿ ಯವರು ಸಂತಸ ವ್ಯಕ್ತಪಡಿಸಿದ್ದಾರೆ.

March 01st, 11:44 am

ಗಂಗಾ ವಿಲಾಸ್ ಕ್ರೂಸ್ ತನ್ನ ಮೊದಲ ಪ್ರಯಾಣವನ್ನು ದಿಬ್ರುಗಢದಲ್ಲಿ ಪೂರ್ಣಗೊಳಿಸಿದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿಯವರು ಏಪ್ರಿಲ್ 28 ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ

April 26th, 07:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 28ನೇ ಏಪ್ರಿಲ್ 2022 ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ ಸುಮಾರು 11:00 ಗಂಟೆಗೆ, ಅವರು ಕರ್ಬಿ ಆಂಗ್ಲಾಂಗ್ ಜಿಲ್ಲೆಯ ದೀಫುದಲ್ಲಿ 'ಶಾಂತಿ, ಏಕತೆ ಮತ್ತು ಅಭಿವೃದ್ಧಿ ರ‍್ಯಾಲಿ'ಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ, ಮಧ್ಯಾಹ್ನ ಸುಮಾರು 01:45ಕ್ಕೆ, ಪ್ರಧಾನಮಂತ್ರಿಯವರು ಅಸ್ಸಾಂ ವೈದ್ಯಕೀಯ ಕಾಲೇಜು, ದಿಬ್ರುಗಢವನ್ನು ತಲುಪುತ್ತಾರೆ ಮತ್ತು ದಿಬ್ರುಗಢ್ ಕ್ಯಾನ್ಸರ್ ಆಸ್ಪತ್ರೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ತದನಂತರ, ಮಧ್ಯಾಹ್ನ 3 ಗಂಟೆಗೆ, ಅವರು ದಿಬ್ರುಗಢದ ಖನಿಕರ್ ಮೈದಾನದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ, ಅಲ್ಲಿ ಅವರು ಇನ್ನೂ ಆರು ಕ್ಯಾನ್ಸರ್ ಆಸ್ಪತ್ರೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಏಳು ಹೊಸ ಕ್ಯಾನ್ಸರ್ ಆಸ್ಪತ್ರೆಗಳಿಗೆ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.

Development of eastern parts of India is a priority for our Government because that is the way to all-round development: PM Modi

February 05th, 11:47 am



PM dedicates to the nation, Brahmaputra Cracker and Polymer Limited, and wax plant of Numaligarh Refineries Ltd, at Lepetkata near Dibrugarh

February 05th, 11:46 am